Homeಮುಖಪುಟಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

- Advertisement -
- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS – ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ ಲೋಪದಿಂದ ಕೂಡಿದೆ ಎಂಬ ಅಘಾತಕಾರಿ ಅಂಶವೊಂದು ಬಯಲಾಗಿದೆ.

ಪ್ರತಿಭಟನಾ ಸ್ಥಳದಲ್ಲಿದ್ದರು ಎಂದು ಪೊಲೀಸರು ಗುತಿಸಿದ (ಎಫ್‌ಆರ್‌ಎಸ್ ತಂತ್ರಜ್ಞಾನ ಗುರುತಿಸಿ) ಕನಿಷ್ಠ 25 ಜನರು, ಆ ಸಮಯದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದರು ಎಂಬುದನ್ನು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ನಡೆಸಿದ ತನಿಖಾ ವರದಿ ಬಹಿರಂಗಪಡಿಸಿದೆ.

ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ನಾಗರಿಕರ ಮೇಲೆ ಇಂತಹ ತಂತ್ರಜ್ಞಾನ ಬಳಸಿ ಕಣ್ಗಾವಲು ಇಡುವುದು ಎಷ್ಟರ ಮಟ್ಟಿಗೆ ಕಾನೂನುಬದ್ಧ? ಇದು ಖಾಸಗಿತನದ ಹಕ್ಕು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಶಾಂತಿಯುತವಾಗಿ ಸಭೆ ಸೇರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯೇ? ಎಂಬುದನ್ನು ಸುಪ್ರೀಂ ಕೋರ್ಟ್ ಪರಿಶೀಲಿಸುತ್ತಿರುವ ಬೆನ್ನಲ್ಲೇ ಈ ತನಿಖಾ ವರದಿ ಹೊರಬಿದ್ದಿರುವುದು ತೀವ್ರ ಮಹತ್ವ ಪಡೆದುಕೊಂಡಿದೆ.

ಜುಲೈ 20 ರಿಂದ 26 ರ ನಡುವೆ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನಾ ಸ್ಥಳದಲ್ಲಿ ಅಪರಾಧ ಹಿನ್ನೆಲೆಯುಳ್ಳ 2,873 ಜನರನ್ನು ತಮ್ಮ ಎಫ್‌ಆರ್‌ಎಸ್ ತಂತ್ರಜ್ಞಾನದ ಮೂಲಕ ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸರು ಪ್ರತಿಪಾದಿಸಿದ್ದರು. ಆದರೆ, ಪೊಲೀಸ್, ಜೈಲು ಮತ್ತು ನ್ಯಾಯಾಲಯದ ದಾಖಲೆಗಳನ್ನು ಪರಿಶೀಲಿಸಿದಾಗ, ಅದರಲ್ಲಿನ 25 ಜನರು ಆ ಸಮಯದಲ್ಲಿ ದೆಹಲಿಯ ತಿಹಾರ್, ಮಂಡೋಲಿ ಮತ್ತು ರೋಹಿಣಿ ಜೈಲು ಸಂಕೀರ್ಣಗಳಲ್ಲಿ ಬಂಧಿಯಾಗಿದ್ದರು ಎಂಬುದು ಸಾಬೀತಾಗಿದೆ.

ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ವಜಾಗೊಳಿಸಿತ್ತು. ಆದರೆ, ದೆಹಲಿ ಪೊಲೀಸರು ಕ್ರಿಮಿನಲ್ ಹಿನ್ನೆಲೆಯುಳ್ಳವರು ಎಂದು ಹೆಸರಿಸಿದ್ದ ಈ 2,873 ಜನರ ವಿರುದ್ಧ ತನಿಖೆ ಮುಂದುವರಿಸಲು ಆಯೋಗಕ್ಕೆ ಕೋರ್ಟ್ ಅನುಮತಿ ನೀಡಿತ್ತು. ಇದೀಗ ಆ ಪಟ್ಟಿಯ ನಿಖರತೆಯೇ ಪ್ರಶ್ನೆಗೊಳಗಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸರು, ಎಫ್‌ಆರ್‌ಎಸ್ ನೀಡುವ ಫಲಿತಾಂಶವನ್ನು ಅಂತಿಮ ಆಧಾರವೆಂದು ಪರಿಗಣಿಸುವುದಿಲ್ಲ ಮತ್ತು ಕ್ಷೇತ್ರ ಮಟ್ಟದ ಪರಿಶೀಲನೆ (Field Verification) ನಡೆಸದೆ ಯಾರ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೊಲೆ, ಅತ್ಯಾಚಾರ ಆರೋಪಿಗಳೂ ಜೈಲಿನಿಂದಲೇ ಪ್ರತಿಭಟನೆಯಲ್ಲಿ ಭಾಗಿ?

ಪೋಲಿಸರು ನೀಡಿದ ಪಟ್ಟಿಯ ಪೈಕಿ ತೀವ್ರ ಸ್ವರೂಪದ ಅಪರಾಧ ಆರೋಪ ಹೊತ್ತಿದ್ದ 205 ಜನರ ವಿವರಗಳನ್ನು ತನಿಖೆಗೆ ಒಳಪಡಿಸಲಾಗಿತ್ತು. ಇದರಲ್ಲಿ 101 ಕೊಲೆ ಆರೋಪಿಗಳು, 61 ಅತ್ಯಾಚಾರ ಆರೋಪಿಗಳು, 6 ಪೋಕ್ಸೋ (POCSO) ಆರೋಪಿಗಳು ಹಾಗೂ 37 ಕೊಲೆಯತ್ನ ಆರೋಪಿಗಳು ಸೇರಿದ್ದರು.

ತನಿಖೆಯ ಪ್ರಕಾರ, ಕೊಲೆ ಪ್ರಕರಣ ಎದುರಿಸುತ್ತಿರುವ 17 ಜನರು, ಅತ್ಯಾಚಾರ ಪ್ರಕರಣದ 4 ಜನರು ಹಾಗೂ ಕೊಲೆಯತ್ನ ಪ್ರಕರಣದ 4 ಆರೋಪಿಗಳು ಜೈಲಿನಲ್ಲಿದ್ದರೂ, ಪೊಲೀಸರ ಎಫ್‌ಆರ್‌ಎಸ್ ಕ್ಯಾಮೆರಾ ಜುಲೈ 24, 25 ಮತ್ತು 26 ರಂದು ಇವರನ್ನು ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಗುರುತಿಸಿತ್ತು.

ಕೊಲೆ ಆರೋಪಿಗಳ ಪಟ್ಟಿಯಲ್ಲಿ ದಕ್ಷಿಣ ದೆಹಲಿಯ ಜಿಮ್ ಮಾಲೀಕ ನಾದಿರ್ ಶಾ ಕೊಲೆ ಪ್ರಕರಣದ ಆರೋಪಿ ಹಾಗೂ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಮತ್ತು ಹಾಶಿಮ್ ಬಾಬಾ ಗ್ಯಾಂಗ್‌ನ ಶೂಟರ್ ಆಗಿದ್ದ ‘ಯೋಗೇಶ್ ಯಾದವ್’ ಕೂಡ ಸೇರಿದ್ದ. ಈತ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಈಗಾಗಲೇ ಜೈಲಿನಲ್ಲಿದ್ದರೂ, ಎಫ್‌ಆರ್‌ಎಸ್ ಕ್ಯಾಮೆರಾ ಈತನನ್ನು ಜಂತರ್ ಮಂತರ್‌ನಲ್ಲಿದ್ದನೆಂದು ತೋರಿಸಿತ್ತು. ಉಳಿದಂತೆ ಕಿಶನ್, ಮುಷ್ತಾಕ್, ಅಂಕಿತ್ ಕುಮಾರ್, ಪ್ರತಾಪ್ ಸಿಂಗ್ ಸಿಸೋಡಿಯಾ ಸೇರಿದಂತೆ ಹಲವರು ಜೈಲಿನಲ್ಲಿದ್ದರೂ ಕ್ಯಾಮೆರಾಗೆ ‘ಸಿಕ್ಕಿಬಿದ್ದಿದ್ದರು’! ಪೋಕ್ಸೋ ಮತ್ತು ಅತ್ಯಾಚಾರ ಆರೋಪಿಗಳಾದ ಅಂಕಿತ್, ಸುನಿಲ್ ಕುಮಾರ್, ಹೀರಾ ಸಿಂಗ್, ಕುಂದನ್ ಹಾಗೂ ಕೊಲೆಯತ್ನ ಆರೋಪಿಗಳಾದ ಮಹೇಶ್, ಬಾಬಿ, ಜೀಶಾನ್ ಮುಂತಾದವರೂ ಸಹ ಜೈಲಿನಲ್ಲೇ ಇದ್ದರು.

ಆಗಸ್ಟ್ 17 ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ದೆಹಲಿ ಪೊಲೀಸರು ಈ ತಂತ್ರಜ್ಞಾನವನ್ನು ಸಮರ್ಥಿಸಿಕೊಂಡಿದ್ದರು. ತಮ್ಮ ಅಧಿಕೃತ ಪೊಲೀಸ್ ಡೇಟಾಬೇಸ್‌ನಲ್ಲಿ ಮಾಹಿತಿ ಇರುವವರನ್ನು ಮಾತ್ರ ಈ ಸಿಸ್ಟಮ್ ಗುರುತಿಸಿದೆ ಎಂದು ಅವರು ತಿಳಿಸಿದ್ದರು. ಒಟ್ಟು ಪತ್ತೆಯಾದ 2,873 ಮುಖಗಳಲ್ಲಿ, 2,402 ಮುಖಗಳು ದೆಹಲಿ ಪೊಲೀಸರ ‘ಕ್ರೈಮ್ ಕುಂಡ್ಲಿ’ ಎಂಬ ಬಯೋಮೆಟ್ರಿಕ್ ಡೇಟಾಬೇಸ್‌ನಿಂದ ಹಾಗೂ ಉಳಿದ 471 ಮುಖಗಳು ಇತರ ಕ್ರಿಮಿನಲ್ ದಾಖಲೆಗಳಿಂದ ಹೊಂದಾಣಿಕೆಯಾಗಿದ್ದವು ಎಂದು ಪೊಲೀಸರು ಹೇಳಿದ್ದರು.

ಪೊಲೀಸರ ಪ್ರಕಾರ, ಈ ತಂತ್ರಜ್ಞಾನವು ಶಾಂತಿಯುತ ಪ್ರತಿಭಟನಾಕಾರರ ಪ್ರೊಫೈಲ್ ತಯಾರಿಸುವುದಿಲ್ಲ. ಕೇವಲ ಗಂಭೀರ ಅಪರಾಧ ಹಿನ್ನೆಲೆಯುಳ್ಳವರನ್ನು ಮಾತ್ರ ಫ್ಲ್ಯಾಗ್ ಮಾಡುತ್ತದೆ. ಆದರೆ, ಜೈಲಿನಲ್ಲಿದ್ದವರನ್ನೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ತೋರಿಸಿರುವುದು ಈ ಸಿಸ್ಟಮ್‌ನ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಸಿಪಿಐ(ಎಂ) ರಾಜ್ಯಸಭಾ ಸಂಸದ ಎ.ಎ. ರಹೀಮ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಆಧಾರದ ಮೇಲೆ ಸುಪ್ರೀಂ ಕೋರ್ಟ್ ಈ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಸಂಸದರ ಪರವಾಗಿ ಹಿರಿಯ ನ್ಯಾಯವಾದಿ ಮೇನಕಾ ಗುರುಸ್ವಾಮಿ ಮತ್ತು ನ್ಯಾಯವಾದಿ ಸುಭಾಷ್ ಚಂದ್ರನ್ ವಾದ ಮಂಡಿಸುತ್ತಿದ್ದಾರೆ.

ಪ್ರತಿಭಟನಾಕಾರರು, ಪತ್ರಕರ್ತರು ಮತ್ತು ಸಾರ್ವಜನಿಕರ ಮೇಲೆ ಸಿಸಿಟಿವಿ, ಡ್ರೋನ್, ಕಣ್ಗಾವಲು ವಾಹನ, ‘ಆಜ್ಞಾಲೆನ್ಸ್’ ಸ್ಮಾರ್ಟ್ ಗ್ಲಾಸ್ ಹಾಗೂ ಎನ್‌ಸಿಆರ್‌ಬಿಯ ‘ಅಭಿಜ್ಞಾನ್’ ಆಪ್‌ಗಳ ಮೂಲಕ ನಿರಂತರವಾಗಿ ಬಯೋಮೆಟ್ರಿಕ್ ಕಣ್ಗಾವಲು ಇಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಜನರ ಅನುಮತಿಯಿಲ್ಲದೆ ಮುಖ ಮತ್ತು ಬಯೋಮೆಟ್ರಿಕ್ ದತ್ತಾಂಶವನ್ನು ಸಂಗ್ರಹಿಸಲಾಗುತ್ತಿದೆ. ಈ ದತ್ತಾಂಶವನ್ನು ಆದಿತ್ಯ ಇನ್ಫೋಟೆಕ್ ಮತ್ತು ಡೈಮೆನ್ಷನ್ ಎನ್‌ಎಕ್ಸ್‌ಜಿ ಯಂತಹ ಖಾಸಗಿ ಕಂಪನಿಗಳು ಯಾವುದೇ ಕಾನೂನು ಚೌಕಟ್ಟಿಲ್ಲದೆ ನಿರ್ವಹಿಸುತ್ತಿವೆ. ಇದು ಡಿಪಿಡಿಪಿ (DPDP) ಕಾಯ್ದೆ ಮತ್ತು ಸಿಆರ್‌ಪಿಸಿ ನಿಯಮಗಳ ಉಲ್ಲಂಘನೆ” ಎಂದು ಮೇನಕಾ ಗುರುಸ್ವಾಮಿ ಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಸರ್ಕಾರದ ಸಮರ್ಥನೆ ಮತ್ತು ತಾಂತ್ರಿಕ ಲೋಪಗಳು

ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಪ್ರತಿಭಟನಾಕಾರರ ಮೇಲೆ ಬೇಕಾಬಿಟ್ಟಿ ಕಣ್ಗಾವಲು ಇಡಲಾಗುತ್ತಿಲ್ಲ. ಗಂಭೀರ ಅಪರಾಧದ ಹಿನ್ನೆಲೆಯುಳ್ಳವರನ್ನು ಮಾತ್ರ ಸಿಸ್ಟಮ್ ಗುರುತಿಸುತ್ತದೆ. ತಕ್ಷಣಕ್ಕೆ ಯಾರ ಮೇಲೆಯೂ ಕ್ರಮ ಕೈಗೊಳ್ಳುವುದಿಲ್ಲ, ಸ್ಥಳೀಯ ಮಟ್ಟದ ತನಿಖೆಯ ನಂತರವೇ ಮುಂದಿನ ಹಂತ” ಎಂದು ಪ್ರತಿಪಾದಿಸಿದರು.

ಸಾಮಾನ್ಯವಾಗಿ ಎಫ್‌ಆರ್‌ಎಸ್ ತಂತ್ರಜ್ಞಾನವು ಶೇಕಡಾ 80 ರಷ್ಟು ಸಾಮ್ಯತೆ (Accuracy) ಕಂಡುಬಂದರೆ ಧನಾತ್ಮಕ ಎಂದು ಗುರುತಿಸುತ್ತದೆ. ಆದರೆ, ಬೆಳಕಿನ ಅಭಾವ, ಕ್ಯಾಮೆರಾ ಕೋನ, ಮಾಸ್ಕ್ ಧರಿಸಿರುವುದು ಹಾಗೂ ಅಪೂರ್ಣ ದತ್ತಾಂಶಗಳಿಂದಾಗಿ ಇದು ಶೇಕಡಾ 100 ರಷ್ಟು ನಿಖರವಾಗಿರುವುದಿಲ್ಲ.

ಮತ್ತೊಂದೆಡೆ, ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್ ಅವರು ವಾದ ಮಂಡಿಸಿ, ಶಾಂತಿಯುತ ಪ್ರತಿಭಟನಾಕಾರರ ಮೇಲಿನ ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು ಮತ್ತು ಉನ್ನತ ಮಟ್ಟದ ಸಮಿತಿಯಲ್ಲಿ ಮಹಿಳಾ ಅಧಿಕಾರಿಗಳನ್ನು ಒಳಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್‌ನಿಂದ ಪ್ರಮುಖ ನಿರ್ಧಾರದ ನಿರೀಕ್ಷೆ

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ತ್ರಿಪೀಠವು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸ್ ಕಮಿಷನರ್‌ಗೆ ನೋಟಿಸ್ ಜಾರಿ ಮಾಡಿದೆ. ಸಂಗ್ರಹಿಸಿದ ಎಲ್ಲಾ ದತ್ತಾಂಶಗಳನ್ನು ಸುರಕ್ಷಿತವಾಗಿಡಲು ಮತ್ತು ಸಾರ್ವಜನಿಕವಾಗಿ ಬಹಿರಂಗಪಡಿಸದಂತೆ ಆದೇಶಿಸಿದೆ.

2017ರ ‘ಕೆ.ಎಸ್. ಪುಟ್ಟಸ್ವಾಮಿ’ ಐತಿಹಾಸಿಕ ತೀರ್ಪಿನಂತೆ ‘ಖಾಸಗಿತನದ ಹಕ್ಕು’ ಮೂಲಭೂತ ಹಕ್ಕಾಗಿದೆ. ಯಾವುದೇ ಕಣ್ಗಾವಲು ಪ್ರಕ್ರಿಯೆಗೆ ನಿರ್ದಿಷ್ಟ ಕಾನೂನಿನ ಬೆಂಬಲ ಹಾಗೂ ಸ್ಪಷ್ಟ ಉದ್ದೇಶವಿರಬೇಕು. ಪ್ರಸ್ತುತ ಭಾರತದಲ್ಲಿ ಪೊಲೀಸರು ಎಫ್‌ಆರ್‌ಎಸ್ ಬಳಕೆಗೆ ಸಂಬಂಧಿಸಿದಂತೆ ಯಾವುದೇ ಪ್ರತ್ಯೇಕ ಮತ್ತು ಸ್ಪಷ್ಟ ಕಾನೂನುಗಳಿಲ್ಲ.

ಜೈಲಿನಲ್ಲಿದ್ದ 25 ಜನರನ್ನು ಪ್ರತಿಭಟನೆಯಲ್ಲಿದ್ದರೆಂದು ತೋರಿಸಿರುವ ಈ ವರದಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ದುರ್ಬಳಕೆ ಹಾಗೂ ನಾಗರಿಕರ ಖಾಸಗಿತನದ ಮೇಲಿನ ದಾಳಿಯ ಕುರಿತಾದ ಚರ್ಚೆಯನ್ನು ಮತ್ತಷ್ಟು ಮುನ್ನಲೆಗೆ ತಂದಿದೆ.

Source: The Indian Express

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...