Homeಮುಖಪುಟಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

- Advertisement -
- Advertisement -

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆದ ಸಮಾವೇಶವೊಂದರಲ್ಲಿ ಭಾಷಣ ಮಾಡಿದ ಕೆಲವೇ ದಿನಗಳ ನಂತರ ಈ ಪ್ರತಿಜ್ಞೆ ಸುದ್ದಿಯಾಗಿದೆ.

ಮೋಹನ್ ಭಾಗವತ್ ಅವರು ಶನಿವಾರ ಅದೇ ಸ್ಥಳದಲ್ಲಿ “ಜಾಗತಿಕ ಸೌಹಾರ್ದತೆ” ವಿಷಯದ ಕುರಿತು ಭಾಷಣ ಮಾಡಿದ್ದರು. ಅದೇ ಸಮಯದಲ್ಲಿ, ಅಮೆರಿಕದ ರಾಜಕಾರಣಿಗಳ ಒಕ್ಕೂಟವೊಂದು ಆರ್‌ಎಸ್‌ಎಸ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಬರುವ ಯಾವುದೇ ಆರ್ಥಿಕ ನೆರವನ್ನು ತಿರಸ್ಕರಿಸುವುದಾಗಿ ಘೋಷಿಸಿದ್ದಾರೆ.

ಡೆಮಾಕ್ರಟಿಕ್ ಮತ್ತು ರಿಪಬ್ಲಿಕನ್ ರಾಜಕೀಯ ವಲಯಗಳ ಕಾಂಗ್ರೆಸ್ ಸದಸ್ಯರು, ರಾಜ್ಯ ಶಾಸಕರು, ಮೇಯರ್‌ಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಭ್ಯರ್ಥಿಗಳು ಈ ಆರು ಪುಟಗಳ ಪ್ರತಿಜ್ಞಾಪತ್ರಕ್ಕೆ ಸಹಿ ಹಾಕಿದ್ದಾರೆ. ಜೊತೆಗೆ ಆರ್‌ಎಸ್‌ಎಸ್ ಬೆಂಬಲಿತ ಸಂಸ್ಥೆಗಳಿಂದ ಪಡೆದ ದೇಣಿಗೆಗಳನ್ನು ವಾಪಸ್ ನೀಡಲು ಅಥವಾ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಂಬಲಿಸುವ ಸಂಸ್ಥೆಗಳಿಗೆ ಅವುಗಳನ್ನು ವರ್ಗಾಯಿಸುವಂತೆ ಗುಂಪು ಸೂಚಿಸುತ್ತದೆ.

ಸಹಿ ಹಾಕಿದ ಪ್ರಮುಖರಲ್ಲಿ ವಾಷಿಂಗ್ಟನ್‌ನ ಯುಎಸ್ ಪ್ರತಿನಿಧಿ ಪ್ರಮಿಳಾ ಜಯಪಾಲ್, ಕ್ಯಾಲಿಫೋರ್ನಿಯಾದ ರೋ ಖನ್ನಾ ಮತ್ತು ಇಲಿನಾಯ್ಸ್‌ನ ರಾಬಿನ್ ಕೆಲ್ಲಿ ಸೇರಿದ್ದಾರೆ. ಮಿಚಿಗನ್‌ನ ಡೆಮಾಕ್ರಟಿಕ್ ಸೆನೆಟ್ ಅಭ್ಯರ್ಥಿ ಅಬ್ದುಲ್ಲಾ ಹಮ್ಮೂದ್ ಮತ್ತು ನ್ಯೂಯಾರ್ಕ್ ರಾಜಕಾರಣಿ ಬ್ರ್ಯಾಡ್ ಲ್ಯಾಂಡರ್ ಕೂಡ ಸಹಿ ಮಾಡಿದ್ದು, ಇವರು ಭಾಗವತ್ ಅವರ ಭೇಟಿಯ ವಿರುದ್ಧ ನಡೆದ ಪ್ರತಿಭಟನೆಗಳಲ್ಲೂ ಭಾಗವಹಿಸಿದ್ದರು.

ಆರ್‌ಎಸ್‌ಎಸ್ ಪ್ರಜಾಪ್ರಭುತ್ವದ ಮೇಲೆ ಮಾಡುತ್ತಿರುವ ದಾಳಿಗಳನ್ನು ವಿರೋಧಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸುವ ಜೊತೆಗೆ ಈ ಪ್ರತಿಜ್ಞೆಯನ್ನು ಬೆಂಬಲಿಸಲು ಹೆಮ್ಮೆಯಾಗುತ್ತಿದೆ ಎಂದು ರೋ ಖನ್ನಾ ಹೇಳಿದ್ದಾರೆ.

“ಈ ಪ್ರತಿಜ್ಞೆಯ ನೇತೃತ್ವ ವಹಿಸಲು ಮತ್ತು ಆರ್‌ಎಸ್‌ಎಸ್ ಹಾಗೂ ಜಾಗತಿಕ ಪ್ರಜಾಪ್ರಭುತ್ವದ ಮೇಲಿನ ಅದರ ದಾಳಿಗಳ ವಿರುದ್ಧ ನಿಲ್ಲುವ ನನ್ನ ಬದ್ಧತೆಯನ್ನು ಪುನರುಚ್ಚರಿಸಲು ನಾನು ಹೆಮ್ಮೆಪಡುತ್ತೇನೆ” ಎಂದು ಖನ್ನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರ್‌ಎಸ್‌ಎಸ್ ಬೆಂಬಲಿಗರೊಂದಿಗೆ ಸಂಪರ್ಕ ಹೊಂದಿದ್ದ 6,600 ಡಾಲರ್‌ಗಳ ಇತ್ತೀಚಿನ ದೇಣಿಗೆಯನ್ನು ವಾಪಸ್ ನೀಡಿರುವುದಾಗಿ ಖನ್ನಾ ಘೋಷಿಸಿದರು. ಆರ್‌ಎಸ್‌ಎಸ್ ಸಂಯೋಜಿತ ಗುಂಪುಗಳು ಪೊಲಿಟಿಕಲ್ ಆಕ್ಷನ್ ಕಮಿಟಿಗಳನ್ನು (ಪಿಎಸಿ) ರಚಿಸಲು ಅಥವಾ ಅಮೆರಿಕದ ಚುನಾವಣೆಗಳ ಮೇಲೆ ಪ್ರಭಾವ ಬೀರಲು ಮಾಡುವ ಯಾವುದೇ ಪ್ರಯತ್ನವನ್ನು ವಿರೋಧಿಸುವುದಾಗಿ ಅವರು ಹೇಳಿದರು.

ಅಮೆರಿಕದಲ್ಲಿ, ‘ಪಿಎಸಿ’ಗಳ ಸದಸ್ಯರು, ದಾನಿಗಳು ಅಥವಾ ಉದ್ಯೋಗಿಗಳಿಂದ ಹಣವನ್ನು ಸಂಗ್ರಹಿಸಿ ರಾಜಕೀಯ ಪ್ರಚಾರಗಳಿಗೆ ವಿತರಿಸುವ ಖಾಸಗಿ ಸಂಘಟನೆಗಳಾಗಿವೆ.ಅಮೆರಿಕದಲ್ಲಿ ಆರ್‌ಎಸ್‌ಎಸ್ ಗುಂಪಿನ ರಾಜಕೀಯ ಪ್ರಭಾವದ ಕುರಿತು ಮರು ತನಿಖೆ ಮತ್ತು ಪರಿಶೀಲನೆ ಆರಂಭವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ‘ದಿ ನೇಷನ್’ 2023 ರಲ್ಲಿ ವರದಿ ಮಾಡಿದ್ದು, ಖನ್ನಾ ಅವರು 12 ವರ್ಷಗಳಲ್ಲಿ ಹಿಂದುತ್ವದ ಬೆಂಬಲಿಗರು ಎಂದು ಬಣ್ಣಿಸಲಾದ ವ್ಯಕ್ತಿಗಳಿಂದ 110,000 ಡಾಲರ್‌ಗಿಂತ ಹೆಚ್ಚಿನ ಹಣವನ್ನು ಪಡೆದಿದ್ದರು. ಆ ಸಮಯದಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ್ದ ಖನ್ನಾ, ತಮಗೆ ಸಾವಿರಾರು ದಕ್ಷಿಣ ಏಷ್ಯಾದ ದಾನಿಗಳಿದ್ದಾರೆ. ಪ್ರತಿಯೊಬ್ಬ ದಾನಿಯ ಭಾರತೀಯ ರಾಜಕೀಯದ ವಿಚಾರಗಳ ಬಗ್ಗೆ ಪ್ರಶ್ನಿಸುವುದಿಲ್ಲ ಎಂದು ಹೇಳಿದ್ದರು.

ಭಾಗವತ್ ಅವರ ಭೇಟಿಗೆ ಸ್ವಲ್ಪ ಮೊದಲು, ‘ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಯುಎಸ್ ಕಮಿಷನ್’, ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ನಿರ್ಬಂಧಗಳನ್ನು ಪರಿಗಣಿಸಲು ಮತ್ತು ಹಿರಿಯ ಆರ್‌ಎಸ್‌ಎಸ್ ನಾಯಕರು ಅಮೆರಿಕಕ್ಕೆ ಪ್ರವೇಶಿಸುವುದನ್ನು ತಡೆಯಲು ಟ್ರಂಪ್ ಆಡಳಿತವನ್ನು ಆಗ್ರಹಿಸಿತ್ತು. ಈ ಶಿಫಾರಸು ಸಲಹಾತ್ಮಕವಾಗಿದ್ದು, ಯಾವುದೇ ಕಾನೂನು ಬದ್ಧತೆಯನ್ನು ಹೊಂದಿರಲಿಲ್ಲ.

ಈ ಪ್ರತಿಜ್ಞೆಯ ಅಭಿಯಾನವನ್ನು ‘ಸೇಕ್ರೆಡ್ ಆಕ್ಷನ್ಸ್’ ಎಂಬ ಗುಂಪು ಆಯೋಜಿಸಿತ್ತು. ಇದು ಅಮೆರಿಕದಲ್ಲಿರುವ ದಕ್ಷಿಣ ಏಷ್ಯಾದ ಉಗ್ರಗಾಮಿ ಸಂಘಟನೆಗಳನ್ನು ಬಯಲಿಗೆಳೆಯುವ ಕೆಲಸ ಮಾಡುತ್ತದೆ ಎಂದು ಹೇಳಿಕೊಂಡಿದೆ. ಈ ಅಭಿಯಾನವನ್ನು 2023 ರಲ್ಲಿ ಇಲಿನಾಯ್ಸ್‌ನಲ್ಲಿ ‘ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್’, ‘ಏಷ್ಯನ್ ಅಮೆರಿಕನ್ ಮಿಡ್‌ವೆಸ್ಟ್ ಪ್ರೋಗ್ರೆಸಿವ್ಸ್’, ‘ಇಂಡಿಯಾ ಸಿವಿಲ್ ವಾಚ್ ಇಂಟರ್ನ್ಯಾಷನಲ್’ ಮತ್ತು ‘ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್’ ಬೆಂಬಲದೊಂದಿಗೆ ಪ್ರಾರಂಭಿಸಲಾಯಿತು.

‘ಸೇಕ್ರೆಡ್ ಆಕ್ಷನ್ಸ್’ನ ಕಾರ್ಯನಿರ್ವಾಹಕ ನಿರ್ದೇಶಕ ಪುಷ್ಕರ್ ಶರ್ಮಾ, ಕಳೆದ ದಶಕದಲ್ಲಿ ಇಲಿನಾಯ್ಸ್‌ನಲ್ಲಿ ಡೆಮಾಕ್ರಟಿಕ್ ಮತ್ತು ರಿಪಬ್ಲಿಕನ್ ರಾಜಕೀಯ ಪ್ರಚಾರಗಳಿಗಾಗಿ ಆರ್‌ಎಸ್‌ಎಸ್‌ನೊಂದಿಗೆ ಸಂಪರ್ಕ ಹೊಂದಿದ ವ್ಯಕ್ತಿಗಳು ಕನಿಷ್ಠ 2.5 ಮಿಲಿಯನ್ ಡಾಲರ್‌ಗಳನ್ನು ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹೆಚ್ಚಿನ ದಕ್ಷಿಣ ಏಷ್ಯಾದ ಅಮೆರಿಕನ್ನರ ಅಭಿಪ್ರಾಯಗಳನ್ನು ಪ್ರತಿನಿಧಿಸದ “ಪ್ರಜಾಪ್ರಭುತ್ವ ವಿರೋಧಿ ಮತ್ತು ಉಗ್ರಗಾಮಿ ಕಾರ್ಯಸೂಚಿಯನ್ನು” ಮುನ್ನಡೆಸಲು ಈ ವೆಚ್ಚ ಮಾಡಲಾಗಿದೆ ಎಂದು ಅವರು ಪ್ರತಿಪಾದಿಸಿದರು.

ಅಮೆರಿಕದಲ್ಲಿ ರಾಜಕೀಯ ದೇಣಿಗೆಗಳನ್ನು ಹೆಚ್ಚಾಗಿ ವೈಯಕ್ತಿಕ ದಾನಿಗಳು, ಪೊಲಿಟಿಕಲ್ ಆಕ್ಷನ್ ಕಮಿಟಿಗಳು ಮತ್ತು ಸಂಯೋಜಿತ ಸಂಸ್ಥೆಗಳ ಮೂಲಕ ನೀಡಲಾಗುತ್ತದೆ. ಹೀಗಾಗಿ ಕೇವಲ ಪ್ರಚಾರ ನಿಧಿ ದಾಖಲೆಗಳ ಮೂಲಕ ಆರ್‌ಎಸ್‌ಎಸ್ ಗುಂಪಿನ ದೇಣಿಗೆಗಳೆಂದು ಗುರುತಿಸುವುದು ಕಷ್ಟಕರವಾಗಿದೆ ಎಂದು ವರದಿ ಹೇಳುತ್ತದೆ.

‘ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಆಕ್ಷನ್’ನ ಕಾರ್ಯನಿರ್ವಾಹಕ ನಿರ್ದೇಶಕಿ ರಿಯಾ ಚಕ್ರವರ್ತಿ ಮಾತನಾಡಿ, ಆರ್‌ಎಸ್‌ಎಸ್ ಸಂಯೋಜಿತ ಗುಂಪುಗಳು ಯುಎಸ್ ರಾಜಕೀಯದಲ್ಲಿ ಹಿಂದೂ ಅಮೆರಿಕನ್ನರ ಏಕೈಕ ಪ್ರತಿನಿಧಿಗಳು ಎಂದು ದೀರ್ಘಕಾಲದಿಂದ ತಮ್ಮನ್ನು ತಾವು ಬಿಂಬಿಸಿಕೊಳ್ಳುತ್ತಿವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...