Homeಮುಖಪುಟಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, 'ಬುಲ್ಡೋಜರ್ ರಾಜಕಾರಣ'ಕ್ಕೆ ವಿಪಕ್ಷಗಳಿಂದ ಖಂಡನೆ!

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

- Advertisement -
- Advertisement -

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆರ್‌ಜೆಡಿ, ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಹಿರಿಯ ನಾಯಕರು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ.

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸದ ಮನೋಜ್ ಝಾ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಇಂತಹ ಬೆಳವಣಿಗೆಗಳು ದೇಶವನ್ನು ವಿನಾಶದತ್ತ ಕೊಂಡೊಯ್ಯುತ್ತಿವೆ, ಇಂತಹ ಕೋಮು ಧ್ರುವೀಕರಣದ ವಾತಾವರಣದಲ್ಲಿ ದೇಶದ ಸಾಮಾನ್ಯ ಜನರಿಗೆ ಮುಕ್ತವಾಗಿ ಉಸಿರಾಡಲು ಸಾಧ್ಯವಾಗುತ್ತಿಲ್ಲ,” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿನ್ನೆಲೆ: ಈ ಮಸೀದಿಯು ಸರ್ಕಾರಿ ಜಾಗದಲ್ಲಿದ್ದು, ಅಕ್ರಮ ನಿರ್ಮಾಣವಾಗಿದೆ ಎಂದು ಜುಲೈ 16, 2026 ರಂದು ಸಿಟಿ ಮ್ಯಾಜಿಸ್ಟ್ರೇಟ್ ಕೋರ್ಟ್ ತೆರವುಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮಸೀದಿ ಕಮಿಟಿಯು ಜಿಲ್ಲಾ ನ್ಯಾಯಾಲಯದ ಬಾಗಿಲು ತಟ್ಟಿತ್ತು. ಆದರೆ, ಸೆಪ್ಟೆಂಬರ್ 4ರ ಗುರುವಾರ ಜಿಲ್ಲಾ ನ್ಯಾಯಾಧೀಶರ ಪೀಠವು ಅರ್ಜಿಯನ್ನು ವಜಾಗೊಳಿಸಿ ಸಿಟಿ ಮ್ಯಾಜಿಸ್ಟ್ರೇಟ್ ಆದೇಶವನ್ನು ಎತ್ತಿಹಿಡಿಯಿತು. ಶುಕ್ರವಾರ ತಡರಾತ್ರಿ ಮಸೀದಿಯನ್ನು ಸೀಲ್ ಮಾಡಿದ ಆಡಳಿತ ಮಂಡಳಿಯು, ಶನಿವಾರ ಮುಂಜಾನೆ ಬುಲ್ಡೋಜರ್ ಮೂಲಕ ಕಟ್ಟಡವನ್ನು ತೆರವುಗೊಳಿಸಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡದಂತೆ ತಡೆಯಲು ಕೈರಾನಾ ಕ್ಷೇತ್ರದ ಸಮಾಜವಾದಿ ಪಕ್ಷದ ಸಂಸದೆ ಇಕ್ರಾ ಹಸನ್ ಅವರ ನಿವಾಸದ ಹೊರಗೆ ಶುಕ್ರವಾರ ರಾತ್ರಿಯಿಂದಲೇ ಭಾರಿ ಸಂಖ್ಯೆಯ ಪೊಲೀಸರನ್ನು ನಿಯೋಜಿಸಿ, ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಇನ್ನೊಂದೆಡೆ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಆಡಳಿತದ ಕ್ರಮವನ್ನು ಖಂಡಿಸಿ, “1911ಕ್ಕಿಂತಲೂ ಮುಂಚಿನ ಕಂದಾಯ ದಾಖಲೆಗಳಲ್ಲಿ ವಹೀದ್ ಖಾನ್ ಮತ್ತು ಯಾಕೂಬ್ ಖಾನ್ ಅವರ ಹೆಸರುಗಳಿವೆ. ಎಲ್ಲಾ ದಾಖಲೆಗಳು ಇದ್ದರೂ ಸಂವಿಧಾನವನ್ನು ಗಾಳಿಗೆ ತೂರಿ ಧ್ವಂಸಗೊಳಿಸಲಾಗಿದೆ,” ಎಂದು ಕಿಡಿಕಾರಿದ್ದಾರೆ.

ಹೈಕೋರ್ಟ್ ಮೆಟ್ಟಿಲೇರಲು ನಿರ್ಧಾರ

ನ್ಯಾಯಾಲಯವು ಸ್ಥಳ ಖಾಲಿ ಮಾಡಲು ಸೂಚಿಸಿತ್ತೇ ವಿನಃ ತಕ್ಷಣವೇ ಧ್ವಂಸಗೊಳಿಸಲು ಸ್ಪಷ್ಟ ಆದೇಶ ನೀಡಿರಲಿಲ್ಲ. ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಮಗೆ ಕಾಲಾವಕಾಶವಿತ್ತು ಎಂದು ಮುಸ್ಲಿಂ ಒಕ್ಕೂಟದ ನಾಯಕರು ಹಾಗೂ ಮಾಜಿ ಸಂಸದ ಫಜ್ಲೂರ್ ರೆಹಮಾನ್ ತಿಳಿಸಿದ್ದಾರೆ. ಈ ವಿಷಯವಾಗಿ ಶೀಘ್ರದಲ್ಲೇ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಲಾಗಿದೆ. ಸಹಾರನ್‌ಪುರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ವದಂತಿಗಳು ಹರಡದಂತೆ ತಡೆಯಲು ಕಲೆಕ್ಟರೇಟ್ ಸಂಕೀರ್ಣದ ಸುತ್ತಲೂ 10ಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ಸಿಬ್ಬಂದಿ ಹಾಗೂ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟೆಬಲರಿ ಪಡೆಗಳನ್ನು ನಿಯೋಜಿಸಲಾಗಿದೆ. ಸೋಷಿಯಲ್ ಮೀಡಿಯಾಗಳ ಮೇಲೆಯೂ ಸೈಬರ್ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...