Homeಮುಖಪುಟಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

- Advertisement -
- Advertisement -

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ ಬೆನ್ನಲ್ಲೇ, ಸಂಜಯ್ ಆಝಾದ್ ಅವರ ಕುಟುಂಬಕ್ಕೆ ಗೂಂಡಾಗಳು ಬೆದರಿಕೆ ಹಾಕಲು ಮುಂದಾಗಿದ್ದಾರೆ. ಶನಿವಾರ ರಾತ್ರಿ ಗೂಂಡಾಗಳ ಗುಂಪೊಂದು ತಮ್ಮ ಮನೆಯನ್ನು ಸುತ್ತುವರಿದು ಕಲ್ಲು ಮತ್ತು ಇಟ್ಟಿಗೆ ತೂರಾಟ ನಡೆಸಿದೆ ಎಂದು ಸಂಜಯ್ ಅವರ ಅಪ್ರಾಪ್ತ ಪುತ್ರಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ‘X’ನಲ್ಲಿ ಸರಣಿ ವಿಡಿಯೊಗಳನ್ನು ಹಂಚಿಕೊಂಡಿರುವ ಆಕೆ, ಗೂಂಡಾಗಳು ನಮ್ಮ ಮನೆಯನ್ನು ಸುತ್ತುವರಿದು ದಾಳಿ ನಡೆಸಿದ್ದಾರೆ. ದೆಹಲಿ ಹಾಗೂ ಘಾಝಿಯಾಬಾದ್ ಪೊಲೀಸರು ತಕ್ಷಣವೇ ನಮಗೆ ಭದ್ರತೆ ಮತ್ತು ರಕ್ಷಣೆ ನೀಡಬೇಕು ಎಂದು ಕಣ್ಣೀರಿಡುತ್ತಾ ಮನವಿ ಮಾಡಿದ್ದಾರೆ. ನಮ್ಮ ಪೋಷಕರಿಗೆ ಏನಾದರೂ ತೊಂದರೆಯಾದರೆ ಯಾರು ಹೊಣೆ? ಅವರ ಜೀವಕ್ಕೆ ಕಂಟಕ ಬಂದರೆ ಏನು ಮಾಡುವುದು? ಎಂದು ಆಕೆ ದೆಹಲಿ ಆಡಳಿತ ಹಾಗೂ ಪೊಲೀಸರನ್ನು ನೇರವಾಗಿ ಪ್ರಶ್ನಿಸಿದ್ದಾರೆ.

ಸಂತ್ರಸ್ತ ಕುಟುಂಬದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ, NSUI ರಾಷ್ಟ್ರೀಯ ಅಧ್ಯಕ್ಷ ವಿನೋದ್ ಜಾಖರ್ ಅವರು ಶನಿವಾರ ಸಂಜಯ್ ಆಝಾದ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಪೊಲೀಸರ ವಿಳಂಬ ಧೋರಣೆ ಹಾಗೂ ಸಂಘಪರಿವಾರದ ಗೂಂಡಾವರ್ತನೆಯನ್ನು ತೀವ್ರವಾಗಿ ಖಂಡಿಸಿದರು.

ಸಂಜಯ್ ಅವರ ಮೇಲೆ ತಾನೇ ಹಲ್ಲೆ ನಡೆಸಿದ್ದಾಗಿ ಸ್ವತಂತ್ರ ಭಾರದ್ವಾಜ್ ಸ್ವತಃ ಒಪ್ಪಿಕೊಂಡಿದ್ದಾನೆ. ಆದರೂ ಪೊಲೀಸರು ಆತನ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಹಿಂಜರಿದಿದ್ದರು. ಬಿಜೆಪಿ ಸರ್ಕಾರ ಇಂತಹ ಗೂಂಡಾಗಳನ್ನು ಸತತವಾಗಿ ರಕ್ಷಿಸುತ್ತಿದೆ ಎಂಬ ಅನುಮಾನ ಇದರಿಂದ ಸ್ಪಷ್ಟವಾಗುತ್ತದೆ. ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಈ ವಿಚಾರವನ್ನು ಗಂಭೀರವಾಗಿ ಪ್ರಸ್ತಾಪಿಸಿದ ಬಳಿಕವಷ್ಟೇ ದೆಹಲಿ ಪೊಲೀಸರು ಎಚ್ಚೆತ್ತುಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ” ಎಂದು ಜಾಖರ್ ಆರೋಪಿಸಿದರು.

ಪ್ರತಿಭಟನಾಕಾರರು ಮತ್ತು ಸಂತ್ರಸ್ತರ ಮೇಲೆಯೇ ದಾಳಿ ನಡೆಸುವ ಇಂತಹ ಹಿಂಸಾತ್ಮಕ ಪ್ರವೃತ್ತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಂತ್ರಸ್ತ ಕುಟುಂಬಕ್ಕೆ ತಕ್ಷಣವೇ ಪೂರ್ಣ ಪ್ರಮಾಣದ ಪೊಲೀಸ್ ಭದ್ರತೆ ಒದಗಿಸಬೇಕು ಎಂಬ ಒತ್ತಾಯ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...