HomeಮುಖಪುಟJNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

JNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ದೀಪಿಕಾ ಪಡುಕೋಣೆ ಅಚ್ಚರಿಯ ಭೇಟಿ ನೀಡಿದ ಎರಡು ದಿನಗಳ ನಂತರ, ನರೇಂದ್ರ ಮೋದಿ ಸರ್ಕಾರದ ಕೌಶಲ್ಯ ಅಭಿವೃದ್ಧಿ ಸಚಿವಾಲಯವು ದೀಪಿಕಾರವರ ಪ್ರಚಾರದ ವೀಡಿಯೊವನ್ನು ಕೈಬಿಟ್ಟಿದೆ. ಆಸಿಡ್ ದಾಳಿಯ ಸಂತ್ರಸ್ತರು ಮತ್ತು ಸ್ಕಿಲ್ ಇಂಡಿಯಾ ಬಗ್ಗೆ ನಟಿ ಮಾತನಾಡಿದ್ದ ವಿಡಿಯೋ ಅದಾಗಿದೆ.

“ಸ್ಕಿಲ್ ಇಂಡಿಯಾವನ್ನು ಉತ್ತೇಜಿಸುವ ಪ್ರಚಾರದ ವೀಡಿಯೊವನ್ನು ಬುಧವಾರ ದೀಪಿಕಾ ಪಡುಕೋಣೆ ಬಿಡುಗಡೆ ಮಾಡಬೇಕಿತ್ತು. ಇದನ್ನು ಶ್ರಮ ಶಕ್ತಿ ಭವನ (ಸಚಿವಾಲಯ ಕಚೇರಿ) ಯಲ್ಲಿಯೂ ಪ್ರಸಾರ ಮಾಡಲಾಗುತ್ತಿತ್ತು. ಆದರೆ ಮಂಗಳವಾರದ ಘಟನೆಗಳ ಸರಣಿಯ ನಂತರ ವೀಡಿಯೊವನ್ನು ಥಟ್ಟನೆ ಕೈಬಿಡಲಾಯಿತು ”ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ದಿ ಪ್ರಿಂಟ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

ಆದಾಗ್ಯೂ, ಸಚಿವಾಲಯವು ಗುರುವಾರ ವೀಡಿಯೊ ಬಿಡುಗಡೆ ಕುರಿತು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಸ್ಕಿಲ್ ಇಂಡಿಯಾದ 45 ಸೆಕೆಂಡುಗಳ ಪ್ರಚಾರದ ವಿಡಿಯೋದಲ್ಲಿ ಪಡುಕೋಣೆ ಅವರು ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶಗಳ ಬಗ್ಗೆ ಮಾತನಾಡುತ್ತಾ, ಶುಕ್ರವಾರ ಬಿಡುಗಡೆಯಾಗಲಿರುವ ಆಸಿಡ್ ದಾಳಿಯ ಸಂತ್ರಸ್ತರ ಜೀವನಚರಿತ್ರೆಯ ಕುರಿತ ತನ್ನ ಚಲನಚಿತ್ರವಾದ ಚಪಾಕ್ ಮೇಲೆ ಚಿತ್ರಿಸಿದ್ದಾರೆ. ವೀಡಿಯೊ ತಯಾರಿಸುವ ಮೊದಲು ಆಸಿಡ್ ದಾಳಿಯ ಸಂತ್ರಸ್ತರೊಂದಿಗೆ ಪಡುಕೋಣೆ ಅವರ ಭೇಟಿಗೆ ಕೌಶಲ್ಯ ಸಚಿವಾಲಯ ಅನುಕೂಲ ಮಾಡಿಕೊಟ್ಟಿತ್ತು.

ಈ ಕುರಿತ ಪ್ರಶ್ನೆಗೆ ಸಚಿವಾಲಯವು ಪಡುಕೋಣೆ ಅವರೊಂದಿಗೆ ಯಾವುದೇ ಔಪಚಾರಿಕ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದೆ.

“ಸ್ಕಿಲ್ ಇಂಡಿಯಾದ ಸಂವಹನ ಮತ್ತು ಪ್ರಚಾರ ಚಟುವಟಿಕೆಯ ಅಡಿಯಲ್ಲಿ ನಿಯಮಿತ ಪ್ರಕ್ರಿಯೆಯ ಭಾಗವಾಗಿ, ತಂಡವು ಪರಸ್ಪರ ಪ್ರಚಾರಕ್ಕಾಗಿ ಮಾಧ್ಯಮ ಸಂಸ್ಥೆಗಳಿಂದ ವಿಚಾರಗಳನ್ನು ಪಡೆಯುತ್ತಲೇ ಇರುತ್ತದೆ. ಚಿತ್ರದ ವಿಷಯವನ್ನು ಪ್ರಚಾರ ಮಾಡಲು ಚಪಾಕ್‌ ಚಿತ್ರ ನಿರ್ಮಾಣ ತಂಡವು ಸ್ಕಿಲ್ ಇಂಡಿಯಾವನ್ನು ಸಂಪರ್ಕಿಸಿತ್ತು” ಎಂದು ಸಚಿವಾಲಯ ತಿಳಿಸಿದೆ.

“ಚಲನಚಿತ್ರದ ನಟರು ಕೆಲವು ಆಸಿಡ್ ದಾಳಿಯ ಸಂತ್ರಸ್ತರು ಮತ್ತು ನಮ್ಮ ಪರಿಸರ ವ್ಯವಸ್ಥೆಯಿಂದ ವಿಶೇಷ-ಚೇತನ ಅಭ್ಯರ್ಥಿಗಳನ್ನು ಭೇಟಿ ಮಾಡಿದ್ದಾರೆ, ಅವರು ಸ್ಕಿಲ್ ಇಂಡಿಯಾ ಫಲಾನುಭವಿಗಳಾಗಿದ್ದು ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಈ ಮೊದಲು, ಸಚಿವಾಲಯದ ಮಾಧ್ಯಮ ಸಲಹೆಗಾರ “ವೀಡಿಯೊವನ್ನು ದೀಪಿಕಾ ತಂಡವು ಸಲ್ಲಿಸಿದೆ” ಮತ್ತು ಅದನ್ನು “ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ತಿಳಿಸಿತ್ತು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಮಂಗಳವಾರ ಭೇಟಿ ನೀಡಿದ ನಂತರ ದೀಪಿಕಾ ಪಡುಕೋಣೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಅವರನ್ನು ದೀಪಿಕಾ ಭೇಟಿಯಾಗಿದ್ದರು.

ಪಡುಕೋಣೆ ಕ್ಯಾಂಪಸ್‌ನಲ್ಲಿದ್ದಾಗ ಯಾವುದೇ ಹೇಳಿಕೆ ನೀಡಲಿಲ್ಲ. ತದನಂತರ ಅವರು ಸುದ್ದಿ ಚಾನೆಲ್ ಆಜ್ ತಕ್‌ ಜೊತೆ ಮಾತನಾಡಿ “ದೇಶದ ಪರಿಸ್ಥಿತಿ ನನಗೆ ನೋವುಂಟುಮಾಡಿದೆ. ಜೆಎನ್‌ಯು ಹಿಂಸೆಯ ಪ್ರಕರಣದಲ್ಲಿ ಯಾವುದೇ ಕ್ರಮವಿಲ್ಲ ತೆಗೆದುಕೊಂಡಿಲ್ಲ ಎಂದು ಕೋಪ ವ್ಯಕ್ತಪಡಿಸಿದ ಅವರು ದೆಹಲಿ ಪೊಲೀಸರು ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ನೋವು ವ್ಯಕ್ತಪಡಿಸಿದ್ದರು.

ಜೆಎನ್‌ಯು ಭೇಟಿಯ ನಂತರ ಬಿಜೆಪಿ ನಾಯಕರ ಒಂದು ಭಾಗವು ನಟಿಯ ವಿರುದ್ಧ ಮಾತನಾಡಿ ಅವರು “ತುಕ್ಡೆ ತುಕ್ಡೆ ಗ್ಯಾಂಗ್” ಅನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಕೆಲವರು ಚಪಾಕ್ ಬಹಿಷ್ಕಾರಕ್ಕೆ ಒತ್ತಾಯಿಸಿದರು. ಆದರೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಯಾರಾದರೂ ಎಲ್ಲಿ ಬೇಕಾದರೂ ಹೋಗಬಹುದು ಮತ್ತು ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದರು.

ಸ್ಕಿಲ್ ಇಂಡಿಯಾ ಪ್ರಚಾರ

ಕೌಶಲ್ಯ ಅಭಿವೃದ್ಧಿ ಸಚಿವಾಲಯವು ಈ ಹಿಂದೆ ಇತರ ಬಾಲಿವುಡ್ ತಾರೆಯರ ಸೇವೆಗಳನ್ನು ತನ್ನ ಯೋಜನೆಗಳ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

2018 ರಲ್ಲಿ, ನಟರಾದ ವರುಣ್ ಧವನ್ ಮತ್ತು ಅನುಷ್ಕಾ ಶರ್ಮಾ ತಮ್ಮ ಚಲನಚಿತ್ರ ಸುಯಿ ಧಾಗಾ: ಮೇಡ್ ಇನ್ ಇಂಡಿಯಾ ಬಿಡುಗಡೆಯ ಸಮಯದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮವನ್ನು ಪ್ರಚಾರ ಮಾಡಿದ್ದರು. ಪ್ರಚಾರದ ವೀಡಿಯೊಗಳಲ್ಲಿ, ಧವನ್ ಮತ್ತು ಶರ್ಮಾ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ, ಐಟಿಐ ಮತ್ತು ಅಪ್ರೆಂಟಿಸ್‌ಶಿಪ್ ಯೋಜನೆಗಳ ಕುರಿತು ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...