Homeಮುಖಪುಟರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

- Advertisement -
- Advertisement -

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಬಯಲಿಗೆಳೆದಿದೆ. ಬೆಂಗಳೂರಿನ ವಿವಿಧ ಆಹಾರ ಸಂಗ್ರಹ ಹಾಗೂ ಪೂರೈಕೆ ಘಟಕಗಳ (ಡಾರ್ಕ್ ಸ್ಟೋರ್ಸ್) ಮೇಲೆ ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ, ಒಟ್ಟು 1.43 ಕೋಟಿ ರೂಪಾಯಿ ಮೌಲ್ಯದ ಅವಧಿ ಮೀರಿದ ಆಹಾರ ಹಾಗೂ ಅನಧಿಕೃತ ಔಷಧಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮಾರ್ಗದರ್ಶನದಲ್ಲಿ ‘ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ’ ಹಾಗೂ ‘ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆ’ಯಡಿ ಈ ದಾಳಿಗಳನ್ನು ನಡೆಸಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ‘ಪೆಪ್ಟೈಡ್ ಪಾರ್ಟಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ದೊರೆತ ಮಹತ್ವದ ದಾಖಲೆಗಳ ಲಿಂಕ್ ಆಧರಿಸಿ ಈ ವ್ಯಾಪಕ ತಪಾಸಣೆ ಕೈಗೊಳ್ಳಲಾಗಿತ್ತು. ವಿಶೇಷವಾಗಿ ಆನ್‌ಲೈನ್ ಆ್ಯಪ್‌ಗಳ ಮೂಲಕ ಮಾರಾಟವಾಗುವ ಆಹಾರ ಪದಾರ್ಥಗಳ ಲೇಬಲ್, ತಯಾರಿಕಾ ದಿನಾಂಕ, ಶೆಲ್ಫ್ ಲೈಫ್ ಮತ್ತು ಕಡ್ಡಾಯ ಮಾನದಂಡಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿದ್ದಾರೆ.

ದೇವನಹಳ್ಳಿಯ ಸಂಗ್ರಹಣಾ ಘಟಕವೊಂದರಲ್ಲಿ ಪೂರ್ಣ ಲೇಬಲ್ ಹೊಂದಿರದ 14 ಲಕ್ಷ ರೂ. ಹಾಗೂ ಅವಧಿ ಮೀರಿದ 10 ಲಕ್ಷ ರೂ. ಮೌಲ್ಯದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಯಾವುದೇ ಪರವಾನಗಿ ಇಲ್ಲದೆ ದಾಸ್ತಾನು ಮಾಡಿದ್ದ 2.45 ಲಕ್ಷ ರೂ. ಮೌಲ್ಯದ ಔಷಧಗಳನ್ನು ಜಪ್ತಿ ಮಾಡಲಾಗಿದೆ. ಅದೇ ರೀತಿ ಆನೇಕಲ್ ತಾಲ್ಲೂಕಿನ ಘಟಕವೊಂದರಲ್ಲಿ 19 ಲಕ್ಷ ರೂ. ಮೌಲ್ಯದ ತಪ್ಪು ಲೇಬಲ್‌ನ ಆಹಾರ, 13 ಲಕ್ಷ ರೂ. ಮೌಲ್ಯದ ಎಕ್ಸ್‌ಪೈರ್ಡ್ ಉತ್ಪನ್ನಗಳು ಹಾಗೂ 1.57 ಲಕ್ಷ ರೂ. ಮೌಲ್ಯದ ಅಕ್ರಮ ಔಷಧಗಳು ಪತ್ತೆಯಾಗಿವೆ.

ಇನ್ನು ಎಚ್‌ಬಿಆರ್‌ ಲೇಔಟ್‌ನ ಘಟಕವೊಂದರ ವಿರುದ್ಧ ಸಾರ್ವಜನಿಕರಿಂದ ಗಂಭೀರ ದೂರುಗಳು ಕೇಳಿಬಂದಿದ್ದವು. ಪ್ರಮುಖ ಆನ್‌ಲೈನ್ ಡೆಲಿವರಿ ಆ್ಯಪ್‌ಗಳಿಂದ ದಿನಸಿ, ಹಾಲು, ತರಕಾರಿ, ಮೊಸರು ಇತ್ಯಾದಿಗಳನ್ನು ಖರೀದಿಸಿ, ಅವುಗಳ ಕಾಲಾವಧಿ ಮುಗಿದ ಮೇಲೆಯೂ ಸಾರ್ವಜನಿಕರಿಗೆ ಮರುಮಾರಾಟ ಮಾಡಲಾಗುತ್ತಿತ್ತು. ಇಲ್ಲಿ ನಡೆಸಿದ ಪರಿಶೀಲನೆ ವೇಳೆ ಎಕ್ಸ್‌ಪೈರ್ಡ್ ಆಗಿದ್ದ ಗೋಡಂಬಿ ಬಿಸ್ಕತ್, ರಾಗಿ ಹಿಟ್ಟು, ಚಿಕನ್ ಪ್ಯಾಟಿ, ಪನೀರ್ ಮತ್ತು ಮೊಟ್ಟೆಗಳನ್ನು ವಶಕ್ಕೆ ಪಡೆದು ವಿಲೇವಾರಿ ಮಾಡಲಾಗಿದೆ.

ಲಿಂಗರಾಜಪುರಂನ ಘಟಕವೊಂದರಲ್ಲಿ ಸುಮಾರು 50 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಹಾಗೂ ಮುಕ್ತಾಯದ ಹಂತದಲ್ಲಿದ್ದ ಪೌಷ್ಟಿಕ ಉತ್ಪನ್ನಗಳು, ಚಾಕೊಲೇಟ್, ಸಿಹಿತಿಂಡಿ, ತುಪ್ಪ ಮತ್ತು ನಟ್ಸ್‌ಗಳನ್ನು ಜಪ್ತಿ ಮಾಡಿ ಘಟಕಕ್ಕೆ ಸೀಲ್ ಮಾಡಲಾಗಿದೆ. ಹೊಸಕೋಟೆಯ ಡಾರ್ಕ್ ಸ್ಟೋರ್ ಒಂದರಲ್ಲಿ ತೀವ್ರ ಅಸ್ವಚ್ಛತೆ ಹಾಗೂ ಕಾನೂನು ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ, ಅಲ್ಲಿದ್ದ 42 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಆಹಾರವನ್ನು ವಶಪಡಿಸಿಕೊಂಡು ಘಟಕವನ್ನು ಸಂಪೂರ್ಣವಾಗಿ ಮುಚ್ಚಿಸಲಾಗಿದೆ. ಹೊಸಕೋಟೆಯಲ್ಲೊಂದೇ ಸುಮಾರು 1 ಕೋಟಿ ರೂ. ಮೌಲ್ಯದ ಅಕ್ರಮ ಉತ್ಪನ್ನಗಳಿರುವ ಶಂಕೆಯಿದ್ದು, ತನಿಖೆ ಮುಂದುವರಿದಿದೆ.

ಈ ಸಮಗ್ರ ಕಾರ್ಯಾಚರಣೆಯಲ್ಲಿ ಒಟ್ಟು 33 ಲಕ್ಷ ರೂ. ಮೌಲ್ಯದ ಅಪೂರ್ಣ ಲೇಬಲ್‌ನ ಆಹಾರ, 1.05 ಕೋಟಿ ರೂ. ಮೌಲ್ಯದ ಎಕ್ಸ್‌ಪೈರ್ಡ್ ಆಹಾರ ಉತ್ಪನ್ನಗಳು (ಆಹಾರ ಉತ್ಪನ್ನಗಳ ಒಟ್ಟು ಮೌಲ್ಯ ₹1.38 ಕೋಟಿ) ಹಾಗೂ ₹4.02 ಲಕ್ಷ ಮೌಲ್ಯದ ಅನಧಿಕೃತ ಔಷಧಗಳು ಸೇರಿ ಒಟ್ಟು ₹1.43 ಕೋಟಿ ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ಧ ತನಿಖೆ ಹಾಗೂ ಕಾನೂನು ಕ್ರಮ ತೀವ್ರಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...