HomeUncategorizedಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

- Advertisement -
- Advertisement -

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ನಾಳೆಗೆ ಡಿಕೆಶಿ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನಗಳ ಪೂರೈಸುವ ಸಂಭ್ರಮಾಚರಣೆಯ ಸಿದ್ಧತೆಯಲ್ಲಿರುವ ಬೆನ್ನಲ್ಲೇ ಈ ಬೃಹತ್ ತನಿಖಾ ಕಾರ್ಯಾಚರಣೆ ನಡೆದಿದೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಚಿವರ ನಿವಾಸಕ್ಕೆ 2 ಕಾರುಗಳಲ್ಲಿ ಆಗಮಿಸಿದ ಅಧಿಕಾರಿಗಳ ತಂಡ ಪರಿಶೀಲನೆ ಆರಂಭಿಸಿದೆ. ಇದರ ಜೊತೆಗೆ ಬೆಳಗಾವಿ, ಗೋಕಾಕ್‌ನಲ್ಲಿರುವ ಅವರ ಹಿಲ್ ಗಾರ್ಡನ್ ನಿವಾಸ, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಮನೆ ಹಾಗೂ ರಾಜ್ಯ ಮತ್ತು ಗೋವಾ ಮೂಲದ ಇಡಿ ತಂಡಗಳು ಬೆಂಗಳೂರು, ಬೆಳಗಾವಿ ಸೇರಿದಂತೆ ಸುಮಾರು 18ಕ್ಕೂ ಹೆಚ್ಚು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸುತ್ತಿವೆ. ಸಚಿವರ ಆಪ್ತರಾದ ಡಾ. ಗಿರೀಶ್ ಸೋನ್ವಾಲಕರ್, ರಾಜು ಧರಗಶೆಟ್ಟಿ ಹಾಗೂ ವಿಠ್ಠಲ ಪರಸನ್ನವರ ನಿವಾಸಗಳ ಮೇಲೆಯೂ ದಾಳಿಯಾಗಿದೆ.

ಫೆಮಾ (FEMA) ಉಲ್ಲಂಘನೆ ಮತ್ತು ಅಬಕಾರಿ ಇಲಾಖೆ ಲಿಂಕ್

ಇಡಿ ಮೂಲಗಳ ಪ್ರಕಾರ, ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಸ್ವತಂತ್ರವಾಗಿ ಹೊಸ ಪ್ರಕರಣ (ECIR) ದಾಖಲಿಸಿಕೊಂಡು ಈ ತನಿಖೆ ಕೈಗೊಳ್ಳಲಾಗಿದೆ. ಈ ಹಿಂದೆ ಅಬಕಾರಿ ಇಲಾಖೆಯಲ್ಲಿದ್ದಾಗ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಇಡಿ ಮುಂದುವರಿಸಿದೆ. ಇನ್ನು ಸಚಿವರ ಭಾವಮೈದ, ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿ ವೈ. ಮಂಜುನಾಥ್ ನಿವಾಸದ ಮೇಲೆಯೂ ಇಡಿ ಮತ್ತೆ ದಾಳಿ ನಡೆಸಿದೆ.

ಕಳೆದ ಜೂನ್ 24 ರಂದು ಮಂಜುನಾಥ್ ಅವರಿಗೆ ಸಂಬಂಧಿಸಿದ 14 ಸ್ಥಳಗಳ ಮೇಲೆ ದಾಳಿ ಮಾಡಿದ್ದಾಗ ₹13 ಕೋಟಿಗೂ ಅಧಿಕ ಮೌಲ್ಯದ ನಗದು, ಚಿನ್ನಾಭರಣ ಹಾಗೂ ಪ್ರಮುಖ ಮಾಹಿತಿಗಳಿದ್ದ ಡೈರಿಯನ್ನು ವಶಪಡಿಸಿಕೊಳ್ಳಲಾಗಿತ್ತು. ತನಿಖೆಯ ವೇಳೆ ಮಂಜುನಾಥ್ ಅವರು ತಮ್ಮ ಪತ್ನಿ ಹೆಸರಿನಲ್ಲಿ ಆಫ್ರಿಕಾದಲ್ಲಿ ಮೈನಿಂಗ್ ವಲಯದಲ್ಲಿ ಬೃಹತ್ ಹೂಡಿಕೆ ಮಾಡಿರುವುದು ಕಂಡುಬಂದಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆಯ ಶಂಕೆ ವ್ಯಕ್ತವಾಗಿದೆ. ಈ ಉದ್ಯಮದಲ್ಲಿ ಮಂಜುನಾಥ್ ಅವರ ಪತ್ನಿ ಹಾಗೂ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಪಾಲುದಾರರಾಗಿದ್ದಾರೆ ಎನ್ನಲಾಗಿದ್ದು, ಈ ಉದ್ಯಮಿಕ ಜಾಲದ ಜಾಡು ಹಿಡಿದು ಪ್ರಸ್ತುತ ದಾಳಿ ನಡೆಸಲಾಗಿದೆ.

ಕೇಂದ್ರ ಸರ್ಕಾರದ ರಾಜಕೀಯ ಹಸ್ತಕ್ಷೇಪದ ಆರೋಪ

ಈ ಹಿಂದೆ ನಾಗೇಂದ್ರ ಅವರ ಪ್ರಕರಣದಲ್ಲೂ ಇದೇ ರೀತಿ ಇಡಿ ಪ್ರವೇಶಿಸಿ ಬಂಧನ ನಡೆದಿತ್ತು. ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರನ್ನೇ ಗುರಿಯಾಗಿಸಿ ನಡೆಸಿರುವ ದಾಳಿಯು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸರ್ಕಾರಕ್ಕೆ 100 ದಿನ ತುಂಬುವ ಹೊತ್ತಿನಲ್ಲೇ ನಡೆದಿರುವ ಈ ಕಾರ್ಯಾಚರಣೆಯು ವಿಪಕ್ಷ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ರಾಜಕೀಯ ನಡೆ ಎಂಬ ಮಾತುಗಳು ಆಡಳಿತಾರೂಢ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದ್ದು, ಮುಂದಿನ ಹಂತದಲ್ಲಿ ತನಿಖೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...