HomeಅಂಕಣಗಳುKarnataka SIR'ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..'; ಚುನಾವಣಾ ಆಯೋಗದ ಸ್ಪಷ್ಟನೆ

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

- Advertisement -
- Advertisement -

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂಬ ಆರೋಪವನ್ನು ಚುನಾವಣಾ ಆಯೋಗ ತಳ್ಳಿಹಾಕಿದೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಜಿಲ್ಲೆ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗೌರವಾನ್ವಿತ ಭಾರತ ರತ್ನ ಪ್ರೊಫೆಸರ್ ಸಿ.ಎನ್.ಆರ್. ರಾವ್ ಅವರಿಗೆ ಯಾವುದೇ ನೋಟೀಸ್ ಜಾರಿ ಮಾಡಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸ್ಪಷ್ಟಪಡಿಸಿದ್ದಾರೆ.

“ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಸಡೆಯುವ ವಿಚಾರಣೆಗೆ ಸಂಬಂಧಿಸಿದಂತೆ ಅವರ ಹೆಸರಿನಲ್ಲಿ ವ್ಯತ್ಯಾಸವಿರುವುದರಿಂದ ಬಿಎಲ್‌ಒ ರವರು ಯಾವುದೇ ನೋಟೀಸ್‌ ಜಾರಿ ಮಾಡದೆ, ಅವರು
ಗೌರವಾವಿನ್ವಿತರಾವಾಗಿರುವುದರಿಂದ ಅಂತಿಮ ಮತದಾರರ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಿದ್ದು, ಅದರಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಕ್ರಮ ವಹಿಸಲಾಗಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ.

“ಪ್ರೊಫೆಸರ್ ಸಿ.ಎನ್.ಆರ್. ರಾವ್ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅಂಗವಾಗಿ ಗೌರವಾನ್ವಿತ ಭಾರತ ರತ್ನ ಪ್ರೊಫೆಸರ್ ಸಿ.ಎನ್. ರಾವ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ಗಣತಿ ನಮೂನೆಗಳನ್ನು ರಾಜ್ಯದ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಮಾನ್ಯ ಆಯುಕ್ತರೊಂದಿಗೆ ಮನೆಗೆ ತೆರಳಿ ಗೌರವಪೂರ್ವಕವಾಗಿ ನೀಡಿ, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಲಾಗಿದೆ” ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

“ಭಾರತ ರತ್ನ ಪ್ರೊಫೆಸರ್ ಸಿ.ಎನ್. ರಾವ್ ಅವರು 2002ನೇ ಸಾಲಿನ 76-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಭಾಗ ಸಂಖ್ಯೆ 129ರಲ್ಲಿ ಕ್ರಮ ಸಂಖ್ಯೆ 431ರ ಮತದಾರರಾಗಿರುತ್ತಾರೆ. ಆಗ ಅವರ ಹೆಸರು ‘ರಾಮ’ ಎಂದು ನಮೂದಾಗಿತ್ತು. ಪ್ರಸ್ತುತ 157-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 59ರಲ್ಲಿ ಕ್ರಮ ಸಂಖ್ಯೆ 187ರಲ್ಲಿ ‘ಪ್ರೊಫೆಸರ್ ಸಿ.ಎನ್. ರಾವ್ ಎಂ’ ಎಂಬ ಹೆಸರಿನೊಂದಿಗೆ ಮತದಾರರಾಗಿ ನೋಂದಾಯಿತರಾಗಿದ್ದಾರೆ. ಅದರಂತೆ, ಕರಡು ಮತದಾರರ ಪಟ್ಟಿಯಲ್ಲಿಯೂ ಸಹ ಅವರ ಹೆಸರು ಸೇರ್ಪಡೆಯಾಗಿದೆ” ಎಂದು ಅವರು ಸ್ಪಷ್ಟನೆ ನಿಡಿದ್ದಾರೆ.

“ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅಂಗವಾಗಿ ನಡೆಯುವ ವಿಚಾರಣೆಗೆ ಸಂಬಂಧಿಸಿದಂತೆ, ಮತದಾರರ ಪಟ್ಟಿಯಲ್ಲಿ ಅವರ ಹೆಸರಿನಲ್ಲಿ ವ್ಯತ್ಯಾಸವಿರುವ ಹಿನ್ನೆಲೆಯಲ್ಲಿ, ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅವರು ಯಾವುದೇ ನೋಟೀಸ್ ಜಾರಿ ಮಾಡದೆ, ಗೌರವಾನ್ವಿತ ವ್ಯಕ್ತಿಯಾಗಿರುವ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಗೆ ಅವರ ಹೆಸರನ್ನು ಸೇರಿಸಲು ಶಿಫಾರಸು ಮಾಡಿದ್ದಾರೆ. ಅದರಂತೆ, ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...