Homeಮುಖಪುಟದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು (ಸೆ.8) ತಿಳಿಸಿದ್ದಾರೆ.

ಎಎಪಿ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, “ಸೂಕ್ತ ಪ್ರಕ್ರಿಯೆಯನ್ನು ಅನುಸರಿಸದೆ ರಾಜೇಂದ್ರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಚಡ್ಡಾ ಅವರ ಹೆಸರನ್ನು ಸೇರಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ನವೀಕರಣ ಪ್ರಕ್ರಿಯೆಯ ಮೂಲಕ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಹಿಂದಿನ ಪಕ್ಷವಾದ ಎಎಪಿ ಅವರನ್ನು ರಾಜ್ಯಸಭೆಗೆ ಕಳುಹಿಸಿದ್ದ ಪಂಜಾಬ್‌ನ ಮತದಾರರ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿದೆ.

“ಮಂಗಳವಾರದವರೆಗೆ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಒಟ್ಟು 700 ಅರ್ಜಿಗಳನ್ನು ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್‌ಒ) ಅನುಮೋದಿಸಿದ್ದಾರೆ. ಅವುಗಳಲ್ಲಿ ಚಡ್ಡಾ ಅವರ ಹೆಸರೂ ಇತ್ತು” ಎಂದು ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಸ್ಐಆರ್ ಸಿದ್ಧತೆಗಾಗಿ ದೆಹಲಿಯ ಮತದಾರರ ಪಟ್ಟಿಯನ್ನು ಜೂನ್ 16ರಂದು ತಡೆಹಿಡಿಯಲಾಗಿತ್ತು. ಆಗಸ್ಟ್ 31ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುವವರೆಗೆ ಅದೇ ಸ್ಥಿತಿಯಲ್ಲಿತ್ತು ಎಂದು ದೆಹಲಿ ಸಿಇಒ ಹೇಳಿಕೆ ತಿಳಿಸಿದೆ.

ಈ ಅವಧಿಯಲ್ಲಿ, ಹೊಸ ಮತದಾರರಿಗಾಗಿ (ನಮೂನೆ 7 ಮತ್ತು 8ರ ಜೊತೆಗೆ) ಸುಮಾರು 2.14 ಲಕ್ಷ ‘ನಮೂನೆ-6’ ಅರ್ಜಿಗಳನ್ನು ಸಲ್ಲಿಸಲಾಗಿದೆ. ಅಲ್ಲದೆ, ಆಕ್ಷೇಪಣೆಗಳ ಸಲ್ಲಿಕೆಯ ಅವಧಿಯಲ್ಲಿ, ನವೆಂಬರ್ 4ರಂದು ಪ್ರಕಟವಾಗಲಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು ಎಂಟು ದಿನಗಳಲ್ಲಿ (ಸೆಪ್ಟೆಂಬರ್ 7ರವರೆಗೆ) ಮತದಾರರು ಹೆಚ್ಚುವರಿಯಾಗಿ 25,011 ಜನರು ‘ನಮೂನೆ-6’ಗಳನ್ನು ಸಲ್ಲಿಸಿದ್ದಾರೆ ಎಂದು ಆಯೋಗ ಹೇಳಿದೆ.

ಎಸ್ಐಆರ್-ಪೂರ್ವ ಅವಧಿಯಲ್ಲಿ ಅಥವಾ ಆಕ್ಷೇಪಣೆಗಳ ಸಲ್ಲಿಕೆಯ ಅವಧಿಯಲ್ಲಿ ಹೆಸರು ಸೇರ್ಪಡೆಗಾಗಿ ಮತದಾರರು ಸಲ್ಲಿಸಿದ ಎಲ್ಲಾ ನಮೂನೆ-6 ಅರ್ಜಿಗಳು, ನಮೂನೆ-7 ಮತ್ತು 8ರೊಂದಿಗೆ ಪರಿಶೀಲನೆಯ ಹಂತದಲ್ಲಿವೆ. ಅರ್ಜಿಗಳು ಅನುಮೋದನೆಗೊಂಡ ನಂತರ, ಸಂದರ್ಭಾನುಸಾರ ಸೇರ್ಪಡೆ, ಅಳಿಸುವಿಕೆ ಮತ್ತು ಮಾರ್ಪಾಡುಗಳು ಮತದಾರರ ಡೇಟಾಬೇಸ್‌ನಲ್ಲಿ ಪ್ರತಿಫಲಿಸುತ್ತವೆ.

ಹೊಸ ಮತದಾರರ ಸೇರ್ಪಡೆಗಳನ್ನು ನವೆಂಬರ್ 4ರಂದು ಪೂರಕ ಪಟ್ಟಿಯಾಗಿ ಪ್ರಕಟಿಸಲಾಗುವುದು ಎಂದು ದೆಹಲಿ ಸಿಇಒ ಕಚೇರಿ ತಿಳಿಸಿದೆ.

“ಸಂಬಂಧಪಟ್ಟ ಮತಗಟ್ಟೆ ವ್ಯಾಪ್ತಿಯ ಪಟ್ಟಿಯು 746 ಮತದಾರರನ್ನು ತೋರಿಸುತ್ತಿರುವಾಗ ಚಡ್ಡಾ ಅವರ ಹೆಸರನ್ನು ದೆಹಲಿಯ ಕರಡು ಮತದಾರರ ಪಟ್ಟಿಗೆ ಹೇಗೆ ಸೇರಿಸಲಾಯಿತು” ಎಂದು ಆಮ್ ಆದ್ಮಿ ಪಕ್ಷ ಪ್ರಶ್ನಿಸಿದ್ದು, ಅನುಸರಿಸಿದ ಪ್ರಕ್ರಿಯೆಯ ಬಗ್ಗೆ ಚುನಾವಣಾ ಆಯೋಗದಿಂದ ವಿವರಣೆ ಕೋರಿದೆ.

“ಆಗಸ್ಟ್ 31ರಂದು ಪ್ರಕಟವಾದ ಕರಡು ಪಟ್ಟಿಯು 746 ಮತದಾರರನ್ನು ಹೊಂದಿದ್ದರೂ, ರಾಜೇಂದ್ರ ನಗರ ಮತದಾರರ ಪಟ್ಟಿಯಲ್ಲಿ ಚಡ್ಡಾ ಅವರ ಹೆಸರು 747ನೇ ಮತದಾರರಾಗಿ ಕಾಣಿಸಿಕೊಂಡಿದೆ” ಎಂದು ಎಎಪಿ ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಹೇಳಿದ್ದಾರೆ.

“ಮತದಾರರ ಪಟ್ಟಿಯ ಕ್ರಮಸಂಖ್ಯೆ 747ರಲ್ಲಿ 37 ವರ್ಷದ ಸುನಿಲ್ ಚಡ್ಡಾ ಅವರ ಮಗ ರಾಘವ್ ಚಡ್ಡಾ ಅವರ ಹೆಸರನ್ನು ದಾಖಲು ಮಾಡಲಾಗಿದೆ” ಎಂದು ಭಾರದ್ವಾಜ್ ತಿಳಿಸಿದ್ದಾರೆ.

“ಈ ಹೆಚ್ಚುವರಿ ಸೇರ್ಪಡೆ ಹೇಗೆ ಮಾಡಲಾಯಿತು” ಎಂದು ಪ್ರಶ್ನಿಸಿದ ಅವರು, “ಚಡ್ಡಾ ಅವರ ಹೆಸರನ್ನು ಸೇರಿಸಲು ಅನುಸರಿಸಿದ ಕಾರ್ಯವಿಧಾನವನ್ನು ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು” ಎಂದು ಒತ್ತಾಯಿಸಿದರು.

ಎಎಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಚಡ್ಡಾ, “ನಾನು ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷವನ್ನು ಕಾಡುತ್ತಿರುವಂತೆ ತೋರುತ್ತಿದೆ… ನಾನು ಭ್ರಷ್ಟ ಆಮ್ ಆದ್ಮಿ ಪಕ್ಷವನ್ನು ತೊರೆದಾಗಿನಿಂದ, ಅದರ ನಾಯಕತ್ವಕ್ಕೆ ಅದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರು ಈಗ ತಾನೇ ಕೈಬಿಡಲ್ಪಟ್ಟ ಕಹಿ ಅನುಭವದಲ್ಲಿರುವ ಮಾಜಿ ಪ್ರೇಮಿಯಂತೆ ವರ್ತಿಸುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂದುವರಿದು, “ಸತ್ಯಾಂಶಗಳು ಸರಳ ಮತ್ತು ನೇರವಾಗಿವೆ. ನಾನು ಅನ್ವಯವಾಗುವ ಎಲ್ಲಾ ಇಸಿಐ ಮಾರ್ಗಸೂಚಿಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿದ್ದೇನೆ. ನಿಗದಿತ ಪರಿಹಾರಗಳನ್ನು ಪಡೆದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...