Homeಮುಖಪುಟ'ಸಿಇಸಿ ಜ್ಞಾನೇಶ್ ಕುಮಾರ್ ಮಗಳು' : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು ಅಲಹಾಬಾದ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಕಾಂಗ್ರೆಸ್ ಮಂಗಳವಾರ (ಸೆ.8) ಮುಖ್ಯ ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದೆ.

ನ್ಯಾಯಾಲಯವು ವಿದ್ಯಾರ್ಥಿ ಹೋರಾಟಗಾರ್ತಿ ಆಕೃತಿ ಚೌಧರಿ ವಿರುದ್ಧದ ಬಂಧನ ಆದೇಶವನ್ನು ರದ್ದುಗೊಳಿಸಿದ್ದು ಮಾತ್ರವಲ್ಲದೆ, ಅವರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನೂ ಮಂಜೂರು ಮಾಡಿದೆ. ಈ ಮೊತ್ತವನ್ನು ನಿರ್ಧಾರದಲ್ಲಿ ಭಾಗಿಯಾಗಿದ್ದ ಮೇಧಾ ರೂಪಮ್ ಮತ್ತು ಇತರ ಅಧಿಕಾರಿಗಳಿಂದಲೇ ವಸೂಲಿ ಮಾಡುವಂತೆ ನಿರ್ದೇಶಿಸಿದೆ.

“ಅಲಹಾಬಾದ್ ಹೈಕೋರ್ಟ್ ಜ್ಞಾನೇಶ್ ಕುಮಾರ್ ಗುಪ್ತಾ ಅವರ ಪುತ್ರಿಯನ್ನು ‘ನಿರಂಕುಶ ಅಧಿಕಾರಿ’ (ಡೆಸ್ಪೊಟಿಕ್ ಆಫೀಸರ್) ಎಂದು ಕರೆದಿದೆ. ಸಮಾಚಾರ್ ಸಮಾಪ್ತ್ ಹುಯೇ” ಎಂದು ಕಾಂಗ್ರೆಸ್ ನಾಯಕ ಪವನ್ ಖೇಡಾ ಅವರು ಹೈಕೋರ್ಟ್ ತೀರ್ಪಿನ ವರದಿಯನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾ ಬರೆದಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರೂ ಸಹ ಇದೇ ಧಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಾಚಿಕೆಗೇಡಿನ ತಂದೆಗೆ ತಕ್ಕ ನಾಚಿಕೆಗೇಡಿನ ಮಗಳು- ಪ್ರಜಾಪ್ರಭುತ್ವ ಮತ್ತು ಕಾನೂನಿನ ಸರಿಯಾದ ಪ್ರಕ್ರಿಯೆಗೆ ಇವರು ಕಳಂಕ. ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರು, ಖ್ಯಾತ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಸುಪುತ್ರಿ. ಭಾರತವನ್ನು ಇಂತಹ ಪಿಡುಗಿನಿಂದ ಮುಕ್ತಗೊಳಿಸುವ ಅಗತ್ಯವಿದೆ” ಎಂದು ಮಹುವಾ ಮೊಯಿತ್ರಾ ಅವರು ಎಕ್ಸ್ ಜಾಲತಾಣದಲ್ಲಿ ಬರೆದಿದ್ದಾರೆ.

“ಸ್ವಪಕ್ಷೀಯ ಮತ್ತು ಸರ್ವಾಧಿಕಾರಿ ಧೋರಣೆಯ ಅಧಿಕಾರಿಗಳು ಉತ್ತರ ಪ್ರದೇಶವನ್ನು ದಬ್ಬಾಳಿಕೆಯ ಜಗತ್ತನ್ನಾಗಿ (ಡಿಸ್ಟೋಪಿಯಾ) ಪರಿವರ್ತಿಸಲಿದ್ದಾರೆ. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್ಎಸ್ಎ) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಯ್ಡಾ ಜಿಲ್ಲಾಧಿಕಾರಿ ಮತ್ತು ಜ್ಞಾನೇಶ್ ಕುಮಾರ್ ಅವರ ಪುತ್ರಿ ಮೇಘಾ ರೂಪಮ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಲಹಾಬಾದ್ ಹೈಕೋರ್ಟ್‌ಗೆ ಅಭಿನಂದನೆಗಳು. ಈ ತಂದೆ ಮತ್ತು ಮಗಳು ಇಬ್ಬರೂ ಸೇರಿ ಪ್ರಜಾಪ್ರಭುತ್ವವನ್ನು ಧ್ವಂಸ ಮಾಡುತ್ತಿದ್ದಾರೆ” ಎಂದು ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಬರೆದುಕೊಂಡಿದ್ದಾರೆ.

ಗೌತಮ್ ಬುದ್ಧ ನಗರದಲ್ಲಿ ಮತ್ತೊಬ್ಬ ವಿದ್ಯಾರ್ಥಿಯ ವಿರುದ್ಧ ಕೈಗೊಳ್ಳಲಾದ ಕ್ರಮಕ್ಕೆ ಸಂಬಂಧಿಸಿದ ಪ್ರತ್ಯೇಕ ಹಾಗೂ ಪೂರಕ ಪೋಸ್ಟ್ ಒಂದರಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಸೌರವ್ ದಾಸ್ ಅವರು ಗೌತಮ್ ಬುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿ ಅಕ್ಷತ್ ತ್ರಿಪಾಠಿ ಅವರಿಗೆ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ರೂ. 5 ಲಕ್ಷದ ಬಾಂಡ್ ನೀಡುವಂತೆ ಸೂಚಿಸಿ ಹೊರಡಿಸಲಾಗಿದೆಯೆನ್ನಲಾದ ಆದೇಶವನ್ನು ಪ್ರಶ್ನಿಸಿದ್ದಾರೆ.

“ಗೌತಮ ಬುದ್ಧ ನಗರದ ಜಿಲ್ಲಾಧಿಕಾರಿಗಳು (ಡಿಎಂ) ಸುಪ್ರೀಂ ಕೋರ್ಟ್‌ನ ಸೆಪ್ಟೆಂಬರ್ 1ರ ಐತಿಹಾಸಿಕ ಆದೇಶವನ್ನು ಓದಿಲ್ಲವೇ? ಸಿಜೆಪಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ ಎಲ್ಲಾ ಪ್ರತಿಭಟನಾಕಾರರಿಗೆ ಯಾವುದೇ ರೀತಿಯ ಕಾನೂನು ಕ್ರಮಗಳಿಂದ ಶಾಶ್ವತವಾದ ಸಂಪೂರ್ಣ ವಿನಾಯಿತಿ ಇದೆ. ಅಕ್ಷಯ್ ತ್ರಿಪಾಠಿ ಅವರು 5 ಲಕ್ಷ ರೂಪಾಯಿಗಳ ಜಾಮೀನು ಬಾಂಡ್‌ ಅನ್ನು ಸಲ್ಲಿಸುವ ಅಗತ್ಯವಿಲ್ಲ”

“ನಾವು ತಕ್ಷಣವೇ ಇದರ ಅನ್ವಯ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ಗೌರವಾನ್ವಿತ ಜಿಲ್ಲಾಧಿಕಾರಿಗಳಿಗೆ (ಡಿಎಂ) ಸುಪ್ರೀಂ ಕೋರ್ಟ್ ತೀರ್ಪಿನ ಪ್ರತಿಯನ್ನು ಕಳುಹಿಸಿಕೊಡಲು ಕೇಂದ್ರ ಸರ್ಕಾರವನ್ನು ಕೇಳಿದ್ದೇವೆ. ಯಾವೊಬ್ಬ ವಿದ್ಯಾರ್ಥಿಯನ್ನೂ ಗುರಿ ಮಾಡಲು ನಾವು ಬಿಡುವುದಿಲ್ಲ” ಎಂದು ದಾಸ್ ಬರೆದಿದ್ದಾರೆ.

“ಕಳೆದ ವಾರ, ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಅಚಲ್ ಸಚ್‌ದೇವ್ ಅವರಿದ್ದ ವಿಭಾಗೀಯ ಪೀಠವು, ಎನ್‌ಎಸ್‌ಎ ಅಡಿಯಲ್ಲಿ ಚೌಧರಿಯವರನ್ನು ನಿರಂತರವಾಗಿ ಬಂಧನದಲ್ಲಿಟ್ಟಿರುವುದು ಆರ್ಟಿಕಲ್ 21 ರ ಅಡಿಯಲ್ಲಿ ಅವರ ಮೂಲಭೂತ ಹಕ್ಕನ್ನು ಉಲ್ಲಂಘಿಸಿದೆ ಎಂದು ತೀರ್ಪು ನೀಡಿತ್ತು. ಬಂಧನದ ಆದೇಶಕ್ಕೆ ಯಾವುದೇ ಪೂರಕ ಪುರಾವೆಗಳಿಲ್ಲ ಮತ್ತು ಅಧಿಕಾರಿಗಳು ‘ಯಾವುದೇ ವಿವೇಚನೆ ಬಳಸದೆ’ ಈ ಆದೇಶವನ್ನು ಹೊರಡಿಸಿದ್ದಾರೆ ಎಂದು ಕೋರ್ಟ್ ಹೇಳಿತ್ತು.

“ಖಂಡನಾರ್ಹ ಆದೇಶವನ್ನು ಹೊರಡಿಸಿದ ಗೌತಮ ಬುದ್ಧ ನಗರದ ಜಿಲ್ಲಾಧಿಕಾರಿಯ ನಡವಳಿಕೆಯು ತೀವ್ರ ನಿಂದನೆಗೆ ಅಥವಾ ಅಪಹಾಸ್ಯಕ್ಕೆ ಅರ್ಹವಾಗಿದೆ” ಎಂದು ನ್ಯಾಯಾಲಯ ಹೇಳಿತ್ತು.

“ಚೌಧರಿಯವರನ್ನು ಒಂದು ‘ಉದಾಹರಣೆಯನ್ನಾಗಿ’ ಬಿಂಬಿಸಲು ಮತ್ತು ಕಾರ್ಮಿಕರ ಬೆಂಬಲಕ್ಕಾಗಿ ಇತರರು ತಮ್ಮ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸದಂತೆ ತಡೆಯಲು ರೂಪಮ್ ಅವರು ಬಯಸಿದ್ದಂತೆ ತೋರುತ್ತಿದೆ” ಎಂದು ಪೀಠವು ಹೇಳಿತ್ತು. ಅಧಿಕಾರಿಗಳ ಇಂತಹ ‘ಸ್ವಪಕ್ಷೀಯ ಮತ್ತು ಸರ್ವಾಧಿಕಾರಿ’ ನಡವಳಿಕೆಯು ಉತ್ತರ ಪ್ರದೇಶವನ್ನು ಜಾರ್ಜ್ ಆರ್ವೆಲ್ ಕಾದಂಬರಿಗಳಲ್ಲಿನ ಕಲ್ಪಿತ ದಬ್ಬಾಳಿಕೆಯ ಜಗತ್ತನ್ನಾಗಿ (ಒರೆವೆಲ್ಲಿಯನ್ ಡಿಸ್ಟೋಪಿಯಾ) ಪರಿವರ್ತಿಸಬಹುದು ಎಂದು ಕೋರ್ಟ್ ಎಚ್ಚರಿಸಿತ್ತು.

ನ್ಯಾಯಾಲಯವು ರೂಪಮ್ ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಇದನ್ನು ಅವರ ಸೇವಾ ದಾಖಲೆಗಳಲ್ಲಿ (ಸರ್ವಿಸ್ ರೆಕಾರ್ಡ್ಸ್) ದಾಖಲಿಸುವಂತೆ ಸೂಚಿಸಿತ್ತು. ಅಲ್ಲದೆ, 5 ಲಕ್ಷ ರೂಪಾಯಿಗಳ ಪರಿಹಾರದ ಮೊತ್ತವನ್ನು ಕೇವಲ ಸಾರ್ವಜನಿಕ ಹಣದಿಂದ ನೀಡದೆ, ‘ತಳಮಟ್ಟದ ಎಸ್‌ಎಚ್‌ಒವರೆಗಿನ ಜವಾಬ್ದಾರಿಯುತ ಅಧಿಕಾರಿಗಳ ವೇತನದಿಂದಲೇ ವಸೂಲಿ ಮಾಡಬೇಕು ಎಂದು ಆದೇಶಿಸಿತ್ತು.














ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...