HomeಅಂಕಣಗಳುKarnataka against SIRSIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

- Advertisement -
- Advertisement -

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲೇ ತೊಡಗಿಸಿಕೊಂಡಿರುವ ಬಿಎಲ್‌ಒ (BLO) ಒಬ್ಬರಿಗೇ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಅಲಂಗಾರು ನಿವಾಸಿ, ಬಿಎಲ್‌ಒ ಆಗಿ ಸೇವೆ ಸಲ್ಲಿಸುತ್ತಿರುವ ವಿದ್ಯಾ ಎಂಬವರಿಗೆ ಚುನಾವನಾ ಆಯೋಗ ನೋಟಿಸ್ ನೀಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ SIR ಕುರಿತಾಗಿ ಆತಂಗಳು ವ್ಯಕ್ತವಾಗಿದೆ.

ಮತದಾರರ ಪಟ್ಟಿ ನವೀಕರಣ ಸಂದರ್ಭದಲ್ಲಿ ಕಂಡುಬಂದ ‘ಜಾತಿ ಉಪನಾಮ’ದ (Caste Surname) ಗೊಂದಲವನ್ನು ನೆಪವಾಗಿಟ್ಟುಕೊಂಡು ಚುನಾವಣಾ ನೋಂದಣಾಧಿಕಾರಿಗಳು ಈ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ನೋಟಿಸ್‌ನಲ್ಲಿ ನೀಡಲಾಗಿದ್ದ ಸೂಚನೆಯಂತೆ ಸೆಪ್ಟೆಂಬರ್ 8 ರಂದೇ ವಿದ್ಯಾ ಅವರು ಮೂಡುಬಿದಿರೆ ತಾಲೂಕು ಕಚೇರಿಗೆ ಖುದ್ದು ತೆರಳಿ ಅಧಿಕಾರಿಗಳ ಮುಂದೆ ಹಾಜರಾಗಿ ಸ್ಪಷ್ಟನೆ ಹಾಗೂ ಸೂಕ್ತ ದಾಖಲೆಗಳನ್ನು ಸಲ್ಲಿಸಿದ್ದಾರೆ.

‘ತಮ್ಮ ಗಂಡನ ಜಾತಿಯ ಉಪನಾಮ ಹಾಗೂ ತಂದೆಯ ಕಡೆಯ ಜಾತಿಯ ಉಪನಾಮ ಬೇರೆ ಬೇರೆಯಾಗಿರುವ ಕಾರಣಕ್ಕೆ ತಾಂತ್ರಿಕ ದೋಷ ಎದ್ದು ಕಾಣುತ್ತಿದ್ದು, ಇದೇ ಕಾರಣಕ್ಕೆ ಆಯೋಗದಿಂದ ನೋಟಿಸ್ ಬಂದಿರುವ ಸಾಧ್ಯತೆಯಿದೆ’ ಎಂದು ಅವರು ತಿಳಿಸಿದ್ದಾರೆ. ನೋಟಿಸ್‌ಗೆ ಪೂರಕ ಉತ್ತರವಾಗಿ ತಮ್ಮ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಹಾಗೂ ಜಾತಿ-ಆದಾಯ ಪ್ರಮಾಣಪತ್ರಗಳನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ರಾಜ್ಯಾದ್ಯಂತ ಸಾಮಾನ್ಯ ಸಾರ್ವಜನಿಕರು, ಹಿರಿಯ ನಾಗರಿಕರು ಹಾಗೂ ಅನಿವಾಸಿ ಕನ್ನಡಿಗರು ನೋಟಿಸ್‌ಗಳ ಸುಳಿಯಲ್ಲಿ ಸಿಲುಕಿ ವಿಚಾರಣೆಗೆ ಅಲೆಯುತ್ತಿರುವ ಬೆನ್ನಲ್ಲೇ, ಸ್ವತಃ ಮತದಾರರ ಮನೆಬಾಗಿಲಿಗೆ ಹೋಗಿ ಮಾಹಿತಿ ಸಂಗ್ರಹಿಸುವ ಬಿಎಲ್‌ಒ ಕೂಡ ಈ ಅಸ್ಪಷ್ಟ ಮಾನದಂಡಗಳ ಕಿರುಕುಳದಿಂದ ತಪ್ಪಿಸಿಕೊಂಡಿಲ್ಲ ಎಂಬುದು ಆತಂಕಕಾರಿ ಸಂಗತಿಯಾಗಿದೆ. ತಾಂತ್ರಿಕ ಮ್ಯಾಪಿಂಗ್ ಮತ್ತು ಉಪನಾಮಗಳಂತಹ ಸೂಕ್ಷ್ಮ ವಿಚಾರಗಳನ್ನು ತಾರ್ಕಿಕವಾಗಿ ಪರಿಶೀಲಿಸದೆ ಯಾಂತ್ರಿಕವಾಗಿ ನೋಟಿಸ್ ನೀಡುತ್ತಿರುವ ಆಯೋಗದ ವೈಖರಿಯ ಬಗ್ಗೆ ಈಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...