HomeಅಂಕಣಗಳುSIRSIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

- Advertisement -
- Advertisement -

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಎದ್ದಿರುವ ವಿವಾದಕ್ಕೆ ಇದೀಗ ದೆಹಲಿ ಮುಖ್ಯ ಚುನಾವಣಾಧಿಕಾರಿ (CEO) ಕಚೇರಿ ಸ್ಪಷ್ಟನೆ ನೀಡಿದ್ದು, ರಾಜೇಂದರ್ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸೇರಲು ರಾಘವ್ ಚಾಧಾ ಅವರು ಆಗಸ್ಟ್ 26 ರಂದು ‘ಫಾರ್ಮ್ 6’ ಮೂಲಕ ಅರ್ಜಿ ಸಲ್ಲಿಸಿದ್ದರು. ನಿಯಮಾನುಸಾರ ಏಳು ದಿನಗಳ ಕಡ್ಡಾಯ ನೋಟಿಸ್ ಅವಧಿ ಮುಕ್ತಾಯಗೊಂಡ ನಂತರ ಸೆಪ್ಟೆಂಬರ್ 2 ರಂದು ನಿಯಮಾನುಸಾರ ಅವರ ಅರ್ಜಿಯನ್ನು ಅಂಗೀಕರಿಸಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಆದರೆ, ಆಗಸ್ಟ್ 31 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಅಂತಿಮ ಪಟ್ಟಿ ನವೆಂಬರ್ 4 ರಂದು ಪ್ರಕಟಗೊಳ್ಳಬೇಕಿದೆ. ಹೀಗಿರುವಾಗ, ಕರಡು ಪಟ್ಟಿ ಪ್ರಕಟವಾದ ಮೇಲೆಯೂ ಮತ್ತು ಅಂತಿಮ ಪಟ್ಟಿ ಬರುವುದಕ್ಕಿಂತ ಮುಂಚೆಯೇ ರಾಘವ್ ಚಡ್ಡಾ ಅವರ ಹೆಸರು ದೆಹಲಿಯ ಪಟ್ಟಿಯಲ್ಲಿ ಹೇಗೆ ಕಾಣಿಸಿಕೊಂಡಿತು ಎಂಬ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯಾದ್ಯಂತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಪಂಜಾಬ್ ಪಟ್ಟಿಯಿಂದ ಹೆಸರು ರದ್ದಾದ ಬೆನ್ನಲ್ಲೇ ಚಡ್ಡಾ ಅವರನ್ನು ಹಿಂಬಾಗಿಲ ಮೂಲಕ ದೆಹಲಿ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ (AAP) ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದೆ.

ಈ ವಿವಾದದ ಸಂದರ್ಭವನ್ನು ಗಮನಿಸಿದರೆ ಗೊಂದಲ ಇನ್ನಷ್ಟು ಹೆಚ್ಚಾಗುತ್ತದೆ. ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರಣಕ್ಕೆ ದೆಹಲಿಯ ಮತದಾರರ ಪಟ್ಟಿಯನ್ನು ಜೂನ್ 16 ರಿಂದ ಆಗಸ್ಟ್ 31 ರವರೆಗೆ ಫ್ರೀಜ್ ಮಾಡಲಾಗಿತ್ತು. ಆಗಸ್ಟ್ 31 ರಂದು ಪ್ರಕಟವಾದ ಕರಡು ಪಟ್ಟಿಯಲ್ಲಿ ರಾಘವ್ ಚಡ್ಡಾ ಅವರ ಹೆಸರು ಇರಲಿಲ್ಲ. ಇತ್ತ ಆಗಸ್ಟ್ 13 ರಂದು ಪ್ರಕಟವಾದ ಪಂಜಾಬ್‌ನ ಕರಡು ಪಟ್ಟಿಯಲ್ಲೂ ಅವರ ಹೆಸರು ಇರಲಿಲ್ಲ. ಪಂಜಾಬ್ ಆಯೋಗದ ದಾಖಲೆಯಲ್ಲಿ ಅವರ ಹೆಸರಿನ ಮುಂದೆ “ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ” (Permanently Shifted) ಎಂದು ನಮೂದಿಸಲಾಗಿತ್ತು.

ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ, ಯಾವುದೇ ವ್ಯಕ್ತಿ ರಾಜ್ಯಸಭಾ ಸಂಸದರಾಗಿ ಮುಂದುವರಿಯಲು ದೇಶದ ಯಾವುದಾದರೂ ಒಂದು ಸಂಸದೀಯ ಕ್ಷೇತ್ರದಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿರುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪಟ್ಟಿಗೆ ಅವರ ಹೆಸರು ದಿಢೀರ್ ಸೇರ್ಪಡೆಯಾಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ದೆಹಲಿ ಸಿಇಒ ಕಚೇರಿ ನೀಡಿದ ಮಾಹಿತಿಯಂತೆ, ರಾಜೇಂದರ್ ನಗರ ಕ್ಷೇತ್ರದ ಮತದಾರರಾಗಲು ಚಡ್ಡಾ ಸಲ್ಲಿಸಿದ್ದ ‘ಫಾರ್ಮ್ 6’ ಅರ್ಜಿಯನ್ನು (ಸಂಖ್ಯೆ: U05039D6N2608261200000) ಪರಿಶೀಲಿಸಿ, ಮತದಾರರ ನೋಂದಣಾಧಿಕಾರಿಗಳು (ERO) ಅನುಮೋದಿಸಿದ್ದಾರೆ.

ರಾಘವ್ ಚಡ್ಡಾ ಹೆಸರು ಕರಡು ಪಟ್ಟಿಯಲ್ಲಿ ಇಲ್ಲದಿರುವುದು

ದೆಹಲಿಯ ರಾಜೇಂದರ್ ನಗರ ಕ್ಷೇತ್ರದ ಬೂತ್ ಸಂಖ್ಯೆ 46 ರ ಮತದಾರರ ಪಟ್ಟಿಯ ಕ್ರಮಾಂಕ 747 ರಲ್ಲಿ ರಾಘವ್ ಚಾಧಾ ಅವರ ಹೆಸರು ದಾಖಲಾಗಿದೆ. ಆಗಸ್ಟ್ 31 ರಂದು ಪ್ರಕಟವಾದ ಅದೇ ಬೂತ್‌ನ ಕರಡು ಪಟ್ಟಿಯಲ್ಲಿ ಕೊನೆಯ ಕ್ರಮಾಂಕ 746 ಆಗಿತ್ತು. ಆ ಸಮಯದಲ್ಲಿ ಚಟ್ಟಾ ಹೆಸರು ಪಟ್ಟಿಯಲ್ಲಿ ಇರಲಿಲ್ಲ. ಆನ್‌ಲೈನ್ ಡೇಟಾಬೇಸ್‌ನಲ್ಲಿ ‘ಫಾರ್ಮ್ 6’ ಅನುಮೋದನೆಗೊಂಡ ತಕ್ಷಣವೇ ಹೆಸರು ಕರಡು ಪಟ್ಟಿಯ ಕೊನೆಯ ಸಂಖ್ಯೆಯ ಮುಂದುವರಿದ ಭಾಗವಾಗಿ ತಕ್ಷಣವೇ ಸಿಸ್ಟಮ್‌ನಲ್ಲಿ ಕಾಣಿಸಿಕೊಳ್ಳುತ್ತದೆ. ಎಸ್‌ಐಆರ್ ಮಾರ್ಗದರ್ಶಿ ಸೂತ್ರಗಳ ಪ್ರಕಾರವೂ ಹೊಸದಾಗಿ ಸೇರ್ಪಡೆಯಾಗುವ ಹೆಸರುಗಳಿಗೆ ಕೊನೆಯ ಸರಣಿ ಸಂಖ್ಯೆಯ ನಂತರದ ಸಂಖ್ಯೆಯನ್ನು ನೀಡಲಾಗುತ್ತದೆ, ಹೀಗಾಗಿ ಇದು ಸಿಸ್ಟಮ್‌ನಲ್ಲಿ ತಕ್ಷಣವೇ ಗೋಚರಿಸುತ್ತಿದೆ ಹೊರತು ಕರಡು ಪಟ್ಟಿಯಲ್ಲಿ ಇರಲಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.

ಈ ಮೊದಲು ರಾಘವ್ ಚಡ್ಡಾ ಹೆಸರು ಕರಡು ಪಟ್ಟಿಯಲ್ಲಿ ಇರಲಿಲ್ಲವಾದರೂ, ನಂತರ ದೆಹಲಿಯ ರಾಜೇಂದರ್ ನಗರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರಿಸಲಾಗಿದೆ.

ಆದರೆ, ಚುನಾವಣಾ ಆಯೋಗದ ಈ ಸ್ಪಷ್ಟನೆಯನ್ನು ಆಮ್ ಆದ್ಮಿ ಪಾರ್ಟಿ ತಳ್ಳಿಹಾಕಿದೆ. ಕೇಂದ್ರ ಸರ್ಕಾರದ ರಾಜಕೀಯ ಒತ್ತಡಕ್ಕೆ ಮಣಿದು ಆಯೋಗ ಈ ಕೆಲಸ ಮಾಡಿದೆ ಎಂದು ಆರೋಪಿಸಿರುವ ಎಎಪಿ ಮಾಧ್ಯಮ ಉಸ್ತುವಾರಿ ಅನುರಾಗ್ ಧಂಡಾ, ಚಡ್ಡಾ ಅವರು ಸಲ್ಲಿಸಿರುವ ಫಾರ್ಮ್ 6 ಅರ್ಜಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಎಎಪಿ ಮತ್ತು ಚುನಾವಣಾ ಆಯೋಗದ ನಡುವೆ ಈ ವಿಷಯವು ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದ್ದು, ಎಲ್ಲರ ಕಣ್ಣುಗಳು ಇದೀಗ ನವೆಂಬರ್ 4 ರಂದು ಪ್ರಕಟವಾಗಲಿರುವ ದೆಹಲಿಯ ಅಂತಿಮ ಮತದಾರರ ಪಟ್ಟಿಯ ಮೇಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...