HomeಅಂಕಣಗಳುKarnataka against SIRSIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

- Advertisement -
- Advertisement -

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ ತೀವ್ರ ನಿರ್ಲಕ್ಷ್ಯ ಮತ್ತು ಹೊಣೆಗೇಡಿತನಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ರಾಜ್ಯಾದ್ಯಂತ ‘ಮ್ಯಾಪಿಂಗ್ ಇಲ್ಲದಿರುವುದು’ ಹಾಗೂ ‘ತಾಂತ್ರಿಕ ದೋಷಗಳು’ ಎಂಬ ನೆಪವೊಡ್ಡಿ ಆಯೋಗವು ಬರೋಬ್ಬರಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ಗಳನ್ನು ಸಿದ್ಧಪಡಿಸಿದೆಯಾದರೂ, ಇದರಲ್ಲಿ ತಲುಪಿರುವುದು ಕೇವಲ 24.97 ಲಕ್ಷ ಜನರಿಗೆ ಮಾತ್ರ. ಇನ್ನುಳಿದ ಬರೋಬ್ಬರಿ 18.84 ಲಕ್ಷ ನೋಟಿಸ್‌ಗಳು ಇನ್ನೂ ಮತದಾರರಿಗೆ ತಲುಪಿಯೇ ಇಲ್ಲ.

ಬೊಮ್ಮನಹಳ್ಳಿ (AC-175) ವಿಧಾನಸಭಾ ಕ್ಷೇತ್ರದ ಮತದಾರರೊಬ್ಬರು ತಮ್ಮ ಅಳಲು ತೋಡಿಕೊಳ್ಳುತ್ತಾ, “ನನ್ನ ಹೆಸರಿನಲ್ಲಾದ ಸಣ್ಣ ಸ್ಪೆಲ್ಲಿಂಗ್ ತಪ್ಪಿಗೆ ನೋಟಿಸ್ ಪಟ್ಟಿಯಲ್ಲಿ ಹೆಸರು ಬಂದು 12 ದಿನಗಳಾಗಿವೆ, ಆದರೆ ಬಿಎಲ್‌ಒ ಇದುವರೆಗೆ ಭೌತಿಕ ನೋಟಿಸ್ ನೀಡೇ ಇಲ್ಲ. ಆನ್‌ಲೈನ್‌ನಲ್ಲಿರುವ ನೋಟಿಸ್ ಪಟ್ಟಿಯಲ್ಲಂತೂ ವಿಚಾರಣೆಯ ದಿನಾಂಕ ಅಥವಾ ಸಮಯದ ಮಾಹಿತಿಯೇ ಇಲ್ಲ, ಸಂಪೂರ್ಣ ಗೊಂದಲಮಯವಾಗಿದೆ. ಆನ್‌ಲೈನ್‌ನಲ್ಲೇ ದಾಖಲೆ ಸಲ್ಲಿಸಲು ಅಥವಾ ವಿಚಾರಣೆಗೆ ಅವಕಾಶ ನೀಡಿದರೆ ನಮಗೂ ಸಹಾಯವಾಗುತ್ತದೆ” ಎಂದು ಆಯೋಗದ ಕ್ರಮವನ್ನು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ನಾಗರಿಕರು ಆಯೋಗದ ಬೇಜವಾಬ್ದಾರಿಯನ್ನು ಬಯಲಿಗೆಳೆಯುತ್ತಾ, “ಹಿಂದಿನ SIRನಲ್ಲಿ ಮ್ಯಾಪ್ ಆಗಿಲ್ಲ ಎಂಬ ಕಾರಣಕ್ಕೆ ನನ್ನ ಹೆಸರು ನೋಟಿಸ್ ಪಟ್ಟಿಯಲ್ಲಿದೆ, ಆದರೆ ನನ್ನ ಬಿಎಲ್‌ಒ ಕಡೆಯಿಂದ ನನಗೆ ಯಾವುದೇ ಕರೆ ಬಂದಿಲ್ಲ. ನಾನು ಮಾಡುವ ಕರೆಗಳನ್ನೂ ಸ್ವೀಕರಿಸುತ್ತಿಲ್ಲ. ವಾಟ್ಸಾಪ್ ಸಂದೇಶಗಳಿಗೂ ಯಾವುದೇ ಉತ್ತರವಿಲ್ಲ. ಅವರನ್ನು ಖುದ್ದಾಗಿ ಎಲ್ಲಿ ಭೇಟಿಯಾಗಬೇಕೆಂದೇ ತಿಳಿಯುತ್ತಿಲ್ಲ” ಎಂದು ಆಯೋಗದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದೆಡೆ 18.84 ಲಕ್ಷ ಮತದಾರರಿಗೆ ತಮಗೆ ನೋಟಿಸ್ ಜಾರಿಯಾಗಿದೆ ಎನ್ನುವ ಕನಿಷ್ಠ ಮಾಹಿತಿಯೂ ಇಲ್ಲದೆ ಅತಂತ್ರದಲ್ಲಿದ್ದಾರೆ, ಇನ್ನೊಂದೆಡೆ ನೋಟಿಸ್ ತಲುಪಿರುವ 24.97 ಲಕ್ಷ ಜನರ ಪೈಕಿ ಇದುವರೆಗೆ ನಡೆದಿರುವುದು ಕೇವಲ 7.03 ಲಕ್ಷ (ಶೇ. 28.18) ವಿಚಾರಣೆಗಳು ಮಾತ್ರ! ಅಂದರೆ, ಸಿದ್ಧಪಡಿಸಿದ ಒಟ್ಟು ನೋಟಿಸ್‌ಗಳ ಪೈಕಿ ಶೇಕಡಾ 80 ಕ್ಕೂ ಹೆಚ್ಚು ಪ್ರಕರಣಗಳು ಇಂದಿಗೂ ತೂಗುಯ್ಯಾಲೆಯಲ್ಲೇ ಉಳಿದುಕೊಂಡಿವೆ.

ಇಲ್ಲಿ ಅತ್ಯಂತ ಆತಂಕಕಾರಿ ಮತ್ತು ಗಂಭೀರವಾದ ಪ್ರಶ್ನೆಯೆಂದರೆ, ಆಯೋಗವು ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಅಲ್ಪ ಕಾಲಮಿತಿಯೊಳಗೆ ಈ ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸುವುದಾಗಿ ಹೇಳಿಕೊಳ್ಳುತ್ತಿದೆ. ಆದರೆ, ಇನ್ನು ನೋಟಿಸ್‌ಗಳೇ ತಲುಪದ 18.84 ಲಕ್ಷ ನಾಗರಿಕರ ಪರಿಸ್ಥಿತಿ ಏನು? ಬಿಎಲ್‌ಒಗಳು ಮನೆ ಬಾಗಿಲಿಗೆ ಬಂದು ನೋಟಿಸ್ ನೀಡದಿದ್ದರೆ ಅಥವಾ ಮಾಹಿತಿ ನೀಡದಿದ್ದರೆ, ದಿನಬೆಳಗಾಗುವುದರೊಳಗೆ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಮಾಯವಾಗಿರುವುದನ್ನು ನೋಡಿ ಸಾರ್ವಜನಿಕರು ಆಘಾತಕ್ಕೊಳಗಾಗಬೇಕೇ? ಆಯೋಗದ ಈ ತಾಂತ್ರಿಕ ವಿಫಲತೆ ಹಾಗೂ ವಿತರಣೆಯ ವಿಳಂಬಕ್ಕೆ ಸಾಮಾನ್ಯ ಮತದಾರರನ್ನು ಬಲಿಪಶು ಮಾಡುವುದು ಎಷ್ಟರ ಮಟ್ಟಿಗೆ ಸರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...