Homeಅಂತರಾಷ್ಟ್ರೀಯದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

- Advertisement -
- Advertisement -

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ.

ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ ಬಲವಂತವಾಗಿ ಒಕ್ಕಲೆಬ್ಬಿಸುವ ಪ್ರಯತ್ನಗಳನ್ನು ತಿರಸ್ಕರಿಸಿರುವುದನ್ನು ಮತ್ತು ಇಸ್ರೇಲ್ ಆಕ್ರಮಣವನ್ನು ಕೊನೆಗೊಳಿಸುವಂತೆ ನೀಡಿರುವ ಕರೆಯನ್ನು ಸ್ವಾಗತಿಸಿ ಸಚಿವಾಲಯ ಪ್ರಕಟಣೆ ಹೊರಡಿಸಿದೆ ಎಂದು middleeasteye.net ವರದಿ ಮಾಡಿದೆ.

ಜೂನ್ 4, 1967ರ ಗಡಿಗಳ ಆಧಾರದ ಮೇಲೆ ಜೆರುಸಲೆಮ್ ಅನ್ನು ರಾಜಧಾನಿಯಾಗಿಸಿಕೊಂಡ ಸ್ವತಂತ್ರ, ಸಾರ್ವಭೌಮ ಮತ್ತು ಸುಸ್ಥಿರ ಪ್ಯಾಲೆಸ್ತೀನ್ ರಾಷ್ಟ್ರ ರಚನೆಗೆ ಬೆಂಬಲ ಸೂಚಿಸಿರುವುದನ್ನು, ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್ ರಾಷ್ಟ್ರಕ್ಕೆ ಪೂರ್ಣ ಪ್ರಮಾಣದ ಸದಸ್ಯತ್ವ ನೀಡಲು ಬೆಂಬಲಿಸಿರುವುದನ್ನು, ಮತ್ತು ದ್ವಿ-ರಾಷ್ಟ್ರ ಪರಿಹಾರ ಸೂತ್ರಕ್ಕೆ ಬದ್ಧತೆಯನ್ನು ಪುನರುಚ್ಚರಿಸಿರುವುದನ್ನು ಸಚಿವಾಲಯವು ಪ್ರಮುಖವಾಗಿ ಸ್ವಾಗತಿಸಿದೆ ಎಂದು ವರದಿ ಹೇಳಿದೆ.

ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆ (UNRWA) ಹಾಗೂ ಅದರ ಆದೇಶಕ್ಕೆ ಬ್ರಿಕ್ಸ್ ನೀಡಿರುವ ಬೆಂಬಲವನ್ನು ಸಚಿವಾಲಯವು ಸ್ವಾಗತಿಸಿದೆ. ಇದರೊಂದಿಗೆ, ಜೆರುಸಲೆಮ್‌ನಲ್ಲಿರುವ ಪವಿತ್ರ ಸ್ಥಳಗಳನ್ನು ರಕ್ಷಿಸುವುದು ಹಾಗೂ ಅಲ್ಲಿಗೆ ಮುಕ್ತ ಪ್ರವೇಶವನ್ನು ಖಚಿತಪಡಿಸುವುದು, ಪ್ಯಾಲೆಸ್ತೀನ್ ಜನರನ್ನು ರಕ್ಷಿಸುವುದು ಮತ್ತು ಗಾಝಾ ಪಟ್ಟಿಗೆ ಯಾವುದೇ ಅಡೆತಡೆಯಿಲ್ಲದೆ ಮಾನವೀಯ ನೆರವು ತಲುಪಿಸುವುದನ್ನು ಖಾತರಿಪಡಿಸುವಂತೆ ನೀಡಿರುವ ಕರೆಯನ್ನೂ ಸಹ ಅದು ಶ್ಲಾಘಿಸಿದೆ.

ಈ ನಿಲುವುಗಳು ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ ಸಂಬಂಧಿತ ನಿರ್ಣಯಗಳಿಗೆ ಅನುಗುಣವಾಗಿವೆ ಎಂದು ಸಚಿವಾಲಯವು ಶ್ಲಾಘಿಸಿದೆ. ಅಲ್ಲದೆ, ಈ ಘೋಷಣೆಗಳನ್ನು ಕೇವಲ ಮಾತಿಗೆ ಸೀಮಿತಗೊಳಿಸದೆ, ಪ್ರಾಯೋಗಿಕ ಹಾಗೂ ನಿರ್ದಿಷ್ಟ ಕ್ರಮಗಳಾಗಿ ರೂಪಾಂತರಿಸುವ ಅಗತ್ಯವನ್ನು ಅದು ಒತ್ತಿಹೇಳಿದೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...