HomeUncategorized2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

- Advertisement -
- Advertisement -

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ ‘ಏಕರೂಪ ನಾಗರಿಕ ಸಂಹಿತೆ’ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಘೋಷಿಸಿದ್ದಾರೆ.

ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ನಾವು ಈಗಾಗಲೇ ಹಲವು ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಿದ್ದೇವೆ. 2029ರ ಒಳಗಾಗಿ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲೂ ಯುಸಿಸಿಯನ್ನು ಯಶಸ್ವಿಯಾಗಿ ಜಾರಿಗೆ ತರುವ ಸಂಪೂರ್ಣ ವಿಶ್ವಾಸ ನಮಗಿದೆ,” ಎಂದು ಹೇಳಿದರು. ಇದೇ ವೇಳೆ ಸರ್ಕಾರದ ಭದ್ರತಾ ನೀತಿಯನ್ನು ಉಲ್ಲೇಖಿಸಿದ ಶಾ, ಸರ್ಜಿಕಲ್ ಸ್ಟ್ರೈಕ್, ವೈಮಾನಿಕ ದಾಳಿ ಹಾಗೂ ‘ಆಪರೇಷನ್ ಸಿಂಧೂರ್’ ಮೂಲಕ ಭಯೋತ್ಪಾದನೆಯ ವಿರುದ್ಧ ಸರ್ಕಾರ ‘ಶೂನ್ಯ ಸಹಿಷ್ಣುತೆ’ (Zero Tolerance) ನೀತಿಯನ್ನು ಸ್ಥಾಪಿಸಿದೆ ಎಂದರು.

2014ರ ನಂತರ ಬದಲಾದ ರಾಜಕೀಯ ಸಂಸ್ಕೃತಿ:

2014ಕ್ಕಿಂತ ಮೊದಲು ದೇಶದಲ್ಲಿದ್ದ ಭ್ರಷ್ಟಾಚಾರ, ಜಾತಿವಾದ ಮತ್ತು ವಂಶಾಡಳಿತದ ರಾಜಕೀಯದಿಂದ ಭಾರತವೀಗ ಬಿಜೆಪಿ ನೇತೃತ್ವದಲ್ಲಿ ‘ಸಾಧನೆ ಆಧಾರಿತ ರಾಜಕೀಯ’ದತ್ತ (Performance-based politics) ಹೆಜ್ಜೆ ಹಾಕಿದೆ ಎಂದು ಅಮಿತ್ ಶಾ ಬಣ್ಣಿಸಿದರು. “ಭಾರತದ ಮೊದಲ ಆದ್ಯತೆ” ಎಂಬ ತತ್ತ್ವದೊಂದಿಗೆ ದೇಶದ ವಿದೇಶಾಂಗ ಮತ್ತು ರಕ್ಷಣಾ ನೀತಿಗಳು ಗಟ್ಟಿ ತಳಹದಿಯನ್ನು ಪಡೆದುಕೊಂಡಿವೆ ಎಂದರು. ದೇಶದ ಆರ್ಥಿಕ ಪ್ರಗತಿಯನ್ನು ಉಲ್ಲೇಖಿಸಿದ ಅವರು, ಭಾರತವು ‘ಫ್ರಾಗೈಲ್ ಫೈವ್’ (Fragile Five) ಆರ್ಥಿಕತೆಗಳ ಪಟ್ಟಿಯಿಂದ ಹೊರಬಂದು ಜಗತ್ತಿನ ಅಗ್ರ 5 ಆರ್ಥಿಕತೆಗಳಲ್ಲಿ ಒಂದಾಗಿದೆ. ಮೊದಲ ತ್ರೈಮಾಸಿಕದಲ್ಲಿ ಶೇ. 7.8 ಜಿಡಿಪಿ ಪ್ರಗತಿ ಸಾಧಿಸುವ ಮೂಲಕ ಭಾರತ ಜಾಗತಿಕವಾಗಿ ಮುಂಚೂಣಿಯಲ್ಲಿದೆ ಎಂದು ಪ್ರತಿಪಾದಿಸಿದರು. ಆರ್ಟಿಕಲ್ 370 ರದ್ದು, ನಕ್ಸಲಿಸಂ ನಿಯಂತ್ರಣ ಹಾಗೂ ಈಶಾನ್ಯ ರಾಜ್ಯಗಳ ದಶಕಗಳ ಭದ್ರತಾ ಸವಾಲುಗಳನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ ಎಂದರು.

ಮಣಿಪುರದಲ್ಲಿ ಎನ್‌ಆರ್‌ಸಿ ಚರ್ಚೆ ಮತ್ತು ಅಕ್ರಮ ನುಸುಳುಕೋರರ ತೆರವು:

1951ರ ಆಧಾರ ವರ್ಷವನ್ನು ಇಟ್ಟುಕೊಂಡು ಮಣಿಪುರದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (NRC) ಜಾರಿಗೊಳಿಸುವ ಕುರಿತು ಸಚಿವರು ಮತ್ತು ರಾಜಕೀಯ ಪಕ್ಷಗಳೊಂದಿಗೆ ಚರ್ಚೆಗಳು ನಡೆಯುತ್ತಿವೆ ಎಂದು ಶಾ ತಿಳಿಸಿದರು. ದೇಶದಲ್ಲಿರುವ ಪ್ರತಿಯೊಬ್ಬ ಅಕ್ರಮ ನುಸುಳುಕೋರನನ್ನು ಗುರುತಿಸಿ ಗಡಿಪಾರು ಮಾಡಲಾಗುವುದು ಎಂದು ಪುನರುಚ್ಚರಿಸಿದ ಅವರು, ತಾಂತ್ರಿಕ ಕಾರ್ಯವಿಧಾನಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. ಮಾತೃಭಾಷೆಗೆ ಆದ್ಯತೆ ನೀಡಬೇಕೆಂಬ ನಿಲುವನ್ನು ಬೆಂಬಲಿಸಿದ ಅವರು, ಭಾಷಾ ವಿವಾದಗಳ ಮೂಲಕ ಸಮಾಜ ಒಡೆಯುವ ಯತ್ನಗಳನ್ನು ಟೀಕಿಸಿದರು.

ವಿರೋಧ ಪಕ್ಷಗಳ ಪ್ರತಿಭಟನೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕನ್ನು ನಾವು ಗೌರವಿಸುತ್ತೇವೆ. ತುರ್ತು ಪರಿಸ್ಥಿತಿ ಹೇರುವುದು ಕಾಂಗ್ರೆಸ್‌ನ ಮನಸ್ಥಿತಿಯೇ ಹೊರತು ನಮ್ಮದಲ್ಲ,” ಎಂದು ಟಾಂಗ್ ನೀಡಿದರು. ಚೀನಾ ಹಾಗೂ ಆಯಕಟ್ಟಿನ ರಕ್ಷಣಾ ವಿಚಾರಗಳ ಕುರಿತು ಬಹಿರಂಗವಾಗಿ ಚರ್ಚಿಸುವುದು ಸಶಸ್ತ್ರ ಪಡೆಗಳ ಹಿತದೃಷ್ಟಿಯಿಂದ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

ಸೆಪ್ಟೆಂಬರ್ 17ರಿಂದ ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’:

ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ ಆಯೋಜಿಸಲಾಗುವುದು ಎಂದು ಶಾ ಪ್ರಕಟಿಸಿದರು. ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದೇ (ಸೆ. 17) ಆರಂಭವಾಗುವ ಈ ಅಭಿಯಾನವನ್ನು ಬಿಜೆಪಿ, ಎನ್‌ಡಿಎ ಪಾಲುದಾರ ಪಕ್ಷಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ಬೂತ್ ಮಟ್ಟದವರೆಗೆ ತಲುಪಿಸಲಿವೆ. ಗುಜರಾತ್ ಸಿಎಂ ಹುದ್ದೆಯಿಂದ ಹಿಡಿದು ಪ್ರಧಾನಿಯವರೆಗೆ ಸುದೀರ್ಘ 25 ವರ್ಷಗಳ ಕಾಲ ಆಡಳಿತ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ವಿರಳ ನಾಯಕ ಮೋದಿ ಎಂದು ಶ್ಲಾಘಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, ಮಹಾರಾಷ್ಟ್ರ ಸರ್ಕಾರ ಹಾಗೂ ಬಿಜೆಪಿ ಜಂಟಿಯಾಗಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದು, ಸಾಮಾನ್ಯ ಜನರ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...