Homeಮುಖಪುಟದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

- Advertisement -
- Advertisement -

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ.

ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ, ರೋಹನ್ ರಾಯ್, ನಟರಾದ ಡಿನೋ ಮೋರಿಯಾ ಮತ್ತು ಸೂರಜ್ ಪಂಚೋಲಿ, ಆದಿತ್ಯ ಅವರ ಅಂಗರಕ್ಷಕರು, ರಿಯಾ ಚಕ್ರವರ್ತಿ, ಶೋವಿಕ್ ಚಕ್ರವರ್ತಿ, ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ, ಮುಂಬೈ ಪೊಲೀಸ್‌ನ ಮಾಜಿ ಆಯುಕ್ತ ಪರಮ್ ಬೀರ್ ಸಿಂಗ್, ಡಿಸಿಪಿ ವಿಶಾಲ್ ಠಾಕೂರ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೇರಿದಂತೆ, ತನಿಖೆಗೆ ಒಳಪಡಬೇಕಾದ ಪಾತ್ರಗಳನ್ನು ಹೊಂದಿರುವ ಹಲವು ವ್ಯಕ್ತಿಗಳ ಹೆಸರುಗಳು ಎಫ್‌ಐಆರ್‌ನಲ್ಲಿ ಸೇರಿವೆ.

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್, ಹಲವಾರು ಪೊಲೀಸ್ ಅಧಿಕಾರಿಗಳು, ವಿಧಿವಿಜ್ಞಾನ ತಜ್ಞರು, ವೈದ್ಯರು ಮತ್ತು ಇತರ ವ್ಯಕ್ತಿಗಳ ಹೆಸರೂ ಎಫ್‌ಐಆರ್‌ನಲ್ಲಿ ಒಳಗೊಂಡಿವೆ ಎಂದು timesofindia.indiatimes.com ವರದಿ ಮಾಡಿದೆ.

“ಆದಿತ್ಯ ಠಾಕ್ರೆ ಅವರ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಇತರರು ಈ ಪಿತೂರಿ ಹಾಗೂ ಅದರ ನಂತರದ ಮುಚ್ಚಿಹಾಕುವಿಕೆಯಲ್ಲಿ (ಕವರ್-ಅಪ್) ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಕರಣದ ದಾಖಲೆಗಳು, ಕಡತಗಳು ಮತ್ತು ಇತರ ಸಾರ್ವಜನಿಕ ದಾಖಲೆಗಳ ನಾಶ ಅಥವಾ ದಮನ, ಅಧಿಕೃತ ದಾಖಲೆಗಳ ನಕಲು (fabrication) ಹಾಗೂ ಕಾನೂನುಬಾಹಿರ ಉದ್ದೇಶಗಳಿಗಾಗಿ ಮತ್ತು ಅಪರಾಧಿಗಳನ್ನು ರಕ್ಷಿಸಲು ಸಾರ್ವಜನಿಕ ಹಣ, ಮಾನವಶಕ್ತಿ ಮತ್ತು ಪೊಲೀಸ್ ಯಾಂತ್ರಿಕತೆಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಸಂಬಂಧಪಟ್ಟ ಸಾರ್ವಜನಿಕ ಸೇವಕರು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧವೂ ತನಿಖೆ ನಡೆಸಬೇಕಾಗಿದೆ” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವುದಾಗಿ ವರದಿ ಹೇಳಿದೆ.

“ಪಟ್ಟಿ ಮಾಡಲಾದ ವ್ಯಕ್ತಿಗಳನ್ನು ಆಪಾದಿತ ಪ್ರಮುಖ ಅಪರಾಧಗಳು, ಕ್ರಿಮಿನಲ್ ಪಿತೂರಿ, ‘ನಂತರದ ಸುಳ್ಳು ಆತ್ಮಹತ್ಯೆಯ ಕಥೆಯ ಸೃಷ್ಟಿ ಮತ್ತು ಪ್ರಚಾರ’ ಹಾಗೂ ಸಾಕ್ಷ್ಯಗಳ ಆಪಾದಿತ ದಮನ, ನಾಶ ಅಥವಾ ನಕಲು ಮಾಡುವಿಕೆಗೆ (fabrication) ಸಂಬಂಧಿಸಿದಂತೆ ತನಿಖೆ ಮಾಡಲಾಗುವುದು” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ನಲ್ಲಿ ಮಾಲ್ವಾನಿ ಪೊಲೀಸ್ ಠಾಣೆಗೆ ಸೇರಿದ ಅಧಿಕಾರಿಗಳು, ಮರಣೋತ್ತರ ಪರೀಕ್ಷೆಯಲ್ಲಿ (post-mortem) ಭಾಗಿಯಾಗಿದ್ದ ವೈದ್ಯರು ಹಾಗೂ ಸಿಬ್ಬಂದಿ, ಕಲಿನಾದ ವಿಧಿವಿಜ್ಞಾನ ಪ್ರಯೋಗಾಲಯದ (Forensic Science Laboratory) ಅಧಿಕಾರಿಗಳು, ರೀಜೆಂಟ್ ಗ್ಯಾಲಕ್ಸಿ ಕಟ್ಟಡದ ಭದ್ರತಾ ಸಿಬ್ಬಂದಿ, ವಿಶೇಷ ತನಿಖಾ ತಂಡದ (SIT) ಸದಸ್ಯರು ಮತ್ತು ಇತರ ಅಪರಿಚಿತ ವ್ಯಕ್ತಿಗಳ ಹೆಸರುಗಳನ್ನೂ ಸಹ ಸೇರಿಸಲಾಗಿದೆ.

ಈ ತಿಂಗಳ ಆರಂಭದಲ್ಲಿ, ಬಾಂಬೆ ಹೈಕೋರ್ಟ್ ದಿಶಾ ಸಾಲಿಯಾನ್ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ಆದೇಶಿಸಿತ್ತು ಮತ್ತು ಆರು ವರ್ಷಗಳ ಕಾಲ ಎಫ್‌ಐಆರ್ ದಾಖಲಿಸಲು ವಿಫಲವಾದ ಮುಂಬೈ ಪೊಲೀಸರನ್ನು ಟೀಕಿಸಿತ್ತು.

ಪೊಲೀಸ್ ತನಿಖೆಯು “ಉತ್ತರಗಳಿಗಿಂತ ಹೆಚ್ಚಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು. ಈ ಪ್ರಕರಣವನ್ನು ಕೇವಲ ಆಕಸ್ಮಿಕ ಸಾವು ಎಂದು ಪರಿಗಣಿಸುವ ನಿರ್ಧಾರವನ್ನೂ ಪ್ರಶ್ನಿಸಿದ ನ್ಯಾಯಪೀಠವು, ತನಿಖೆಯಲ್ಲಿನ “ಸ್ಪಷ್ಟ ವೈರುಧ್ಯಗಳನ್ನು” ಎತ್ತಿ ತೋರಿಸಿತ್ತು.

ಮುಂಬೈನ ಮಲಾಡ್ ಪ್ರದೇಶದಲ್ಲಿರುವ ವಸತಿ ಕಟ್ಟಡವೊಂದರಿಂದ ಬಿದ್ದು ದಿಶಾ ಸಾಲಿಯನ್ ಜೂನ್ 8, 2020ರಂದು ಮೃತಪಟ್ಟರು. ಮುಂಬೈ ಪೊಲೀಸರು ಈ ಪ್ರಕರಣದಲ್ಲಿ ಆಕಸ್ಮಿಕ ಸಾವು ವರದಿಯನ್ನು (ADR) ದಾಖಲಿಸಿದ್ದರು.

ದಿಶಾ ಸಾಲಿಯಾವ್ ಅವರು ನಟ ಸುಶಾಂತ್ ಸಿಂಗ್ ಅವರ ಮ್ಯಾನೇಜರ್ ಆಗಿ ಅಲ್ಪಕಾಲ ಕೆಲಸ ಮಾಡಿದ್ದರು. ಸಾಲಿಯಾನ್ ಅವರ ನಿಧನದ ಆರು ದಿನಗಳ ನಂತರ, ಅಂದರೆ 2020ರ ಜೂನ್ 14ರಂದು, ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಸುಶಾಂತ್ ಸಿಂಗ್ ಕೂಡ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಈ ಎರಡು ಸಾವುಗಳು ಅಲ್ಪ ಸಮಯದ ಅಂತರದಲ್ಲಿ ಸಂಭವಿಸಿದ್ದರಿಂದ ಅವುಗಳ ನಡುವೆ ಏನಾದರೂ ಸಂಬಂಧವಿರಬಹುದೇ ಎಂಬ ಬಗ್ಗೆ ವ್ಯಾಪಕ ಊಹಾಪೋಹಗಳು ಉಂಟಾಗಿತ್ತು. ಆದಾಗ್ಯೂ, ಈ ಪ್ರಕರಣಗಳ ತನಿಖೆಯನ್ನು ಪ್ರತ್ಯೇಕವಾಗಿಯೇ ನಡೆಸಲಾಯಿತು.

ಸುಶಾಂತ್ ಸಿಂಗ್ ಅವರ ಸಾವಿನ ಕುರಿತು ಸಾರ್ವಜನಿಕ ಆಕ್ರೋಶ ವ್ಯಕ್ತವಾದ ನಂತರ, ಮಹಾರಾಷ್ಟ್ರ ಸರ್ಕಾರವು ಸಿಬಿಐ ತನಿಖೆಗೆ ಆದೇಶಿಸಿತ್ತು. ನಂತರ ಸಿಬಿಐ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸುವ ಪ್ರಕರಣ ಮುಕ್ತಾಯದ ವರದಿಯನ್ನು ಸಲ್ಲಿಸಿತ್ತು. ಸಂಬಂಧಪಟ್ಟ ನ್ಯಾಯಾಲಯ ಈ ವರದಿಯ ಕುರಿತು ಇನ್ನೂ ವಿಚಾರಣೆ ನಡೆಸಬೇಕಿದೆ.







ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...