Homeಮುಖಪುಟರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

- Advertisement -
- Advertisement -

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP) ಪಕ್ಷಗಳೇ ಪರ್ಯಾಯವಾಗಿ ಆಡಳಿತ ನಡೆಸಿಕೊಂಡು ಬರುತ್ತಿದ್ದ ನೋಖಾ ನಗರ ಪಾಲಿಕೆಯಲ್ಲಿ ಈ ಬಾರಿ ಸಿಪಿಐ(ಎಂ) ಭರ್ಜರಿ ಜಯಭೇರಿ ಬಾರಿಸುವ ಮೂಲಕ ಹೊಸ ಇತಿಹಾಸ ಬರೆದಿದೆ.

ನೋಖಾ ನಗರ ಪಾಲಿಕೆಯ ಒಟ್ಟು 45 ವಾರ್ಡ್‌ಗಳ ಪೈಕಿ ಸಿಪಿಐ(ಎಂ) ಬರೋಬ್ಬರಿ 29 ವಾರ್ಡ್‌ಗಳಲ್ಲಿ ಸ್ಪಷ್ಟ ಮೇಲುಗೈ ಸಾಧಿಸಿ ಅಧಿಕಾರದ ಗದ್ದುಗೆಯೇರಿದೆ. ಬಲವಾದ ಪ್ರಚಾರ ಮತ್ತು ಸಂಘಟನೆಯೊಂದಿಗೆ ಕಣಕ್ಕಿಳಿದಿದ್ದ ಆಡಳಿತಾರೂಢ ಬಿಜೆಪಿ ಕೇವಲ 13 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದರೆ, ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶವು ರಾಜ್ಯದ ಸ್ಥಳೀಯ ಆಡಳಿತದಲ್ಲಿ ಎಡಪಕ್ಷಗಳ ಪುನಶ್ಚೇತನಕ್ಕೆ ಸಾಕ್ಷಿಯಾಗಿದೆ.

ನೋಖಾ ನಗರ ಪಾಲಿಕೆ ಒಂದರಲ್ಲೇ ಅಲ್ಲದೆ, ರಾಜಸ್ಥಾನದಾದ್ಯಂತ ಸಿಪಿಐ(ಎಂ) ಗಮನಾರ್ಹ ಪ್ರದರ್ಶನ ನೀಡಿದೆ. ಲಭ್ಯವಿರುವ ತಾಜಾ ಮಾಹಿತಿಯಂತೆ, ಸಿಪಿಐ(ಎಂ) ಅಭ್ಯರ್ಥಿಗಳು ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು 38 ವಾರ್ಡ್‌ಗಳಲ್ಲಿ ಜಯಗಳಿಸಿದ್ದಾರೆ.

ಶ್ರೀಡೂಂಗರ್‌ಗಢ್ ನಗರ ಪಾಲಿಕೆ, ಸೂರತ್‌ಗಢ್ ನಗರ ಪಾಲಿಕೆ, ಹನುಮಾನ್‌ಗಢ್ ನಗರ ಪರಿಷತ್, ಟಿಬ್ಬಿ ನಗರ ಪಾಲಿಕೆ, ಉದಯಪುರವಾಟಿ ನಗರ ಪಾಲಿಕೆ, ಧೋಡ್ ನಗರ ಪಾಲಿಕೆ, ಲೋಸಲ್ ನಗರ ಪಾಲಿಕೆ, ಪಲ್ಸಾನಾ ನಗರ ಪಾಲಿಕೆ ಹಾಗೂ ಉದಯಪುರ ನಗರ ನಿಗಮಗಳಲ್ಲಿ ಸಿಪಿಐ(ಎಂ) ತಲಾ ಒಂದು ವಾರ್ಡ್‌ನಲ್ಲಿ ಜಯಭೇರಿ ಬಾರಿಸಿ ತನ್ನ ಬಲವನ್ನು ವಿಸ್ತರಿಸಿಕೊಂಡಿದೆ.

ರಾಜಸ್ಥಾನದಲ್ಲಿ ಎರಡು ಹಂತಗಳಲ್ಲಿ ನಡೆದ ಈ ಬೃಹತ್ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಟ್ಟು 309 ನಗರ ಸಂಸ್ಥೆಗಳ 10,244 ವಾರ್ಡ್‌ಗಳಿಗೆ ಮತದಾನ ನಡೆದಿತ್ತು. 10 ಮಹಾನಗರ ಪಾಲಿಕೆಗಳು, 51 ನಗರ ಪರಿಷತ್ಗಳು ಹಾಗೂ 248 ಪುರಸಭೆಗಳನ್ನು ಒಳಗೊಂಡ ಈ ಚುನಾವಣೆಗಳು ಸೆಪ್ಟೆಂಬರ್ 9 ಮತ್ತು 11ರಂದು ನಡೆದಿದ್ದವು . ಒಟ್ಟಾರೆ ಫಲಿತಾಂಶದಲ್ಲಿ ಎಡಪಕ್ಷಗಳ ಈ ಜಯ ಕೇವಲ ಸಾಂಪ್ರದಾಯಿಕ ಕಮ್ಯೂನಿಸ್ಟ್ ಕ್ಷೇತ್ರಗಳಲ್ಲದೆ, ನಗರ ಪ್ರದೇಶಗಳಲ್ಲೂ ಜನರು ಪರ್ಯಾಯ ರಾಜಕೀಯವನ್ನು ಬಯಸುತ್ತಿದ್ದಾರೆ ಎಂಬುದನ್ನು ನಿರೂಪಿಸಿದೆ.

ಇಲ್ಲಿ ಒಂದೇ ಒಂದು ವಾರ್ಡ್‌ನಲ್ಲೂ ಗೆಲ್ಲಲು ವಿಫಲವಾಗಿರುವ ಕಾಂಗ್ರೆಸ್, ಎಡಪಕ್ಷವು ನಗರ ಮಂಡಳಿ ರಚಿಸಲು ಸಂಪೂರ್ಣ ಹಾದಿ ಸುಗಮಗೊಳಿಸಿಕೊಟ್ಟಿದೆ. ಸಿಪಿಐ(ಎಂ)ಗೆ ನೋಖಾ ಫಲಿತಾಂಶವು ಸ್ಥಳೀಯ ಗೆಲುವಷ್ಟೇ ಅಲ್ಲದೆ, ರಾಜಸ್ಥಾನದ ಕೆಲವು ಭಾಗಗಳಲ್ಲಿ ಪಕ್ಷಕ್ಕೆ ಹೊಸ ರಾಜಕೀಯ ಅವಕಾಶಗಳು ತೆರೆದುಕೊಳ್ಳುತ್ತಿರುವುದರ ಮುನ್ಸೂಚನೆಯಾಗಿದೆ.

ಬಿಜೆಪಿಯ ಮೇಲಿನ ಆಕ್ರೋಶ ಮತ್ತು ಸ್ಥಳೀಯ ಹಾಗೂ ಆರ್ಥಿಕ ವಿಚಾರಗಳ ಕುರಿತು ಸಿಪಿಐ(ಎಂ) ನಡೆಸಿದ ಸತತ ಹೋರಾಟವೇ ಈ ಗೆಲುವಿಗೆ ಕಾರಣ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕಿಶನ್ ಪಾರಿಖ್ ಹೇಳಿದ್ದಾರೆ. ತಮ್ಮ ಪಕ್ಷವು ಸ್ಥಳೀಯ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತಾ ಬಂದಿದ್ದರಿಂದ ಜನ ತಮ್ಮನ್ನು ಪ್ರಬಲ ಪರ್ಯಾಯವಾಗಿ ನೋಡಿ ಮತ ಚಲಾಯಿಸಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ಕೋಮುವಾದಿ ರಾಜಕೀಯದ ವಿರುದ್ಧ ಮತ್ತು ಆರ್ಥಿಕ ವಿಚಾರಗಳ ಪರವಾಗಿ ಹೋರಾಡುವ ಪ್ರಮುಖ ಶಕ್ತಿಯಾಗಿ ಸಿಪಿಐ(ಎಂ) ಅನ್ನು ಜನರು ಗುರುತಿಸಿದ್ದಾರೆ ಹಾಗೂ ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗಾಗಿ ಸಿಪಿಐ(ಎಂ) ಪಕ್ಷವನ್ನು ರಾಜಕೀಯ ಪರ್ಯಾಯವಾಗಿ ಆಯ್ಕೆ ಮಾಡಿದ್ದಾರೆ ಎಂದು ಪಾರಿಖ್ ಪ್ರತಿಪಾದಿಸಿದ್ದಾರೆ. ಈ ಚುನಾವಣೆಯಲ್ಲಿ ರಾಜಸ್ಥಾನದಾದ್ಯಂತ 192 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಸಿಪಿಐ(ಎಂ), ಸುಮಾರು 40 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. ಒಂದೆರಡು ವಾರ್ಡ್‌ಗಳಲ್ಲಿನ ಗೆಲುವೂ ಸಹ ದೀರ್ಘಕಾಲದ ರಾಜಕೀಯ ಅಸ್ತಿತ್ವವನ್ನು ಕಟ್ಟಿಕೊಳ್ಳಲು ಮಹತ್ವದ ಹೆಜ್ಜೆಯಾಗಿದೆ ಎಂದು ಪಾರಿಖ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...