Homeಮುಖಪುಟ2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

- Advertisement -
- Advertisement -

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ. ಇದರ ಜೊತೆಗೆ ರೂಪೇ (RuPay) ಡೆಬಿಟ್ ಕಾರ್ಡ್ ಮೂಲಕ ಮಾಡುವ ಪಾವತಿಗಳ ಮೇಲೂ ಯಾವುದೇ ನೇರ ಅಥವಾ ಪರೋಕ್ಷ ಶುಲ್ಕಗಳನ್ನು ಹೇರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಹಣಕಾಸು ಸಚಿವಾಲಯ ಹೊರಡಿಸಿರುವ ನೂತನ ನಿಯಮದ ಪ್ರಕಾರ, ಯಾವುದೇ ಬ್ಯಾಂಕ್ ಆಗಲಿ ಅಥವಾ ಪಾವತಿ ಸೇವೆ ಒದಗಿಸುವ ಸಂಸ್ಥೆಗಳಾಗಲಿ 2,000 ರೂ.ವರೆಗಿನ ಡಿಜಿಟಲ್ ವಹಿವಾಟುಗಳಿಗೆ ಗ್ರಾಹಕರಿಂದಾಗಲಿ ಅಥವಾ ವ್ಯಾಪಾರಿಗಳಿಂದಾಗಲಿ ಶುಲ್ಕ ವಸೂಲಿ ಮಾಡುವಂತಿಲ್ಲ. ಸಣ್ಣ ಪ್ರಮಾಣದ ವಹಿವಾಟುಗಳನ್ನು ಉಚಿತವಾಗಿಡುವುದು ಡಿಜಿಟಲ್ ಆರ್ಥಿಕತೆಯನ್ನು ಉತ್ತೇಜಿಸಲು ಅಗತ್ಯ ಎಂದು ಸರ್ಕಾರ ಪ್ರತಿಪಾದಿಸಿದೆ. ಅದೇ ವೇಳೆ, ವ್ಯಕ್ತಿಯಿಂದ ವ್ಯಕ್ತಿಗೆ (P2P) ನಡೆಯುವ ಸಾಮಾನ್ಯ ಯುಪಿಐ ಪಾವತಿಗಳು ಸಂಪೂರ್ಣ ಉಚಿತವಾಗಿ ಮುಂದುವರಿಯಲಿವೆ.

ಆದಾಗ್ಯೂ, 2,000 ರೂಪಾಯಿಗಿಂತ ಹೆಚ್ಚಿನ ಮೊತ್ತದ ಬೃಹತ್ ವ್ಯಾಪಾರಿ ವಹಿವಾಟುಗಳಿಗೆ (Merchant Transactions) ಭವಿಷ್ಯದಲ್ಲಿ ಅತ್ಯಲ್ಪ ಪ್ರಮಾಣದ ‘ವ್ಯಾಪಾರಿ ರಿಯಾಯಿತಿ ದರ’ (MDR) ವಿಧಿಸುವ ಸಾಧ್ಯತೆಯನ್ನು ಸರ್ಕಾರ ತಳ್ಳಿಹಾಕಿಲ್ಲ. ಒಂದು ವೇಳೆ ಇಂತಹ ಶುಲ್ಕ ಜಾರಿಗೆ ಬಂದರೂ ಅದರ ಹೊಣೆಯನ್ನು ಸಾಮಾನ್ಯ ಗ್ರಾಹಕರ ಮೇಲೆ ಹಾಕದೆ, ವ್ಯಾಪಾರಿಗಳೇ ಭರಿಸಲಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಪಾವತಿ ವ್ಯವಸ್ಥೆಯನ್ನು ಆರ್ಥಿಕವಾಗಿ ಸುಸ್ಥಿರಗೊಳಿಸಲು ಬ್ಯಾಂಕ್‌ಗಳು ಮತ್ತು ಜಾಗತಿಕ ಸಂಸ್ಥೆಗಳು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಯುತ್ತಿದೆ.

ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ನಿರ್ವಹಿಸುವ ಯುಪಿಐ, ಜಾಗತಿಕ ಮಟ್ಟದಲ್ಲಿ ಅತಿದೊಡ್ಡ ಚಿಲ್ಲರೆ ತ್ವರಿತ ಪಾವತಿ ಜಾಲವಾಗಿ ಹೊರಹೊಮ್ಮಿದೆ. ಇತ್ತೀಚಿನ ಆಗಸ್ಟ್ ತಿಂಗಳ ಒಂದೇ ಅವಧಿಯಲ್ಲಿ ಬರೋಬ್ಬರಿ 24.51 ಬಿಲಿಯನ್ ಯುಪಿಐ ವಹಿವಾಟುಗಳು ನಡೆದಿದ್ದು, ಅವುಗಳ ಒಟ್ಟು ಮೌಲ್ಯ 29.82 ಲಕ್ಷ ಕೋಟಿ ರೂಪಾಯಿ ತಲುಪಿದೆ. ಈ ಬೃಹತ್ ಮಾರುಕಟ್ಟೆಯಲ್ಲಿ ಫೋನ್‌ಪೇ ಮತ್ತು ಗೂಗಲ್ ಪೇ ಸಂಸ್ಥೆಗಳೇ ಶೇ. 75ಕ್ಕೂ ಹೆಚ್ಚು ಪಾಲು ಹೊಂದಿವೆ.

ಹಣಕಾಸು ತಜ್ಞರ ಅಂದಾಜಿನ ಪ್ರಕಾರ, ದೊಡ್ಡ ಮೊತ್ತದ ವ್ಯಾಪಾರಿ ವಹಿವಾಟುಗಳ ಮೇಲೆ ಸಣ್ಣ ಮಟ್ಟದ ಶುಲ್ಕ ವಿಧಿಸಿದರೂ ಪಾವತಿ ಉದ್ಯಮಕ್ಕೆ ವಾರ್ಷಿಕ 5,000 ರಿಂದ 10,000 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಸಿಗಲಿದೆ. ಆದರೆ, ಸಾಮಾನ್ಯ ನಾಗರಿಕರು ಮತ್ತು ಸಣ್ಣ ವ್ಯಾಪಾರಿಗಳ ಹಿತಾಸಕ್ತಿ ಕಾಯುವ ದೃಷ್ಟಿಯಿಂದ 2,000 ರೂ.ವರೆಗಿನ ವಹಿವಾಟುಗಳನ್ನು ಉಚಿತವಾಗಿಟ್ಟಿರುವುದು ಸದ್ಯದ ಮಟ್ಟಿಗೆ ದೊಡ್ಡ ರಿಲೀಫ್ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....