Homeಮುಖಪುಟಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

- Advertisement -
- Advertisement -

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ ಸರ್ಕಾರದ ಹಸ್ತಕ್ಷೇಪವನ್ನು ಕೋರಿದೆ.

ಜೊತೆಗೆ, ಪ್ರಸ್ತಾವಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎನ್‌ಎಲ್‌ಎಸ್‌ಐಯು ಆಡಳಿತ ಮಂಡಳಿಯ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಆದೇಶಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಗಳೂರು ಘಟಕವು ಸೋಮವಾರ ನೀಡಿರುವ ಹೇಳಿಕೆಯಲ್ಲಿ, ಈ ವಿಚಾರವಾಗಿ ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಕೇಂದ್ರ ಕಾನೂನು ಮತ್ತು ನ್ಯಾಯಪಾಲನೆ (ಸ್ವತಂತ್ರ ಉಸ್ತುವಾರಿ) ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದೆ.

ಲಲಿತ್ ವಾಚಾನಿ ನಿರ್ದೇಶನದ “ಪ್ರಿಸನರ್ ನಂ. 626710 ಈಸ್ ಪ್ರೆಸೆಂಟ್” ಎಂಬ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಇತ್ತೀಚೆಗೆ ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳನ್ನು ನೀಡಿ ಆಯೋಜಕರು ಮುಂದೂಡಿದ್ದರು.

ಆದರೆ ಈ ವಿಳಂಬವು ಸಾರ್ವಜನಿಕ ಆಕ್ರೋಶ ತಣಿಯಲು ಅನುವು ಮಾಡಿಕೊಡುವ “ಕಾಲಹರಣ ತಂತ್ರ” ಎಂದು ಎಬಿವಿಪಿ ಆರೋಪಿಸಿದೆ.

“2016ರ ಜೆಎನ್‌ಯು ವಿವಾದ, ಅಫ್ಜಲ್ ಗುರು ಸ್ಮರಣೆ, ಸಿಎಎ-ಎನ್‌ಆರ್‌ಸಿ ಪ್ರತಿಭಟನೆಗಳು ಹಾಗೂ 2020ರ ದೆಹಲಿ ಗಲಭೆಯ ಸಂದರ್ಭದಲ್ಲಿ ಪ್ರಚೋದನಾಕಾರಿ ಪ್ರಚೋದನೆಗಳಲ್ಲಿ ಭಾಗಿಯಾದ ಮತ್ತು ದೇಶವಿರೋಧಿ ಘೋಷಣೆಗಳಿಗೆ ನಂಟಿರುವ ವ್ಯಕ್ತಿಯನ್ನೇ ಕೇಂದ್ರಿಕರಿಸಿದ ರಾಜಕೀಯ ಪ್ರಚಾರದ ವೇದಿಕೆಯಾಗಿ ರಾಷ್ಟ್ರೀಯ ಖ್ಯಾತಿಯ ಶಿಕ್ಷಣ ಸಂಸ್ಥೆಗಳು ಬಳಸಲ್ಪಡಬಾರದು ಎಂಬುದು ಎಬಿವಿಪಿ ನಿಲುವಾಗಿದೆ” ಎಂದು ಹೇಳಿದೆ.

ಯಾವುದೇ ನೆಪದಲ್ಲೂ ಈ ಸಾಕ್ಷ್ಯಚಿತ್ರವನ್ನು ಕ್ಯಾಂಪಸ್‌ನಲ್ಲಿ ಚಿತ್ರೀಕರಿಸಲು, ಪ್ರದರ್ಶಿಸಲು ಅಥವಾ ಪ್ರಚಾರ ಮಾಡಲು ನೀಡಲಾದ ಎಲ್ಲಾ ಅನುಮತಿಗಳನ್ನು ಶಾಶ್ವತವಾಗಿ ರದ್ದುಗೊಳಿಸುವಂತೆ ಎನ್‌ಎಲ್‌ಎಸ್‌ಐಯು ಆಡಳಿತ ಮಂಡಳಿಗೆ ನಿರ್ದೇಶನ ನೀಡಬೇಕೆಂದು ವಿದ್ಯಾರ್ಥಿ ಸಂಘಟನೆ ಕೇಂದ್ರವನ್ನು ಒತ್ತಾಯಿಸಿದೆ.

ವಿದ್ಯಾರ್ಥಿ ಸಂಘಟನೆಗಳು ನೀಡಿದ ಅಧಿಕೃತ ದೂರುಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿರುವ ಎಬಿವಿಪಿ, ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಎನ್‌ಎಲ್‌ಎಸ್‌ಐಯು ಆಡಳಿತ ಮತ್ತು ಆಯೋಜಕ ಸಮಿತಿಯ ವಿರುದ್ಧ ಸಮಗ್ರ ತನಿಖೆ ನಡೆಸುವಂತೆಯೂ ಕೋರಿದೆ.

ಸಾರ್ವಜನಿಕ ಸಂಪನ್ಮೂಲಗಳಿಂದ ಧನಸಹಾಯ ಪಡೆಯುವ ಕೇಂದ್ರ ಮತ್ತು ರಾಷ್ಟ್ರೀಯ ವಿಶ್ವವಿದ್ಯಾಲಯಗಳ ಮೂಲಸೌಕರ್ಯಗಳನ್ನು ಶೈಕ್ಷಣಿಕ ಸ್ವಾತಂತ್ರ್ಯದ ನೆಪದಲ್ಲಿ “ದೇಶವಿರೋಧಿ ನಿರೂಪಣೆಗಳಿಗೆ” ಬಳಸದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಬೇಕೆಂದು ಎಬಿವಿಪಿ ಆಗ್ರಹಿಸಿದೆ.

ಮುಕ್ತ ಚರ್ಚೆ ಮತ್ತು ಶೈಕ್ಷಣಿಕ ಸ್ವಾತಂತ್ರ್ಯವು ಸಾಂವಿಧಾನಿಕ ಹಕ್ಕುಗಳಾಗಿದ್ದರೂ, ರಾಷ್ಟ್ರೀಯ ಭದ್ರತೆ, ಸಾರ್ವಭೌಮತ್ವ ಮತ್ತು ಸಾಂಸ್ಥಿಕ ಸಮಗ್ರತೆಗಿಂತ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆದ್ಯತೆ ನೀಡಲು ಸಾಧ್ಯವಿಲ್ಲ ಎಂದು ಸಂಘಟನೆ ಪ್ರತಿಪಾದಿಸಿದೆ.

ಉಮರ್ ಖಾಲಿದ್ ಸಾಕ್ಷ್ಯಚಿತ್ರದ ಕುರಿತು

ದೆಹಲಿ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮತ್ತು ಸಕ್ರಿಯ ಹೋರಾಟಗಾರ ಉಮರ್ ಖಾಲಿದ್ ಅವರ ಜೀವನ ಹಾಗೂ ಅವರ ಬಂಧನದ ಹಿನ್ನೆಲೆಯನ್ನು ಆಧರಿಸಿ “Prisoner No. 626710 is Present” (ಖೈದಿ ಸಂಖ್ಯೆ 626710 ಹಾಜರಿದ್ದಾನೆ) ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವನ್ನು ನಿರ್ಮಿಸಲಾಗಿದೆ. ಈ ಸಾಕ್ಷ್ಯಚಿತ್ರವನ್ನು ಪ್ರಸಿದ್ಧ ಸಾಕ್ಷ್ಯಚಿತ್ರ ನಿರ್ಮಾಪಕ ಲಲಿತ್ ವಾಚಾನಿ ಅವರು ನಿರ್ದೇಶಿಸಿದ್ದಾರೆ.

ಉಮರ್ ಖಾಲಿದ್ ಅವರ ವಿದ್ಯಾರ್ಥಿ ಚಳವಳಿಗಳು, ಸಿಎಎ-ಎನ್‌ಆರ್‌ಸಿ ವಿರೋಧಿ ಹೋರಾಟಗಳು, 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮೇಲಿನ ಆರೋಪಗಳು ಮತ್ತು ಅವರ ಸುದೀರ್ಘ ಜೈಲು ವಾಸದ ಸುತ್ತ ಈ ಚಿತ್ರ ಸುತ್ತುತ್ತದೆ.

ಖಾಲಿದ್ ಅವರ ಕುಟುಂಬದವರು, ಸ್ನೇಹಿತರು, ಹಾಗೂ ಪ್ರಾಧ್ಯಾಪಕರ ಸಂದರ್ಶನಗಳು ಮತ್ತು ಮಾಧ್ಯಮಗಳು ಅವರ ಕುರಿತು ನಡೆಸಿದ ವರದಿಗಳನ್ನು ಒಳಗೊಂಡಿದೆ.

ಸೆಪ್ಟೆಂಬರ್ 2026 ರಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ ಈ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಆದರೆ, ಎಬಿವಿಪಿ ಹಾಗೂ ಇತರ ಕೆಲವು ಸಂಘಟನೆಗಳ ತೀವ್ರ ವಿರೋಧ ಮತ್ತು ಭದ್ರತಾ ಕಾರಣಗಳಿಂದಾಗಿ ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಈ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ತಾತ್ಕಾಲಿಕವಾಗಿ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...