Homeಮುಖಪುಟ"ಏಕರೂಪತೆಯು ಸಮಾನತೆಯಲ್ಲ": 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

- Advertisement -
- Advertisement -

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ ಹಿಂದುತ್ವದ ಕಾರ್ಯಸೂಚಿಯನ್ನು ಮುನ್ನಡೆಸಲು ಯುಸಿಸಿಯನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿವೆ. ಈ ಕ್ರಮವು ನಿಜವಾದ ಲಿಂಗ ಸಮಾನತೆಯನ್ನು ಉತ್ತೇಜಿಸುವುದಕ್ಕಿಂತ ಹೆಚ್ಚಾಗಿ, ಪಕ್ಷದ ಬಹುಸಂಖ್ಯಾತ ವೋಟ್ ಬ್ಯಾಂಕ್ ಅನ್ನು ಗಟ್ಟಿಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ವಿರೋಧ ಪಕ್ಷಗಳು ದೂರಿವೆ.

ಭಾನುವಾರ (ಸೆ.13) ಮುಂಬೈನಲ್ಲಿ ಮಾತನಾಡಿದ ಅಮಿತ್ ಶಾ, “ನಾವು ಈಗಾಗಲೇ ಹಲವಾರು ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿದ್ದೇವೆ. ಬಿಜೆಪಿಯ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ 2029ರ ಒಳಗೆ ನಾವು ಯುಸಿಸಿಯನ್ನು ಜಾರಿಗೊಳಿಸಲಿದ್ದೇವೆ ಎಂಬ ವಿಶ್ವಾಸ ನನಗಿದೆ” ಎಂದು ಹೇಳಿದ್ದಾರೆ.

ಮುಸ್ಲಿಂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಒದಗಿಸುವ ಸರ್ಕಾರದ ಪ್ರಯತ್ನಗಳ ಭಾಗವಾಗಿ ತ್ರಿವಳಿ ತಲಾಖ್ ರದ್ದತಿಯನ್ನು ಶಾ ಅವರು ಉಲ್ಲೇಖಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತು 370ನೇ ವಿಧಿಯ ರದ್ದತಿಯಂತೆಯೇ, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕೂಡ ಬಿಜೆಪಿಯ ದೀರ್ಘಕಾಲದ ಸೈದ್ಧಾಂತಿಕ ಉದ್ದೇಶಗಳಲ್ಲಿ ಒಂದಾಗಿದೆ. ಇವುಗಳಲ್ಲಿ ರಾಮಮಂದಿರ ನಿರ್ಮಾಣ ಮತ್ತು 370ನೇ ವಿಧಿಯ ರದ್ದತಿ ಎರಡನ್ನೂ ಪಕ್ಷವು ಈಗಾಗಲೇ ಸಾಧಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಅಮಿತ್ ಶಾ ಅವರ ಈ ಘೋಷಣೆಯು ಬಿಜೆಪಿಯ ‘ರಾಜಕೀಯ ದುರುದ್ದೇಶವನ್ನು ಸ್ಪಷ್ಟಪಡಿಸಿದೆ’ ಎಂದು ಹೇಳಿದೆ. ಯುಸಿಸಿ ‘ಎಂದಿಗೂ ಮಹಿಳಾ ಹಕ್ಕುಗಳ ಪರವಾಗಿರಲಿಲ್ಲ’ ಎಂದು ವಾದಿಸಿರುವ ಸಿಪಿಐ(ಎಂ), ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನ ತನ್ನ ಹಿಂದುತ್ವ ವೋಟ್ ಬ್ಯಾಂಕ್ ಅನ್ನು ಗಟ್ಟಿಗೊಳಿಸಲು ಬಿಜೆಪಿ ‘ಸಮಾನ ಹಕ್ಕುಗಳ ಸಂಕೀರ್ಣ ಪ್ರಶ್ನೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದೆ.

‘ಏಕರೂಪತೆಯು ಸಮಾನತೆಯಲ್ಲ’ ಎಂದು ಹೇಳಿರುವ ಸಿಪಿಐ(ಎಂ), ನಿರುದ್ಯೋಗ, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ಬದಲು ಬಿಜೆಪಿ ಮತ್ತೊಂದು ವಿಭಜಕ ಚುನಾವಣಾ ಪ್ರಚಾರಕ್ಕೆ ಸಿದ್ಧತೆ ನಡೆಸುತ್ತಿದೆ ಎಂದು ಕಿಡಿಕಾರಿದೆ.

ಸಿಪಿಐ(ಎಂ) ಅಮಿತ್ ಶಾ ಅವರ ಘೋಷಣೆಯನ್ನು ‘ಸಂವಿಧಾನ ವಿರೋಧಿ’ ಎಂದು ಹೇಳಿದ್ದು, ಇದನ್ನು ಪ್ರತಿ ಹಂತದಲ್ಲೂ ಪ್ರತಿರೋಧಿಸುವುದಾಗಿ ತಿಳಿಸಿದೆ.

ಬಿಜೆಪಿಯು ಸಮಾನತೆಗಾಗಿ ಯುಸಿಸಿಯನ್ನು ಜಾರಿಗೊಳಿಸುತ್ತಿಲ್ಲ, ಬದಲಿಗೆ ಮುಸ್ಲಿಮರನ್ನು ಗುರಿಯಾಗಿಸಲು ಇದನ್ನು ಬಳಸುತ್ತಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಈ ಉದ್ದೇಶಿತ ಕ್ರಮವು ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ, ಧಾರ್ಮಿಕ ಹಕ್ಕುಗಳು ಹಾಗೂ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಿತಾಸಕ್ತಿಗಳ ರಕ್ಷಣೆಗೆ ಸಂಬಂಧಿಸಿದ ಸಂವಿಧಾನದ 14, 25, 26 ಮತ್ತು 29 ನೇ ವಿಧಿಗಳ ಅಡಿಯಲ್ಲಿ ಕಳವಳವನ್ನು ಉಂಟುಮಾಡುತ್ತದೆ ಎಂದಿದ್ದಾರೆ.

ಬಿಜೆಪಿಯು ಸಮಾನತೆಗಾಗಿ ಯುಸಿಸಿಯನ್ನು ತರುತ್ತಿಲ್ಲ ಎಂದು ಹೇಳಿರುವ ಓವೈಸಿ, ಮುಸ್ಲಿಮೇತರರ ಮೇಲೆ ಹಿಂದೂ ಕಾನೂನನ್ನು ಹೇರಲು ಬಿಜೆಪಿ, ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಜಂಟಿಯಾಗಿ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.

ವಿಭಿನ್ನ ಧರ್ಮಗಳ ಸಮುದಾಯಗಳ ನಡುವೆ ಆಸ್ತಿ ವ್ಯವಹಾರಗಳನ್ನು ನಿರ್ಬಂಧಿಸುವ ‘ಡಿಸ್ಟರ್ಬ್ಡ್ ಏರಿಯಾಸ್ ಆಕ್ಟ್’ (Disturbed Areas Act) ನಂತಹ ಕಾನೂನುಗಳು ಇಂದಿಗೂ ಮುಂದುವರಿದಿರುವುದನ್ನು ಪ್ರಶ್ನಿಸಿದ ಓವೈಸಿ, ಬಿಜೆಪಿ ಆಡಳಿತವಿರುವ ರಾಜ್ಯಗಳು ‘ಲವ್ ಜಿಹಾದ್’ ಎಂದು ಕರೆಯಲ್ಪಡುವ ಕಾನೂನುಗಳನ್ನು ಏಕೆ ಜಾರಿಗೆ ತರುತ್ತಿವೆ ಎಂದು ಕೇಳಿದ್ದಾರೆ.

ಆರ್‌ಜೆಡಿ ಸಂಸದ ಮನೋಜ್ ಝಾ ಅವರು ಏಕತೆಗೆ ಏಕರೂಪತೆ ಅಗತ್ಯವಿಲ್ಲ ಎಂಬ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಏಕರೂಪತೆಯ ಮೇಲಿನ ಸರ್ಕಾರದ ಒತ್ತಡವನ್ನು ಪ್ರಶ್ನಿಸಿದ್ದಾರೆ. ಇದರೊಂದಿಗೆ ಝಾ ಅವರು ಸಂವಿಧಾನ ರಚನಾ ಸಭೆಯಲ್ಲಿ 44ನೇ ವಿಧಿಯ ಕುರಿತು ನಡೆದ ಚರ್ಚೆಗಳು ಮತ್ತು ಕಾನೂನು ಆಯೋಗದ ಶಿಫಾರಸುಗಳನ್ನು ಸಹ ಎತ್ತಿ ತೋರಿಸಿದ್ದಾರೆ.

“ಅವರಿಂದ ಉದ್ಯೋಗ ನೀಡಲು ಅಥವಾ ಆದಾಯದ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ; ಆದ್ದರಿಂದ, ಅವರಿಗೆ ಯುಸಿಸಿ ಜಾರಿಗೆ ತರುವುದೇ ಪರಿಹಾರವಾಗಿದೆ ಎಂದು ಝಾ ಹೇಳಿದ್ದಾರೆ. ಯುವಜನರು ಉದ್ಯೋಗ ಅಥವಾ ನ್ಯಾಯಯುತ ಪರೀಕ್ಷಾ ವ್ಯವಸ್ಥೆಯನ್ನು ಒತ್ತಾಯಿಸಿದಾಗ ಸರ್ಕಾರದ ಪ್ರತಿಕ್ರಿಯೆ ‘ಯುಸಿಸಿ’ ಎಂದೇ ಆಗಿರುತ್ತದೆ” ಎಂದು ಕುಟುಕಿದ್ದಾರೆ.

ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಅವರು, ಶಾ ಅವರ ಈ ಘೋಷಣೆಯು ಎನ್‌ಡಿಎ ಒಳಗಿನ ಭಿನ್ನಾಭಿಪ್ರಾಯಗಳನ್ನು ಬಯಲುಗೊಳಿಸಿದೆ ಎಂದು ಹೇಳಿದ್ದಾರೆ. ಜನತಾ ದಳ (ಯುನೈಟೆಡ್) ಪಕ್ಷವನ್ನು ಉಲ್ಲೇಖಿಸಿದ ಅವರು, ಯುಸಿಸಿ ಕುರಿತು ಆ ಪಕ್ಷದ ನಿಲುವು ಸ್ಪಷ್ಟವಾಗಿದೆ ಮತ್ತು ಈ ಘೋಷಣೆಯು ಬಿಹಾರದಲ್ಲಿ ‘ಬಂಡಾಯದ ಧ್ವನಿ’ಗಳನ್ನು ಹುಟ್ಟುಹಾಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇದು ಅತ್ಯಂತ ಗಡಿಬಿಡಿಯಿಂದ ನೀಡಿರುವ ಹೇಳಿಕೆಯಾಗಿದ್ದು, ಎನ್‌ಡಿಎ ಒಳಗಿನ ಆಂತರಿಕ ಏಕತೆಯು ಮುರಿದುಬಿದ್ದಿರುವುದನ್ನು ಇದು ಬಹಿರಂಗಪಡಿಸುತ್ತದೆ” ಎಂದು ತಿವಾರಿ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಸಂಸತ್ತಿನ ಮೂಲಕ ಜಾರಿಗೆ ತರುವ ಬದಲು ಪ್ರತ್ಯೇಕ ರಾಜ್ಯಗಳ ಮೂಲಕ ಏಕೆ ಜಾರಿಗೆ ತರಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಈಗಾಗಲೇ ಈ ವಿಷಯದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ಹೇಳಿದ ಅವರು, ಈ ಉದ್ದೇಶಿತ ಕ್ರಮಕ್ಕೆ ಎನ್‌ಡಿಎಯ ಎಲ್ಲಾ ಮೈತ್ರಿಪಕ್ಷಗಳ ಬೆಂಬಲವಿಲ್ಲ ಎಂದು ವಾದಿಸಿದ್ದಾರೆ.

ಬಿಹಾರದಲ್ಲಿ ಯುಸಿಸಿ ಜಾರಿಗೊಳಿಸುವುದಕ್ಕೆ ಜೆಡಿ(ಯು) ಹೊಂದಿರುವ ವಿರೋಧವನ್ನು ಉಲ್ಲೇಖಿಸಿದ ಅಬ್ದುಲ್ಲಾ, ‘ನೀವು ಇದನ್ನು ಬೇರೆ ಬೇರೆ ರಾಜ್ಯಗಳ ಮೂಲಕ ಏಕೆ ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯ ಸ್ವಂತ ಮೈತ್ರಿಪಕ್ಷಗಳೇ ಈ ಪ್ರಸ್ತಾವನೆಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದಿದ್ದರೆ, ಸರ್ಕಾರವು ಇದನ್ನು ದೇಶದಾದ್ಯಂತ ಜಾರಿಗೊಳಿಸಲು ಸಾಧ್ಯವೇ ಎಂಬುದು ಸಂಶಯಾಸ್ಪದವಾಗಿದೆ ಎಂದು ಅವರು ಹೇಳಿದ್ದಾರೆ.

ವಿವಿಧ ಧರ್ಮಗಳು ಮತ್ತು ನಾಗರಿಕತೆಗಳನ್ನು ಹೊಂದಿರುವ ದೇಶದಲ್ಲಿ ಯುಸಿಸಿಯನ್ನು ಏಕರೂಪವಾಗಿ ಹೇರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಆಸಿಮ್ ವಕಾರ್ ಹೇಳಿದ್ದಾರೆ. ವಿವಾಹದ ವಿಷಯಗಳು ಸೇರಿದಂತೆ ಧಾರ್ಮಿಕ ಆಚರಣೆಗಳನ್ನು ಅನುಸರಿಸುವ ನಾಗರಿಕರ ಹಕ್ಕನ್ನು ಸಂವಿಧಾನವು ರಕ್ಷಿಸುತ್ತದೆ ಎಂದು ವಾದಿಸಿದ ಅವರು, ಯಾವುದೇ ಅನುಷ್ಠಾನದ ಮುನ್ನ ಸಮಗ್ರ ದತ್ತಾಂಶ ಮತ್ತು ವ್ಯಾಪಕ ಚರ್ಚೆಯ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.


















ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...