Homeಅಂತರಾಷ್ಟ್ರೀಯಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

- Advertisement -
- Advertisement -

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ ನಿರ್ಬಂಧಿತ ವಾಯುಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ಹೌದಿ ಪಡೆಯ ಡ್ರೋನ್ ಒಂದನ್ನು ಸೌದಿಯ ವಾಯು ರಕ್ಷಣಾ ವ್ಯವಸ್ಥೆಯು ಹೊಡೆದುರುಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸೌದಿ ಒಕ್ಕೂಟದ ವಕ್ತಾರ ತುರ್ಕಿ ಅಲ್-ಮಾಲ್ಕಿ, “ಮಕ್ಕಾ ನಗರದ ಭದ್ರತೆಯು ನಮಗೆ ‘ರೆಡ್ ಲೈನ್’ಇದ್ದಂತೆ (ಕೊನೆಯ ಗಡಿ)” ಎಂದು ಎಚ್ಚರಿಸಿದ್ದಾರೆ.

ಆದರೆ, ಪವಿತ್ರ ನಗರ ಮಕ್ಕಾವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂಬ ಸೌದಿ ಅರೇಬಿಯಾದ ಆರೋಪವನ್ನು ಯೆಮೆನ್‌ನ ಹೌದಿ ಬಂಡುಕೋರರ ಪಡೆ ಸಂಪೂರ್ಣವಾಗಿ ತಳ್ಳಿಹಾಕಿದೆ. “ಮಕ್ಕಾವನ್ನು ಗುರಿಯಾಗಿಸಲಾಗಿದೆ ಎಂಬುದು ಸುಳ್ಳು. ಈ ರೀತಿಯ ಸುಳ್ಳುಗಳನ್ನು ಹಿಂದೆ ಕೂಡ ಹೇಳಲಾಗಿತ್ತು, ಈಗ ಇದು ಯಾರನ್ನೂ ನಂಬಿಸಲು ಸಾಧ್ಯವಿಲ್ಲ” ಎಂದು ಹೌದಿ ರಾಜಕೀಯ ಮಂಡಳಿಯ ಸದಸ್ಯ ಹಝೇಮ್ ಅಲ್-ಅಸಾದ್ ಎಕ್ಸ್ (ಟ್ವಿಟರ್) ಪೋಸ್ಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಸೌದಿ ಅರೇಬಿಯಾದ ಖಮೀಸ್ ಮುಷಾಯತ್, ಅಭಾ ಮತ್ತು ತೈಫ್ ನಗರಗಳನ್ನು ಗುರಿಯಾಗಿಸಿಕೊಂಡು ಹೌದಿ ಪಡೆಗಳು ನಡೆಸಿದ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳಲ್ಲಿ 13 ಜನರು ಗಾಯಗೊಂಡಿದ್ದಾರೆ ಎಂದು ಸೌದಿ ನೇತೃತ್ವದ ಒಕ್ಕೂಟ ತಿಳಿಸಿದೆ. ಈ ದಾಳಿಯಿಂದಾಗಿ ಏಳು ಮನೆಗಳು ಮತ್ತು ಎರಡು ವಾಹನಗಳಿಗೆ ಹಾನಿಯಾಗಿದ್ದು, ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದಂತೆ ಸೌದಿ ಅಧಿಕಾರಿಗಳು ರಾಜ್ಯದ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.

ಈ ನಡುವೆ, ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಮೆರಿಕ ತನ್ನ ನಾಗರಿಕರಿಗೆ ತುರ್ತು ಪ್ರಯಾಣ ಸಲಹೆಯನ್ನು (Travel Advisory) ಹೊರಡಿಸಿದೆ. ಸೌದಿ ಅರೇಬಿಯಾದಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಸೌದಿಗೆ ಮಾಡುವ ಪ್ರಯಾಣದ ಕುರಿತು ‘ಮರುಪರಿಶೀಲನೆ ನಡೆಸುವಂತೆ’ ಸೂಚಿಸಿದೆ. ಅಮೆರಿಕದ ಹಿತಾಸಕ್ತಿಗಳ ಮೇಲೆ ಇರಾನ್ ಬೆಂಬಲಿತ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ನಡೆಯುವ ಸಾಧ್ಯತೆಯಿದೆ ಎಂದು ರಾಯಭಾರ ಕಚೇರಿ ಕಳವಳ ವ್ಯಕ್ತಪಡಿಸಿದೆ. ಇದರೊಂದಿಗೆ, ಸಶಸ್ತ್ರ ಸಂಘರ್ಷ, ಭಯೋತ್ಪಾದನೆ ಮತ್ತು ಸೋಶಿಯಲ್ ಮೀಡಿಯಾ ಕಾಯ್ದೆಗಳ ಕುರಿತು ಎಚ್ಚರಿಸಿರುವ ಅಮೆರಿಕ, “ಭಯೋತ್ಪಾದನಾ ಭೀತಿಯಿರುವುದರಿಂದ ಯೆಮೆನ್ ಗಡಿ ಪ್ರದೇಶಗಳಿಗೆ ಯಾರೂ ಪ್ರಯಾಣಿಸಬೇಡಿ” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...