Homeಮುಖಪುಟಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

- Advertisement -
- Advertisement -

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು ಪ್ರಮುಖ ಸುತ್ತೋಲೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಹೊರಡಿಸಿದೆ.

ರಾಜ್ಯ ಸರ್ಕಾರವು ಕಳೆದ ಮೇ 22, 2026 ರಂದು 83 ನಿಗದಿತ ಉದ್ಯೋಗಗಳಿಗೆ ಕನಿಷ್ಠ ವೇತನವನ್ನು ಪರಿಷ್ಕರಿಸಿ ಅಧಿಸೂಚನೆ (KAEE 411 LDW 2023) ಹೊರಡಿಸಿತ್ತು. ಇದರ ಬೆನ್ನಲ್ಲೇ ಹಲವು ಸರ್ಕಾರಿ ಇಲಾಖೆಗಳು ಹೊಸ ದರದಂತೆ ವೇತನ ಪಾವತಿಸಲು ಆರಂಭಿಸಿದ್ದವು. ಆದರೆ, ಹಣಕಾಸು ಇಲಾಖೆಯು ಹೆಚ್ಚುವರಿ ಹಣಕಾಸಿನ ಹೊರೆಯ ನೆಪವೊಡ್ಡಿ ಜುಲೈ 15, 2026 ರಂದು ಆಕ್ಷೇಪಣೆ ಎತ್ತಿ, ಪರಿಷ್ಕೃತ ವೇತನ ಸ್ಥಗಿತಗೊಳಿಸಲು ಶಿಫಾರಸು ಮಾಡಿತ್ತು.

ಹಣಕಾಸು ಇಲಾಖೆಯ ಈ ಸೂಚನೆಯನ್ನೇ ನೆಪವಾಗಿಟ್ಟುಕೊಂಡು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕ ಇಲಾಖೆ (ಜುಲೈ 29), ಪೌರಾಡಳಿತ ನಿರ್ದೇಶನಾಲಯ (ಆಗಸ್ಟ್ 10) ಹಾಗೂ ಪಂಚಾಯತ್ ರಾಜ್ ಇಲಾಖೆ (ಆಗಸ್ಟ್ 28) ತಮ್ಮ ವ್ಯಾಪ್ತಿಯ ದಿನಗೂಲಿ, ಹೊರಗುತ್ತಿಗೆ, ಪೌರಕಾರ್ಮಿಕರು ಹಾಗೂ ಗ್ರಾಮ ಪಂಚಾಯತಿ ನೌಕರರಿಗೆ ಹಳೆಯ ದರದಲ್ಲೇ ವೇತನ ನೀಡುವಂತೆ ಸುತ್ತೋಲೆ ಹೊರಡಿಸಿದ್ದವು.

ಕಾರ್ಮಿಕರ ಕಾನೂನಾತ್ಮಕ ಹಕ್ಕನ್ನು ಕಸಿದುಕೊಳ್ಳುವ ಈ ಸರ್ಕಾರದ ಸುತ್ತೋಲೆಗಳನ್ನು ಪ್ರಶ್ನಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU) ರಾಜ್ಯ ಸಮಿತಿ ಹಾಗೂ ಅದರ ಸಂಯೋಜಿತ ನಾಲ್ಕು ಕಾರ್ಮಿಕ ಸಂಘಟನೆಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ (WP 29564/2026) ದಾಖಲಿಸಿದ್ದವು. ಅರ್ಜಿದಾರರ ಪರವಾಗಿ ವಕೀಲ ಎಲ್. ಮುರಳೀಧರ ಪೇಶ್ವಾ ವಾದ ಮಂಡಿಸಿದ್ದರು.

ಶುಕ್ರವಾರ (ಸೆಪ್ಟೆಂಬರ್ 18, 2026) ಈ ಅರ್ಜಿಯ ವಿಚಾರಣೆ ನಡೆಸಿದ ಮಾನ್ಯ ನ್ಯಾಯಮೂರ್ತಿ ಎಚ್.ಟಿ. ನರೇಂದ್ರ ಪ್ರಸಾದ್ ಅವರ ಪೀಠವು, ಕನಿಷ್ಠ ವೇತನ ತಡೆಹಿಡಿದಿದ್ದ ಮೂರೂ ಇಲಾಖೆಗಳ ಸುತ್ತೋಲೆಗಳಿಗೆ ತಡೆಯಾಜ್ಞೆ ನೀಡಿದೆ. ಈ ಮಹತ್ವದ ಮಧ್ಯಂತರ ಆದೇಶದಿಂದಾಗಿ ಸರ್ಕಾರದ ಮೂರು ಇಲಾಖೆಗಳ ಸುತ್ತೋಲೆಗಳಿಗೆ ತಡೆ ಬಿದ್ದಿದ್ದು, ಮೇ 22ರ ಅಧಿಸೂಚನೆಗೊಳಪಡುವ ಎಲ್ಲಾ ಕಾರ್ಮಿಕರು ಪರಿಷ್ಕೃತ ಹೊಸ ಕನಿಷ್ಠ ವೇತನ ಪಡೆಯಲು ಅರ್ಹರಾಗಿದ್ದಾರೆ.

ಇತ್ತೀಚೆಗಷ್ಟೇ, ಅಂದರೆ ಸೆಪ್ಟೆಂಬರ್ 8, 2026ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU) ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ (ವಿಧಾನಸೌಧ ಚಲೋ) ಯಶಸ್ವಿಯಾಗಿ ನಡೆದಿತ್ತು. ಈ ಬೃಹತ್ ಜನಾಂದೋಲನದಲ್ಲಿ ಅಂಗನವಾಡಿ, ಆಶಾ, ಬಿಸಿಯೂಟ ಯೋಜನೆಗಳ ಕಾರ್ಯಕರ್ತೆಯರು ಸೇರಿದಂತೆ ಸಂಘಟಿತ ಮತ್ತು ಅಸಂಘಟಿತ ವಲಯದ ಸುಮಾರು 20,000ಕ್ಕೂ ಹೆಚ್ಚು ಕಾರ್ಮಿಕರು ಬೀದಿಗಿಳಿದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದರು.

ಸೆಪ್ಟೆಂಬರ್ 8, 2026ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ CITU ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಮನವಿಪತ್ರ ಸಲ್ಲಿಸುತ್ತಿರುವ ಮುಖಂಡರು

ತಮ್ಮ ನ್ಯಾಯಯುತ ಕನಿಷ್ಠ ವೇತನಕ್ಕಾಗಿ ಬೀದಿಗಿಳಿದು ಹೋರಾಡಿದ್ದ ಕಾರ್ಮಿಕರಿಗೆ, ಇದೀಗ ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯಾಜ್ಞೆಯ ಆದೇಶವು ಹೊಸ ಭರವಸೆಯ ಬೆಳಕನ್ನು ನೀಡಿದೆ. ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ ನೀಡಿರುವುದು ಕಾರ್ಮಿಕ ಸಂಘಟನೆಗಳ ಕಾನೂನು ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ಆದಾಗ್ಯೂ, ಸೆಪ್ಟೆಂಬರ್ 21 ರಂದು ನಡೆಯಲಿರುವ ಮುಂದಿನ ವಿಚಾರಣೆಯಲ್ಲಿ ಹೈಕೋರ್ಟ್ ಯಾವ ಅಂತಿಮ ನಿರ್ಧಾರ ತಳೆಯಲಿದೆ ಹಾಗೂ ಈ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ಕಾರ್ಮಿಕರ ಬೇಡಿಕೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...