Homeಮುಖಪುಟಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

- Advertisement -
- Advertisement -

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಚುನಾವಣಾ ಆಯೋಗವು ಟಿಎಂಸಿ ಎರಡೂ ಪ್ರತಿಸ್ಪರ್ಧಿ ಬಣಗಳು ‘ಅಖಿಲ ಭಾರತ ತೃಣಮೂಲ ಕಾಂಗ್ರೆಸ್’ ಎಂಬ ಹೆಸರನ್ನು ಹಾಗೂ ಪಕ್ಷದ ಸಾಂಪ್ರದಾಯಿಕ ‘ಹುಲ್ಲಿನ ಮೇಲಿನ ಜೋಡಿ ಹೂವು’ (ಜೋಡಾ ಘಾಸ್ ಫುಲ್) ಚಿಹ್ನೆಯನ್ನು ಬಳಸದಂತೆ ನಿಷೇಧಿಸಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಬಣಕ್ಕೆ ಚುನಾವಣಾ ಆಯೋಗವು ಶುಕ್ರವಾರ (ಸೆ.18) “ಮಮತಾ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್” ಎಂಬ ಹೆಸರು ಹಾಗೂ ‘ಫುಟ್‌ಬಾಲ್ ಆಟಗಾರ’ನ ಹೊಸ ಚಿಹ್ನೆಯನ್ನು ಮಂಜೂರು ಮಾಡಿದೆ. ಇದೇ ವೇಳೆ, ಪ್ರತಿಸ್ಪರ್ಧಿ ಬಣಕ್ಕೆ “ಡೆಮಾಕ್ರಟಿಕ್ ತೃಣಮೂಲ ಕಾಂಗ್ರೆಸ್” ಎಂಬ ಹೆಸರು ಮತ್ತು ‘ಲಕೋಟೆ’ ಚಿಹ್ನೆಯನ್ನು ಹಂಚಿಕೆ ಮಾಡಿದೆ.

ಅಕ್ಟೋಬರ್ 6ರಂದು ನಡೆಯಲಿರುವ ನಂದಿಗ್ರಾಮ ಮತ್ತು ರೆಜಿನಗರ ಸೇರಿದಂತೆ ಮುಂಬರುವ ಉಪಚುನಾವಣೆಗಳಿಗೆ ಚುನಾವಣಾ ಆಯೋಗದ ಹಂಚಿಕೆ ಮಾಡಿರುವ ಮಧ್ಯಂತರ ಹೆಸರು ಮತ್ತು ಚಿಹ್ನೆ ಅನ್ವಯಿಸಲಿದೆ.

ಹೊಸ ಹೆಸರುಗಳು ಮತ್ತು ಚಿಹ್ನೆಗಳ ಹಂಚಿಕೆಯು ಕೇವಲ ಒಂದು ಮಧ್ಯಂತರ ವ್ಯವಸ್ಥೆಯಾಗಿದ್ದು, ಇದು ಮೂಲ ಪಕ್ಷದ ಹೆಸರು ಮತ್ತು ಚಿಹ್ನೆಯ ಮೇಲಿನ ಪ್ರತಿಸ್ಪರ್ಧಿಗಳ ಹಕ್ಕುಗಳ ಅಂತಿಮ ತೀರ್ಪಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ಈ ವಿವಾದವನ್ನು 1968ರ ಚುನಾವಣಾ ಚಿಹ್ನೆಗಳ (ಮೀಸಲಾತಿ ಮತ್ತು ಹಂಚಿಕೆ) ಆದೇಶದ ಪ್ಯಾರಾಗ್ರಾಫ್ 15ರ ಅಡಿಯಲ್ಲಿ ಪ್ರತ್ಯೇಕವಾಗಿ ನಿರ್ಧರಿಸಲಾಗುವುದು ಎಂದಿದೆ.

ಮಮತಾ ಬ್ಯಾನರ್ಜಿಯ ರಿಟ್ ಅರ್ಜಿಯನ್ನು ಸೆಪ್ಟೆಂಬರ್ 18ರಂದು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಚುನಾವಣಾ ಆಯೋಗ ಮತ್ತು ಪ್ರತಿಸ್ಪರ್ಧಿ ಬಣದ ಮುಖ್ಯಸ್ಥರಾದ ರಿತಬ್ರತ ಬ್ಯಾನರ್ಜಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...