HomeಅಂಕಣಗಳುKarnataka against SIRSIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ'

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

- Advertisement -
- Advertisement -

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದ ವತಿಯಿಂದ ‘ಎಸ್‌ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ವನ್ನು ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಒಕ್ಕೂಟದ ಪದಾಧಿಕಾರಿಗಳಾದ ಜೆ.ಎಂ. ವೀರಸಂಗಯ್ಯ, ಬಿ.ಟಿ. ಲಲಿತಾ ನಾಯಕ್, ಕೆ.ಎಲ್. ಅಶೋಕ್, ಮುಹಮ್ಮದ್ ಯೂಸುಫ್ ಕನ್ನಿ, ಕೆ. ಮಹಂತೇಶ್, ತಾಹೇರ್ ಹುಸೇನ್, ಸೀತಾರಾಂ ಗುಂಡಪ್ಪ ಹಾಗೂ ಕೆ.ಎಚ್. ಅಬ್ದುಲ್ ಮಜೀದ್ ಅವರು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಪ್ರವಾಸದಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಸಾಹಿತಿಗಳು, ಚಿಂತಕರು ಮತ್ತು ಜನಪರ ಹೋರಾಟಗಾರರು ಭಾಗವಹಿಸಲಿದ್ದಾರೆ.

SIR ಪ್ರಕ್ರಿಯೆಯು ಕರ್ನಾಟಕದಲ್ಲಿ ಈಗಾಗಲೇ ನಿರೀಕ್ಷೆಗೂ ಮೀರಿದ ಅನಾಹುತವನ್ನು ಸೃಷ್ಟಿಸಿದೆ. ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ 1.08 ಕೋಟಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದ್ದು, 43.81 ಲಕ್ಷ ಜನರನ್ನು ‘ಅನುಮಾನಾಸ್ಪದ ಮತದಾರರು’ ಎಂದು ವಿಚಾರಣೆಗೆ ಗುರಿಪಡಿಸಲಾಗಿದೆ. ಇಡೀ ಪ್ರಕ್ರಿಯೆಯು ಅವೈಜ್ಞಾನಿಕ ಹಾಗೂ ಅಸಂವಿಧಾನಿಕವಾಗಿದ್ದು, ಅರ್ಹ ನಾಗರೀಕರ ಪ್ರಜಾತಾಂತ್ರಿಕ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಅಕ್ರಮದ ನೈಜ ಸ್ಥಿತಿಯನ್ನು ಅರಿಯಲು ರಾಜ್ಯವ್ಯಾಪಿಯಾಗಿ ಆಯ್ದ 100 ಬೂತ್‌ಗಳಲ್ಲಿ ‘ನಾಗರಿಕ ಮತಕಾವಲು ಸಮಿತಿ’ಗಳ ಮೂಲಕ ಮತ ಪರಿಶೋಧನಾ ಕಾರ್ಯ ನಡೆಸಲಾಗುತ್ತಿದೆ. ಇದರ ಭಾಗವಾಗಿಯೇ ಸೆ.22ರಂದು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಿಂದ ‘ಪ್ರತಿರೋಧ ಪ್ರವಾಸ’ ಆರಂಭವಾಗಲಿದ್ದು; ಹುಬ್ಬಳ್ಳಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ವಿವಿಧ ಭಾಗಗಳಿಗೆ ತಂಡ ಭೇಟಿ ನೀಡಲಿದೆ.

ಎಸ್‌ಐಆರ್ ಪರಿಶೋಧನೆ ಮತ್ತು ಪ್ರತಿರೋಧ ಪ್ರವಾಸದ ವೇಳಾಪಟ್ಟಿ:
ದಿನಾಂಕಸಮಯಸ್ಥಳ
22/09/2026ಬೆಳಿಗ್ಗೆ 9:00 – 11:00ಮುಂಡಗೋಡು
22/09/2026ಮಧ್ಯಾಹ್ನ 1:00 – 3:00ಹುಬ್ಬಳ್ಳಿ
22/09/2026ಸಂಜೆ 5:00 – 7:00ವಿಜಯಪುರ
23/09/2026ಬೆಳಿಗ್ಗೆ 10:00 – 12:00ಕಲಬುರಗಿ
23/09/2026ಮಧ್ಯಾಹ್ನ 1:00 – 3:00ಯಾದಗಿರಿ
23/09/2026ಸಂಜೆ 5:00 – 7:00ರಾಯಚೂರು
24/09/2026ಬೆಳಿಗ್ಗೆ 9:00 – 11:00ಸಿಂಧನೂರು
24/09/2026ಮಧ್ಯಾಹ್ನ 12:00 – 2:00ಬಳ್ಳಾರಿ
24/09/2026ಸಂಜೆ 4:00 – 6:00ಕೊಪ್ಪಳ
25/09/2026ಬೆಳಿಗ್ಗೆ 9:00 – 11:00ಚಿತ್ರದುರ್ಗ
25/09/2026ಮಧ್ಯಾಹ್ನ 12:00 – 2:00ತುಮಕೂರು
25/09/2026ಸಂಜೆ 4:00 – 5:00ಹುಳಿಯಾರು
25/09/2026ಸಂಜೆ 6:00 – ರಾತ್ರಿ 8:00ಚಿಕ್ಕನಾಯಕನಹಳ್ಳಿ
26/09/2026ಬೆಳಿಗ್ಗೆ 9:00 – 10:30ಗೌರಿಬಿದನೂರು
26/09/2026ಬೆಳಿಗ್ಗೆ 11:00 – ಮಧ್ಯಾಹ್ನ 1:00ಬಾಗೇಪಲ್ಲಿ
26/09/2026ಮಧ್ಯಾಹ್ನ 3:00 – ಸಂಜೆ 6:00ಚಿಕ್ಕಬಳ್ಳಾಪುರ
27/09/2026ಬೆಳಿಗ್ಗೆ 9:00 – 11:00ಹಾಸನ
27/09/2026ಮಧ್ಯಾಹ್ನ 12:00 – 2:00ಕಡೂರು
27/09/2026ಸಂಜೆ 4:00 – 6:00ಚಿಕ್ಕಮಗಳೂರು
28/09/2026ಮಂಗಳೂರು
29/09/2026ಬೆಳಿಗ್ಗೆ 8:00 – ಮಧ್ಯಾಹ್ನ 2:00ಮಡಿಕೇರಿ
29/09/2026ಸಂಜೆ 4:00 – 6:00ಮೈಸೂರು
29/09/2026ರಾತ್ರಿ 7:00 – 9:00ಮಂಡ್ಯ
30/09/2026ಬೆಂಗಳೂರು

ಪ್ರವಾಸದ ವೇಳೆ ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು 100 ಮತಗಟ್ಟೆಗಳ ಪರಿಶೋಧನೆಯ ಆಧಾರದ ಮೇಲೆ ಸೆಪ್ಟೆಂಬರ್ 30ರಂದು ಸಾರ್ವಜನಿಕವಾಗಿ ಹಾಗೂ ಸರ್ಕಾರಕ್ಕೆ ‘ನಾಗರಿಕ ವರದಿ’ಯನ್ನು ಸಲ್ಲಿಸಲಾಗುತ್ತದೆ. ಮತದಾರರ ಹಕ್ಕು ರಕ್ಷಣೆಗೆ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಒತ್ತಾಯ ಮಂಡಿಸಲಾಗುವುದು. ಪ್ರಜ್ಞಾವಂತ ನಾಗರಿಕರು ಈ ಅಭಿಯಾನದಲ್ಲಿ ಜೋಡಿಸಿಕೊಳ್ಳಲು ಮೊಬೈಲ್ ಸಂಖ್ಯೆ 96060 87560 ಅನ್ನು ಸಂಪರ್ಕಿಸಬಹುದು ಎಂದು ಒಕ್ಕೂಟ ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...