Homeಮುಖಪುಟಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಆರೋಪಿಸಿದ್ದಾರೆ.

ಬಿಜೆಪಿಯು ಸಂವಿಧಾನವನ್ನು ಬದಲಾಯಿಸಲು ಬಯಸಿ ಅದರಲ್ಲಿ ವಿಫಲವಾದ ಕಾರಣ ಉದ್ದೇಶಪೂರ್ವಕವಾಗಿಯೇ ಈ ವಿಧ್ವಂಸಕ ಕೃತ್ಯಗಳನ್ನು ಎಸಗಲಾಗಿದೆ ಎಂದು ಅವರು ಆರೋಪಿಸಿದರು.

“ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಅತಿ ಹೆಚ್ಚು ಹಾನಿಗೊಳಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ 151ಕ್ಕೂ ಹೆಚ್ಚು ಅಂಬೇಡ್ಕರ್ ಪ್ರತಿಮೆಗಳು ಹಾನಿಗೊಳಗಾಗಿವೆ ಅಥವಾ ಧ್ವಂಸಗೊಂಡಿವೆ” ಎಂದು ಯಾದವ್ ಲಕ್ನೋದ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

“ಬಿಜೆಪಿಗರು ಸಂವಿಧಾನವನ್ನು ಬದಲಾಯಿಸಲು ಬಯಸಿ ವಿಫಲವಾದ ಕಾರಣ ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆ. ಅದಕ್ಕಾಗಿಯೇ ಬಿಜೆಪಿ ಮತ್ತು ಅದರ ಸಿದ್ಧಾಂತವನ್ನು ಹಂಚಿಕೊಳ್ಳುವವರು ದಾಳಿ ಮಾಡಿದಾಗಲೆಲ್ಲಾ, ಅವರು ಮೊದಲು ಗುರಿಯಾಗಿಸುವುದು ಕೈಯಲ್ಲಿರುವ ಸಂವಿಧಾನದ ಪ್ರತಿಯನ್ನು” ಎಂದು ಅವರು ಹೇಳಿದರು.

‘151 ಪ್ರಕರಣಗಳು ದಾಖಲಾಗಿವೆ, ಇನ್ನೂ ಹೆಚ್ಚಿನ ಪ್ರಕರಣಗಳಿರಬಹುದು’

ಅಂಬೇಡ್ಕರ್ ಪ್ರತಿಮೆಗಳ ಧ್ವಂಸದ ಒಟ್ಟು 151 ಪ್ರಕರಣಗಳನ್ನು ಸಮಾಜವಾದಿ ಪಕ್ಷ ಪತ್ತೆಹಚ್ಚಿದೆ ಎಂದು ಅವರು ಹೇಳಿದರು.

“ಒಟ್ಟಾರೆಯಾಗಿ, ನಾವು 151 ಪ್ರಕರಣಗಳನ್ನು ದಾಖಲಿಸಲು ಸಾಧ್ಯವಾಗಿದೆ. ನಾವು ಸರಾಸರಿಯನ್ನು ಲೆಕ್ಕಹಾಕಿದರೆ, ಈ ಸರ್ಕಾರದ ಅವಧಿಯಲ್ಲಿ ವಾರ್ಷಿಕವಾಗಿ 15ಕ್ಕೂ ಹೆಚ್ಚು ಪ್ರತಿಮೆಗಳಿಗೆ ಹಾನಿಯಾಗಿದೆ. ದಾಖಲಾಗದ ಮತ್ತು ಲೆಕ್ಕಕ್ಕೆ ಸಿಗದ ಪ್ರಕರಣಗಳೂ ಇರಬಹುದು” ಎಂದು ಅವರು ಹೇಳಿದರು.

ಸರ್ಕಾರಿ ಅಂಕಿಅಂಶಗಳನ್ನು ಉಲ್ಲೇಖಿಸಿದ ಅಖಿಲೇಶ್‌, ಕೇವಲ 14 ಪ್ರಕರಣಗಳಲ್ಲಿ ಮಾತ್ರ ಬಂಧನ ಮಾಡಲಾಗಿದೆ. 45 ಪ್ರಕರಣಗಳಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಂಟು ಸಂದರ್ಭಗಳಲ್ಲಿ, ನಿರ್ದಿಷ್ಟ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 84 ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಬಿಜೆಪಿ ಸರ್ಕಾರವು ಅಂಬೇಡ್ಕರ್ ಅವರನ್ನು, ಅವರ ಪ್ರತಿಮೆಗಳನ್ನು ಅಥವಾ ಅವರ ಜನರನ್ನು ಗೌರವಿಸುವುದಿಲ್ಲ ಎಂದು ಅಖಿಲೇಶ್‌ ಯಾದವ್ ಹೇಳಿದರು.

ಸಮಾಜವಾದಿ ಪಕ್ಷವು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಜಿಲ್ಲಾವಾರು ವಿಂಗಡಣೆಯನ್ನು ಪೋಸ್ಟ್ ಮಾಡಿದೆ.

ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಪೋಸ್ಟ್, ಬಲ್ಲಿಯಾದಲ್ಲಿ ಒಂಬತ್ತು ಅಂಬೇಡ್ಕರ್ ಪ್ರತಿಮೆಗಳ ಮೇಲೆ ದಾಳಿ ಮಾಡಲಾಗಿದೆ; ಅಜಂಗಢದಲ್ಲಿ ಆರು; ಮಥುರಾ, ಮುಜಾಫರ್‌ನಗರ ಮತ್ತು ಸಹರಾನ್‌ಪುರದಲ್ಲಿ ತಲಾ ಐದು; ಗಾಜೀಪುರ, ಗೌತಮ್ ಬುದ್ಧ ನಗರ, ಪ್ರಯಾಗ್‌ರಾಜ್, ಲಕ್ನೋ ಮತ್ತು ವಾರಣಾಸಿಯಲ್ಲಿ ತಲಾ ನಾಲ್ಕು ಪ್ರತಿಮೆಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿಸಿದೆ. ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿರುವ ಗೋರಖ್‌ಪುರದಲ್ಲಿ ಎರಡು ಪ್ರತಿಮೆಗಳಿಗೆ ಹಾನಿಯಾಗಿದೆ.

ಶೇಕಡಾ 85ರಷ್ಟು ಪ್ರಕರಣಗಳಲ್ಲಿ “ಊಳಿಗಮಾನ್ಯ ಅರಾಜಕ ಅಂಶಗಳ” ಮೇಲೆ ಯಾವುದೇ ಪೊಲೀಸ್ ಕ್ರಮವನ್ನು ಕೈಗೊಂಡಿಲ್ಲ ಎಂದು ಪಕ್ಷ ಹೇಳಿದೆ.

ಯೋಗಿ ಆದಿತ್ಯನಾಥ್ ಸರ್ಕಾರದ ಮೊದಲ ಅವಧಿಯಲ್ಲಿ 46 ಅಂಬೇಡ್ಕರ್ ಪ್ರತಿಮೆಗಳನ್ನು ಹಾನಿಗೊಳಿಸಲಾಗಿದೆ. ಎರಡನೇ ಅವಧಿಯಲ್ಲಿ 105 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅದು ಹೇಳಿದೆ.

ವರ್ಷವಾರು ವಿಂಗಡಣೆಯಲ್ಲಿ, 2022ರಲ್ಲಿ 4, 2023ರಲ್ಲಿ 12, 2024ರಲ್ಲಿ 13, 2025ರಲ್ಲಿ 29 ಮತ್ತು 2026ರಲ್ಲಿ 47 ಪ್ರತಿಮೆಗಳನ್ನು ಹಾನಿಗೊಳಿಸಲಾಗಿದೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...