Homeಮುಖಪುಟಹಮೀದ್ ಅನ್ಸಾರಿ ಅವರಿಗೆ ನೀಡಿರುವ ಪದ್ಮಶ್ರೀ ಹಿಂಪಡೆಯುವಂತೆ ಹಿಂದೂ ಸೇನಾ ಆಗ್ರಹ

ಹಮೀದ್ ಅನ್ಸಾರಿ ಅವರಿಗೆ ನೀಡಿರುವ ಪದ್ಮಶ್ರೀ ಹಿಂಪಡೆಯುವಂತೆ ಹಿಂದೂ ಸೇನಾ ಆಗ್ರಹ

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಬಲಪಂಥೀಯ ರಾಷ್ಟ್ರೀಯತಾವಾದಿ ಸಂಘಟನೆ ಹಿಂದೂ ಸೇನಾ ಆಗ್ರಹಿಸಿದೆ.

ಸೋಮವಾರ (ಸೆ. 21) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಹಿಂದೂ ಸೇನಾ ಸಂಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ, ಈ ವಿಷಯವು ಭಾರತದ ಸಾರ್ವಭೌಮತ್ವ, ಅಖಂಡತೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಹೇಳಿದ್ದಾರೆ.

ಮಾಜಿ ಉಪರಾಷ್ಟ್ರಪತಿಯವರು ತಮ್ಮ ಅಧಿಕಾರಾವಧಿಯಲ್ಲಿ ಮತ್ತು ನಂತರವೂ ಸತತವಾಗಿ ಅನುಮಾನಾಸ್ಪದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ಪಾಕಿಸ್ತಾನದ ಪತ್ರಕರ್ತ ನುಸ್ರತ್ ಮಿರ್ಜಾ ಅವರ ಹೇಳಿಕೆಗಳು ಸೇರಿದಂತೆ ಸಾರ್ವಜನಿಕ ಚರ್ಚೆಗಳ ಬೆಳಕಿನಲ್ಲಿ, ಅನ್ಸಾರಿ ಅವರ ಅಧಿಕಾರಾವಧಿಯಲ್ಲಿ ಸಂವೇದನಾಶೀಲ ರಾಷ್ಟ್ರೀಯ ಭದ್ರತಾ ಮಾಹಿತಿಯನ್ನು ಸೋರಿಕೆ ಮಾಡಲಾಗಿದೆ. ಪಾಕಿಸ್ತಾನದ ಗೂಢಚಾರಿ ಸಂಸ್ಥೆಗೆ ಸಂಬಂಧಿಸಿದ ವ್ಯಕ್ತಿಗಳಿಗೆ ಆಶ್ರಯ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ” ಎಂದು ಗುಪ್ತಾ ತಿಳಿಸಿದ್ದಾರೆ.

ಅನ್ಸಾರಿ ಅವರು ಇರಾನ್‌ನಲ್ಲಿ ಭಾರತದ ರಾಯಭಾರಿಯಾಗಿದ್ದ ಅವಧಿಯಲ್ಲಿ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡ ಬಗ್ಗೆ ‘ರಾ’ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದರು ಎಂದು ಹಿಂದೂ ಸೇನಾ ಸಂಸ್ಥಾಪಕರು ಆರೋಪಿಸಿದ್ದಾರೆ.

ಸೆಪ್ಟೆಂಬರ್ 12 ರ ಶನಿವಾರದಂದು ಅನ್ಸಾರಿ ಮಾಡಿದ ಇತ್ತೀಚಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಗುಪ್ತಾ, ಮಾಜಿ ಉಪರಾಷ್ಟ್ರಪತಿಗಳು “ಬಹುಸಂಖ್ಯಾತ ಹಿಂದೂ ಸಮುದಾಯ” ಮತ್ತು “ಬಲಪಂಥೀಯ ಸಿದ್ಧಾಂತವನ್ನು” ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದರು. ಹಿಂದೂ ರಾಷ್ಟ್ರೀಯತಾವಾದಿ ಚಿಂತನೆಯನ್ನು ದೇಶಕ್ಕೆ ಬೆದರಿಕೆ ಎಂದು ಬಿಂಬಿಸಲು ಮತ್ತು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತಕ್ಕೆ ಕಳಂಕ ತರಲು ಅವರು ಯತ್ನಿಸಿದ್ದಾರೆ ಎಂದು ಗುಪ್ತಾ ಆರೋಪಿಸಿದರು.

ತಕ್ಷಣವೇ ಪದ್ಮಶ್ರೀ ಹಿಂಪಡೆಯುವಂತೆ ಆಗ್ರಹ

ಇಂತಹ ಪಕ್ಷಪಾತದ ಮತ್ತು ದಾರಿತಪ್ಪಿಸುವ ಮಾತುಗಳು ದೇಶದ ಸೌಹಾರ್ದತೆಗೆ ಧಕ್ಕೆ ತರಬಹುದು ಎಂದು ಹೇಳಿದ ಗುಪ್ತಾ, ದೇಶಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ನಾಗರಿಕರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ರಾಷ್ಟ್ರೀಯ ಭದ್ರತೆಯೊಂದಿಗೆ ರಾಜಿ ಮಾಡಿಕೊಂಡ ಗಂಭೀರ ಆರೋಪಗಳನ್ನು” ಎದುರಿಸುತ್ತಿರುವ ಮತ್ತು “ಹಿಂದೂ ವಿರೋಧಿ ಪಕ್ಷಪಾತ” ಪ್ರದರ್ಶಿಸುವ ವ್ಯಕ್ತಿಯನ್ನು ಗೌರವಿಸುವುದನ್ನು ಮುಂದುವರಿಸುವುದು ಪ್ರಶಸ್ತಿಯ ಪವಿತ್ರತೆಗೆ ಧಕ್ಕೆ ತರುತ್ತದೆ ಮತ್ತು ಭಾರತದ ಸ್ವಾಭಿಮಾನಕ್ಕೆ ಪೆಟ್ಟು ನೀಡುತ್ತದೆ ಎಂದು ವಾದಿಸಿದ್ದಾರೆ.

ತಕ್ಷಣವೇ ಈ ಪ್ರಶಸ್ತಿಯನ್ನು ಹಿಂಪಡೆಯಬೇಕು, ಈ ಎಲ್ಲಾ ಆರೋಪಗಳ ಕುರಿತು ಸರ್ಕಾರವು ಉನ್ನತ ಮಟ್ಟದ ಸ್ವತಂತ್ರ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಅವರು ಆಗ್ರಹಿಸಿದರು.

ಹಮೀದ್ ಅನ್ಸಾರಿ ಹೇಳಿದ್ದೇನು?

ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಅನ್ಸಾರಿ ಅವರು, “ಭಾರತಕ್ಕೆ ನಿಜವಾದ ಅಪಾಯ ಕಮ್ಯುನಿಸಂ ಅಲ್ಲ, ಬದಲಿಗೆ ಹಿಂದೂ ಬಲಪಂಥೀಯ ಕೋಮುವಾದ” ಎಂಬ ಮಾಜಿ ಪ್ರಧಾನಿ ಜವಾಹರ್‌ಲಾಲ್ ನೆಹರೂ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದರು.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ಸಭೆಯಲ್ಲಿ ನೆಹರೂ ನೀಡಿರುವ ಮತ್ತು ಮಾಜಿ ವಿದೇಶಾಂಗ ಕಾರ್ಯದರ್ಶಿ ಜಗತ್ ಸಿಂಗ್ ಗುಂಡೇವಿಯಾ ದಾಖಲಿಸಿದ ಈ ಹೇಳಿಕೆಗಳನ್ನು, ಸಂವಿಧಾನ ತಜ್ಞ ಎ.ಜಿ. ನೂರಾನಿ ಅವರು 2019 ರ ತಮ್ಮ ‘ದಿ ಆರ್‌ಎಸ್‌ಎಸ್: ಎ ಮೆನೇಸ್ ಟು ಇಂಡಿಯಾ’ ಪುಸ್ತಕದಲ್ಲಿ ದಾಖಲಿಸಿದ್ದಾರೆ ಎಂದು ಮಾಜಿ ಉಪರಾಷ್ಟ್ರಪತಿಗಳು ಬೆಟ್ಟು ಮಾಡಿದ್ದರು.

ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೂಡ ಅನ್ಸಾರಿ ವಿರುದ್ಧ ಕಿಡಿಕಾರಿದ್ದು, ಅವರ ಹೇಳಿಕೆಗಳು ವಿರೋಧ ಪಕ್ಷದ “ಮುಸ್ಲಿಂ ಲೀಗ್, ಮಾವೋವಾದಿ” ಮನಸ್ಥಿತಿಯನ್ನು ಬಯಲು ಮಾಡುತ್ತವೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...