Homeಮುಖಪುಟಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ 'ಶುದ್ಧೀಕರಣ' ಮಾಡಿದ ಬಲಪಂಥೀಯ ಗುಂಪು

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

- Advertisement -
- Advertisement -

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಕಾಲೇಜು ಆವರಣದಲ್ಲಿ ‘ಶುದ್ಧೀಕರಣ’ ವಿಧಿ ನಡೆಸಿದ್ದಾರೆ.

ಸೆಪ್ಟೆಂಬರ್ 11ರಂದು ಎಬಿವಿಪಿಗೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಮೊಹಮ್ಮದಿ ತರನ್ನುಮ್ ಅವರ ಕಚೇರಿಯನ್ನು ಇಡೀ ದಿನ ಸುತ್ತುವರಿದಿತ್ತು. ಬಳಿಕ ಅವರ ರಾಜೀನಾಮೆ ಪತ್ರವನ್ನು ಸಿದ್ಧಪಡಿಸಿ, ಅದಕ್ಕೆ ಸಹಿ ಹಾಕುವಂತೆ ಒತ್ತಾಯಿಸಲಾಗಿದೆ.

ನಂತರ ಪೊಲೀಸರು ಅವರನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ದ ಬಳಿಕ, ವಿದ್ಯಾರ್ಥಿಗಳು ಅಗರಬತ್ತಿ ಹಚ್ಚಿ, ಗಂಗಾಜಲವನ್ನು ಸಿಂಪಡಿಸಿದ್ದಾರೆ. ಇದನ್ನು ಅವರು ಆವರಣದ ‘ಶುದ್ಧೀಕರಣ’ ಎಂದು ಹೇಳಿದ್ದಾರೆ.

ಸಮಸ್ಯೆ ಏನು?

ಮೊಹಮ್ಮದಿ ತರನ್ನುಮ್ ಅವರು ಸುರೇಂದ್ರನಾಥ ಕಾಲೇಜಿನ ಉಪ ಪ್ರಾಂಶುಪಾಲೆ ಹಾಗೂ ಪ್ರಭಾರಿ ಪ್ರಾಧ್ಯಾಪಕರಾಗಿದ್ದಾರೆ. ಸೆಮಿಸ್ಟರ್ ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ಕನಿಷ್ಠ ಶೇ.65ರಷ್ಟು ಹಾಜರಾತಿ ಹೊಂದಿರಬೇಕು ಎಂಬ ನಿಯಮವಿದೆ. ಆದರೆ ಕೆಲ ವಿದ್ಯಾರ್ಥಿಗಳು ಈ ಹಾಜರಾತಿ ಪ್ರಮಾಣವನ್ನು ಪೂರೈಸಿರಲಿಲ್ಲ.

ಸೆಪ್ಟೆಂಬರ್ 28ರಂದು ನಡೆಯಲಿರುವ ಮುಂಬರುವ ಪರೀಕ್ಷೆಗಳಿಗೆ ಹಾಜರಾತಿ ನಿಯಮವನ್ನು ಅನ್ವಯಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದರು.

‘ದಿ ವೈರ್‌’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ತಾವು ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕಿಯಾಗಿ ತಮ್ಮ ಕರ್ತವ್ಯವನ್ನು ಮಾತ್ರ ನಿರ್ವಹಿಸುತ್ತಿದ್ದುದಾಗಿ ಹೇಳಿದ್ದಾರೆ.

“ವಿದ್ಯಾರ್ಥಿಗಳಿಂದ ಜಾತಿ, ಧರ್ಮ ಮತ್ತು ರಾಜಕೀಯಕ್ಕೆ ಸಂಬಂಧಿಸಿದಂತೆ ಹಲವು ನಿಂದನಾತ್ಮಕ ಹಾಗೂ ಅಶ್ಲೀಲ ಮಾತುಗಳನ್ನು ಕೇಳಬೇಕಾಯಿತು. ಇದರಿಂದ ಎರಡು ದಿನಗಳ ಕಾಲ ಅನಾರೋಗ್ಯಕ್ಕೆ ಒಳಗಾಗಿದ್ದೆ. ಅವರು ನನ್ನನ್ನು ನಿಂದಿಸಿದರು, ಅಪಹಾಸ್ಯ ಮಾಡಿದರು ಮತ್ತು ಹಲವು ರೀತಿಯ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದರು. ಇಷ್ಟೊಂದು ತೀವ್ರ ಮಾನಸಿಕ ಹಿಂಸೆಗೆ ಒಳಗಾದರೂ, ಅವರು ನನ್ನನ್ನು ಕೊಲ್ಲುವವರೆಗೂ ನಾನು ರಾಜೀನಾಮೆ ನೀಡುವುದಿಲ್ಲ ಎಂದು ನಿರ್ಧರಿಸಿದ್ದೇನೆ” ಎಂದು ಅವರು ತಿಳಿಸಿದ್ದರು.

ಸುರೇಂದ್ರನಾಥ ಕಾಲೇಜು 1884ರಲ್ಲಿ ಸ್ಥಾಪನೆಯಾಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಾಯಕ ಸುರೇಂದ್ರನಾಥ ಬ್ಯಾನರ್ಜಿ ಅವರ ಹೆಸರನ್ನು ಇಡಲಾಗಿದೆ. ಪ್ರಸ್ತುತ ಬರಾಕ್‌ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೌಸ್ತವ್ ಬಾಗ್ಚಿ ಕಾಲೇಜಿನ ಆಡಳಿತ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.

ಪ್ರಾಧ್ಯಾಪಕಿ ವಿರುದ್ಧ ಹಲವು ದೂರುಗಳು ದಾಖಲಾಗಿವೆ ಎಂದು ಅವರು ಹೇಳಿದ್ದಾರೆ. “ಆ ವಿಚಾರಗಳನ್ನು ಉನ್ನತ ಶಿಕ್ಷಣ ಇಲಾಖೆಗೆ ಕಳುಹಿಸಿದ್ದೇನೆ. ಇದೀಗ ಕಾಲೇಜಿನಲ್ಲಿ ಆರೋಗ್ಯಕರ ವಾತಾವರಣ ಮರಳುತ್ತದೆ ಎಂದು ಆಶಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ. ಈ ಕುರಿತು ಇದುವರೆಗೆ ಉನ್ನತ ಶಿಕ್ಷಣ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆದರೆ, ತರನ್ನುಮ್ ಅವರು ಕಾರಿನಲ್ಲಿದ್ದಾಗಲೇ ಸರ್ಕಾರಕ್ಕೆ ಇ-ಮೇಲ್ ಕಳುಹಿಸಿ, ಒತ್ತಡದ ಕಾರಣದಿಂದ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದಾಗಿ ತಿಳಿಸಿದ್ದಾರೆ. ಸೆಪ್ಟೆಂಬರ್ 12ರಂದು ಅವರು ಸಾರ್ವಜನಿಕವಾಗಿ ಆ ರಾಜೀನಾಮೆ ಪತ್ರವನ್ನು ತಿರಸ್ಕರಿಸಿದ್ದಾರೆ.

ಈ ಘಟನೆ ಕುರಿತು ಅವರು ಇದುವರೆಗೆ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. “ಈ ದಾಳಿಯ ಹಿಂದೆ ಯಾರು ಇದ್ದಾರೆ ಎಂಬುದು ನನಗೆ ಗೊತ್ತಿದೆ. ಆದರೆ ನಾನು ದೂರು ನೀಡುವುದಿಲ್ಲ. ಅವರು ನನ್ನ ಸ್ವಂತ ಮಕ್ಕಳಿದ್ದಂತೆ” ಎಂದು ಅವರು ಹೇಳಿದ್ದಾರೆ.

ಮೊಹಮ್ಮದಿ ತರನ್ನುಮ್ ಅವರು 2007ರಿಂದ ಸುರೇಂದ್ರನಾಥ ಕಾಲೇಜಿನಲ್ಲಿ ಬೋಧನೆ ಮಾಡುತ್ತಿದ್ದು, ಸುಮಾರು 20 ವರ್ಷಗಳಿಂದ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಂಸ್ಕೃತಿಕ ನಾಯಕ ಬಸವಣ್ಣನ ನಿಂದನೆ: ರವಿ ಹಂಜ್‌ ವಿರುದ್ದ ಕರವೇ ನಾರಾಯಣಗೌಡ ಆಕ್ರೋಶ.

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನ ಕುರಿತು ರವಿ ಹಂಜ್‌ ಎನ್ನುವ ವ್ಯಕ್ತಿ ಆಕ್ಷೇಪಾರ್ಹ ಹಾಗೂ ನಿಂದನೆ ಮಾತುಗಳನ್ನಾಡಿದ್ದರ ಕುರಿತು ಕರವೇ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಕರ್ನಾಟಕ ಕಂಡ ಮಹಾ ಮಾನವತಾವಾದಿ, ದಾರ್ಶನಿಕ, ಸಾಮಾಜಿಕ ಕ್ರಾಂತಿಯ...

ಮುರಿದ ಕೈಗೆ ಚಿಕಿತ್ಸೆ ಬದಲು ಕಾರ್ಡ್‌ಬೋರ್ಡ್ ರಟ್ಟು ಕಟ್ಟಿ ಕಳಿಸಿದ ಆಸ್ಪತ್ರೆ ಸಿಬ್ಬಂದಿ: ಉತ್ತರ ಪ್ರದೇಶದ ಆರೋಗ್ಯ ವ್ಯವಸ್ಥೆ ವಿರುದ್ಧ ಕಾಂಗ್ರೆಸ್ ಕಿಡಿ!

ಉತ್ತರ ಪ್ರದೇಶದ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಸ್ತೆ ಅಪಘಾತದಲ್ಲಿ ಕೈ ಮೂಳೆ ಮುರಿದಿದ್ದ ತರಕಾರಿ ವ್ಯಾಪಾರಿಯೊಬ್ಬರಿಗೆ ಸೂಕ್ತ ಚಿಕಿತ್ಸೆ ನೀಡುವ ಬದಲು ಕಾರ್ಡ್‌ಬೋರ್ಡ್ ರಟ್ಟು ಕಟ್ಟಿ ಮನೆಗೆ ಕಳುಹಿಸಿದ ಘಟನೆ ವ್ಯಾಪಕ ಆಕ್ರೋಶಕ್ಕೆ...

ಎಸ್‌ಐಆರ್ ಅಂತಿಮ ಪಟ್ಟಿ 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್ ಕಾಂಗ್ರೆಸ್- 115, ಬಿಜೆಪಿ-58 ಹಾಗೂ ಜೆಡಿ(ಎಸ್)ನ 19 ಕ್ಷೇತ್ರಗಳಲ್ಲಿ ಭಾರೀ ವ್ಯತ್ಯಾಸ

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. ದಿನಾಂಕ: 2026ರ ಅಕ್ಟೋಬರ್ 27 ರಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್...

ಉತ್ತರ ಪ್ರದೇಶದಲ್ಲಿ 1.27 ಕೋಟಿ ಹಿಂದೂ ಮತದಾರರ ಹೆಸರು ಅಳಿಸಿದ ಆರೋಪ: ಯೋಗಿ ಆದಿತ್ಯನಾಥ್ ಅವರಿಂದ ದಾಖಲೆ, ದತ್ತಾಂಶ ಕೇಳಿದ ಸ್ವತಂತ್ರ ಆಯೋಗ

ನವದೆಹಲಿ: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸುಮಾರು 1.27 ಕೋಟಿ ಹಿಂದೂ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ...

ಐಸಿಜೆಯ ‘ನರಮೇಧ’ ತೀರ್ಪಿಗೆ ರೋಹಿಂಗ್ಯಾ ನಿರಾಶ್ರಿತರಿಂದ ಸ್ವಾಗತ: ತಾಯ್ನಾಡು ಮ್ಯಾನ್ಮಾರ್‌ಗೆ ಮರಳುವ ಇಂಗಿತ

ನವೆಂಬರ್ 19, 2026ರಂದು, ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವಾದ ಇಂಟರ್‌ನ್ಯಾಷನಲ್ ಕೋರ್ಟ್ ಆಫ್ ಜಸ್ಟೀಸ್ (ಐಸಿಜೆ) ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮ್ಯಾನ್ಮಾರ್ ನರಮೇಧ ನಡೆಸಿದೆ ಎಂದು ಐತಿಹಾಸಿಕ ತೀರ್ಪು ನೀಡಿದೆ. ಅಂತಾರಾಷ್ಟ್ರೀಯ...

‘ಬಸವ ಮಂಟಪ’ ವಿವಾದ: ವಿದೇಶಕ್ಕೆ ತೆರಳಲು ಯತ್ನಿಸಿದ ಲೇಖಕ ರವಿ ಹಂಜ್ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ; ಕೃತಿ ಮುಟ್ಟುಗೋಲು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಡಿಕೆಶಿ ಆದೇಶ

ಬೆಂಗಳೂರು, ನವೆಂಬರ್ 21: 12ನೇ ಶತಮಾನದ ಸಮಾಜ ಸುಧಾರಕ, ವಚನ ಚಳವಳಿಯ ಮುಂಚೂಣಿ ನಾಯಕ ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಮತ್ತು ಅವಮಾನಕರ ವಿಚಾರಗಳನ್ನು ಬರೆದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ‘ಬಸವ ಮಂಟಪ’...

ಸ್ಥಳಾಂತರಗೊಂಡ ರೋಹಿಂಗ್ಯಾಗಳ ಸುರಕ್ಷಿತ, ತ್ವರಿತ ವಾಪಸಾತಿಗೆ ಬೆಂಬಲ : ಭಾರತ ಪುನರುಚ್ಚಾರ

ಸ್ಥಳಾಂತರಗೊಂಡ ರೋಹಿಂಗ್ಯಾ ಮುಸ್ಲಿಮರನ್ನು ಮ್ಯಾನ್ಮಾರ್‌ಗೆ ಸುರಕ್ಷಿತವಾಗಿ ಮತ್ತು ಸುಸ್ಥಿರವಾಗಿ ವಾಪಸ್ ಕಳುಹಿಸುವುದಕ್ಕೆ ತನ್ನ ಬೆಂಬಲವನ್ನು ಭಾರತ ಶುಕ್ರವಾರ (ನ.20) ಪುನರುಚ್ಚರಿಸಿದೆ. ಮ್ಯಾನ್ಮಾರ್ ವಿರುದ್ಧದ ನರಮೇಧ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ತನ್ನ ಐತಿಹಾಸಿಕ...

“ತೆರಿಗೆ ಇಳಿಸಿದರೂ ಉದ್ಯಮ ವಲಯ ಸಂಬಳ ಹೆಚ್ಚಿಸಿಲ್ಲ”: ಪ್ರಧಾನಿ ಮೋದಿ ಮಾತುಗಳಲ್ಲೇ ಸಾಬೀತಾಯ್ತು ‘ಟ್ರಿಕಲ್-ಡೌನ್’ ಆರ್ಥಿಕತೆಯ ವೈಫಲ್ಯ!

ಕೇಂದ್ರ ಸರ್ಕಾರವು ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸಿ ಉದ್ಯಮ ವಲಯಕ್ಕೆ ಭಾರಿ ರಿಯಾಯಿತಿ ನೀಡಿದ್ದರೂ, ಕಂಪನಿಗಳು ತಮ್ಮ ಲಾಭವನ್ನು ಕಾರ್ಮಿಕರೊಂದಿಗೆ ಹಂಚಿಕೊಳ್ಳದೆ ಕೇವಲ ತಮ್ಮ ತಿಜೋರಿ ತುಂಬಿಸಿಕೊಂಡಿವೆ ಎಂಬುದನ್ನು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ...

ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 13 ಮಂದಿ ಸಾವು; 346 ಜನರು ಆಸ್ಪತ್ರೆಗೆ ದಾಖಲು, ಹಲವರ ಸ್ಥಿತಿ ಗಂಭೀರ

ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಕಲುಷಿತ ಮದ್ಯ ಸೇವನೆಯಿಂದ ಸಂಭವಿಸಿರುವ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ನಕಲಿ ಮದ್ಯ ಸೇವನೆಯಿಂದ ಮೆಥನಾಲ್ ವಿಷಪೂರಿತಕ್ಕೆ ಒಳಗಾಗಿರುವ ಶಂಕೆಯ ಹಿನ್ನೆಲೆಯಲ್ಲಿ 346ಕ್ಕೂ ಹೆಚ್ಚು ಜನರನ್ನು...

SIR ಪೂರ್ವದ ಮತದಾರರ ಪಟ್ಟಿ ಬಳಕೆ : ರಾಜಸ್ಥಾನ ಪಂಚಾಯತ್ ಸಮರದಲ್ಲಿ ಕಾಂಗ್ರೆಸ್​ಗೆ ಭರ್ಜರಿ ಜಯ; ಬಿಜೆಪಿಗೆ ಹಿನ್ನಡೆ

ರಾಜಸ್ಥಾನದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ (ಪಂಚಾಯತ್ ಸಮಿತಿ ಮತ್ತು ಜಿಲ್ಲಾ ಪರಿಷತ್) ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿಪಕ್ಷ ಕಾಂಗ್ರೆಸ್ ಭರ್ಜರಿ ಮೇಲುಗೈ ಸಾಧಿಸಿದೆ. ಈ ಫಲಿತಾಂಶವು ರಾಜ್ಯದ ಆಡಳಿತಾರೂಢ ಬಿಜೆಪಿಗೆ ದೊಡ್ಡ ಮಟ್ಟದ...