HomeಅಂಕಣಗಳುKarnataka against SIRಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ 'Gen Z' ಯುವಕರ ಮತದಾನದ ಹಕ್ಕು!

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!

- Advertisement -
- Advertisement -

ಭಾರತೀಯ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಬ್ಬರು ಆಯುಕ್ತರ ನಡುವೆ ಉಂಟಾಗಿದೆ ಎನ್ನಲಾದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ, ದೇಶದ ನೂತನ ಯುವ ಮತದಾರರ ಸೇರ್ಪಡೆ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂಬ ವರದಿ ಹೊರಬಿದ್ದಿದೆ. ಪ್ರಜಾಪ್ರಭುತ್ವದ ಮಹತ್ವದ ಅಂಗವಾದ ಮತದಾರರ ಪಟ್ಟಿಯ ವಾರ್ಷಿಕ ‘ವಿಶೇಷ ಸಂಕ್ಷಿಪ್ತ ಪರಿಷ್ಕರಣೆ’ (Special Summary Revision – SSR) ಪ್ರಕ್ರಿಯೆಯು ಆಯೋಗದೊಳಗಿನ ಅಸಮ್ಮತಿಯಿಂದಾಗಿ ಸ್ಥಗಿತಗೊಂಡಿದ್ದು, ಹೊಸದಾಗಿ 18 ವರ್ಷ ಪೂರೈಸುತ್ತಿರುವ ‘Gen Z’ ಯುವ ಮತದಾರರು ಪಟ್ಟಿಗೆ ಸೇರಲು ಕಾಯುವಂತಾಗಿದೆ.

‘ದಿ ಎಕನಾಮಿಕ್ ಟೈಮ್ಸ್’ (The Economic Times) ಪ್ರಕಟಿಸಿರುವ ತನಿಖಾ ವರದಿಯ ಪ್ರಕಾರ, ಜನವರಿ 2024 ರ ನಂತರ ದೇಶಾದ್ಯಂತ ಯಾವುದೇ ನಿಯಮಿತ ಎಸ್‌ಎಸ್‌ಆರ್ (SSR) ಪ್ರಕ್ರಿಯೆ ನಡೆದಿರುವುದಿಲ್ಲ. 1958 ರಿಂದಲೂ ನಿರಂತರವಾಗಿ ನಡೆದುಕೊಂಡು ಬಂದಿದ್ದ ಈ ವಾರ್ಷಿಕ ಪ್ರಕ್ರಿಯೆಗೆ ಇದೇ ಮೊದಲ ಬಾರಿಗೆ ತಡೆ ಬಿದ್ದಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

‘Gen Z’ ಯುವಕರ ಮತದಾನದ ಹಕ್ಕಿನ ಮೇಲಿನ ಪರಿಣಾಮ

ಸಾಮಾನ್ಯವಾಗಿ ಚುನಾವಣಾ ಆಯೋಗವು ಪ್ರತಿವರ್ಷ ಮೇ ಅಥವಾ ಜೂನ್ ತಿಂಗಳ ವೇಳೆಗೆ ದೇಶಾದ್ಯಂತ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪ್ರಕಟಿಸುತ್ತಿತ್ತು. ಆದರೆ ಮುಂಬರುವ ಸಾಲಿನ ವೇಳಾಪಟ್ಟಿ ಪ್ರಕಟವಾಗದೇ ಪ್ರಕ್ರಿಯೆ ವಿಳಂಬಗೊಂಡಿದೆ.

  • 4 ಕಟ್-ಆಫ್ ದಿನಾಂಕಗಳ ಲಾಭ ಸ್ಥಗಿತ: ಈ ಹಿಂದೆ ವರ್ಷದ ಜನವರಿ 1 ಕ್ಕೆ 18 ವರ್ಷ ತುಂಬಿದವರಿಗೆ ಮಾತ್ರ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿತ್ತು. ಯುವಜನರಿಗೆ ಅನುಕೂಲವಾಗಲು ಆಯೋಗವು ವರ್ಷಕ್ಕೆ 4 ದಿನಾಂಕಗಳನ್ನು (ಜನವರಿ 1, ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1) ಅರ್ಹತಾ ದಿನಾಂಕಗಳಾಗಿ ನಿಗದಿಪಡಿಸಿತ್ತು. ಆದರೆ ಪರಿಷ್ಕರಣೆ ನಿಂತಿರುವುದರಿಂದ ಹೊಸ ಅರ್ಜಿಗಳ ಸಲ್ಲಿಕೆಗೆ ತೊಡಕಾಗಿದೆ.
  • ಅಸ್ತವ್ಯಸ್ತಗೊಂಡ ವೇಳಾಪಟ್ಟಿ: ಸಾಮಾನ್ಯವಾಗಿ ಆಗಸ್ಟ್-ಅಕ್ಟೋಬರ್ ಅವಧಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟವಾಗಿ, ಜನವರಿ ಮೊದಲ ವಾರದಲ್ಲಿ ಅಂತಿಮ ಪಟ್ಟಿ ಬಿಡುಗಡೆಯಾಗುತ್ತಿತ್ತು. ಪ್ರಸ್ತುತ ಈ ಇಡೀ ಪ್ರಕ್ರಿಯೆಯ ವೇಳಾಪಟ್ಟಿಯಲ್ಲಿ ಏರುಪೇರಾಗಿದೆ.

ಆಯೋಗದ ಉನ್ನತ ಹಂತದಲ್ಲಿ ನಡೆದದ್ದೇನು?

‘ದಿ ಎಕನಾಮಿಕ್ ಟೈಮ್ಸ್’ ವರದಿಯ ಪ್ರಕಾರ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಹಾಗೂ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರ ನಡುವಿನ ಅಸಮ್ಮತಿಯೇ ಈ ವಿಳಂಬಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ನಡೆಯುತ್ತಿರುವಾಗ, ವಾರ್ಷಿಕ ಎಸ್‌ಎಸ್‌ಆರ್ (SSR) ಪ್ರಕ್ರಿಯೆ ಅಗತ್ಯವಿದೆಯೇ ಎಂದು ಪರಿಶೀಲಿಸಲು ಸಿಇಸಿ ಜ್ಞಾನೇಶ್ ಕುಮಾರ್ ಅವರು ಕಾನೂನು ಅಭಿಪ್ರಾಯ ಪಡೆದಿದ್ದರು.

ಆಯೋಗದ ನಿಯಮಾವಳಿ ಪ್ರಕಾರ 18 ವರ್ಷ ತುಂಬುವ ಯುವಕರನ್ನು ಪಟ್ಟಿಗೆ ಸೇರಿಸಲು ವಾರ್ಷಿಕ ಎಸ್‌ಎಸ್‌ಆರ್ ನಡೆಸುವುದು ಕಡ್ಡಾಯವಾಗಿದೆ. ಹೀಗಾಗಿ ತಕ್ಷಣವೇ ಇದನ್ನು ಆರಂಭಿಸಬೇಕು ಎಂದು ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಆಯುಕ್ತರು ಒತ್ತಾಯಿಸಿದರೂ ಸಹ ಸರ್ವಸಮ್ಮತಿ ಮೂಡದ ಕಾರಣ ಈ ಪ್ರಕ್ರಿಯೆ ಪ್ರಸ್ತುತ ತಡೆಹಿಡಿಯಲ್ಪಟ್ಟಿದೆ ಎಂದು ವರದಿ ತಿಳಿಸಿದೆ.

ಮುಂಬರುವ ಚುನಾವಣೆ ಹಾಗೂ ಆಡಳಿತಾತ್ಮಕ ದುಷ್ಪರಿಣಾಮ

ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಹಾಗೂ ಪಂಜಾಬ್ ಸೇರಿದಂತೆ ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಳಂಬವಾಗಿರುವುದು ಚುನಾವಣಾ ಪೂರ್ವ ಸಿದ್ಧತೆಗಳ ಮೇಲೆಯೂ ಪರಿಣಾಮ ಬೀರಿದೆ.

ಇಷ್ಟೇ ಅಲ್ಲದೆ, ಆಯೋಗದ ಆಂತರಿಕ ಭಿನ್ನಾಭಿಪ್ರಾಯವು ಕೆಳಹಂತದ ಆಡಳಿತ ವ್ಯವಸ್ಥೆಯ ಮೇಲೆಯೂ ಪ್ರಭಾವ ಬೀರಿದೆ. ಇತ್ತೀಚೆಗೆ ವರ್ಗಾವಣೆಯಾಗಿರುವ ಸುಮಾರು 50 ಕ್ಕೂ ಹೆಚ್ಚು ಮುಖ್ಯ ಚುನಾವಣಾಧಿಕಾರಿಗಳು (CEO) ಹಾಗೂ ಉಪ ಚುನಾವಣಾ ಆಯುಕ್ತರ ವಾರ್ಷಿಕ ರಹಸ್ಯ ವರದಿಗಳಿಗೆ (ACR) ಜಂಟಿ ಅಂಕಿತ ಸಿಗದೇ ಬಾಕಿ ಉಳಿದಿದೆ ಎಂದು ‘ದಿ ಎಕನಾಮಿಕ್ ಟೈಮ್ಸ್’ ವರದಿ ಮಾಡಿದೆ.

ಮತದಾನ ಎನ್ನುವುದು ಸಂವಿಧಾನವು ಪ್ರತಿಯೊಬ್ಬ ಪ್ರಜೆಗೆ ನೀಡಿರುವ ಮೂಲಭೂತ ಹಕ್ಕಾಗಿದೆ. ಸಾಂವಿಧಾನಿಕ ಸಂಸ್ಥೆಯೊಂದರ ಆಂತರಿಕ ನಿರ್ಧಾರಗಳ ವಿಳಂಬದಿಂದಾಗಿ ನೂತನ ಜನಾಂಗವಾದ ‘Gen Z’ ಯುವಕರು ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿಯುವಂತಾಗಬಾರದು ಎಂಬ ಆತಂಕ ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಚುನಾವಣಾ ಆಯೋಗವು ತಕ್ಷಣವೇ ಈ ಆಡಳಿತಾತ್ಮಕ ಗೊಂದಲಗಳಿಗೆ ತೆರೆ ಎಳೆದು, ಪಾರದರ್ಶಕತೆಯಿಂದ ‘ವಿಶೇಷ ಸಂಕ್ಷಿಪ್ತ ಪರಿಷ್ಕರಣೆ’ (SSR) ಪ್ರಕ್ರಿಯೆಯನ್ನು ಪುನರಾರಂಭಿಸಬೇಕಿದೆ ಎಂಬ ಒತ್ತಾಯ ಕೇಳಿಬರುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಭಾಲ್ಕಿ, ಬೆಳಗಾವಿ ಉತ್ತರ-ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಅರ್ಹ ಮತಗಳ ಡಿಲೀಟ್‌ಗೆ ಯತ್ನ; ಅನ್ಯರು ಫಾರಂ-7 ಸಲ್ಲಿಸಿರುವುದು ಬಯಲು!

ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಸರ್ವಾಧಿಕಾರಿ ಧೋರಣೆ ಬಟಾಬಯಲಾಗಿ ದೇಶದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌)...

‘ದಿಮಾಗಿ ನಕ್ಸಲರು ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡಿದ್ದಾರೆ..’; ಗ್ಯಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಅಸ್ಸಾಂ ಸಿಎಂ

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯು ಇದು ರಾಜಕೀಯ ಪ್ರಚಾರ ಹಾಗೂ ವಿರೋಧ ಪಕ್ಷಗಳ...

‘ಅನ್ಯಾಯಯುತ’ ಚುನಾವಣೆಗಳಿಗೆ ಅವಕಾಶ ನೀಡಿದ್ದಕ್ಕಾಗಿ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು: ಪ್ರಿಯಾಂಕಾ ಗಾಂಧಿ

ವಯನಾಡ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವ ವಿಚಾರದ ನಡುವೆಯೇ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ನ ವಾಗ್ದಾಳಿ ಮತ್ತಷ್ಟು ತೀವ್ರಗೊಂಡಿದೆ. ಮತದಾರರ...

48 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ; ಗ್ಯಾನೇಶ್ ಕುಮಾರ್‌ಗೆ ಸಿಜೆಪಿ ಎಚ್ಚರಿಕೆ

ದೇಶದ ಅತ್ಯಂತ ದೊಡ್ಡ ರಾಷ್ಟ್ರದ್ರೋಹಿ ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), "ಮತದಾರರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದ್ದಾರೆ" ಎಂದು ಆರೋಪಿಸಿ ಅವರ...

11 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಗರ್ಭಧಾರಣೆ ಮುಂದುವರಿಸಲು ಒತ್ತಾಯಿಸಲಾಗದು: 24 ವಾರ ಮೀರಿದರೂ ಗರ್ಭಪಾತಕ್ಕೆ ಜಮ್ಮು-ಕಾಶ್ಮೀರ ಹೈಕೋರ್ಟ್ ಅನುಮತಿ

ಶ್ರೀನಗರ: ಲೈಂಗಿಕ ದೌರ್ಜನ್ಯದಿಂದ ಗರ್ಭಿಣಿಯಾಗಿರುವ 11 ವರ್ಷದ ಬಾಲಕಿಯನ್ನು ಕಾನೂನಿನಲ್ಲಿರುವ ನಿಗದಿತ ಅವಧಿಯನ್ನು ಮೀರಿದೆ ಎಂಬ ಕಾರಣಕ್ಕೆ ಗರ್ಭಧಾರಣೆಯನ್ನು ಪೂರ್ಣ ಅವಧಿಯವರೆಗೆ ಮುಂದುವರಿಸುವಂತೆ ಒತ್ತಾಯಿಸಲಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್...

6 ವರ್ಷದ ಮಲಮಗಳ ಅತ್ಯಾಚಾರ, ಹತ್ಯೆ ಪ್ರಕರಣ : ಅಪರಾಧಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಿದ ಸುಪ್ರೀಂ ಕೋರ್ಟ್

ಮಧ್ಯಪ್ರದೇಶದಲ್ಲಿ ತನ್ನ ಆರು ವರ್ಷದ ಮಲಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾದ ವ್ಯಕ್ತಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ಇಂದು (ಸೆ.24) ಬದಲಾಯಿಸಿದೆ. livelaw.in ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್...

ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ತನಿಖೆಗೆ ಸಮಿತಿ ರಚನೆ

ಬಿ.ಟೆಕ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಶಂಕಿತ ಆತ್ಮಹತ್ಯೆಯ ಸುತ್ತಲಿನ ಪರಿಸ್ಥಿತಿಗಳ ಬಗ್ಗೆ ತನಿಖೆ ನಡೆಸಲು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಬುಧವಾರ (ಸೆ.23) 10 ಸದಸ್ಯರ...

ಉತ್ತರ ಪ್ರದೇಶ| ಗೋಮಾಂಸ ಸಾಗಿಸುತ್ತಿರುವ ಶಂಕೆ; ಬಿರಿಯಾನಿ ಹೋಟೆಲ್ ಮಾಲೀಕನ ಮೇಲೆ ಗುಂಪು ಹಲ್ಲೆ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಮೂವರು ಯುವಕರು ಮುಸ್ಲಿಂ ಬಿರಿಯಾನಿ ಹೋಟೆಲ್ ಮಾಲೀಕನೊಬ್ಬ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯಿಂದ ಆತನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಭಾನುವಾರ (ಸೆ. 20) ಈ...

ಟಿಎಂಸಿ ಹೆಸರು, ಚಿಹ್ನೆ ತಡೆ: ಅಂತಿಮ ನಿರ್ಧಾರದ ಕಾಲಮಿತಿ ಕೇಳಿದ ಸುಪ್ರೀಂ ಕೋರ್ಟ್; ಸೆ. 28ಕ್ಕೆ ವಿಚಾರಣೆ

ತೃಣಮೂಲ ಕಾಂಗ್ರೆಸ್‌ (TMC) ಪಕ್ಷದ ಮೂಲ ಹೆಸರು ಹಾಗೂ ‘ಜೋಡಾ ಘಾಸ್‌ಫುಲ್‌’ (Flowers & Grass) ಚುನಾವಣಾ ಚಿಹ್ನೆಯ ಬಳಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು...

ಉತ್ತರ ಪ್ರದೇಶ| ಪೊಲೀಸ್ ಠಾಣೆಯೊಳಗೆ ದಲಿತ ಯುವಕನ ಸಾವು ಪ್ರಕರಣ; ‘ಪೊಲೀಸರೆ ಚಿತ್ರಹಿಂಸೆ ನೀಡಿ ಕೊಂದಿದ್ದಾರೆ..’ ಎಂದು ಕುಟುಂಬದ ಆರೋಪ

ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಪಟ್ಟಿ ಪೊಲೀಸ್ ಠಾಣೆಯ ಕೋಣೆಯೊಂದರಲ್ಲಿ ದಲಿತ ಯುವಕನೊಬ್ಬ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಂತರ, ಪೊಲೀಸರು ಮತ್ತು ಅಪ್ರಾಪ್ತ ಬಾಲಕಿಯ ಕುಟುಂಬದವರ ವಿರುದ್ಧ ಕೊಲೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ...