Homeಮುಖಪುಟ'ಅನ್ಯಾಯಯುತ' ಚುನಾವಣೆಗಳಿಗೆ ಅವಕಾಶ ನೀಡಿದ್ದಕ್ಕಾಗಿ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು: ಪ್ರಿಯಾಂಕಾ...

‘ಅನ್ಯಾಯಯುತ’ ಚುನಾವಣೆಗಳಿಗೆ ಅವಕಾಶ ನೀಡಿದ್ದಕ್ಕಾಗಿ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು: ಪ್ರಿಯಾಂಕಾ ಗಾಂಧಿ

- Advertisement -
- Advertisement -

ವಯನಾಡ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವ ವಿಚಾರದ ನಡುವೆಯೇ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ನ ವಾಗ್ದಾಳಿ ಮತ್ತಷ್ಟು ತೀವ್ರಗೊಂಡಿದೆ. ಮತದಾರರ ಪಟ್ಟಿಯಲ್ಲಿ ತಿರುಚಾಟ ನಡೆಸಿ, ಸುಮಾರು 13 ಕೋಟಿ ಮತದಾರರ ಹೆಸರುಗಳನ್ನು ಅಳಿಸುವ ಮೂಲಕ ‘ಅನ್ಯಾಯಯುತ ಚುನಾವಣೆ’ ನಡೆಯಲು ಉದ್ದೇಶಪೂರ್ವಕವಾಗಿ ಅವಕಾಶ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆಗ್ರಹಿಸಿದ್ದಾರೆ.

ಗುರುವಾರ ವಯನಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಚುನಾವಣೆಯ ಪ್ರಜಾಸತ್ತಾತ್ಮಕ ಪ್ರಕ್ರಿಯೆಯೊಂದಿಗೆ ‘ಆಟವಾಡುವ’ ಯಾರೇ ಆಗಿದ್ದರೂ ಅದು ರಾಷ್ಟ್ರದ ವಿರುದ್ಧದ ಗಂಭೀರ ಕೃತ್ಯವಾಗುತ್ತದೆ ಎಂದು ಹೇಳಿದ್ದಾರೆ. ಮತದಾರರ ಪಟ್ಟಿಯಲ್ಲಿ ತಿರುಚಾಟ ನಡೆಸುವುದು ಮತ್ತು ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲಿನ ದಾಳಿ ಎಂದು ಅವರು ಆರೋಪಿಸಿದ್ದಾರೆ.

ತಮ್ಮ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿದ ಅವರು, ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಮಾಹಿತಿ ಇದ್ದರೂ ಅದನ್ನು ತಡೆಯದೆ ಮುಂದುವರಿಯಲು ಅವಕಾಶ ನೀಡಿದ್ದರೆ, ಅಂತಹ ಕ್ರಮಕ್ಕೆ ಹೊಣೆಗಾರರನ್ನು ಇತರ ಯಾವುದೇ ಆರೋಪಿಗಳಂತೆ ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಸಿಇಸಿ ಹುದ್ದೆಯಲ್ಲಿರುವ ವ್ಯಕ್ತಿಗೆ ಕಾನೂನು ರಕ್ಷಣೆ ಇದೆ ಎಂಬ ಕಾರಣಕ್ಕೆ ಕಾನೂನುಬಾಹಿರ ಕೃತ್ಯಗಳ ಆರೋಪದಿಂದ ವಿನಾಯಿತಿ ಸಿಗಬಾರದು ಎಂಬುದು ತಮ್ಮ ನಿಲುವು ಎಂದು ಅವರು ತಿಳಿಸಿದ್ದಾರೆ.

ಈ ಬೆಳವಣಿಗೆಗೆ ಹಿನ್ನೆಲೆಯಾಗಿರುವುದು ಚುನಾವಣಾ ಆಯೋಗದೊಳಗಿನ ಆಂತರಿಕ ನಿರ್ಧಾರ ಪ್ರಕ್ರಿಯೆ ಕುರಿತು ಪ್ರಕಟವಾಗಿರುವ ವರದಿ. ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು SIRಗೆ ಸಂಬಂಧಿಸಿದ ಮತದಾರರ ಹೆಸರುಗಳ ಸೇರ್ಪಡೆ, ಅಳಿಸುವಿಕೆ ಹಾಗೂ ಇತರ ನಿರ್ಧಾರಗಳ ಕುರಿತು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಆಕ್ಷೇಪಗಳನ್ನು ದಾಖಲಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಕೆಲವು ನಿರ್ಧಾರಗಳು ತಮ್ಮ ತಿಳಿವಳಿಕೆ ಅಥವಾ ಅನುಮೋದನೆಯಿಲ್ಲದೆ ಕೈಗೊಳ್ಳಲಾಗಿದೆ ಎಂಬ ವಿಚಾರವನ್ನೂ ಅವರು ಪ್ರಸ್ತಾಪಿಸಿದ್ದಾಗಿ ವರದಿ ಹೇಳಿದೆ.

ಈ ವರದಿಯ ಬೆನ್ನಲ್ಲೇ ಚುನಾವಣಾ ಆಯೋಗವು ತನ್ನೊಳಗಿನ ಭಿನ್ನಾಭಿಪ್ರಾಯಗಳ ಕುರಿತ ವ್ಯಾಖ್ಯಾನಗಳನ್ನು ತಳ್ಳಿಹಾಕಿದೆ. ಬಹುಸದಸ್ಯರ ಸಂವಿಧಾನಾತ್ಮಕ ಸಂಸ್ಥೆಯಾದ ಚುನಾವಣಾ ಆಯೋಗದಲ್ಲಿ ಲಿಖಿತ ಅಭಿಪ್ರಾಯಗಳು, ಆಕ್ಷೇಪಣೆಗಳು, ತಾಂತ್ರಿಕ ಸಲಹೆಗಳು ಮತ್ತು ಆಂತರಿಕ ಪರಿಶೀಲನೆಗಳು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯ ಭಾಗವಾಗಿವೆ ಎಂದು ಆಯೋಗ ತಿಳಿಸಿದೆ. ಕಳೆದ ಒಂದು ವರ್ಷದಲ್ಲಿ ಆಯೋಗ ಹೊರಡಿಸಿರುವ ಎಲ್ಲಾ ಅಧಿಕೃತ ಆದೇಶಗಳು ಮತ್ತು ನಿರ್ಧಾರಗಳು ಪೂರ್ಣ ಆಯೋಗದ ಸರ್ವಾನುಮತದ ನಿರ್ಧಾರಗಳ ಫಲಿತಾಂಶವಾಗಿವೆ ಎಂದೂ ಅದು ಹೇಳಿದೆ. ರಾಷ್ಟ್ರವ್ಯಾಪಿ SIRಗೆ ಸಂಬಂಧಿಸಿದ ನಿರ್ಧಾರಗಳಲ್ಲೂ ಮೂವರು ಚುನಾವಣಾ ಆಯುಕ್ತರ ನಡುವೆ ಒಮ್ಮತವಿತ್ತು ಎಂದು ಆಯೋಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಆದರೆ, ಚುನಾವಣಾ ಪಟ್ಟಿಗಳಲ್ಲಿ ನಿಜವಾಗಿಯೂ ಅಕ್ರಮ ವೆಸಗಿದ್ದರೆ ಅಥವಾ ಅರ್ಹ ಮತದಾರರ ಹೆಸರುಗಳನ್ನು ಅನ್ಯಾಯವಾಗಿ ತೆಗೆದುಹಾಕಲಾಗಿದ್ದರೆ, ಅದಕ್ಕೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವನ್ನು ಪ್ರಿಯಾಂಕಾ ಗಾಂಧಿ ಮುಂದಿಟ್ಟಿದ್ದಾರೆ. ಚುನಾವಣೆಯ ನ್ಯಾಯಸಮ್ಮತತೆಯೇ ಪ್ರಶ್ನೆಗೆ ಒಳಗಾದರೆ ಅದರ ಪರಿಣಾಮ ಕೇವಲ ರಾಜಕೀಯ ಪಕ್ಷಗಳಿಗೆ ಸೀಮಿತವಾಗದೆ, ಮತದಾನದ ಹಕ್ಕು ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸದ ಮೇಲೂ ಬೀಳುತ್ತದೆ ಎಂಬ ಚರ್ಚೆ ಇದೀಗ ಮತ್ತಷ್ಟು ತೀವ್ರಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಭಾಲ್ಕಿ, ಬೆಳಗಾವಿ ಉತ್ತರ-ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಅರ್ಹ ಮತಗಳ ಡಿಲೀಟ್‌ಗೆ ಯತ್ನ; ಅನ್ಯರು ಫಾರಂ-7 ಸಲ್ಲಿಸಿರುವುದು ಬಯಲು!

ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಸರ್ವಾಧಿಕಾರಿ ಧೋರಣೆ ಬಟಾಬಯಲಾಗಿ ದೇಶದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌)...

‘ದಿಮಾಗಿ ನಕ್ಸಲರು ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡಿದ್ದಾರೆ..’; ಗ್ಯಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಅಸ್ಸಾಂ ಸಿಎಂ

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯು ಇದು ರಾಜಕೀಯ ಪ್ರಚಾರ ಹಾಗೂ ವಿರೋಧ ಪಕ್ಷಗಳ...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!

ಭಾರತೀಯ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಬ್ಬರು ಆಯುಕ್ತರ ನಡುವೆ ಉಂಟಾಗಿದೆ ಎನ್ನಲಾದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ, ದೇಶದ ನೂತನ ಯುವ ಮತದಾರರ ಸೇರ್ಪಡೆ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂಬ ವರದಿ...

48 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ; ಗ್ಯಾನೇಶ್ ಕುಮಾರ್‌ಗೆ ಸಿಜೆಪಿ ಎಚ್ಚರಿಕೆ

ದೇಶದ ಅತ್ಯಂತ ದೊಡ್ಡ ರಾಷ್ಟ್ರದ್ರೋಹಿ ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), "ಮತದಾರರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದ್ದಾರೆ" ಎಂದು ಆರೋಪಿಸಿ ಅವರ...

11 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಗರ್ಭಧಾರಣೆ ಮುಂದುವರಿಸಲು ಒತ್ತಾಯಿಸಲಾಗದು: 24 ವಾರ ಮೀರಿದರೂ ಗರ್ಭಪಾತಕ್ಕೆ ಜಮ್ಮು-ಕಾಶ್ಮೀರ ಹೈಕೋರ್ಟ್ ಅನುಮತಿ

ಶ್ರೀನಗರ: ಲೈಂಗಿಕ ದೌರ್ಜನ್ಯದಿಂದ ಗರ್ಭಿಣಿಯಾಗಿರುವ 11 ವರ್ಷದ ಬಾಲಕಿಯನ್ನು ಕಾನೂನಿನಲ್ಲಿರುವ ನಿಗದಿತ ಅವಧಿಯನ್ನು ಮೀರಿದೆ ಎಂಬ ಕಾರಣಕ್ಕೆ ಗರ್ಭಧಾರಣೆಯನ್ನು ಪೂರ್ಣ ಅವಧಿಯವರೆಗೆ ಮುಂದುವರಿಸುವಂತೆ ಒತ್ತಾಯಿಸಲಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್...

6 ವರ್ಷದ ಮಲಮಗಳ ಅತ್ಯಾಚಾರ, ಹತ್ಯೆ ಪ್ರಕರಣ : ಅಪರಾಧಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಿದ ಸುಪ್ರೀಂ ಕೋರ್ಟ್

ಮಧ್ಯಪ್ರದೇಶದಲ್ಲಿ ತನ್ನ ಆರು ವರ್ಷದ ಮಲಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾದ ವ್ಯಕ್ತಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ಇಂದು (ಸೆ.24) ಬದಲಾಯಿಸಿದೆ. livelaw.in ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್...

ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ತನಿಖೆಗೆ ಸಮಿತಿ ರಚನೆ

ಬಿ.ಟೆಕ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಶಂಕಿತ ಆತ್ಮಹತ್ಯೆಯ ಸುತ್ತಲಿನ ಪರಿಸ್ಥಿತಿಗಳ ಬಗ್ಗೆ ತನಿಖೆ ನಡೆಸಲು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಬುಧವಾರ (ಸೆ.23) 10 ಸದಸ್ಯರ...

ಉತ್ತರ ಪ್ರದೇಶ| ಗೋಮಾಂಸ ಸಾಗಿಸುತ್ತಿರುವ ಶಂಕೆ; ಬಿರಿಯಾನಿ ಹೋಟೆಲ್ ಮಾಲೀಕನ ಮೇಲೆ ಗುಂಪು ಹಲ್ಲೆ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಮೂವರು ಯುವಕರು ಮುಸ್ಲಿಂ ಬಿರಿಯಾನಿ ಹೋಟೆಲ್ ಮಾಲೀಕನೊಬ್ಬ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯಿಂದ ಆತನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಭಾನುವಾರ (ಸೆ. 20) ಈ...

ಟಿಎಂಸಿ ಹೆಸರು, ಚಿಹ್ನೆ ತಡೆ: ಅಂತಿಮ ನಿರ್ಧಾರದ ಕಾಲಮಿತಿ ಕೇಳಿದ ಸುಪ್ರೀಂ ಕೋರ್ಟ್; ಸೆ. 28ಕ್ಕೆ ವಿಚಾರಣೆ

ತೃಣಮೂಲ ಕಾಂಗ್ರೆಸ್‌ (TMC) ಪಕ್ಷದ ಮೂಲ ಹೆಸರು ಹಾಗೂ ‘ಜೋಡಾ ಘಾಸ್‌ಫುಲ್‌’ (Flowers & Grass) ಚುನಾವಣಾ ಚಿಹ್ನೆಯ ಬಳಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು...

ಉತ್ತರ ಪ್ರದೇಶ| ಪೊಲೀಸ್ ಠಾಣೆಯೊಳಗೆ ದಲಿತ ಯುವಕನ ಸಾವು ಪ್ರಕರಣ; ‘ಪೊಲೀಸರೆ ಚಿತ್ರಹಿಂಸೆ ನೀಡಿ ಕೊಂದಿದ್ದಾರೆ..’ ಎಂದು ಕುಟುಂಬದ ಆರೋಪ

ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಪಟ್ಟಿ ಪೊಲೀಸ್ ಠಾಣೆಯ ಕೋಣೆಯೊಂದರಲ್ಲಿ ದಲಿತ ಯುವಕನೊಬ್ಬ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಂತರ, ಪೊಲೀಸರು ಮತ್ತು ಅಪ್ರಾಪ್ತ ಬಾಲಕಿಯ ಕುಟುಂಬದವರ ವಿರುದ್ಧ ಕೊಲೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ...