HomeಅಂಕಣಗಳುKarnataka against SIRಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

- Advertisement -
- Advertisement -

ಚುನಾವಣಾ ಆಯೋಗದಲ್ಲಿ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕುರಿತು ಸ್ಫೋಟಕ ಮಾಹಿತಿಯೊಂದು ಮಾಧ್ಯಮಗಳಲ್ಲಿ ಬಹಿರಂಗವಾಗಿದೆ. ಗ್ಯಾನೇಶ್ ಕುಮಾರ್ ಅವರು ಐಎಎಸ್ ಅಧಿಕಾರಿಯಾಗಿದ್ದ ಅವಧಿಯಲ್ಲೇ ಆಡಳಿತಾರೂಢ ಬಿಜೆಪಿಯ ಪರವಾಗಿ ಧೋರಣೆ ಹೊಂದಿದ್ದರು ಎಂದು ಕೇರಳ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಜಿಜಿ ತೋಮ್ಸನ್ ಅವರು ‘ಆನ್‌ಮನೋರಮಾ’ (Onmanorama) ಸುದ್ದಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಪ್ರಮುಖ ಆಂಗ್ಲ ಮಾಧ್ಯಮ ‘ಆನ್‌ಮನೋರಮಾ’ (Onmanorama) ಪ್ರಕಟಿಸಿರುವ ಬ್ರೇಕಿಂಗ್ ವರದಿಯ ಪ್ರಕಾರ, “ಗ್ಯಾನೇಶ್ ಕುಮಾರ್ ಅವರು ತಮಗೆ ಬಿಜೆಪಿಯಿಂದ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ನೇರ ಆಫರ್ ನೀಡಿದ್ದರು” ಎಂದು ಜಿಜಿ ತೋಮ್ಸನ್ ಸ್ಪಷ್ಟಪಡಿಸಿದ್ದಾರೆ.

ವಿಮಾನ ಪ್ರಯಾಣದಲ್ಲೇ ನಡೆದಿತ್ತಾ ‘ಬಿಜೆಪಿ ಟಿಕೆಟ್’ ಬ್ರೋಕರಿಂಗ್!?

2015 ಮತ್ತು 2016ರ ನಡುವೆ ಜಿಜಿ ತೋಮ್ಸನ್ ಅವರು ಕೇರಳದ ಮುಖ್ಯ ಕಾರ್ಯದರ್ಶಿಯಾಗಿದ್ದಾಗ ಈ ಘಟನೆ ನಡೆದಿತ್ತು ಎಂದು ವರದಿಯಾಗಿದೆ. 2016ರಲ್ಲಿ ನಿವೃತ್ತರಾದ ತೋಮ್ಸನ್, ‘ಆನ್‌ಮನೋರಮಾ’ ಜೊತೆ ಮಾತನಾಡುತ್ತಾ ಅಂದಿನ ದೆಹಲಿ ವಿಮಾನ ಪ್ರಯಾಣದ ಅನುಭವವನ್ನು ಹಂಚಿಕೊಂಡಿದ್ದಾರೆ:

“ನಾನು ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದಾಗ, ನಾವಿಬ್ಬರೂ ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸುತ್ತಿದ್ದೆವು. ಆ ವೇಳೆ ಗ್ಯಾನೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಬಹುವಾಗಿ ಹೊಗಳುತ್ತಿದ್ದರು. ಅಲ್ಲದೆ, 2019ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ಪತ್ತನಂತಿಟ್ಟ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮಗೆ ಆಸಕ್ತಿಯಿದೆಯೇ ಎಂದು ನೇರವಾಗಿ ಕೇಳಿದರು. ಅವರು ನನ್ನನ್ನು ಒಪ್ಪಿಸಲು ತೀವ್ರ ಯತ್ನ ನಡೆಸಿದರು. ಆದರೆ, ನಾನು ತಕ್ಷಣವೇ ಆ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೆ.”

— ಜಿಜಿ ತೋಮ್ಸನ್ (ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ)

ಅಧಿಕಾರದಲ್ಲಿದ್ದಾಗಲೇ ಸಿವಿಲ್ ಸರ್ವೀಸ್ ನಿಯಮಾವಳಿಗಳನ್ನು ಗಾಳಿಗೆ ತೂರಿ, ಕಮಲ ಪಾಳಯಕ್ಕೆ ಆಳುತನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಇಂದು ದೇಶದ ಸಾಂವಿಧಾನಿಕ ಚುನಾವಣಾ ಆಯೋಗದ ಪರಮೋಚ್ಛ ಪೀಠದಲ್ಲಿ ಕುಳಿತಿರುವುದು ಪ್ರಜಾಪ್ರಭುತ್ವಕ್ಕೆ ಒದಗಿರುವ ದೊಡ್ಡ ಅಪಾಯ ಎಂದು ಪ್ರಗತಿಪರ ವಲಯಗಳು ಕಳವಳ ವ್ಯಕ್ತಪಡಿಸಿವೆ.

ಇತ್ತೀಚೆಗೆ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ದಿನಪತ್ರಿಕೆಯು ಆಯೋಗದ ಆಂತರಿಕ ರಹಸ್ಯಗಳನ್ನು ಬಯಲುಗೊಳಿಸಿತ್ತು. ಕಮಿಷನ್‌ನ ಇಬ್ಬರು ಚುನಾವಣಾ ಆಯುಕ್ತರು ಗ್ಯಾನೇಶ್ ಕುಮಾರ್ ಅವರ ಏಕಪಕ್ಷೀಯ ಮತ್ತು ಬಿಜೆಪಿ ಪರ ತೀರ್ಮಾನಗಳ ವಿರುದ್ಧ ಅಧಿಕೃತವಾಗಿ ದಾಖಲೆಯಲ್ಲಿ ಆಕ್ಷೇಪಣೆ ಎತ್ತಿದ್ದರು.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ವಿರೋಧ ಪಕ್ಷಗಳ ಆಕ್ಷೇಪಣೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಗ್ಯಾನೇಶ್ ಕುಮಾರ್ ಅವರನ್ನು ಸಿಇಸಿ ಹುದ್ದೆಗೆ ತಂದು ಕೂರಿಸಿದ್ದಾರೆ” ಎಂದು ನೇರ ಆರೋಪ ಮಾಡಿದ್ದರು.

ಫೆಬ್ರವರಿ 2025ರಲ್ಲಿ ದೇಶದ 26ನೇ ಸಿಇಸಿ ಆಗಿ ಅಧಿಕಾರ ವಹಿಸಿಕೊಂಡ ಗ್ಯಾನೇಶ್ ಕುಮಾರ್, ಐಐಟಿ ಕಾನ್ಪುರದಿಂದ ಬಿ.ಟೆಕ್ ಮುಗಿಸಿ 1988ರ ಬ್ಯಾಚ್‌ನ ಕೇರಳ ಕೆಡರ್ ಐಎಎಸ್ ಅಧಿಕಾರಿಯಾಗಿದ್ದರು. ಕೇರಳದಲ್ಲಿ ಅಡೂರ್ ಸಬ್-ಕಲೆಕ್ಟರ್, ಎಸ್‌ಸಿ/ಎಸ್‌ಟಿ ಅಭಿವೃದ್ಧಿ ನಿಗಮದ ಎಂಡಿ, ಕೊಚ್ಚಿನ್ ಕಾರ್ಪೊರೇಷನ್ ಕಾರ್ಯದರ್ಶಿ, ಮತ್ತು ಎರ್ನಾಕುಲಂ ಡಿಸಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು.

ಆದರೆ, ಕೇರಳದ ವಿಶ್ವಬ್ಯಾಂಕ್ ಅನುದಾನಿತ ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದ ಬೃಹತ್ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಪಿಡಬ್ಲ್ಯೂಡಿ (PWD) ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಈ ಗಂಭೀರ ಅಕ್ರಮದ ಬೆನ್ನಲ್ಲೇ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದರು ಎಂದು ವರದಿಯಾಗಿದೆ.

ಆಡಳಿತ ಪಕ್ಷಕ್ಕೆ ಬಹಿರಂಗವಾಗಿ ಬೆಂಬಲ ನೀಡುತ್ತಿದ್ದ ಅಧಿಕಾರಿಯೊಬ್ಬರು ಇಂದು ಚುನಾವಣಾ ಆಯೋಗದ ಮುಖ್ಯಸ್ಥರಾಗಿರುವುದು ಹಾಗೂ SIR ಹೆಸರಿನಲ್ಲಿ 13 ಕೋಟಿ ಮತಗಳನ್ನು ರಹಸ್ಯವಾಗಿ ಕಡಿತಗೊಳಿಸುತ್ತಿರುವುದಕ್ಕೆ ಸ್ಪಷ್ಟ ಉತ್ತರ ನೀಡುತ್ತಿದೆಯೇ ಎಂಬ ಚರ್ಚೆಗಳು ಈಗ ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿವೆ.

ಜನಸಾಮಾನ್ಯರ ಮತದಾನದ ಹಕ್ಕನ್ನು ಕಸಿದುಕೊಂಡು, ಆಡಳಿತ ಪಕ್ಷದ ಹಿತಾಸಕ್ತಿಗೆ ತಕ್ಕಂತೆ ಕೆಲಸ ಮಾಡುತ್ತಿರುವ ಸಿಇಸಿ ಗ್ಯಾನೇಶ್ ಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕು ಮತ್ತು ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂಬ ಆಗ್ರಹ ಈಗ ದೇಶಾದ್ಯಂತ ವ್ಯಾಪಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...

Breaking News: ಎಸ್‌ಐಆರ್‌ನಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್: ಕರ್ನಾಟಕದ ಅಂಕಿಅಂಶಗಳು ಎತ್ತಿದ ಗಂಭೀರ ಪ್ರಶ್ನೆಗಳು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದಲ್ಲಿ ಮುಂದುವರಿಯುತ್ತಿರುವ ಬೆನ್ನಲ್ಲೇ, ಅದರ ಲಿಂಗಾನುಪಾತದ ಅಂಕಿಅಂಶಗಳು ಗಂಭೀರವಾದ ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿವೆ. ಲಭ್ಯವಿರುವ 34 ಜಿಲ್ಲೆ/ನಗರ ಆಡಳಿತ ಘಟಕಗಳ...

ಎಸ್ಐಆರ್‌ನಲ್ಲಿ ಬದುಕಿದ್ದರೂ ‘ಮೃತ’, ಮನೆಯಲ್ಲಿದ್ದರೂ ‘ಸ್ಥಳಾಂತರ’: ಚಿಕ್ಕಬಳ್ಳಾಪುರದ ಸಂತ್ರಸ್ತರನ್ನು ಭೇಟಿಯಾದ ಪ್ರಕಾಶ್ ರಾಜ್ 

ಚಿಕ್ಕಬಳ್ಳಾಪುರ: ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಯಲ್ಲಿ ಬದುಕಿರುವ ಮತದಾರರನ್ನೇ ಮೃತಪಟ್ಟವರು ಎಂದು ಗುರುತಿಸಿರುವ ಆರೋಪಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕೇಳಿಬಂದಿವೆ. ಎಸ್ಐಆರ್ ಪರಿಶೋಧನೆ-ಪ್ರತಿರೋಧ ಜಾಥಾದ ಭಾಗವಾಗಿ ಗುಡಿಬಂಡೆ ತಾಲೂಕು ಕಚೇರಿ ಆವರಣಕ್ಕೆ ಆಗಮಿಸಿದ್ದ...

“ಚುನಾವಣಾ ಆಯೋಗದ ‘ಕೊಳೆತ ವ್ಯವಸ್ಥೆ’ ಗ್ಯಾನೇಶ್ ಕುಮಾರ್ ಅವರಿಂದಷ್ಟೇ ಶುರುವಾಗಿದ್ದಲ್ಲ!” – ಬಂಗಾಳ ಚುನಾವಣೆಯ ಅಸಲಿ ಸತ್ಯ ಬಿಚ್ಚಿಟ್ಟ ಪ್ರಶಾಂತ್ ಕಿಶೋರ್

ಭಾರತೀಯ ಚುನಾವಣಾ ಆಯೋಗದ ಒಳಗಿನ 'ಸರ್ವಾಧಿಕಾರಿ' ಧೋರಣೆ, ಇಬ್ಬರು ಆಯುಕ್ತರ ಬಂಡಾಯ ಮತ್ತು ನಿಯಮಬಾಹಿರ ನಿರ್ಧಾರಗಳ ಕುರಿತು ಇಡೀ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ, ಖ್ಯಾತ ಚುನಾವಣಾ ತಂತ್ರಜ್ಞ ಹಾಗೂ 'ಜನ್...

ಎಸ್ಐಆರ್ ಅಕ್ರಮ: ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ಪೊಲೀಸರಿಂದ ಹಲವೆಡೆ ಅಶ್ರುವಾಯು, ಜಲಫಿರಂಗಿ ಪ್ರಯೋಗ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದು, ಕನಿಷ್ಠ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಬೀದಿಗಿಳಿದಿದ್ದಾರೆ. ಚುನಾವಣಾ...

ಶೀಘ್ರವೇ ಪೌರಕಾರ್ಮಿಕರ ಉಪಹಾರ ಭತ್ಯೆ ₹70 ಕ್ಕೆ ಹೆಚ್ಚಿಸುವೆ: ಸಿಎಂ ಡಿ.ಕೆ. ಶಿವಕುಮಾರ್

ಪೌರಕಾರ್ಮಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪೌರಕಾರ್ಮಿಕರ ಉಪಹಾರ ಭತ್ಯೆಯನ್ನು ₹35 ರಿಂದ ₹70 ಕ್ಕೆ ಏರಿಕೆ ಮಾಡಿ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು...

ಎಸ್ಐಆರ್ ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ : ಪ್ರಕಾಶ್ ರಾಜ್

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು. ಎಸ್ಐಆರ್ ಪರಿಶೋಧನೆ ಮತ್ತು ಪ್ರತಿರೋಧ ಜಾಥಾದ ಭಾಗವಾಗಿ ಶುಕ್ರವಾರ (ಸೆ.25)...

ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ: ದಲಿತ ಸಂಘಟನೆಗಳ ಒಕ್ಕೂಟ ಖಂಡನೆ

ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿರುವ ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದ ಬೆಂಗಳೂರಿನ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದಲಿತ ಸಂಘಟನೆಗಳ...

ಮುರ್ಷಿದಾಬಾದ್‌: ಎಸ್ಐಆರ್ ಪ್ರಕ್ರಿಯೆಯಲ್ಲಿ ಹೆಸರುಗಳು ಉಳಿದರೂ ‘ಬಾಂಗ್ಲಾದೇಶಿ’ ಎಂದು ಅನುಮಾನಿಸಿ 60 ವರ್ಷದ ತಂದೆ, ಮೂವರು ಪುತ್ರರ ಗಡಿಪಾರು ಆರೋಪ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಂಗಾಳಿ ಮುಸ್ಲಿಂ ಕುಟುಂಬವೊಂದರ ನಾಲ್ವರು ಸದಸ್ಯರನ್ನು ಪೊಲೀಸರು ಮನೆಯಿಂದ ಕರೆದೊಯ್ದು, ಅವರು ಬಾಂಗ್ಲಾದೇಶಿ ಪ್ರಜೆಗಳು ಎಂದು ಆರೋಪಿಸಿ ಬಿಎಸ್‌ಎಫ್‌ಗೆ ಹಸ್ತಾಂತರಿಸಿ ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು...

ಗ್ಯಾನೇಶ್ ಕುಮಾರ್‌ನನ್ನು ಬಂಧಿಸುವಂತೆ ಬಿ.ಕೆ. ಹರಿಪ್ರಸಾದ್ ಆಗ್ರಹ: ನಾಳೆ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಇನ್ನುಳಿದ ಇಬ್ಬರು ಆಯುಕ್ತರ ಭಿನ್ನಮತವನ್ನು ಸಂಪೂರ್ಣವಾಗಿ ತಳ್ಳಿಹಾಕಿ ಗೌಪ್ಯವಾಗಿ 'ಎಸ್‌ಐಆರ್'...