HomeಅಂಕಣಗಳುKarnataka against SIRSIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

- Advertisement -
- Advertisement -

ದೇಶಾದ್ಯಂತ ನಡೆಯುತ್ತಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಹಾಗೂ ಕೇಂದ್ರ ಸರ್ಕಾರದ ಹಿತಾಸಕ್ತಿಗೆ ತಕ್ಕಂತೆ ನಡೆದುಕೊಳ್ಳುತ್ತಿರುವ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಿಪಿಐ(ಎಂ), ಸಿಪಿಐ, ಎಸ್‌ಯುಸಿಐ ಸೇರಿದಂತೆ ವಿವಿಧ ಎಡಪಕ್ಷಗಳು ಹಾಗೂ ‘ಎಸ್‌ಐಆರ್‌ ವಿರೋಧಿ ಒಕ್ಕೂಟ’ ಜಂಟಿ ನೇತೃತ್ವದಲ್ಲಿ ನಡೆದ ಈ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಡಾ. ಕೆ. ಪ್ರಕಾಶ್, ಪ್ರಸ್ತುತ ಜಾರಿಯಲ್ಲಿರುವ ಎಸ್‌ಐಆರ್‌ ವ್ಯವಸ್ಥೆಯು ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುತ್ತಿದೆ ಎಂದು ಖಂಡಿಸಿದರು. ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಿ ಅವರಿಗೆ ಮತದಾನದ ಹಕ್ಕು ಖಾತರಿಪಡಿಸುವುದು ಚುನಾವಣಾ ಆಯೋಗದ ಪ್ರಾಥಮಿಕ ಕರ್ತವ್ಯವಾಗಬೇಕಿತ್ತು. ಆದರೆ ಆಯೋಗವು ಸಾರ್ವಜನಿಕರನ್ನು ಅನುಮಾನಾಸ್ಪದ ವರ್ಗಕ್ಕೆ ತಳ್ಳಿ, ಪಟ್ಟಿಯಿಂದ ಹೊರಹಾಕುವ ಕೆಲಸದಲ್ಲಿ ತೊಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಒಂದರಲ್ಲೇ ಕರಡು ಮತದಾರರ ಪಟ್ಟಿಯಲ್ಲಿ ಬರೋಬ್ಬರಿ 1.08 ಕೋಟಿಗೂ ಹೆಚ್ಚು ಮತದಾರರನ್ನು ‘ಗೈರುಹಾಜರಿ, ಸ್ಥಳಾಂತರ, ಮೃತ, ನಕಲಿ ಮತ್ತು ಇತರರು’ (ASDDO – Absent, Shifted, Dead, Duplicate and Others) ಎಂಬ ವರ್ಗದಲ್ಲಿ ಸೇರಿಸಿ ಗುರುತಿಸಲಾಗಿದೆ. ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಜನರನ್ನು ಅನಿಶ್ಚಿತತೆಗೆ ತಳ್ಳಿರುವ ಈ ವರ್ಗೀಕರಣವು ಆಯೋಗದ ಉದ್ದೇಶ ಮತ್ತು ಪಾರದರ್ಶಕತೆಯ ಮೇಲೆಯೇ ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಮತದಾರರ ಪಟ್ಟಿಯ ಶುದ್ಧೀಕರಣದ ನೆಪ ಹೇಳುತ್ತಿರುವ ಆಯೋಗವು, ASDDO ಪಟ್ಟಿಯಲ್ಲಿರುವ ಪ್ರತಿಯೊಂದು ಹೆಸರನ್ನೂ ಅಂತಿಮವಾಗಿ ತೆಗೆದುಹಾಕುವುದಿಲ್ಲ ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ಆದರೆ, ಈ ಜಟಿಲ ಪ್ರಕ್ರಿಯೆಯ ನೆಪದಲ್ಲಿ ಸಾಮಾನ್ಯ ಹಾಗೂ ಅರ್ಹ ಮತದಾರರ ಹಕ್ಕುಗಳಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಖಾತರಿಪಡಿಸುವುದು ಆಯೋಗದ ಹೊಣೆಗಾರಿಕೆಯಾಗಿದೆ ಎಂದು ನಾಯಕರು ಸ್ಪಷ್ಟಪಡಿಸಿದರು.

ಫ್ರೀಡಂ ಪಾರ್ಕ್‌ನಲ್ಲಿ SIR ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸೇರಿದ ನೂರಾರು ಪ್ರತಿಭಟನಾಕಾರರು

ಚುನಾವಣಾ ಆಯೋಗವು ತನ್ನ ಸ್ವಾಯತ್ತತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇರ ನಿರ್ದೇಶನ ಹಾಗೂ ಒತ್ತಡಕ್ಕೆ ಮಣಿದು ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಿಪಿಐ(ಎಂ) ಆರೋಪಿಸಿದೆ. ಈ ಅಕ್ರಮಗಳಿಗೆ ನೇರ ಹೊಣೆಗಾರರಾಗಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು, ಇಲ್ಲವೇ ಕೇಂದ್ರ ಸರ್ಕಾರ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಲಾಯಿತು.

ಇದರೊಂದಿಗೆ, ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಮೂಲಕ ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆಯನ್ನು ರಕ್ಷಿಸಬೇಕು. ‘Absent’ ಅಥವಾ ‘Shifted’ ಎಂದು ತಪ್ಪಾಗಿ ಗುರುತಿಸಲ್ಪಟ್ಟಿರುವ ಮತದಾರರ ಅರ್ಜಿಗಳನ್ನು ಮರುಪರಿಶೀಲಿಸಿ, ಯಾವುದೇ ಅರ್ಹ ಪ್ರಜೆಯ ಹೆಸರು ಪಟ್ಟಿಯಿಂದ ಬಿಟ್ಟುಹೋಗದಂತೆ ತಕ್ಷಣವೇ ಮರುಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಲಾಯಿತು.

ಈ ಬೃಹತ್ ಪ್ರತಿಭಟನೆಯಲ್ಲಿ ಎಡಪಕ್ಷಗಳ ಪ್ರಮುಖ ನಾಯಕರಾದ ಸಾತಿ ಸುಂದರೇಶ್, ಎ. ಜ್ಯೋತಿ, ನೂರ್ ಶ್ರೀಧರ್, ಉಮಾದೇವಿ, ಶ್ರೀರಾಮ್, ಗೌರಮ್ಮ, ಬಿ.ಎನ್. ಮಂಜುನಾಥ್, ಕೆ.ಎಸ್ ವಿಮಲಾ, ಯಶ್ವಂತ್, ಕಲಿಂ ವಿನಯ್ ಶ್ರೀನಿವಾಸ್, ಮೈತ್ರೇಯಿ ಸೇರಿದಂತೆ ಪ್ರಮುಖ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...

Breaking News: ಎಸ್‌ಐಆರ್‌ನಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್: ಕರ್ನಾಟಕದ ಅಂಕಿಅಂಶಗಳು ಎತ್ತಿದ ಗಂಭೀರ ಪ್ರಶ್ನೆಗಳು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದಲ್ಲಿ ಮುಂದುವರಿಯುತ್ತಿರುವ ಬೆನ್ನಲ್ಲೇ, ಅದರ ಲಿಂಗಾನುಪಾತದ ಅಂಕಿಅಂಶಗಳು ಗಂಭೀರವಾದ ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿವೆ. ಲಭ್ಯವಿರುವ 34 ಜಿಲ್ಲೆ/ನಗರ ಆಡಳಿತ ಘಟಕಗಳ...

ಎಸ್ಐಆರ್‌ನಲ್ಲಿ ಬದುಕಿದ್ದರೂ ‘ಮೃತ’, ಮನೆಯಲ್ಲಿದ್ದರೂ ‘ಸ್ಥಳಾಂತರ’: ಚಿಕ್ಕಬಳ್ಳಾಪುರದ ಸಂತ್ರಸ್ತರನ್ನು ಭೇಟಿಯಾದ ಪ್ರಕಾಶ್ ರಾಜ್ 

ಚಿಕ್ಕಬಳ್ಳಾಪುರ: ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಯಲ್ಲಿ ಬದುಕಿರುವ ಮತದಾರರನ್ನೇ ಮೃತಪಟ್ಟವರು ಎಂದು ಗುರುತಿಸಿರುವ ಆರೋಪಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕೇಳಿಬಂದಿವೆ. ಎಸ್ಐಆರ್ ಪರಿಶೋಧನೆ-ಪ್ರತಿರೋಧ ಜಾಥಾದ ಭಾಗವಾಗಿ ಗುಡಿಬಂಡೆ ತಾಲೂಕು ಕಚೇರಿ ಆವರಣಕ್ಕೆ ಆಗಮಿಸಿದ್ದ...

“ಚುನಾವಣಾ ಆಯೋಗದ ‘ಕೊಳೆತ ವ್ಯವಸ್ಥೆ’ ಗ್ಯಾನೇಶ್ ಕುಮಾರ್ ಅವರಿಂದಷ್ಟೇ ಶುರುವಾಗಿದ್ದಲ್ಲ!” – ಬಂಗಾಳ ಚುನಾವಣೆಯ ಅಸಲಿ ಸತ್ಯ ಬಿಚ್ಚಿಟ್ಟ ಪ್ರಶಾಂತ್ ಕಿಶೋರ್

ಭಾರತೀಯ ಚುನಾವಣಾ ಆಯೋಗದ ಒಳಗಿನ 'ಸರ್ವಾಧಿಕಾರಿ' ಧೋರಣೆ, ಇಬ್ಬರು ಆಯುಕ್ತರ ಬಂಡಾಯ ಮತ್ತು ನಿಯಮಬಾಹಿರ ನಿರ್ಧಾರಗಳ ಕುರಿತು ಇಡೀ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ, ಖ್ಯಾತ ಚುನಾವಣಾ ತಂತ್ರಜ್ಞ ಹಾಗೂ 'ಜನ್...

ಎಸ್ಐಆರ್ ಅಕ್ರಮ: ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ಪೊಲೀಸರಿಂದ ಹಲವೆಡೆ ಅಶ್ರುವಾಯು, ಜಲಫಿರಂಗಿ ಪ್ರಯೋಗ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದು, ಕನಿಷ್ಠ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಬೀದಿಗಿಳಿದಿದ್ದಾರೆ. ಚುನಾವಣಾ...

ಶೀಘ್ರವೇ ಪೌರಕಾರ್ಮಿಕರ ಉಪಹಾರ ಭತ್ಯೆ ₹70 ಕ್ಕೆ ಹೆಚ್ಚಿಸುವೆ: ಸಿಎಂ ಡಿ.ಕೆ. ಶಿವಕುಮಾರ್

ಪೌರಕಾರ್ಮಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪೌರಕಾರ್ಮಿಕರ ಉಪಹಾರ ಭತ್ಯೆಯನ್ನು ₹35 ರಿಂದ ₹70 ಕ್ಕೆ ಏರಿಕೆ ಮಾಡಿ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು...