Homeಮುಖಪುಟ'ದೆಹಲಿ-ಎನ್‌ಸಿಆರ್‌ ಅತ್ಯಾಚಾರ ಪ್ರಕರಣಗಳು ಪೊಲೀಸ್ ಮತ್ತು ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತವೆ' : ಸ್ವಯಂಪ್ರೇರಿತ...

‘ದೆಹಲಿ-ಎನ್‌ಸಿಆರ್‌ ಅತ್ಯಾಚಾರ ಪ್ರಕರಣಗಳು ಪೊಲೀಸ್ ಮತ್ತು ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತವೆ’ : ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿಯ ಉದ್ಯಾನವನವೊಂದರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಚಲಿಸುತ್ತಿದ್ದ ಸ್ಲೀಪರ್ ಬಸ್‌ನೊಳಗೆ ಅಪ್ರಾಪ್ತೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಇತ್ತೀಚೆಗೆ ವರದಿಯಾದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.28) ಸ್ವಯಂಪ್ರೇರಿತವಾಗಿ (suo motu) ವಿಚಾರಣೆಗೆ ಕೈಗೆತ್ತಿಕೊಂಡಿದೆ.

ರಾಷ್ಟ್ರ ರಾಜಧಾನಿ ವಲಯದಲ್ಲಿ (ಎನ್‌ಸಿಆರ್) ಮರುಕಳಿಸುತ್ತಿರುವ ಲೈಂಗಿಕ ಅಪರಾಧಗಳ ಕುರಿತಾದ ಸುದ್ದಿ ವರದಿಗಳಿಂದ ತಾವು ತೀವ್ರ ನೊಂದಿರುವುದಾಗಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಅಭಿಪ್ರಾಯಪಟ್ಟಿದ್ದು, ಈ ನಿಟ್ಟಿನಲ್ಲಿ ಹೊಣೆಗಾರಿಕೆಯನ್ನು ನಿಗದಿಪಡಿಸುವ ಅಗತ್ಯವನ್ನು ಒತ್ತಿಹೇಳಿದೆ.

ತನ್ನ ಆದೇಶದಲ್ಲಿ ಪೀಠವು ದೆಹಲಿಯ ಸ್ವರೂಪ್ ನಗರದಲ್ಲಿ ನಡೆದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿದ್ದು, ಅಲ್ಲಿ ಪೊಲೀಸರು ಸಂತ್ರಸ್ತೆಯ ಕೊಳೆತ ಶವವನ್ನು ಹೊಲವೊಂದರಲ್ಲಿ ಪತ್ತೆಹಚ್ಚಿದ್ದರು. ಗ್ರೇಟರ್ ನೋಯ್ಡಾದಿಂದ ದೆಹಲಿವರೆಗೆ 47 ಕಿಲೋಮೀಟರ್ ಚಲಿಸುವಾಗಲೂ ಪೊಲೀಸರು ತಡೆಯಲು ವಿಫಲರಾದ, ಚಲಿಸುತ್ತಿದ್ದ ಸ್ಲೀಪರ್ ಬಸ್‌ನೊಳಗೆ ಅಪ್ರಾಪ್ತೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ಉಲ್ಲೇಖಿಸಿದ ನ್ಯಾಯಾಲಯವು, “2012ರ ನಿರ್ಭಯಾ ಘಟನೆಗೆ ಇಲ್ಲಿ ಅತ್ಯಂತ ನೋವಿನ ಸಾಮ್ಯತೆಗಳನ್ನು ಕಾಣದಿರಲು ಸಾಧ್ಯವಿಲ್ಲ” ಎಂದು ಹೇಳಿದೆ.

“ಈ ಘಟನೆಗಳು ನಿರ್ಭಯಾ ಪ್ರಕರಣದ ನಂತರ ವ್ಯವಸ್ಥಿತ ಕಾನೂನು ಜಾರಿ ಕಾರ್ಯವಿಧಾನಗಳು ಯಾವುದೇ ಅರ್ಥಪೂರ್ಣ ಪ್ರಗತಿಯನ್ನು ಸಾಧಿಸಿವೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ” ಎಂದು ನ್ಯಾಯಾಲಯವು ಹೇಳಿದೆ.

“ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ವರದಿಯಾದ ಇತರ ಲೈಂಗಿಕ ಅಪರಾಧಗಳ ವರದಿಗಳೊಂದಿಗೆ ಈ ಘಟನೆಗಳನ್ನು ಒಟ್ಟಾಗಿ ಗಮನಿಸಿದಾಗ, ಮೂಲಭೂತ ಸಾರ್ವಜನಿಕ ಸುರಕ್ಷತೆಯನ್ನು ಖಾತರಿಪಡಿಸುವಲ್ಲಿ ಕಾನೂನು ಜಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಆಡಳಿತಾಧಿಕಾರಿಗಳ ಕಡೆಯಿಂದ ಉಂಟಾಗಿರುವ ವ್ಯವಸ್ಥಿತ ವೈಫಲ್ಯವು ಸ್ಪಷ್ಟವಾಗಿ ಎದ್ದು ಕಾಣುತ್ತದೆ” ಎಂದು ಪೀಠವು ತಿಳಿಸಿದೆ.

“ಹಿಂಸೆಯ ಭಯವಿಲ್ಲದೆ ಘನತೆಯಿಂದ ಬದುಕುವ ಹಕ್ಕು ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಹಕ್ಕಿನ ಅತ್ಯಗತ್ಯ ಭಾಗವಾಗಿದೆ. ರಸ್ತೆಗಳು, ಉದ್ಯಾನವನಗಳು, ಬಸ್‌ಗಳು, ಮೆಟ್ರೋ ನಿಲ್ದಾಣಗಳು, ಸಬ್‌ವೇಗಳು ಮತ್ತು ಪಾದಚಾರಿ ಮೇಲ್ಸೇತುವೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳು ಅತ್ಯಂತ ಕಳಪೆ ಬೆಳಕಿನ ವ್ಯವಸ್ಥೆ, ಕಳಪೆ ಕಣ್ಗಾವಲು, ಗಸ್ತು ತಿರುಗುವಿಕೆಯ ಕೊರತೆ ಮತ್ತು ತಡೆಗಟ್ಟಬಹುದಾದ ಇತರ ಆಡಳಿತಾತ್ಮಕ ಲೋಪಗಳಿಂದಾಗಿ ‘ಹೆಚ್ಚಿನ ಅಪಾಯದ ವಲಯಗಳಾಗಿ’ ಬದಲಾಗಲು ಅನುಮತಿಸಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಕೇವಲ ಸಾರ್ವಜನಿಕ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಕಳಕಳಿ ಹಾಗೂ ಒಗ್ಗಟ್ಟನ್ನು ವ್ಯಕ್ತಪಡಿಸಿ ಹೇಳಿಕೆಗಳನ್ನು ನೀಡುವುದು ಸಾಕಾಗುವುದಿಲ್ಲ ಎಂದು ತಿಳಿಸಿದ ಪೀಠವು, ಇಂತಹ ಘಟನೆಗಳು ಸಂಭವಿಸಲು ಕಾರಣವಾದ ವೈಫಲ್ಯಗಳಿಗೆ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕಾಗಿದೆ ಎಂದಿದೆ.

“ಹೊಣೆಗಾರಿಕೆ ಇಲ್ಲದ ಕೇವಲ ಒಗ್ಗಟ್ಟಿನ ಅಭಿವ್ಯಕ್ತಿಗಳು ವಿಶಾಲವಾದ ಸಾಂಸ್ಥಿಕ ಪ್ರಶ್ನೆಗೆ ಉತ್ತರಿಸಲು ಸಾಧ್ಯವಿಲ್ಲ. ಒಗ್ಗಟ್ಟು ವ್ಯಕ್ತಪಡಿಸುವುದು ಈ ಸಾಮಾಜಿಕ ಪಿಡುಗಿಗೆ ಪರಿಹಾರವಲ್ಲ. ಅಪರಾಧಗಳ ತಡೆಗಟ್ಟುವಿಕೆ, ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ ಮತ್ತು ದುರ್ಬಲ ವ್ಯಕ್ತಿಗಳ ರಕ್ಷಣೆಯ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳ ಮೇಲೆ ನಿರ್ದಿಷ್ಟ ಹೊಣೆಗಾರಿಕೆ ಹಾಗೂ ಜವಾಬ್ದಾರಿಯನ್ನು ನಿಗದಿಪಡಿಸುವಂತಹ ಅಳೆಯಬಹುದಾದ ಪ್ರತಿಕ್ರಿಯೆಯ ಅಗತ್ಯವಿದೆ” ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಈ ವಿಷಯವನ್ನು ಪರಿಶೀಲಿಸಲು ಸ್ವಯಂಪ್ರೇರಿತ ಪ್ರಕರಣವೊಂದನ್ನು ದಾಖಲಿಸುವಂತೆ ಪೀಠವು ನಿರ್ದೇಶಿಸಿದೆ.

Courtesy : livelaw.in



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಜ್ಜಯಿನಿ ಶಾಹಿ ಮಸೀದಿ ವಿವಾದ: ರಸ್ತೆ ಅಗಲೀಕರಣಕ್ಕಾಗಿ ಭಾಗಶಃ ಕೆಡವುವಿಕೆಯ ವಿರುದ್ಧದ ಮೇಲ್ಮನವಿ ವಜಾಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್ 

ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಶಾಹಿ ಮಸೀದಿಯ ಒಂದು ಭಾಗವನ್ನು ತೆರವುಗೊಳಿಸುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠ ಸೋಮವಾರ, ಸೆಪ್ಟೆಂಬರ್ 28ರಂದು ವಿಲೇವಾರಿ ಮಾಡಿದೆ. ಮಸೀದಿ...

ಮುಖ್ಯ ಚುನಾವಣಾ ಆಯುಕ್ತ ಹುದ್ದೆಯಿಂದ ಗ್ಯಾನೇಶ್ ಕುಮಾರ್‌ ಅಮಾನತುಗೊಳಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಇತರ ಪರಿಹಾರಗಳ ಜೊತೆಗೆ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಬೇಕು ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಅದರ ಮುಖ್ಯಸ್ಥರು ಏಕಪಕ್ಷೀಯವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬುವುದಾಗಿ ಘೋಷಿಸಬೇಕು...

UPI ವಹಿವಾಟುಗಳ ಮೇಲೆ ಶುಲ್ಕ : ಕೇಂದ್ರದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಯುಪಿಐ ಮೂಲಕ ವ್ಯಕ್ತಿಗಳಿಂದ ವ್ಯಾಪಾರಿಗಳಿಗೆ ರೂ. 2,000ಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟುಗಳಿಗೆ ಶುಲ್ಕ ವಿಧಿಸುವ ಕ್ರಮದ ಆಧಾರವನ್ನು ವಿವರಿಸಿ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.28) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ...

TMC ಪಕ್ಷ ಚಿಹ್ನೆ ಸಂಘರ್ಷ: ಆರು ತಿಂಗಳು ಬೇಕಿಲ್ಲ, ‘ಎಐ’ ಬಳಸಿ 3 ತಿಂಗಳಲ್ಲಿ ಇತ್ಯರ್ಥಗೊಳಿಸಿ ಎಂದ ಸುಪ್ರೀಂ ಕೋರ್ಟ್‌!

ಪಶ್ಚಿಮ ಬಂಗಾಳದ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹೆಸರು ಹಾಗೂ ಅಧಿಕೃತ 'ಹೂವು ಮತ್ತು ಹುಲ್ಲು' (Flowers & Grass) ಚುನಾವಣಾ ಚಿಹ್ನೆಯ ಹಕ್ಕುಸ್ವಾಮ್ಯಕ್ಕೆ ಸಂಬಂಧಿಸಿದಂತೆ ಸೃಷ್ಟಿಯಾಗಿರುವ ಬಂಡಾಯ ಹಾಗೂ...

ಆಗ್ರಾದಲ್ಲಿ ಸಿಇಸಿ ಗ್ಯಾನೇಶ್ ಕುಮಾರ್ ನಿವಾಸದ ಮೇಲೆ ‘ಗ್ಯಾನೇಶ್ ಗದ್ದರ್, ವೋಟ್ ಚೋರ್’ ಬರಹ; ಎಸ್‌ಐಆರ್ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ಆಗ್ರಾ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ದೇಶಾದ್ಯಂತ ರಾಜಕೀಯ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಆಗ್ರಾದಲ್ಲಿರುವ ನಿವಾಸದ ಹೊರಗೆ...

‘ಇಂತಹ ಸರ್ಕಾರವನ್ನು ಬೆಂಬಲಿಸುವುದಕ್ಕೆ ವಿಷಾದವಿದೆ’: ಬಿಹಾರದ ಕಾನೂನು-ಸುವ್ಯವಸ್ಥೆ ಬಗ್ಗೆ ಚಿರಾಗ್ ಪಾಸ್ವಾನ್ ಬಹಿರಂಗ ಅಸಮಾಧಾನ

ಪಾಟ್ನಾ: ಬಿಹಾರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಎನ್‌ಡಿಎ ಮೈತ್ರಿಕೂಟದ ಪ್ರಮುಖ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರದ...

ಕೊಲ್ಕತ್ತಾದ SRFTIನಲ್ಲಿ ಆರ್‌ಎಸ್‌ಎಸ್-ಸಂಯೋಜಿತ ಸಭೆಗೆ ವಿರೋಧ: 150ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಭೀಕರ ಹಲ್ಲೆ ಆರೋಪ!

ಕೊಲ್ಕತ್ತಾದ ಪ್ರತಿಷ್ಠಿತ ‘ಸತ್ಯಜಿತ್ ರೇ ಫಿಲ್ಮ್ ಆಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್’ (SRFTI) ಆವರಣದಲ್ಲಿ ಭಾನುವಾರ ವಿದ್ಯಾರ್ಥಿಗಳು ಮತ್ತು ಆರ್‌ಎಸ್‌ಎಸ್‌ ಜೊತೆ ಸಂಪರ್ಕ ಹೊಂದಿರುವ ‘ಅಖಿಲ ಭಾರತೀಯ ಗ್ರಾಹಕ್ ಪಂಚಾಯತ್’ (ABGP) ಸದಸ್ಯರ ನಡುವೆ...

‘ಕರ್ನಾಟಕದಲ್ಲಿ ಕೇವಲ ಮೂರು ತಿಂಗಳಲ್ಲಿ ಎಸ್ಐಆರ್ ಸಾಧ್ಯವೇ ಇಲ್ಲ’: ಚುನಾವಣಾ ಆಯೋಗದ ವಿರುದ್ಧ ಮಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ವಾಗ್ದಾಳಿ  

ಮಂಗಳೂರು: ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಕೊಲ್ಲುವುದಕ್ಕಾಗಿ ಬಿಜೆಪಿ ಮಾಡಿರುವ ಬಹುದೊಡ್ಡ ಹುನ್ನಾರವೇ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ....

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು RTI ವಿನಾಯಿತಿ ಆದೇಶ ರದ್ದು ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ಹಿಂಪಡೆದುಕೊಂಡಿದೆ. ಸಾರ್ವಜನಿಕ (ಕಾನೂನು...

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ...