HomeಅಂಕಣಗಳುKarnataka against SIRCWC Meeting : ಮೋದಿ, ಗ್ಯಾನೇಶ್ ಕುಮಾರ್ ರಾಜೀನಾಮೆ ಸೇರಿದಂತೆ 5 ಬೇಡಿಕೆಗಳನ್ನು ಮುಂದಿಟ್ಟ ಕಾಂಗ್ರೆಸ್

CWC Meeting : ಮೋದಿ, ಗ್ಯಾನೇಶ್ ಕುಮಾರ್ ರಾಜೀನಾಮೆ ಸೇರಿದಂತೆ 5 ಬೇಡಿಕೆಗಳನ್ನು ಮುಂದಿಟ್ಟ ಕಾಂಗ್ರೆಸ್

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ನೋಂದಣಿ ನಿಯಮಗಳಿಗೆ ಬದಲಾವಣೆಗಳ ಮೂಲಕ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ರಾಜಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ (ಸೆ.29) ಆರೋಪಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪಕ್ಷವು ತನ್ನ ಅಭಿಯಾನವನ್ನು ತೀವ್ರಗೊಳಿಸಲಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ‘ಐತಿಹಾಸಿಕ ಜವಾಬ್ದಾರಿ’ ಪಕ್ಷದ ಮೇಲಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು, ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ಮತದಾನದ ಹಕ್ಕಿಗಾಗಿ ಕಾಂಗ್ರೆಸ್ ನಡೆಸಿದ ಹೋರಾಟಕ್ಕೂ ಮತ್ತು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಈಗ ನಡೆಸುತ್ತಿರುವ ಅಭಿಯಾನಕ್ಕೂ ನಡುವಿನ ಸಾಮ್ಯತೆಯನ್ನು ಎತ್ತಿ ತೋರಿಸಿದ್ದಾರೆ. ‘ಬಿಜೆಪಿ ಮತ್ತು ಮೋದಿ ಸರ್ಕಾರದ ಸೂಚನೆಯ ಮೇರೆಗೆ’ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಮುಖ್ಯ ಚುನಾವಣಾ ಆಯುಕ್ತರು ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಹೊಸ ಮತದಾರರ ನೋಂದಣಿಗೆ ಬಳಸಲಾಗುವ ‘ಫಾರ್ಮ್ 6’ರಲ್ಲಿ ಮಾಡಲಾದ ಬದಲಾವಣೆಗಳನ್ನೂ ಖರ್ಗೆ ಟೀಕಿಸಿದ್ದಾರೆ. ಯುವ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುವ ರೀತಿಯಲ್ಲಿ ನಿಯಮಗಳನ್ನು ಬದಲಾಯಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, ಮತದಾನದ ವಯಸ್ಸನ್ನು 21 ರಿಂದ 18ಕ್ಕೆ ಇಳಿಸಿದ 1988ರ ರಾಜೀವ್ ಗಾಂಧಿ ಸರ್ಕಾರದ ನಿರ್ಧಾರದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಕ್ರಮವನ್ನು ಅವರು ಹೋಲಿಸಿ ಪ್ರಸ್ತಾಪಿಸಿದ್ದಾರೆ.

“ಅವರು ಉದ್ಯೋಗ ನೀಡಿಲ್ಲ, ಈಗ ಮತದಾನದ ಹಕ್ಕನ್ನೂ ನೀಡಲು ಬಯಸುತ್ತಿಲ್ಲ” ಎಂದು ಹೇಳಿದ ಖರ್ಗೆ, ಸರ್ಕಾರ ಯುವಜನರ ಪ್ರಶ್ನೆಗಳಿಗೆ ಹೆದರುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಮಹದೇವಪುರ, ಕಲಬುರಗಿಯ ಆಳಂದ ಹಾಗೂ ಹರಿಯಾಣ ಮತ್ತು ಮಹಾರಾಷ್ಟ್ರದ ಕ್ಷೇತ್ರಗಳಲ್ಲಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಎತ್ತಿದ ರಾಹುಲ್ ಗಾಂಧಿ ಅವರನ್ನು ಖರ್ಗೆ ಅಭಿನಂದಿಸಿದ್ದಾರೆ. ನಕಲಿ ಮತದಾರರು, ಅನುಮಾನಾಸ್ಪದ ವಿಳಾಸಗಳು, ಒಂದೇ ವಿಳಾಸದಲ್ಲಿ ಅನೇಕ ಮತದಾರರ ನೋಂದಣಿ ಮತ್ತು ‘ಫಾರ್ಮ್ 6’ಕ್ಕೆ ಸಂಬಂಧಿಸಿದ ನಮೂದುಗಳ ಕುರಿತಾದ ಆರೋಪಗಳನ್ನು ಅವರು ಪ್ರಸ್ತಾಪಿಸಿದ್ದು, ಈ ವಿಷಯಗಳ ಬಗ್ಗೆ ಚುನಾವಣಾ ಆಯೋಗವು ಕ್ರಮ ಕೈಗೊಳ್ಳಬೇಕಿತ್ತು. ಚುನಾವಣಾ ಆಯೋಗ ಆ ನಿಟ್ಟಿನಲ್ಲಿ ಸ್ವಲ್ಪವೇ ಗಂಭೀರತೆಯನ್ನು ತೋರಿದ್ದರೂ, ಇಂದು ಅದು ಇಂತಹ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿಲುಕುತ್ತಿರಲಿಲ್ಲ ಮತ್ತು ಅದರ ವಿಶ್ವಾಸಾರ್ಹತೆಯೂ ಉಳಿದುಕೊಳ್ಳುತ್ತಿತ್ತು ಎಂದಿದ್ದಾರೆ.

ರಾಹುಲ್ ಗಾಂಧಿ ಪ್ರಚಾರದ ನಂತರ ಬ್ಲಾಕ್, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪ್ರತಿಭಟನೆಗಳನ್ನು ಆಯೋಜಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಖರ್ಗೆ ಶ್ಲಾಘಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ವರದಿಯಾದ ಬಳಿಕ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸುತ್ತಿದೆ. ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಎತ್ತಿರುವ ಕಾರ್ಯಾಚರಣೆಯ ಪ್ರಶ್ನೆಗಳು ಸಾಮಾನ್ಯ ಸಾಂಸ್ಥಿಕ ಚರ್ಚೆಗಳ ಭಾಗವಾಗಿದ್ದವು ಮತ್ತು ಅದರ ಆದೇಶಗಳು ಸ್ಥಾಪಿತ ಕಾರ್ಯವಿಧಾನಗಳನ್ನು ಅನುಸರಿಸುತ್ತವೆ ಎಂದು ಚುನಾವಣಾ ಆಯೋಗ ಸಮಜಾಯಿಸಿ ನೀಡಿದೆ.

ಎಸ್‌ಐಆರ್ ಹಿಂದಿನ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಖರ್ಗೆ ಪ್ರಶ್ನಿಸಿದ್ದು, ಈ ಪ್ರಕ್ರಿಯೆಗೆ ಯಾರು ಅನುಮೋದನೆ ನೀಡಿದರು ಮತ್ತು ಇಬ್ಬರು ಚುನಾವಣಾ ಆಯುಕ್ತರನ್ನು ಆಂತರಿಕ ಪೋರ್ಟಲ್‌ನಿಂದ ಏಕೆ ಹೊರಗಿಡಲಾಗಿದೆ ಎಂಬುದರ ಕುರಿತು ಸ್ಪಷ್ಟೀಕರಣವನ್ನು ಪಡೆಯುವುದು ತಪ್ಪೇ ಎಂದು ಕೇಳಿದ್ದಾರೆ.

ಐದು ಬೇಡಿಕೆಗಳನ್ನು ಮುಂದಿಟ್ಟ ಕಾಂಗ್ರೆಸ್

  1. ಮತದಾರರ ಪಟ್ಟಿಗಳಲ್ಲಿನ ಪ್ರಮುಖ ಬದಲಾವಣೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕಗೊಳಿಸಬೇಕು.
  2. ಯಾವ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆಯೋ, ಅವರಿಗೆ ಸಂಪೂರ್ಣ ಮಾಹಿತಿ ಹಾಗೂ ಮೇಲ್ಮನವಿ ಸಲ್ಲಿಸಲು ಪೂರ್ಣ ಅವಕಾಶ ಸಿಗಬೇಕು.
  3. ರಾಜಕೀಯ ಪಕ್ಷಗಳು ಮತದಾರರ ಪಟ್ಟಿಗಳು ಮತ್ತು ಅದಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ಸರಳ ಸ್ವರೂಪದಲ್ಲಿ ಹಾಗೂ ಸಕಾಲದಲ್ಲಿ ಪಡೆಯಬೇಕು.
  4. ಗಂಭೀರ ವ್ಯತ್ಯಾಸಗಳ ಬಗ್ಗೆ ನಿಗದಿತ ಕಾಲಮಿತಿಯೊಳಗೆ ಸ್ವತಂತ್ರವಾಗಿ ತನಿಖೆ ನಡೆಸಬೇಕು.
  5. ಚುನಾವಣೆಗೆ ಸಂಬಂಧಿಸಿದ ದತ್ತಾಂಶ ಮತ್ತು ನಿರ್ಧಾರಗಳು ಪಾರದರ್ಶಕವಾಗಿರಬೇಕು; ಆಗ ಮಾತ್ರ ಯಾವುದೇ ರಾಜಕೀಯ ಪಕ್ಷವು ಮಾಹಿತಿಯನ್ನು ಮುಚ್ಚಿಡಲಾಗುತ್ತಿದೆ ಎಂದು ಆರೋಪಿಸಲು ಸಾಧ್ಯವಾಗುವುದಿಲ್ಲ.

“ಭಾರತದ ಮತದಾರರಿಗೆ ತಮ್ಮ ಮತ ಸುರಕ್ಷಿತವಾಗಿದೆ ಎಂಬ ವಿಶ್ವಾಸವಿರಬೇಕು ಎಂಬುದು ಅತ್ಯಂತ ಮುಖ್ಯವಾದ ವಿಷಯ” ಎಂದು ಖರ್ಗೆ ಹೇಳಿದ್ದಾರೆ. ಸರ್ಕಾರಗಳು ಬದಲಾಗಬಹುದು, ಆದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಶಾಶ್ವತವಾದವು ಎಂದು ಪ್ರತಿಪಾದಿಸಿದ ಅವರು, ಈ ವಿಷಯವನ್ನು ಕೇವಲ ಚುನಾವಣೆಗಳಲ್ಲಿ ಗೆಲುವು-ಸೋಲಿನ ಸ್ಪರ್ಧೆಯಾಗಿ ಕಾಂಗ್ರೆಸ್ ನೋಡಿಲ್ಲ ಎಂದಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಸ್ವತಂತ್ರ ಸಂಸ್ಥೆಗಳನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿವೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳೆರಡರ ವಿಶ್ವಾಸವನ್ನು ಗಳಿಸುವಷ್ಟು ಬಲವಾದ ಚುನಾವಣಾ ಆಯೋಗವಿರಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದು ಹೇಳಿದ್ದಾರೆ.

ಇಬ್ಬರು ಚುನಾವಣಾ ಆಯುಕ್ತರೇ ಮುಖ್ಯ ಚುನಾವಣಾ ಆಯುಕ್ತರ ಕ್ರಮಗಳನ್ನು ಏಕಪಕ್ಷೀಯ ಮತ್ತು ಅನ್ಯಾಯಯುತ ಎಂದು ಬಣ್ಣಿಸಿದ್ದಾರೆ. ಹಾಗಾಗಿ, ಅದಕ್ಕೆ ಕಾರಣರಾದವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರು ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಡದ ಮೇರೆಗೆ ವರ್ತಿಸಿದ್ದಾರೆ ಎಂದು ಆರೋಪಿಸಿದ ಖರ್ಗೆ, ‘ನೈತಿಕ ಆಧಾರದ ಮೇಲೆ’ ಪ್ರಧಾನಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ‘ಇಸಿಐನೆಟ್’ ಸಾಫ್ಟ್‌ವೇರ್ ಲೋಪ: ಸ್ಥಳೀಯ ಅಧಿಕಾರಿಗಳ ಶಾಸನಬದ್ಧ ಅಧಿಕಾರ ಹರಣ ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಮಹಾರಾಷ್ಟ್ರ ಸಿಇಒ ಸುದೀರ್ಘ ಪತ್ರ!

    ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಜಾರಿಗೆ ತಂದಿರುವ 'ಇಸಿಐನೆಟ್' (ECINet) ಕೇಂದ್ರೀಕೃತ ಸಾಫ್ಟ್‌ವೇರ್, ಕಾನೂನುಬದ್ಧವಾಗಿ ಸ್ಥಳೀಯ ಮತದಾರ ನೋಂದಣಿ ಅಧಿಕಾರಿಗಳಿಗೆ (ERO) ನೀಡಲಾಗಿರುವ ಶಾಸನಬದ್ಧ ಅಧಿಕಾರಗಳನ್ನು ಕಸಿಯುತ್ತಿದೆ ಎಂಬ ಗಂಭೀರ ಆರೋಪ ಎದುರಾಗಿದೆ....

    ಸಂಭಾಲ್ ಹಿಂಸಾಚಾರ ಪ್ರಕರಣ: ಮುಸ್ಲಿಂ ವ್ಯಕ್ತಿಯ NSA ಬಂಧನ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಯುಪಿ ಸರ್ಕಾರಕ್ಕೆ ₹10 ಲಕ್ಷ ದಂಡ

    ನವದೆಹಲಿ: ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಲ್ಲಾ ಅಫ್ರೋಜ್ ಎಂಬುವರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿ ತಡೆಗಟ್ಟುವ...

    ಸಂಭಾಲ್ ಹಿಂಸಾಚಾರ | ಮುಲ್ಲಾ ಅಫ್ರೋಝ್ ಎನ್‌ಎಸ್‌ಎ ಬಂಧನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ; ಯುಪಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ

    2024ರ ಸಂಭಾಲ್ ಹಿಂಸಾಚಾರದ ರೂವಾರಿ ಎಂದು ಆರೋಪಿಸಲಾದ ಮುಲ್ಲಾ ಅಫ್ರೋಝ್ ಅವರನ್ನು 'ರಾಷ್ಟ್ರೀಯ ಭದ್ರತಾ ಕಾಯ್ದೆ, 1980'ರ ಅಡಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 29) ರದ್ದುಗೊಳಿಸಿದೆ....

    ಔಷಧ ಬೆಲೆಗಳ ಹೆಸರಲ್ಲಿ ನಡೆಯುತ್ತಿದೆ ಲೂಟಿ: ಆಸ್ಪತ್ರೆ-ಮೆಡಿಕಲ್‌ಗಳ ವಿರುದ್ಧ ಸುಪ್ರೀಂ ಕೋರ್ಟ್ ಗರಂ

    ದೇಶದಲ್ಲಿ ಗರಿಷ್ಠ ಚಿಲ್ಲರೆ ಬೆಲೆ (MRP) ಹೆಸರಿನಲ್ಲಿ ಔಷಧಗಳ ಬೆಲೆಯನ್ನು ಮನಬಂದಂತೆ ಹೆಚ್ಚಿಸಿ ಸಾಮಾನ್ಯ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದನ್ನು ಸುಪ್ರೀಂ ಕೋರ್ಟ್ 'ಅಮಾನವೀಯ ಲೂಟಿ' ಎಂದು ತೀವ್ರವಾಗಿ ಖಂಡಿಸಿದೆ. ಔಷಧಗಳ ನೈಜ ಖರೀದಿ...

    ಬಂಗಾಳ ಎಸ್‌ಐಆರ್‌ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ನಕಾರ; ‘ಇವು ಕೇವಲ ಉಪಚುನಾವಣೆಗಳು’ ಎಂದ ಸಿಜೆಐ ಸೂರ್ಯಕಾಂತ್ ವಿರುದ್ಧ ಜನಾಕ್ರೋಶ

    ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೊರಗಿಡಲಾದ ಮತದಾರರಿಗೆ ಸಂಬಂಧಿಸಿದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಅರ್ಜಿದಾರರು ಅಕ್ಟೋಬರ್...

    ಸಿಇಸಿ ಗ್ಯಾನೇಶ್ ಕುಮಾರ್ ಅಮಾನತು ಕೋರಿದ ಅರ್ಜಿ: ಶೀಘ್ರ ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್!

    ಭಾರತೀಯ ಚುನಾವಣಾ ಆಯೋಗದ ಸಾಂವಿಧಾನಿಕ ಅಧಿಕಾರಗಳನ್ನು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಅವರನ್ನು ಹುದ್ದೆಯಿಂದ ಮಧ್ಯಂತರ ಅಮಾನತುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು...

    ಮತದಾರರ ಹಕ್ಕು ಕಸಿಯುತ್ತಿರುವ SIR: ಸೆ.30 ರಂದು ‘SIR ಪರಿಶೋಧನಾ’ ವರದಿ ಬಿಡುಗಡೆ

    ಕೇಂದ್ರ ಚುನಾವಣಾ ಆಯೋಗವು ಜಾರಿಗೆ ತಂದಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಬಡ ಹಾಗೂ ಅರ್ಹ ಮತದಾರರ ಹೆಸರುಗಳು ತಾಂತ್ರಿಕ ಕಾರಣ ನೀಡಿ ಪಟ್ಟಿಯಿಂದ ಡಿಲೀಟ್ ಆಗುತ್ತಿದ್ದು, ನಾಗರಿಕರ ಮೂಲಭೂತ...

    ಮತದಾರರ ಹಕ್ಕು ಕಸಿಯುತ್ತಿರುವ SIR: ಸೆ.30 ರಂದು ಸರ್ಕಾರಕ್ಕೆ ‘ಪರಿಶೋಧನೆ ಹಾಗೂ ಪ್ರತಿರೋಧ ಜಾಥಾ’ ವರದಿ ಸಲ್ಲಿಕೆ

    ಕೇಂದ್ರ ಚುನಾವಣಾ ಆಯೋಗವು ಜಾರಿಗೆ ತಂದಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಬಡ ಹಾಗೂ ಅರ್ಹ ಮತದಾರರ ಹೆಸರುಗಳು ತಾಂತ್ರಿಕ ಕಾರಣಗಳನ್ನು ನೀಡಿ ಪಟ್ಟಿಯಿಂದ ಡಿಲೀಟ್ ಆಗುತ್ತಿದ್ದು, ನಾಗರಿಕರ ಮೂಲಭೂತ...

    ಕರ್ನಾಟಕದಲ್ಲಿ ಇಂದಿನಿಂದ ಎಸ್‌ಐಆರ್ ‘ಕಚೇರಿ ವಿಚಾರಣೆ’ ಸ್ಥಗಿತ: ಚುನಾವಣಾ ಆಯೋಗದಿಂದ ಹೊಸ ಮಾರ್ಗದರ್ಶಿ!

    ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ಮತದಾರರು ಚುನಾವಣಾ ಕಚೇರಿಗಳಿಗೆ ನೇರವಾಗಿ ಹಾಜರಾಗುವ 'ಕಚೇರಿ ವಿಚಾರಣೆ' (Physical Hearing) ವ್ಯವಸ್ಥೆಯನ್ನು ಕರ್ನಾಟಕದ...

    ಸಂವಿಧಾನ ಇಲ್ಲಿನ ಬಡವರ ಮನೆಗೆ ತಲುಪಿಲ್ಲ : ಕೆ. ಮೊಣ್ಣಪ್ಪ

    "ಶೋಷಿತ ಸಮುದಾಯದಲ್ಲಿ ಹುಟ್ಟಿದ ನನ್ನ ತಂದೆಗೆ 12 ಜನ ಮಕ್ಕಳು. ಐದು ತಲೆಮಾರು ಬದಲಾದರೂ..ಸ್ವಾತಂತ್ರ್ಯ ಬಂದು 80 ವರ್ಷ ಕಳೆದರೂ ಇಂದಿಗೂ ನಮ್ಮ ಜನರಿಗೆ ನೆಲೆ ಸಿಕ್ಕಿಲ್ಲ. ಭೂಮಾಲೀಕರು ಹೇಳಿದಂತೆ ಕೇಳಿದರೆ ಮಾತ್ರ...