Homeಮುಖಪುಟಸಂಭಾಲ್ ಹಿಂಸಾಚಾರ | ಮುಲ್ಲಾ ಅಫ್ರೋಝ್ ಎನ್‌ಎಸ್‌ಎ ಬಂಧನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ; ಯುಪಿ...

ಸಂಭಾಲ್ ಹಿಂಸಾಚಾರ | ಮುಲ್ಲಾ ಅಫ್ರೋಝ್ ಎನ್‌ಎಸ್‌ಎ ಬಂಧನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ; ಯುಪಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ

- Advertisement -
- Advertisement -

2024ರ ಸಂಭಾಲ್ ಹಿಂಸಾಚಾರದ ರೂವಾರಿ ಎಂದು ಆರೋಪಿಸಲಾದ ಮುಲ್ಲಾ ಅಫ್ರೋಝ್ ಅವರನ್ನು ‘ರಾಷ್ಟ್ರೀಯ ಭದ್ರತಾ ಕಾಯ್ದೆ, 1980’ರ ಅಡಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 29) ರದ್ದುಗೊಳಿಸಿದೆ. ಈ ಬಂಧನ ಆದೇಶವನ್ನು ಎತ್ತಿಹಿಡಿದಿದ್ದ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಶೀಲ್ ನಾಗು ಅವರನ್ನೊಳಗೊಂಡ ಪೀಠವು, ಪೊಲೀಸ್ ವಶದಲ್ಲಿದ್ದಾಗ ಅಫ್ರೋಝ್ ನೀಡಿದ್ದಾರೆನ್ನಲಾದ ತಪ್ಪೊಪ್ಪಿಗೆಯ ಆಧಾರದ ಮೇಲೆ ಉತ್ತರ ಪ್ರದೇಶ ಸರ್ಕಾರವು ಮುನ್ನೆಚ್ಚರಿಕಾ ಬಂಧನ ಆದೇಶವನ್ನು ಹೊರಡಿಸಲು ಸಾಧ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಕಾನೂನುಬಾಹಿರ ಮುನ್ನೆಚ್ಚರಿಕಾ ಬಂಧನ ಆದೇಶ ಹೊರಡಿಸಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ 10 ಲಕ್ಷ ರೂಪಾಯಿಗಳ ದಂಡವನ್ನು ವಿಧಿಸಿದೆ.

ಆದೇಶವನ್ನು ಪ್ರಕಟಿಸುವಾಗ, ನ್ಯಾಯಮೂರ್ತಿ ದತ್ತಾ ಅವರು ತನ್ನ 27ನೇ ಹುಟ್ಟುಹಬ್ಬಕ್ಕೂ ಮುನ್ನವೇ ನಿಧನರಾದ ತಮ್ಮ ಕಾನೂನು ಸಹಾಯಕಗೆ (ಲಾ ಕ್ಲರ್ಕ್) ಗೌರವ ನಮನ ಸಲ್ಲಿಸಿದರು ಹಾಗೂ ಈ ತೀರ್ಪನ್ನು ಅವರಿಗೆ ಅರ್ಪಿಸಿದ್ದಾರೆ.

ಸೆಪ್ಟೆಂಬರ್ 8ರಂದು ಆದೇಶವನ್ನು ಕಾಯ್ದಿರಿಸುವಾಗ, ನ್ಯಾಯಪೀಠವು ಕಸ್ಟಡಿಯಲ್ಲಿ ಪಡೆದಿದ್ದಾರೆ ಎನ್ನಲಾದ ತಪ್ಪೊಪ್ಪಿಗೆಯ ಪ್ರಸ್ತುತತೆ ಮತ್ತು ಮೌಲ್ಯವನ್ನು ಪ್ರಶ್ನಿಸಿತ್ತು. ಅಲ್ಲದೆ, ಇಂತಹ ತಪ್ಪೊಪ್ಪಿಗೆಯು ಮುಂಜಾಗ್ರತಾ ಬಂಧನ ಆದೇಶವನ್ನು ಹೊರಡಿಸಲು ಅಗತ್ಯವಿರುವ ‘ವೈಯಕ್ತಿಕ ತೃಪ್ತಿ’ಗೆ (subjective satisfaction) ಆಧಾರವಾಗಬಲ್ಲದೇ ಎಂದು ಪ್ರಶ್ನಿಸಿತ್ತು ಎಂಬುದು ಇಲ್ಲಿ ಗಮನಾರ್ಹ.

ಶಾಹಿ ಜಾಮಾ ಮಸೀದಿಯ ನ್ಯಾಯಾಲಯದ ಆದೇಶದ ಮೇರೆಗಿನ ಸಮೀಕ್ಷೆಯ ನಂತರ ಸಂಭವಿಸಿದ ಮತ್ತು ನಾಲ್ವರು ಮೃತಪಡಲು ಕಾರಣವಾದ ಸಂಭಾಲ್ ಹಿಂಸಾಚಾರ ಪ್ರಕರಣದಲ್ಲಿ, ಅರ್ಜಿದಾರ ಮುಲ್ಲಾ ಅಫ್ರೋಝ್ ಆರೋಪಿಯಾಗಿದ್ದಾರೆ. ಘಟನೆ ನಡೆದ ಸುಮಾರು 54 ದಿನಗಳ ನಂತರ, ಪೊಲೀಸ್ ವಶದಲ್ಲಿದ್ದಾಗ ನೀಡಿದ ಹೇಳಿಕೆಯ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗಿದೆ.

ಅಲಹಾಬಾದ್ ಹೈಕೋರ್ಟ್ ನಂತರ ಅವರಿಗೆ ಜಾಮೀನು ನೀಡಿದ್ದರೂ, ಅಕ್ಟೋಬರ್ 13, 2025ರಂದು ಎನ್‌ಎಸ್‌ಎ ಅಡಿಯಲ್ಲಿ ಅವರ ವಿರುದ್ಧ ಬಂಧನ ಆದೇಶವನ್ನು ಹೊರಡಿಸಲಾಗಿತ್ತು. ಈ ಬಂಧನ ಆದೇಶವನ್ನು ಹೈಕೋರ್ಟ್ ನಂತರ ಎತ್ತಿಹಿಡಿದಿದ್ದರಿಂದ, ಅರ್ಜಿದಾರರು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು. ಹಿಂಸಾಚಾರದ ಸಂದರ್ಭದಲ್ಲಿ ಪೊಲೀಸರೇ ಸ್ವತಃ ಗುಂಡಿನ ದಾಳಿ ನಡೆಸಿದ್ದರು ಮತ್ತು ಈ ಅಂಶದ ಬಗ್ಗೆ ನ್ಯಾಯಯುತ ತನಿಖೆ ನಡೆದಿಲ್ಲ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ಈ ಸಂಬಂಧ ಪ್ರತಿಭಟನಾ ಅರ್ಜಿಯನ್ನು (protest petition) ಸಲ್ಲಿಸಲು ಅವರು ಅವಕಾಶ ಕೋರಿದ್ದರು.

ಪೊಲೀಸ್ ವಶದಲ್ಲಿದ್ದಾಗ ನೀಡಿದ ತಪ್ಪೊಪ್ಪಿಗೆಯ ಆಧಾರದ ಮೇಲೆ ತನ್ನನ್ನು ಬಂಧಿಸಲಾಗಿದೆ ಮತ್ತು ಅಂತಹ ಹೇಳಿಕೆಯು ಕಾನೂನುಬದ್ಧವಾಗಿ ಮಾನ್ಯವಲ್ಲ ಎಂದು ಅರ್ಜಿದಾರ ವಾದಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸುವ ವಿಷಯಕ್ಕೆ ಸಂಬಂಧಿಸಿದಂತೆ, ಕೇವಲ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಮಾತ್ರವೇ ಬಂಧನವನ್ನು ಸಮರ್ಥಿಸುವುದಿಲ್ಲ; ಬದಲಾಗಿ, ಸಾಕಷ್ಟು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪ್ರಾಮಾಣಿಕ ಹಾಗೂ ಸೂಕ್ತ ಮಾಹಿತಿಯುಳ್ಳ ವ್ಯಕ್ತಿನಿಷ್ಠ ತೃಪ್ತಿ (subjective satisfaction) ಅತ್ಯಗತ್ಯ ಎಂದು ಅವರು ಪ್ರತಿಪಾದಿಸಿದ್ದರು. ಬಂಧಿತ ವ್ಯಕ್ತಿಯು ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗಬಹುದು ಎಂಬ ಕೇವಲ ಸಂಭವನೀಯತೆಯು, ಅದಕ್ಕೆ ಪೂರಕವಾದ ಬಲವಾದ ಸಾಕ್ಷ್ಯಾಧಾರಗಳಿಲ್ಲದಿದ್ದಾಗ ಮುನ್ನೆಚ್ಚರಿಕೆ ಬಂಧನಕ್ಕೆ ಮಾನ್ಯವಾದ ಆಧಾರವಾಗಲಾರದು ಎಂದು ವಾದಿಸಲು ‘ರೇಖಾ V/s ತಮಿಳುನಾಡು ರಾಜ್ಯ’ ಮತ್ತು ‘ಅಮೀನಾ ಬೇಗಂ V/s ತೆಲಂಗಾಣ ರಾಜ್ಯ’ ಪ್ರಕರಣಗಳ ತೀರ್ಪುಗಳನ್ನು ಉಲ್ಲೇಖಿಸಲಾಗಿತ್ತು.

ಬಂಧನ ಆದೇಶವನ್ನು ಸಮರ್ಥಿಸಿಕೊಳ್ಳುತ್ತಾ, ಅರ್ಜಿದಾರರು ಹಿಂಸಾಚಾರವನ್ನು ಉಂಟುಮಾಡುವ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಯನ್ನು ರಾಜ್ಯವು ಪ್ರಸ್ತಾಪಿಸಿತ್ತು. ಲಭ್ಯವಿರುವ ಸಾಕ್ಷ್ಯಾಧಾರಗಳು ಅಂತಹ ಸಾಧ್ಯತೆಯನ್ನು ಸೂಚಿಸಿದರೆ, ಅದು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸುವುದನ್ನು ಸಮರ್ಥಿಸಲು ಸಾಕಾಗುತ್ತದೆ ಎಂದು ವಾದಿಸಲಾಗಿತ್ತು. ವಶದಲ್ಲಿದ್ದಾಗ ನೀಡಿದ ತಪ್ಪೊಪ್ಪಿಗೆಯ ಕುರಿತಂತೆ, ಆ ತಪ್ಪೊಪ್ಪಿಗೆಯು ಪ್ರಸ್ತುತವೇ ಅಥವಾ ಅಪ್ರಸ್ತುತವೇ ಎಂಬುದು ಸೂಕ್ತ ಕಾನೂನು ಪ್ರಕ್ರಿಯೆಗಳಲ್ಲಿ ಪರಿಗಣಿಸಬೇಕಾದ ವಿಷಯವಾಗಿದೆ ಎಂದು ವಾದ ಮಂಡಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನಿರ್ಧಾರಗಳ ಕುರಿತು 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಇಂಡಿಯಾ ಒಕ್ಕೂಟ ಅರ್ಜಿ : ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ 'ಇಂಡಿಯಾ' ಒಕ್ಕೂಟದ ನಾಯಕರು, ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್...

ಖುಲಾಸೆಗೊಂಡರೂ 7 ವರ್ಷ ಜೈಲಿನಲ್ಲಿದ್ದ ವ್ಯಕ್ತಿಗೆ ₹30 ಲಕ್ಷ ಪರಿಹಾರ ಘೋಷಿಸಿದ ಸುಪ್ರೀಂ ಕೋರ್ಟ್; ಅಕ್ರಮ ಬಂಧನಕ್ಕೆ ಪರಿಹಾರ ನೀಡಲು ಕಾನೂನು ರಚಿಸುವಂತೆ ಶಿಫಾರಸು

ಖುಲಾಸೆ ಆದೇಶದ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ತಲುಪಿಸುವಲ್ಲಿ ಉಂಟಾದ ಸಂವಹನದ ಕೊರತೆಯಿಂದಾಗಿ, ನಿರ್ದೋಷಿ ಎಂದು ಸಾಬೀತಾದ ನಂತರವೂ ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲೇ ಕಳೆದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್...

SIR ನಿರ್ಧಾರಗಳಿಗೆ ಮೂವರು ಆಯುಕ್ತರ ಸರ್ವಾನುಮತದ ಒಪ್ಪಿಗೆ ಇತ್ತು ಎಂಬುದಕ್ಕೆ ಚುನಾವಣಾ ಆಯೋಗ ದಾಖಲೆ ಸಲ್ಲಿಸಿಲ್ಲ : ಸುಪ್ರೀಂ ಕೋರ್ಟ್‌ಗೆ ಅರ್ಜಿದಾರರ ಹೇಳಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕಾರ್ಯನಿರ್ವಹಣೆಯನ್ನು ಪ್ರಶ್ನಿಸಿರುವ ಅರ್ಜಿದಾರರು ಸುಪ್ರೀಂ ಕೋರ್ಟ್ ಮುಂದೆ ತಮ್ಮ ವಾದವನ್ನು ಮಂಡಿಸಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ ಭಾರತೀಯ ಚುನಾವಣಾ...

‘ನೋವು, ಆಘಾತ, ಅಪನಂಬಿಕೆಯಲ್ಲಿದ್ದೇನೆ’: ಇಬ್ಬರು ಅತ್ಯಾಚಾರ ಅಪರಾಧಿಗಳ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಆದೇಶದ ಕುರಿತು ಬಿಲ್ಕಿಸ್ ಬಾನು ಪ್ರತಿಕ್ರಿಯೆ

ಗುಜರಾತ್ ಗಲಭೆಯ ಸಂದರ್ಭದಲ್ಲಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ತಮ್ಮ ಕುಟುಂಬ ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳ ಪೈಕಿ ಇಬ್ಬರ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವುದು ತನಗೆ...

ಕಿಶ್ತ್ವಾರ್ ಪೊಲೀಸರ ಹತ್ಯೆ : ‘ಮಸೀದಿ ಘೋಷಣೆ’ ಕುರಿತ ಬಿಜೆಪಿ ಶಾಸಕಿಯ ಹೇಳಿಕೆಗೆ ಆಕ್ರೋಶ; ತನಿಖೆಗೆ ಕಾಂಗ್ರೆಸ್ ಆಗ್ರಹ

ಕಿಶ್ತ್ವಾರ್‌ನಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ (ಎಸ್‌ಪಿಒ) ಹತ್ಯೆಯ ಕುರಿತು ಹಲವು ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ಈ ಘಟನೆಯನ್ನು ಮಸೀದಿ ಘೋಷಣೆಗಳೊಂದಿಗೆ ತಳುಕು ಹಾಕುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಯತ್ನಕ್ಕೆ ಸ್ಥಳೀಯ...

SIR ವಿವಾದ: ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಸುಪ್ರೀಂ ಕೋರ್ಟ್ ಅನುಮತಿ ಕೋರಿದ ರಾಹುಲ್ ಗಾಂಧಿ!

ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಏಕಪಕ್ಷೀಯ ನಿರ್ಧಾರಗಳು ಮತ್ತು ಬೃಹತ್ ಪ್ರಮಾಣದ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಿರುವ ಆರೋಪಗಳಿಗೆ ಸಂಬಂಧಿಸಿದಂತೆ, ಭಾರತೀಯ ಚುನಾವಣಾ...

ಶಾಲಾ ಮಕ್ಕಳ ಮುಂದೆ ರಾಜಕೀಯ ದ್ವೇಷ ಭಾಷಣ | ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ : ಸಚಿವ ಮಧು ಬಂಗಾರಪ್ಪ

ಶಾಲಾ ಮಕ್ಕಳ ಮುಂದೆ ರಾಜಕೀಯ ದ್ವೇಷ ಭಾಷಣ ಮಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...

ಬಿಲ್ಕಿಸ್ ಬಾನು ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್

2002ರ ಗುಜರಾತ್ ಕೋಮುಗಲಭೆಯ ಸಂದರ್ಭದಲ್ಲಿ ನಡೆದಿದ್ದ ಭೀಕರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿ ಅವರಿಗೆ ಜಾಮೀನು ಮಂಜೂರು...

‘ನೀವು ಆ ಕುರ್ಚಿಯಲ್ಲಿ ಕೂರಲು ಅರ್ಹರಲ್ಲ, ನಿಮಗೆ ಸಮಗ್ರತೆ ಇಲ್ಲ’: ಸುಪ್ರೀಂ ಕೋರ್ಟ್‌ನಲ್ಲಿ ಸಿಜೆಐ ಸೂರ್ಯ ಕಾಂತ್ ವಿರುದ್ಧ ವಕೀಲರ ಆಕ್ರೋಶ; ಲೈವ್ ಪ್ರಸಾರ ಮ್ಯೂಟ್!

ನವದೆಹಲಿ: ಭಾರತೀಯ ನ್ಯಾಯಾಂಗದ ಇತ್ತೀಚಿನ ಇತಿಹಾಸದಲ್ಲೇ ಅತ್ಯಂತ ಅಪರೂಪದ ಮತ್ತು ತೀವ್ರ ಘರ್ಷಣೆಯೊಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುಂದೆ ವಾದ ಮಂಡಿಸಲು...

ಜಾರ್ಖಂಡ್‌ | ಕಲ್ಲಿದ್ದಲು ಗಣಿ ವಿಸ್ತರಣೆಗೆ ಕೇಂದ್ರ ಅನುಮತಿ : 6 ಲಕ್ಷ ಮರಗಳ ಮಾರಣಹೋಮ, ಆನೆಗಳ ಆವಾಸಸ್ಥಾನ ನಾಶಕ್ಕೆ ಕಾರಣವಾಗಲಿರುವ ಯೋಜನೆ!

ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿನ ಓಪನ್‌ಕಾಸ್ಟ್ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯ ವಿಸ್ತರಣೆಗಾಗಿ 928.03 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಿಕೊಳ್ಳುವ (ವರ್ಗಾಯಿಸುವ) ಯೋಜನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿರುವ ಅರಣ್ಯ...