HomeಮುಖಪುಟCWC ಸಭೆಯಲ್ಲಿ ನಿತೀಶ್ ಕುಮಾರ್ ವಿಚಾರ ಪ್ರಸ್ತಾಪ: ಸೋನಿಯಾ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ನಡುವೆ...

CWC ಸಭೆಯಲ್ಲಿ ನಿತೀಶ್ ಕುಮಾರ್ ವಿಚಾರ ಪ್ರಸ್ತಾಪ: ಸೋನಿಯಾ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ನಡುವೆ ಭಿನ್ನಾಭಿಪ್ರಾಯ

- Advertisement -
- Advertisement -

ಜೆಡಿಯು ನಾಯಕ ನಿತೀಶ್ ಕುಮಾರ್ 2024ರಲ್ಲಿ ‘ಇಂಡಿಯಾ’ (INDIA) ಮೈತ್ರಿಕೂಟದಿಂದ ಹೊರಬಂದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಂತರಿಕ ಸಭೆಯಲ್ಲಿ ನಾಯಕರ ನಡುವೆ ಗಂಭೀರ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ನಡುವೆ ಈ ವಿಚಾರವಾಗಿ ತೀವ್ರ ವಾಕ್ಸಮರ ನಡೆದಿದೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

CWC ಸಭೆಯಲ್ಲಿ ನಿತೀಶ್ ಕುಮಾರ್ ರಾಜಕೀಯ ಚರ್ಚೆ

ಕಾಂಗ್ರೆಸ್ ಪಕ್ಷದ ಭವಿಷ್ಯದ ರಾಜಕೀಯ ಕಾರ್ಯತಂತ್ರ, ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಕ್ರಮಗಳ ಆರೋಪ ಹಾಗೂ ಕೇಂದ್ರ ಸರ್ಕಾರದ ವಿರುದ್ಧದ ಸಂಘರ್ಷದ ಕುರಿತು ಚರ್ಚಿಸಲು ಸಿಡಬ್ಲ್ಯುಸಿ ಸಭೆ ಕರೆಯಲಾಗಿತ್ತು. ಈ ವೇಳೆ ವಿಷಯ ಪ್ರಸ್ತಾಪಿಸಿದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, “ನಾವು ನಿತೀಶ್ ಕುಮಾರ್ ಅವರನ್ನು ಮೈತ್ರಿಕೂಟದಿಂದ ಹೊರಹೋಗಲು ಬಿಡಬಾರದಿತ್ತು. ಅವರು ನಮ್ಮ ಜೊತೆಯಲ್ಲೇ ಉಳಿದುಕೊಂಡಿದ್ದರೆ ಇಂದಿನ ರಾಜಕೀಯ ಚಿತ್ರಣವೇ ಬೇರೆಯಾಗಿರುತ್ತಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇವರ ದಯೆಯಿಂದ ಸರಿಯಾದ ಸಮಯಕ್ಕೆ ತೊಲಗಿದರು: ಸೋನಿಯಾ

ದಿಗ್ವಿಜಯ್ ಸಿಂಗ್ ಹೇಳಿಕೆಗೆ ತಕ್ಷಣವೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ, “ದೇವರ ದಯೆಯಿಂದ ನಿತೀಶ್ ಕುಮಾರ್ ಸರಿಯಾದ ಸಮಯಕ್ಕೇ ಮೈತ್ರಿಕೂಟದಿಂದ ಹೊರನಡೆದರು. ಅವರು ಮೊದಲಿನಿಂದಲೂ ಬಿಜೆಪಿಯತ್ತಲೇ ಹೋಗಲು ಬಯಸಿದ್ದರು. ಮೈತ್ರಿಕೂಟದಿಂದ ಹೊರಬರಲು ಅವರು ನಿರಂತರವಾಗಿ ಹೊಸ ನೆಪ ಮತ್ತು ಮಾರ್ಗಗಳನ್ನು ಹುಡುಕುತ್ತಿದ್ದರು ಹಾಗೂ ಅವರನ್ನು ಹಿಂದಿನಿಂದ ಬಿಜೆಪಿ ಸಂಪೂರ್ಣವಾಗಿ ನಿಯಂತ್ರಿಸುತ್ತಿತ್ತು” ಎಂದು ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ನಡೆಯಲಿರುವ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ನಾಯಕರ ಸಭೆಗೆ ಮುನ್ನವೇ ಕಾಂಗ್ರೆಸ್‌ನ ಈ ಉನ್ನತ ಮಟ್ಟದ ಸಭೆಯಲ್ಲಿ ನಾಯಕರ ಅಭಿಪ್ರಾಯ ಭೇದಗಳು ಬಹಿರಂಗವಾಗಿವೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಜನವರಿ 2024ರಲ್ಲಿ ಮಹಾಘಟಬಂಧನ್ ಮೈತ್ರಿ ಬಿಟ್ಟು ಹೊರಬಂದಿದ್ದ ನಿತೀಶ್ ಕುಮಾರ್, ಬಿಜೆಪಿ ಬೆಂಬಲದೊಂದಿಗೆ 9ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಅವರ ಮೂರನೇ ಜಾಮೀನು ಅರ್ಜಿಯನ್ನೂ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿತರಾಗಿರುವ ವಿದ್ಯಾರ್ಥಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು...

Mysore| SIR ವಿರುದ್ಧ ಸರ್ಕಾರ ವಿಶೇಷ ಅಧಿವೇಶನ ನಡೆಸಲಿ: ಪ್ರಕಾಶ್ ರಾಜ್

ಕೇಂದ್ರ ಚುನಾವಣಾ ಆಯೋಗವು ಜಾರಿಗೆ ತಂದಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಿಂದಾಗಿ ರಾಜ್ಯದಲ್ಲಿ ಲಕ್ಷಾಂತರ ಬಡ ಹಾಗೂ ಅರ್ಹ ಮತದಾರರ ಹಕ್ಕು ಕಸಿಯಲಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ನಾಗರಿಕ ಸಂಘಟನೆಗಳು ಸಂಗ್ರಹಿಸಿರುವ...

SIR: ‘ಫಾರ್ಮ್ 6’ ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ!

ಹೊಸ ಮತದಾರರ ನೋಂದಣಿಗೆ ಕಾಗದಪತ್ರಗಳ ಅಡೆತಡೆ ಒಡ್ಡುತ್ತಿದ್ದ ತನ್ಮೂಲಕ ಹಕ್ಕು ವಂಚಿತಗೊಳಿಸುತ್ತಿದ್ದ ಆರೋಪ ಎದುರಿಸುತ್ತಿದ್ದ ಕೇಂದ್ರ ಚುನಾವಣಾ ಆಯೋಗವು ಸಾರ್ವಜನಿಕ ಮತ್ತು ಕಾನೂನಾತ್ಮಕ ಒತ್ತಡದ ಹಿನ್ನೆಲೆಯಲ್ಲಿ ಭಾಗಶಃ ಹಿಂದೆ ಸರಿದಿದೆ. 'ವಿಶೇಷ ತೀವ್ರ...

ಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ : ABVPಗೆ ಸೋಲು; ಅಧ್ಯಕ್ಷೆಯಾಗಿ SFIನ ದಿಲ್ಶಾದಾ ರೈಹಾನ್ ಆಯ್ಕೆ

ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA), ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ASA), ದಲಿತ ಸ್ಟೂಡೆಂಟ್ಸ್ ಯೂನಿಯನ್ (DSU), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಮತ್ತು ಟ್ರೈಬಲ್ ಸ್ಟೂಡೆಂಟ್ಸ್ ಫೋರಂ (TSF) ಒಳಗೊಂಡ...

‘ಇಸಿಐನೆಟ್’ ಸಾಫ್ಟ್‌ವೇರ್ ಲೋಪ: ಸ್ಥಳೀಯ ಅಧಿಕಾರಿಗಳ ಶಾಸನಬದ್ಧ ಅಧಿಕಾರ ಹರಣ ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಮಹಾರಾಷ್ಟ್ರ ಸಿಇಒ ಸುದೀರ್ಘ ಪತ್ರ!

ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಜಾರಿಗೆ ತಂದಿರುವ 'ಇಸಿಐನೆಟ್' (ECINet) ಕೇಂದ್ರೀಕೃತ ಸಾಫ್ಟ್‌ವೇರ್, ಕಾನೂನುಬದ್ಧವಾಗಿ ಸ್ಥಳೀಯ ಮತದಾರ ನೋಂದಣಿ ಅಧಿಕಾರಿಗಳಿಗೆ (ERO) ನೀಡಲಾಗಿರುವ ಶಾಸನಬದ್ಧ ಅಧಿಕಾರಗಳನ್ನು ಕಸಿಯುತ್ತಿದೆ ಎಂಬ ಗಂಭೀರ ಆರೋಪ ಎದುರಾಗಿದೆ....

ಸಂಭಾಲ್ ಹಿಂಸಾಚಾರ ಪ್ರಕರಣ: ಮುಸ್ಲಿಂ ವ್ಯಕ್ತಿಯ NSA ಬಂಧನ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಯುಪಿ ಸರ್ಕಾರಕ್ಕೆ ₹10 ಲಕ್ಷ ದಂಡ

ನವದೆಹಲಿ: ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಲ್ಲಾ ಅಫ್ರೋಜ್ ಎಂಬುವರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿ ತಡೆಗಟ್ಟುವ...

ಸಂಭಾಲ್ ಹಿಂಸಾಚಾರ | ಮುಲ್ಲಾ ಅಫ್ರೋಝ್ ಎನ್‌ಎಸ್‌ಎ ಬಂಧನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ; ಯುಪಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ

2024ರ ಸಂಭಾಲ್ ಹಿಂಸಾಚಾರದ ರೂವಾರಿ ಎಂದು ಆರೋಪಿಸಲಾದ ಮುಲ್ಲಾ ಅಫ್ರೋಝ್ ಅವರನ್ನು 'ರಾಷ್ಟ್ರೀಯ ಭದ್ರತಾ ಕಾಯ್ದೆ, 1980'ರ ಅಡಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 29) ರದ್ದುಗೊಳಿಸಿದೆ....

ಔಷಧ ಬೆಲೆಗಳ ಹೆಸರಲ್ಲಿ ನಡೆಯುತ್ತಿದೆ ಲೂಟಿ: ಆಸ್ಪತ್ರೆ-ಮೆಡಿಕಲ್‌ಗಳ ವಿರುದ್ಧ ಸುಪ್ರೀಂ ಕೋರ್ಟ್ ಗರಂ

ದೇಶದಲ್ಲಿ ಗರಿಷ್ಠ ಚಿಲ್ಲರೆ ಬೆಲೆ (MRP) ಹೆಸರಿನಲ್ಲಿ ಔಷಧಗಳ ಬೆಲೆಯನ್ನು ಮನಬಂದಂತೆ ಹೆಚ್ಚಿಸಿ ಸಾಮಾನ್ಯ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದನ್ನು ಸುಪ್ರೀಂ ಕೋರ್ಟ್ 'ಅಮಾನವೀಯ ಲೂಟಿ' ಎಂದು ತೀವ್ರವಾಗಿ ಖಂಡಿಸಿದೆ. ಔಷಧಗಳ ನೈಜ ಖರೀದಿ...

ಬಂಗಾಳ ಎಸ್‌ಐಆರ್‌ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ನಕಾರ; ‘ಇವು ಕೇವಲ ಉಪಚುನಾವಣೆಗಳು’ ಎಂದ ಸಿಜೆಐ ಸೂರ್ಯಕಾಂತ್ ವಿರುದ್ಧ ಜನಾಕ್ರೋಶ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೊರಗಿಡಲಾದ ಮತದಾರರಿಗೆ ಸಂಬಂಧಿಸಿದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಅರ್ಜಿದಾರರು ಅಕ್ಟೋಬರ್...

CWC Meeting : ಮೋದಿ, ಗ್ಯಾನೇಶ್ ಕುಮಾರ್ ರಾಜೀನಾಮೆ ಸೇರಿದಂತೆ 5 ಬೇಡಿಕೆಗಳನ್ನು ಮುಂದಿಟ್ಟ ಕಾಂಗ್ರೆಸ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ನೋಂದಣಿ ನಿಯಮಗಳಿಗೆ ಬದಲಾವಣೆಗಳ ಮೂಲಕ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ರಾಜಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...