Homeಮುಖಪುಟಹೈದರಾಬಾದ್ ವಿವಿ ಚುನಾವಣೆ: ABVPಗೆ ಮುಖಭಂಗ, ಅಧ್ಯಕ್ಷೆಯಾಗಿ SFIನ ದಿಲ್ಶಾದಾ ರೈಹಾನ್ ಭರ್ಜರಿ ಜಯ

ಹೈದರಾಬಾದ್ ವಿವಿ ಚುನಾವಣೆ: ABVPಗೆ ಮುಖಭಂಗ, ಅಧ್ಯಕ್ಷೆಯಾಗಿ SFIನ ದಿಲ್ಶಾದಾ ರೈಹಾನ್ ಭರ್ಜರಿ ಜಯ

- Advertisement -
- Advertisement -

ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ (HCU) ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಬಲಪಂಥೀಯ ವಿದ್ಯಾರ್ಥಿ ಸಂಘಟನೆ ಎಬಿವಿಪಿಗೆ ಭಾರಿ ಹಿನ್ನಡೆಯಾಗಿದೆ. ಎಡಪಂಥೀಯ ಹಾಗೂ ದಲಿತ-ಬಹುಜನ ವಿದ್ಯಾರ್ಥಿ ಸಂಘಟನೆಗಳನ್ನೊಳಗೊಂಡ ಐಸಾ-ಎಎಸ್‌ಎ-ಡಿಎಸ್‌ಯು-ಎಸ್‌ಎಫ್‌ಐ-ಟಿಎಸ್‌ಎಫ್ (AISA-ASA-DSU-SFI-TSF) ಮೈತ್ರಿಕೂಟವು ಎಲ್ಲಾ ಪ್ರಮುಖ ಹುದ್ದೆಗಳನ್ನು ಭರ್ಜರಿಯಾಗಿ ಗೆದ್ದುಕೊಳ್ಳುವ ಮೂಲಕ ಎಬಿವಿಪಿಯಿಂದ (ABVP) ವಿದ್ಯಾರ್ಥಿ ಸಂಘದ ಅಧಿಕಾರವನ್ನು ಮರಳಿ ಕಸಿದುಕೊಂಡಿದೆ.

ಮೈತ್ರಿಕೂಟದ ಅಧ್ಯಕ್ಷ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್‌ಎಫ್‌ಐ (SFI) ನಾಯಕಿ ದಿಲ್ಶಾದಾ ರೈಹಾನ್ ಅವರು 2026ನೇ ಸಾಲಿನ ಹೈದರಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷೆಯಾಗಿ ಭರ್ಜರಿ ಜಯಗಳಿಸಿದ್ದಾರೆ. ಎಬಿವಿಪಿ–ಸೇವಲಾಲ್ ವಿದ್ಯಾರ್ಥಿ ದಳ ಮೈತ್ರಿಕೂಟದ ನರೇಶ್ ಪೊಡಿಶೆಟ್ಟಿ ಹಾಗೂ ಎನ್‌ಎಸ್‌ಯುಐ-ಫ್ರಟರ್ನಿಟಿ ಮೂವ್‌ಮೆಂಟ್ ಮೈತ್ರಿಕೂಟದ ಕೆ. ನವೀನ್ ಕುಮಾರ್ ಅವರನ್ನು ಧೂಳಿಪಟ ಮಾಡುವ ಮೂಲಕ ದಿಲ್ಶಾದಾ ರೈಹಾನ್ ಗೆಲುವಿನ ಪತಾಕೆ ಹಾರಿಸಿದ್ದಾರೆ.

ಅಧ್ಯಕ್ಷ ಸ್ಥಾನ ಮಾತ್ರವಲ್ಲದೆ ವಿದ್ಯಾರ್ಥಿ ಒಕ್ಕೂಟದ ಇತರ ಎಲ್ಲಾ ಪ್ರಮುಖ ಸ್ಥಾನಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳೇ ವಿಜಯಭೇರಿ ಬಾರಿಸಿದ್ದಾರೆ. ಟಿಎಸ್‌ಎಫ್ (TSF) ಸಂಘಟನೆಯ ಕೊರ್ರಾ ನಿತಿನ್ ಚೌಹಾಣ್ ಉಪಾಧ್ಯಕ್ಷರಾಗಿ, ಎಎಸ್‌ಎ (ASA) ಸಂಘಟನೆಯ ಪ್ರತೀಕ್ ಸಾಗರ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಜಂಟಿ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದ ಐಸಾ (AISA) ಸಂಘಟನೆಯ ಸಿದ್ಧಾಂತ್ ಅವರು ಗೆಲುವು ಸಾಧಿಸಿದ್ದಾರೆ.

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಎಸ್‌ಎ ನಾಯಕ ಪ್ರತೀಕ್ ಸಾಗರ್ ಅವರು ಎದುರಾಳಿ ಮೈತ್ರಿಕೂಟಗಳ ಮುಹಮ್ಮದ್ ಅಫ್ಲಾಹ್ ಕೆ.ಕೆ. ಮತ್ತು ವೆನಿಸಾ ಚೌಧರಿ ಅವರನ್ನು ಹಿಮ್ಮೆಟ್ಟಿಸಿ ಜಯಗಳಿಸಿದ್ದಾರೆ. ಈ ಮೂಲಕ ಹೈದರಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಎಡ, ದಲಿತ, ಬಹುಜನ ಮತ್ತು ಪ್ರಗತಿಪರ ವಿದ್ಯಾರ್ಥಿ ಶಕ್ತಿಗಳ ಒಗ್ಗಟ್ಟು ಮತ್ತೊಮ್ಮೆ ತನ್ನ ಪಾರಮ್ಯ ಮೆರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಜ್ಜಯಿನಿ ಶಾಹಿ ಮಸೀದಿ ಧ್ವಂಸ ಮೂರನೇ ದಿನಕ್ಕೆ: 14 ಮುಸ್ಲಿಮರ ಬಂಧನ, 30ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯ ಐತಿಹಾಸಿಕ ಶಾಹಿ ಮಸೀದಿ ಧ್ವಂಸ ಪ್ರಕರಣ ಮೂರನೇ ದಿನಕ್ಕೂ ಮುಂದುವರಿದಿದ್ದು, ಮಸೀದಿಯ ಸುತ್ತಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಮತ್ತು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಸೋಮವಾರ ಮಸೀದಿಯ ನೇತಾಡುವ ಚಪ್ಪಡಿಯ ಒಂದು...

ಗ್ಯಾನೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ: 6 ಕಾಂಗ್ರೆಸ್ ನಾಯಕರ ಬಂಧನ, 20 ಕಾರ್ಯಕರ್ತರ ವಿರುದ್ಧ ಕೊಲೆ ಯತ್ನದ ಆರೋಪ

ಆಗ್ರಾ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಆಗ್ರಾದಲ್ಲಿರುವ ಪೋಷಕರ ಪೈತೃಕ ನಿವಾಸದ ಹೊರಗೆ ನಡೆದ ಕಾಂಗ್ರೆಸ್ ಪ್ರತಿಭಟನೆ ಇದೀಗ ಗಂಭೀರ ಕಾನೂನು ಸಂಘರ್ಷಕ್ಕೆ ತಿರುಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ...

₹92,000 ಕೋಟಿ ವೆಚ್ಚದ ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ಕೋರಿದ ಕೇಂದ್ರ ಸರ್ಕಾರ!

ಅಂದಾಜು ₹92,000 ಕೋಟಿ ವೆಚ್ಚದ ವಿವಾದಾತ್ಮಕ 'ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ'ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಕಾನೂನಾತ್ಮಕವಾಗಿ ಅತ್ಯಂತ ಅಚ್ಚರಿಯ ಉಲ್ಟಾ ನಿಲುವು ತಳೆದಿದೆ. ಈ ಯೋಜನೆಯಲ್ಲಿ ಅರಣ್ಯ ಹಕ್ಕುಗಳ ಕಾಯಿದೆ...

SIR | ಫಾರಂ-8ರ ಬದಲು ಫಾರಂ-6 ಸಲ್ಲಿಸುವಂತೆ ಒತ್ತಡ : ಒಂದೇ ಕುಟುಂಬದ 6 ಜನರ ವೋಟ್ ಡಿಲೀಟ್; ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ತಪರಾಕಿ

ಗೋವಾದ ಸಾಂತಾ ಕ್ರೂಝ್ ಮತಕ್ಷೇತ್ರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ, ಒಂದು ಕುಟುಂಬದ ಆರು ಸದಸ್ಯರು ತಮ್ಮ ವಿಳಾಸ ಬದಲಾವಣೆಯನ್ನು ತಿಳಿಸಲು 'ಫಾರ್ಮ್ 8' ಸಲ್ಲಿಸಿದ್ದರೂ ಸಹ, ಮತದಾರರ ಪಟ್ಟಿಯಿಂದ...

ಚುನಾವಣಾ ಆಯೋಗದ ವಿರುದ್ಧ ವ್ಯಂಗ್ಯಚಿತ್ರ: ಸತೀಶ್ ಆಚಾರ್ಯ Instagram ಖಾತೆಗೆ ಭಾರತದಲ್ಲಿ ನಿರ್ಬಂಧ; ಮಂಜುಲ್‌ಗೂ ತಡೆ

ನವದೆಹಲಿ: ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ವ್ಯಂಗ್ಯಚಿತ್ರಗಳನ್ನು ಪ್ರಕಟಿಸಿದ್ದ ರಾಜಕೀಯ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರ Instagram ಖಾತೆಗೆ ಭಾರತದಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಇದೇ ವೇಳೆ ಮತ್ತೊಬ್ಬ...

ಎಸ್‌ಐಆರ್ ಹಾಗೂ ಚುನಾವಣಾ ಆಯೋಗದ ಅಕ್ರಮ ಖಂಡಿಸಿ ‘ಇಂಡಿಯಾ’ ಮೈತ್ರಿಕೂಟದ ರಾಷ್ಟ್ರವ್ಯಾಪಿ ಅಭಿಯಾನ: ಪ್ರಜಾಪ್ರಭುತ್ವ ರಕ್ಷಣೆಗೆ ವಿಪಕ್ಷಗಳಿಂದ 6 ಪ್ರಮುಖ ಬೇಡಿಕೆಗಳು!

ಚುನಾವಣಾ ಆಯೋಗದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ಅಕ್ರಮಗಳು, 'ಫಾರ್ಮ್ 6' ನಮೂನೆಯಲ್ಲಿ ಸಾಫ್ಟ್‌ವೇರ್ ಮೂಲಕ ತಂದಿದ್ದ ಅಡೆತಡೆಗಳು ಹಾಗೂ ಮತದಾರರ ಪಟ್ಟಿಯಿಂದ ಅರ್ಹರ ಹೆಸರು ರದ್ದುಗೊಳಿಸಿರುವ ಕ್ರಮಗಳನ್ನು ಖಂಡಿಸಿ 'ಇಂಡಿಯಾ'...

ಮ್ಯಾನ್ಮಾರ್‌ನಲ್ಲಿ ಜನನಿಬಿಡ ಮಾರುಕಟ್ಟೆ ಮೇಲೆ ವೈಮಾನಿಕ ದಾಳಿ: 50ಕ್ಕೂ ಹೆಚ್ಚು ಸಾವು; ಗಡೀಪಾರು ನಿಲ್ಲಿಸಲು ಮಲೇಷ್ಯಾಕ್ಕೆ ವಿಶ್ವಸಂಸ್ಥೆ ಕರೆ

ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ಜನನಿಬಿಡ ಮಾರುಕಟ್ಟೆಯ ಮೇಲೆ ನಡೆದ ಮಿಲಿಟರಿ ವೈಮಾನಿಕ ದಾಳಿಯನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ವೋಲ್ಕರ್ ಟರ್ಕ್ ತೀವ್ರವಾಗಿ ಖಂಡಿಸಿದ್ದಾರೆ. ಕ್ಯುಕ್ತಾವ್ ಪಟ್ಟಣದಲ್ಲಿ ನಡೆದ ಈ ದಾಳಿಯಲ್ಲಿ ಮಹಿಳೆಯರು...

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಶಿಕ್ಷಣ ಕ್ಷೇತ್ರದಲ್ಲಿ RSS ಕಾರ್ಯಸೂಚಿಗಳನ್ನು ತಡೆಯುವಂತೆ ಖರ್ಗೆ-ರಾಹುಲ್ ಸೂಚನೆ

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಶಿಕ್ಷಣ ಕ್ಷೇತ್ರದಲ್ಲಿ ಆರ್‌ಎಸ್‌ಎಸ್ ಹಾಗೂ ಸಂಘ ಪರಿವಾರದ ವಿಭಜಕ ಮತ್ತು ಕೋಮು ಕಾರ್ಯಸೂಚಿಯನ್ನು ಜಾರಿಗೆ ತರುವುದನ್ನು ತಕ್ಷಣವೇ ತಡೆಯಬೇಕು ಹಾಗೂ ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ, ಜಾತ್ಯತೀತ ಶಿಕ್ಷಣ ನೀತಿಗಳನ್ನು...

ಎನ್‌ಸಿಇಆರ್‌ಟಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ಸೆಂಗೋಲ್‌’ ಸೇರ್ಪಡೆ

ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾದ ಸೆಂಗೋಲ್‌ (ರಾಜದಂಡ) ಈಗ ಎನ್‌ಸಿಇಆರ್‌ಟಿಯ 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ಭಾಗವಾಗಿದೆ. ಪಠ್ಯಪುಸ್ತಕವು ಇದನ್ನು "ಆಡಳಿತ ಮತ್ತು ಉತ್ತಮ ಆಡಳಿತದ ಸಾಂಸ್ಕೃತಿಕ ಸಂಕೇತ" ಎಂದು...

Mangaluru| MRPLನಲ್ಲಿ ಭಾರಿ ಸ್ಫೋಟ: 8 ಮಂದಿಗೆ ಗಾಯ, ಕಂಪಿಸಿದ ಜೋಕಟ್ಟೆಯ ಮನೆಗಳು-ಅಂಗನವಾಡಿ

ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ಇರುವ ಮಂಗಳೂರು ರಿಫೈನರಿ ಅಂಡ್‌ ಪೆಟ್ರೋಕೆಮಿಕಲ್ಸ್‌‌ ಲಿಮಿಟೆಡ್‌ (MRPL) ಸಂಸ್ಥೆಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ (ಸಿಎಚ್‌ಟಿ) ಬುಧವಾರ ಮಧ್ಯಾಹ್ನ 12:15 ರ ಸುಮಾರಿಗೆ ಭಾರಿ...