HomeಅಂಕಣಗಳುKarnataka against SIR'TCS ಮೇಲೆ ಒತ್ತಡ ಹೇರಲಾಗಿತ್ತೇ?' : ಆನ್‌ಲೈನ್ ಫಾರಂ-6ರ ಬದಲಾವಣೆಗಳ ಕುರಿತು ಚುನಾವಣಾ ಆಯೋಗವನ್ನು ಪ್ರಶ್ನಿಸಿದ...

‘TCS ಮೇಲೆ ಒತ್ತಡ ಹೇರಲಾಗಿತ್ತೇ?’ : ಆನ್‌ಲೈನ್ ಫಾರಂ-6ರ ಬದಲಾವಣೆಗಳ ಕುರಿತು ಚುನಾವಣಾ ಆಯೋಗವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಹೊಸ ಮತದಾರರ ನೋಂದಣಿಗೆ ಬಳಸಲಾಗುವ ಆನ್‌ಲೈನ್ ಫಾರಂ ನಂಬರ್-6ರಲ್ಲಿ ಮಾಡಲಾದ ವಿವಾದಾತ್ಮಕ ಬದಲಾವಣೆಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ (ಅ.1) ಭಾರತೀಯ ಚುನಾವಣಾ ಆಯೋಗದಿಂದ ಉತ್ತರವನ್ನು ಕೇಳಿದ್ದಾರೆ. ಈ ಮಾರ್ಪಾಡನ್ನು ಜಾರಿಗೆ ತರಲು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಸಂಸ್ಥೆಗೆ ಯಾರು ಆದೇಶ ನೀಡಿದ್ದಾರೆ ಮತ್ತು ಕಂಪನಿಯ ಒಳಗಡೆ ಇದಕ್ಕೆ ಯಾರು ಅನುಮೋದನೆ ನೀಡಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ಬದಲಾವಣೆಗಳನ್ನು ಮಾಡಲು ಟಿಸಿಎಸ್ ಮೇಲೆ ಒತ್ತಡ ಹೇರಲಾಗಿತ್ತೇ ಎಂದೂ ರಾಹುಲ್ ಕೇಳಿದ್ದಾರೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಸಂಸ್ಥೆಯು ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಧಿಕೃತ ಡಿಜಿಟಲ್ ಬ್ಯಾಕೆಂಡ್ ಮೂಲಸೌಕರ್ಯ ಮತ್ತು ‘ECINET‘ ವೆಬ್ ಪೋರ್ಟಲ್ ಅನ್ನು ನಿರ್ವಹಿಸುತ್ತದೆ.

ಎಕ್ಸ್‌ ಜಾಲತಾಣದಲ್ಲಿನ ಪೋಸ್ಟ್‌ನಲ್ಲಿ ರಾಹುಲ್ ಗಾಂಧಿ, ಶಾಸನಬದ್ಧ ಫಾರಂ-6ಕ್ಕೆ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಗೆ ಸಂಬಂಧಿಸಿದ ಘೋಷಣೆಯನ್ನು ಸೇರಿಸುವುದರ ವಿರುದ್ಧ ಚುನಾವಣಾ ಆಯುಕ್ತರಾದ ವಿವೇಕ್ ಜೋಶಿ ಮತ್ತು ಸುಖ್‌ಬೀರ್ ಸಿಂಗ್ ಸಂಧು ಅವರು ದಾಖಲಿಸಿರುವ ಆಕ್ಷೇಪಣೆಗಳನ್ನು ಉಲ್ಲೇಖಿಸಿದ್ದಾರೆ.

ಆನ್‌ಲೈನ್ ಫಾರಂ-6 ಅನ್ನು ಕಾನೂನುಬಾಹಿರವಾಗಿ ಬದಲಾಯಿಸಲಾಗಿದೆ. ಇದನ್ನು ಸ್ವತಃ ಚುನಾವಣಾ ಆಯೋಗದ ಆಯುಕ್ತರೇ ದಾಖಲಿಸಿದ್ದಾರೆ. ಆ ಬದಲಾವಣೆಯನ್ನು ಮಾಡುವಂತೆ ಟಿಸಿಎಸ್‌ಗೆ ಚುನಾವಣಾ ಆಯೋಗದ ಯಾರು ಆದೇಶ ಮಾಡಿದ್ದು? ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಅವರ ಪೋಸ್ಟ್ ಅನ್ನು ರಿಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಜನರೇಷನ್ ಝೆಡ್ (ಜೆನ್‌ ಝೀ) ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು 2026ರ ಜುಲೈ ಮಧ್ಯಭಾಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ ಅಸಂವಿಧಾನಿಕವಾಗಿ ಫಾರಂ-6ರಲ್ಲಿ ಬದಲಾವಣೆಗಳನ್ನು ತಂದಿದ್ದರು. ಸ್ಪಷ್ಟವಾಗಿ, ಈ ಕ್ರಮವನ್ನು ಪ್ರಧಾನಿ-ಗೃಹ ಸಚಿವ (ನರೇಂದ್ರ ಮೋದಿ-ಅಮಿತ್ ಶಾ) ಜೋಡಿಯೇ ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಮುಂಬರುವ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕ ನಡೆಸಬೇಕು ಎಂದು ಒತ್ತಾಯಿಸಿ ಮತ್ತು ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ, ದೇಶದ ಎಲ್ಲಾ ಜಿಲ್ಲೆಗಳಲ್ಲಿ ಜಂಟಿ ‘ಪ್ರಜಾಪ್ರಭುತ್ವ ಉಳಿಸಿ’ ಮೆರವಣಿಗೆಗಳು ಮತ್ತು ಐದು ಪ್ರಮುಖ ರ‍್ಯಾಲಿಗಳನ್ನು ನಡೆಸುವುದಾಗಿ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಘೋಷಿಸಿದ ಮರುದಿನವೇ ರಾಹುಲ್ ಗಾಂಧಿಯ ಹೇಳಿಕೆ ಹೊರಬಿದ್ದಿವೆ.

ಸುಮಾರು ಮೂರೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ 19 ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದ ಬುಧವಾರದ (ಸೆ.30) ಸಭೆಯಲ್ಲಿ, ಅಕ್ಟೋಬರ್ 6ರಂದು ಎಲ್ಲಾ ವಿರೋಧ ಪಕ್ಷದ ಸಂಸದರು ಚುನಾವಣಾ ಆಯೋಗದ ಕಡೆಗೆ ಮೆರವಣಿಗೆ ನಡೆಸಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಆಪಾದಿತ ಅಕ್ರಮಗಳಿಗೆ ಸಂಬಂಧಿಸಿದ ವಿಷಯಗಳನ್ನು ರಾಷ್ಟ್ರಪತಿಯ ಮುಂದಿಡಲು ನಿರ್ಧರಿಸಲಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಬೇಡಿಕೆಯ ಕುರಿತು ವಿರೋಧ ಪಕ್ಷಗಳ ಒಕ್ಕೂಟವು ಚರ್ಚಿಸಿದೆ. ಅವರನ್ನು ಪದಚ್ಯುತಗೊಳಿಸುವವರೆಗೂ ತಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ ಆರೋಪ : ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ!

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಗ್ಯಾನ್‌ಪುರದಲ್ಲಿರುವ ಮಹಾರಾಜ ಚೇತ್ ಸಿಂಗ್ ಜಿಲ್ಲಾಸ್ಪತ್ರೆಯ ಸಿಬ್ಬಂದಿ ದಾಖಲಿಸಿಕೊಳ್ಳಲು ನಿರಾಕರಿಸಿದ ಕಾರಣ, ಆದಿವಾಸಿ ಮಹಿಳೆಯೊಬ್ಬರು ಆಸ್ಪತ್ರೆಯ ಹೊರಗಿನ ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ....

ಬ್ಯಾಂಕ್ ಖಾತೆಗಳು ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿದ್ಧ ಟಿಎಂಸಿ ಆರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ : ವಿಚಾರಣೆ ತ್ವರಿತಗೊಳಿಸುವಂತೆ ಹೈಕೋರ್ಟ್‌ಗೆ ಸೂಚನೆ

ಪಶ್ಚಿಮ ಬಂಗಾಳ ಪೊಲೀಸರು ತಮ್ಮ ನಾಲ್ಕು 'ಇಂಡಿಯನ್ ಬ್ಯಾಂಕ್' ಖಾತೆಗಳನ್ನು ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ 'ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್' (ಎಐಟಿಸಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ (ಅ.1)...

ಬಂಗಾಳ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು; ನಂದಿಗ್ರಾಮ ಕಾಂಗ್ರೆಸ್‌ ಅಭ್ಯರ್ಥಿ ಜೈಲಿನಿಂದ ಬಿಡುಗಡೆ

ಪಶ್ಚಿಮ ಬಂಗಾಳ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ಮರುದಿನವೇ, ಕಾಂಗ್ರೆಸ್‌ನ ನಂದಿಗ್ರಾಮ ಉಪಚುನಾವಣೆಯ ಅಭ್ಯರ್ಥಿ ಮಿಲನ್ ಪ್ರಧಾನ್ ಬುಧವಾರ (ಸೆ. 30) ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಲ್ದಿಯಾ ಜೈಲಿನ ಹೊರಗೆ...

ಚುನಾವಣಾ ಆಯೋಗದ ಐಟಿ ಸೆಲ್ ನಿರ್ದೇಶಕಿ ಸೀಮಾ ಖನ್ನಾ ವಿರುದ್ಧ ದೂರು ದಾಖಲಿಸಿದ ಸಂಸದೆ ಮಹುವಾ ಮೊಯಿತ್ರಾ

ಬಂಗಾಳದಲ್ಲಿ ಮತದಾರರ ಹೆಸರುಗಳು ಮತ್ತು ಪಟ್ಟಿಗಳನ್ನು ಕೇಂದ್ರ ಮಟ್ಟದಲ್ಲೇ ಸೇರಿಸಲು, ತೆಗೆದುಹಾಕಲು ಅಥವಾ ಬದಲಾಯಿಸಲು ಅನುವು ಮಾಡಿಕೊಡುವಂತಹ ಮತದಾರರ ಪಟ್ಟಿ ಸಾಫ್ಟ್‌ವೇರ್ ಬಳಕೆಗೆ ಸಂಬಂಧಿಸಿದಂತೆ, ಭಾರತೀಯ ಚುನಾವಣಾ ಆಯೋಗದ ಐಟಿ ವಿಭಾಗದ ಮಹಾನಿರ್ದೇಶಕಿ...

ರಾಜ್ಯದಾದ್ಯಂತ ಫಾರಂ-7ರ ಮೂಲಕ ವೋಟ್ ಡಿಲೀಟ್ ಮಾಡಿಸುತ್ತಿರುವ ಬಿಜೆಪಿಗರು : ಮಾಹಿತಿ ನೀಡಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಫಾರಂ ನಂಬರ್ -7 ಸಲ್ಲಿಸುವ ಮೂಲಕ ಅಲ್ಪಸಂಖ್ಯಾತರು, ದಲಿತರು ಮತ್ತು ಬಡವರ ಮತಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ಬುಧವಾರ (ಸೆ.30) ಸಾಮಾಜಿಕ...

ಉಜ್ಜಯಿನಿ ಶಾಹಿ ಮಸೀದಿ ಧ್ವಂಸ ಮೂರನೇ ದಿನಕ್ಕೆ: 14 ಮುಸ್ಲಿಮರ ಬಂಧನ, 30ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯ ಐತಿಹಾಸಿಕ ಶಾಹಿ ಮಸೀದಿ ಧ್ವಂಸ ಪ್ರಕರಣ ಮೂರನೇ ದಿನಕ್ಕೂ ಮುಂದುವರಿದಿದ್ದು, ಮಸೀದಿಯ ಸುತ್ತಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಮತ್ತು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಸೋಮವಾರ ಮಸೀದಿಯ ನೇತಾಡುವ ಚಪ್ಪಡಿಯ ಒಂದು...

ಹೈದರಾಬಾದ್ ವಿವಿ ಚುನಾವಣೆ: ABVPಗೆ ಮುಖಭಂಗ, ಅಧ್ಯಕ್ಷೆಯಾಗಿ SFIನ ದಿಲ್ಶಾದಾ ರೈಹಾನ್ ಭರ್ಜರಿ ಜಯ

ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ (HCU) ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಬಲಪಂಥೀಯ ವಿದ್ಯಾರ್ಥಿ ಸಂಘಟನೆ ಎಬಿವಿಪಿಗೆ ಭಾರಿ ಹಿನ್ನಡೆಯಾಗಿದೆ. ಎಡಪಂಥೀಯ ಹಾಗೂ ದಲಿತ-ಬಹುಜನ ವಿದ್ಯಾರ್ಥಿ ಸಂಘಟನೆಗಳನ್ನೊಳಗೊಂಡ ಐಸಾ-ಎಎಸ್‌ಎ-ಡಿಎಸ್‌ಯು-ಎಸ್‌ಎಫ್‌ಐ-ಟಿಎಸ್‌ಎಫ್...

ಗ್ಯಾನೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ: 6 ಕಾಂಗ್ರೆಸ್ ನಾಯಕರ ಬಂಧನ, 20 ಕಾರ್ಯಕರ್ತರ ವಿರುದ್ಧ ಕೊಲೆ ಯತ್ನದ ಆರೋಪ

ಆಗ್ರಾ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಆಗ್ರಾದಲ್ಲಿರುವ ಪೋಷಕರ ಪೈತೃಕ ನಿವಾಸದ ಹೊರಗೆ ನಡೆದ ಕಾಂಗ್ರೆಸ್ ಪ್ರತಿಭಟನೆ ಇದೀಗ ಗಂಭೀರ ಕಾನೂನು ಸಂಘರ್ಷಕ್ಕೆ ತಿರುಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ...

₹92,000 ಕೋಟಿ ವೆಚ್ಚದ ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ಕೋರಿದ ಕೇಂದ್ರ ಸರ್ಕಾರ!

ಅಂದಾಜು ₹92,000 ಕೋಟಿ ವೆಚ್ಚದ ವಿವಾದಾತ್ಮಕ 'ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ'ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಕಾನೂನಾತ್ಮಕವಾಗಿ ಅತ್ಯಂತ ಅಚ್ಚರಿಯ ಉಲ್ಟಾ ನಿಲುವು ತಳೆದಿದೆ. ಈ ಯೋಜನೆಯಲ್ಲಿ ಅರಣ್ಯ ಹಕ್ಕುಗಳ ಕಾಯಿದೆ...

SIR | ಫಾರಂ-8ರ ಬದಲು ಫಾರಂ-6 ಸಲ್ಲಿಸುವಂತೆ ಒತ್ತಡ : ಒಂದೇ ಕುಟುಂಬದ 6 ಜನರ ವೋಟ್ ಡಿಲೀಟ್; ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ತಪರಾಕಿ

ಗೋವಾದ ಸಾಂತಾ ಕ್ರೂಝ್ ಮತಕ್ಷೇತ್ರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ, ಒಂದು ಕುಟುಂಬದ ಆರು ಸದಸ್ಯರು ತಮ್ಮ ವಿಳಾಸ ಬದಲಾವಣೆಯನ್ನು ತಿಳಿಸಲು 'ಫಾರ್ಮ್ 8' ಸಲ್ಲಿಸಿದ್ದರೂ ಸಹ, ಮತದಾರರ ಪಟ್ಟಿಯಿಂದ...