Homeಮುಖಪುಟಕೇರಳ ಯುಡಿಎಫ್ ಸರ್ಕಾರದಲ್ಲಿ ಭಿನ್ನಮತದ ಹೊಗೆ: ಸಿಎಂ ಸತೀಶನ್ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರ ಅಸಮಾಧಾನ

ಕೇರಳ ಯುಡಿಎಫ್ ಸರ್ಕಾರದಲ್ಲಿ ಭಿನ್ನಮತದ ಹೊಗೆ: ಸಿಎಂ ಸತೀಶನ್ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರ ಅಸಮಾಧಾನ

- Advertisement -
- Advertisement -

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳು ಕಳೆಯುವುದರೊಳಗೇ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತ ತೀವ್ರಗೊಳ್ಳುತ್ತಿರುವ ಲಕ್ಷಣಗಳು ಗೋಚರಿಸಿವೆ. ಉನ್ನತ ಮಟ್ಟದ ಸರ್ಕಾರಿ ಹುದ್ದೆಗಳ ನೇಮಕಾತಿ ಹಾಗೂ ಪ್ರಮುಖ ನೀತಿ ನಿರ್ಧಾರಗಳ ವಿಚಾರದಲ್ಲಿ ಮೈತ್ರಿಕೂಟವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಹಿರಿಯ ಕಾಂಗ್ರೆಸ್ ಸಂಸದ ಹಾಗೂ ಯುಡಿಎಫ್ ಸಂಚಾಲಕ ಅಡೂರ್ ಪ್ರಕಾಶ್, ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗವಾಗಿಯೇ ಸಮರ ಸಾರಿದ್ದಾರೆ.

ಸರ್ಕಾರದ ಪ್ರಮುಖ ನಿರ್ಧಾರಗಳನ್ನು ತಮ್ಮ ಗಮನಕ್ಕೆ ತರದೆ ಕೈಗೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಪ್ರಕಾಶ್, “ಕೇರಳದಾದ್ಯಂತ ಇರುವ ಪಕ್ಷದ ಕಾರ್ಯಕರ್ತರಿಗೆ ನಾನು ಉತ್ತರ ನೀಡಬೇಕಿದೆ. ಎಐಸಿಸಿ ನನ್ನನ್ನು ಯುಡಿಎಫ್ ಸಂಚಾಲಕರನ್ನಾಗಿ ನೇಮಿಸಿದೆ, ನನ್ನ ಅನುಭವದ ಆಧಾರದ ಮೇಲೆ ಮಾತನಾಡುತ್ತಿದ್ದೇನೆ ಮತ್ತು ಈ ವಿಚಾರವನ್ನು ಹೈಕಮಾಂಡ್‌‌ ಗಮನಕ್ಕೆ ತರಲಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯವಾಗಿ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ಐಯುಎಂಎಲ್ (IUML) ಹಿರಿಯ ನಾಯಕ ಎಂ.ಕೆ. ಮುನೀರ್ ಹಾಗೂ ದೆಹಲಿಯಲ್ಲಿ ಕೇರಳ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ಫಾರ್ವರ್ಡ್ ಬ್ಲಾಕ್‌ನ ಜಿ. ದೇವರಾಜನ್ ಅವರ ನೇಮಕಾತಿ ಈ ಅಸಮಾಧಾನಕ್ಕೆ ತಕ್ಷಣದ ಕಾರಣವಾಗಿದೆ.

ಕಾಂಗ್ರೆಸ್‌ನ ಹಿರಿಯ ನಾಯಕರೂ ಈ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದರೂ, ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾದ ಐಯುಎಂಎಲ್‌ಗೆ ಮತ್ತೊಂದು ಸಂಪುಟ ದರ್ಜೆಯ ಸ್ಥಾನ ನೀಡುವ ಮೂಲಕ ಸರ್ಕಾರದಲ್ಲಿ ಅವರ ಸ್ಥಾನಗಳ ಸಂಖ್ಯೆಯನ್ನು ಆರಕ್ಕೆ ಏರಿಸಲಾಗಿದೆ. ಮುಖ್ಯಮಂತ್ರಿ ಸ್ಥಾನದ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಬೆಂಬಲಿಸಿದ್ದ ಐಯುಎಂಎಲ್ ಒತ್ತಡಕ್ಕೆ ಸಿಎಂ ಸತೀಶನ್ ಮಣಿಯುತ್ತಿದ್ದಾರೆ ಎಂಬ ಚರ್ಚೆಯೂ ಜೋರಾಗಿದೆ. ಜುಲೈ 30ರ ಬಳಿಕ ಸುಮಾರು ಎರಡು ತಿಂಗಳ ಕಾಲ ಯುಡಿಎಫ್‌ನ ಯಾವುದೇ ಔಪಚಾರಿಕ ಸಭೆ ನಡೆಸದೆ, ಸಂಪುಟ ಮಟ್ಟದಲ್ಲೇ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂಬುದು ಯುಡಿಎಫ್ ಸಂಚಾಲಕರ ಪ್ರಮುಖ ಆರೋಪವಾಗಿದೆ.

ಇಷ್ಟೇ ಅಲ್ಲದೆ, ಕೆಪಿಸಿಸಿಗೆ ಪೂರ್ಣಾವಧಿ ಅಧ್ಯಕ್ಷರಿಲ್ಲದಿರುವುದು, ಖಾಸಗಿ ಹೆಲಿಕಾಪ್ಟರ್ ಬಳಕೆ, ಪಿಎಂ ಶ್ರೀ ಯೋಜನೆ, ವಕ್ಫ್ ಮಂಡಳಿ ಪುನರ್‌ರಚನೆ ಹಾಗೂ ವಿಝಿಂಜಂ ಬಂದರು ಯೋಜನೆಯಲ್ಲಿನ ನೀತಿ ಬದಲಾವಣೆಗಳು ಸತೀಶನ್ ಸರ್ಕಾರವನ್ನು ತೀವ್ರ ಮುಜುಗರಕ್ಕೆ ಈಡುಮಾಡಿವೆ. ಮತ್ತೊಂದೆಡೆ, ಸಿಎಂ ರೇಸ್‌ನಲ್ಲಿದ್ದ ಕೆ.ಸಿ. ವೇಣುಗೋಪಾಲ್ ಬೆಂಬಲಿತ ಸಚಿವರ ಉಪಸ್ಥಿತಿಯು ಸಂಪುಟದೊಳಗಿನ ಬಣ ರಾಜಕೀಯವನ್ನು ಬಯಲುಗೊಳಿಸಿದೆ. ಈ ಬೆಳವಣಿಗೆಗಳನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ, ಯುಡಿಎಫ್ ಸರ್ಕಾರವನ್ನು ಮುಸ್ಲಿಂ ಲೀಗ್ ಮತ್ತು ಜಮಾತೆ ಇಸ್ಲಾಮಿ ಮುನ್ನಡೆಸುತ್ತಿವೆ ಎಂದು ಕೋಮು ಧ್ರುವೀಕರಣದ ರಾಜಕೀಯಕ್ಕೂ ಕೈಹಾಕಿದೆ. ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ಮೈತ್ರಿಧರ್ಮ ಮತ್ತು ಪಕ್ಷದ ಆಂತರಿಕ ಪ್ರಜಾಪ್ರಭುತ್ವವನ್ನು ಗಾಳಿಗೆ ತೂರಿ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂಬ ಆರೋಪ ಸತೀಶನ್ ಆಡಳಿತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಸಿಇಸಿ ಗ್ಯಾನೇಶ್‌ ಕುಮಾರ್ ವಿರುದ್ಧದ ಹೋರಾಟಕ್ಕೆ ಕಪಿಲ್ ಸಿಬಲ್ – ಪ್ರಶಾಂತ್ ಭೂಷಣ್ ಸೇರ್ಪಡೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲ ಪ್ರಶಾಂತ್ ಭೂಷಣ್, ಎಐಎಸ್‌ಎ...

ಫಾರಂ-7 ಮೂಲಕ ಆಕ್ಷೇಪ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ವಿಜಯೇಂದ್ರ ಒತ್ತಾಯ

ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಎಫ್‌ಐಆರ್ (FIR) ದಾಖಲಿಸಿರುವುದನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಈ ಪ್ರಕರಣಗಳನ್ನು ಕೂಡಲೇ...

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ದೆಹಲಿ ಪೊಲೀಸರಿಂದ 3 ಪ್ರಕರಣ ದಾಖಲು; 1 ಸಾವಿರ ಜನ ವಶಕ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು...

ರಾಜ್ಯದ ಬರ ಪರಿಹಾರಕ್ಕೆ 3,705 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ: ಸಿಎಂ

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯಿಂದಾಗಿ ಕಂಗಾಲಾಗಿರುವ ರೈತರು ಮತ್ತು ಜನಸಾಮಾನ್ಯರ ನೆರವಿಗೆ ಧಾವಿಸಲು ಕೇಂದ್ರ ಸರ್ಕಾರ ತಕ್ಷಣವೇ ಎನ್‌ಡಿಆರ್‌ಎಫ್ (NDRF) ಮಾನದಂಡಗಳನ್ವಯ 3,705.30 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ....

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅ.10 ರಂದು ಪ್ರತಿಭಟನೆ; ದೆಹಲಿಗೆ ಆಗಮಿಸುವಂತೆ ಸಿಜೆಪಿ ಕರೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡದಿದ್ದರೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಬಯಸುವ ಪ್ರತಿಯೊಬ್ಬ ನಾಗರಿಕನೂ ಅಕ್ಟೋಬರ್ 10 ರ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕಾಕ್ರೋಚ್ ಜನತಾ ಪಾರ್ಟಿ...

SIR ಹಗರಣ | ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶರ ಸ್ವತಂತ್ರ ಆಯೋಗ ರಚನೆ

ಭಾರತೀಯ ಚುನಾವಣಾ ಆಯೋಗ (ಇಸಿಐ) ದೇಶದಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಸಾಂವಿಧಾನಿಕ ಸಿಂಧುತ್ವ, ವಿಧಾನ ಮತ್ತು ಅದರ ಪ್ರಭಾವವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳ ಐವರು...

ಪಶ್ಚಿಮ ಬಂಗಾಳ ಎಸ್‌ಐಆರ್; ಮತದಾರರ ಹೆಸರು ಡಿಲೀಟ್- ಮರು ನೋಂದಣಿ ಕುರಿತು ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರನ್ನು ಹೊರಗಿಟ್ಟಿರುವುದನ್ನು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಪ್ರಶ್ನಿಸಿದ್ದು, ಪಟ್ಟಿಯಿಂದ...

ದೆಹಲಿ ಮತದಾರರ ಪಟ್ಟಿ ಪರಿಷ್ಕರಣೆ: 25 ಪ್ರಕರಣಗಳಲ್ಲಿ ಅಧಿಕಾರಿಗಳೇ ‘ಆಕ್ಷೇಪಕರು’! ‘ಕಾರಣ’ ನೀಡದೆ ನೋಟಿಸ್ ಜಾರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ ಅತ್ಯಂತ ಅಪರೂಪದ ಹಾಗೂ ಕಾನೂನು ತಜ್ಞರ ಹುಬ್ಬೇರಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಕರಡು ಮತದಾರರ ಪಟ್ಟಿಯಿಂದ...

Fly Dubai ಹೈಜಾಕ್ ಯತ್ನ: ಭಾರತೀಯ ಪೈಲಟ್ ಮೇಲೆ ದಾಳಿ ಮಾಡಿದ್ದ ಸಹಪೈಲಟ್ ಉಗ್ರರ ನಂಟಿನ ಆರೋಪ

ದುಬೈಯಿಂದ ಟೆಲ್ ಅವೀವ್‌ಗೆ 170ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ತೆರಳುತ್ತಿದ್ದ 'ಫ್ಲೈದುಬೈ' ವಿಮಾನವನ್ನು ಹೈಜಾಕ್ ಮಾಡಲು ಹಾಗೂ ಅಪಘಾತಕ್ಕೀಡು ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿರುವ ಸಹಪೈಲಟ್ ಹಮಾಮ್ ಅಲ್‌ಹಮಾಮಿ ಕುರಿತು ಮತ್ತಷ್ಟು ಆಘಾತಕಾರಿ ಮಾಹಿತಿಗಳು...

ಪ್ರತಿಭಟನಾಕಾರರನ್ನು ಬಂಧಿಸುವಂತೆ ಸಿಎಂ ಫಡ್ನವೀಸ್‌ಗೆ ಅಭಿಜೀತ್ ಸವಾಲು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಶಿವಾಜಿ ಪಾರ್ಕ್‌ನಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರನ್ನು ಬಂಧಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸಿ‌ಜೆ‌ಪಿ (ಕಾಕ್ರಾಚ್ ಜನತಾ ಪಾರ್ಟಿ) ನಾಯಕ ಅಭಿಜೀತ್...