Homeಮುಖಪುಟಹೈದರಾಬಾದ್‌| ಪ್ರಶ್ನೆ ಕೇಳಿ, ನಿಮ್ಮ ಮತದಾನದ ಹಕ್ಕನ್ನು ಪಡೆದುಕೊಳ್ಳಿ: ನಟ ಪ್ರಕಾಶ್ ರಾಜ್ ಕರೆ

ಹೈದರಾಬಾದ್‌| ಪ್ರಶ್ನೆ ಕೇಳಿ, ನಿಮ್ಮ ಮತದಾನದ ಹಕ್ಕನ್ನು ಪಡೆದುಕೊಳ್ಳಿ: ನಟ ಪ್ರಕಾಶ್ ರಾಜ್ ಕರೆ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಬೇಕು, ಸರ್ಕಾರಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಮತದಾರರಿಗೆ ಕರೆ ನೀಡಿದ್ದಾರೆ.

ಶನಿವಾರ ಹೈದರಾಬಾದ್‌ನ ಧರ್ನಾ ಚೌಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು. ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಕೈಬಿಡಲು ಕಾರಣವಾದ ಪ್ರಮುಖ ನಿರ್ಧಾರಗಳ ವಿಷಯದಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರಾದ ಸುಖ್‌‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರನ್ನು ಕತ್ತಲಲ್ಲಿಟ್ಟಿದ್ದರು ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಪ್ರಕಟಿಸಿದ ವರದಿಯ ಬೆನ್ನಲ್ಲೇ, ಗ್ಯಾನೇಶ್ ಕುಮಾರ್ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿ ಹಲವರು ಧರ್ನಾ ಚೌಕ್‌ನಲ್ಲಿ ನೆರೆದಿದ್ದರು.

ಧರ್ನಾ ಚೌಕ್‌ನಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಕಾಶ್ ರಾಜ್, “ಅಪರಾಧ ಪ್ರಕರಣಗಳಲ್ಲಿ, ಅಪರಾಧಿಯು ಕೊಲೆ ಮಾಡುವಾಗ ಸಿಕ್ಕಿಬೀಳುವುದಿಲ್ಲ; ಸಾಕ್ಷ್ಯಗಳನ್ನು ನಾಶಪಡಿಸುವಾಗ ಸಿಕ್ಕಿಬೀಳುತ್ತಾನೆ. ನೀವು (ಗ್ಯಾನೇಶ್ ಕುಮಾರ್) ಈಗ ಸಾಕ್ಷ್ಯಗಳನ್ನು ನಾಶಪಡಿಸುತ್ತಿದ್ದೀರಿ” ಎಂದು ಅವರು ಹೇಳಿದರು.

“ಕಡತಗಳಿಗೆ ಬೆಂಕಿ ಬೀಳುವ ಮುನ್ನವೇ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು, ಸಾಕ್ಷ್ಯಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು” ಎಂದು ಅವರು ಜನರಿಗೆ ಕರೆ ನೀಡಿದರು.

“ಇದು ಕೇವಲ ಮತಕ್ಕಾಗಿ ನಡೆಯುತ್ತಿರುವ ಹೋರಾಟವಲ್ಲ. ಇದು ಪ್ರಜಾಪ್ರಭುತ್ವದ ಕೊಲೆಯ ವಿರುದ್ಧದ ಹೋರಾಟ, ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಗೆ ನೀಡಲಾಗಿದ್ದ ಸಮಯ ಮುಗಿದಿದೆ ಎಂದು ತಿಳಿಸಿದ ಹೈದರಾಬಾದ್ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಿದ ನಂತರ ಧರ್ನಾ ಚೌಕ್‌ನಲ್ಲಿ ನಡೆದ ಪ್ರತಿಭಟನೆಯು ದಿಢೀರನೆ ಮುಕ್ತಾಯಗೊಂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ದಾಳಿ: ಗಾಂಧೀಜಿ ಭಾವಚಿತ್ರ ಹಾಗೂ ವೇದಿಕೆ ಧ್ವಂಸ, ಬಿಜೆಪಿ ಯುವ ಮೋರ್ಚಾ ಕೃತ್ಯ ಎಂದು ಸಿಪಿಐ(ಎಂ) ಆರೋಪ

ಭಾರತೀಯ ಚುನಾವಣಾ ಆಯೋಗ ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪಶ್ಚಿಮ ಬಂಗಾಳದ ಬಿರಾಟಿಯಲ್ಲಿ...

2021 ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕಾಲಿನ ಗಾಯದ ‘ಸುಳ್ಳು ನಾಟಕ’ ಆಡಿದ್ದರು: ಸುವೇಂದು ಅಧಿಕಾರಿ ಆರೋಪ

"2021 ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಕಾಲಿಗೆ ಗಾಯವಾಗಿದೆ ಎಂದು 'ಸುಳ್ಳು ನಾಟಕ' ಆಡಿದ್ದರು. ಅವರ ಈ ಸುಳ್ಳು ಹಕ್ಕುಗಳ ಕುರಿತು ಸರ್ಕಾರದಿಂದ ತನಿಖೆ ನಡೆಸಲಾಗುವುದು" ಎಂದು ಪಶ್ಚಿಮ...

SIR ಪ್ರಕ್ರಿಯೆಯ ಅಧಿಕೃತ ದತ್ತಾಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ರಾಜ್ಯದಲ್ಲಿ ತೀವ್ರ ಚರ್ಚೆ, ರಾಜಕೀಯ ವಿವಾದ ಹಾಗೂ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕೃತ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ....

ಗ್ಯಾನೇಶ್ ವಿರುದ್ಧ ನಿಲ್ಲದ ಪ್ರತಿಭಟನೆ: ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಸೇರಿದಂತೆ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನವೂ ಮುಂದುವರಿಯಿತು. ನವದೆಹಲಿ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ : ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಯೂತ್ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ, ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ) ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಐವೈಸಿ...

ದೆಹಲಿ: ಸಿಇಸಿ ಗ್ಯಾನೇಶ್‌ ಕುಮಾರ್ ವಿರುದ್ಧದ ಹೋರಾಟಕ್ಕೆ ಕಪಿಲ್ ಸಿಬಲ್ – ಪ್ರಶಾಂತ್ ಭೂಷಣ್ ಸೇರ್ಪಡೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲ ಪ್ರಶಾಂತ್ ಭೂಷಣ್, ಎಐಎಸ್‌ಎ...

ಫಾರಂ-7 ಮೂಲಕ ಆಕ್ಷೇಪ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ವಿಜಯೇಂದ್ರ ಒತ್ತಾಯ

ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಎಫ್‌ಐಆರ್ (FIR) ದಾಖಲಿಸಿರುವುದನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಈ ಪ್ರಕರಣಗಳನ್ನು ಕೂಡಲೇ...

ಕೇರಳ ಯುಡಿಎಫ್ ಸರ್ಕಾರದಲ್ಲಿ ಭಿನ್ನಮತದ ಹೊಗೆ: ಸಿಎಂ ಸತೀಶನ್ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರ ಅಸಮಾಧಾನ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳು ಕಳೆಯುವುದರೊಳಗೇ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತ ತೀವ್ರಗೊಳ್ಳುತ್ತಿರುವ ಲಕ್ಷಣಗಳು ಗೋಚರಿಸಿವೆ. ಉನ್ನತ...

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ದೆಹಲಿ ಪೊಲೀಸರಿಂದ 3 ಪ್ರಕರಣ ದಾಖಲು; 1 ಸಾವಿರ ಜನ ವಶಕ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು...

ರಾಜ್ಯದ ಬರ ಪರಿಹಾರಕ್ಕೆ 3,705 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ: ಸಿಎಂ

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯಿಂದಾಗಿ ಕಂಗಾಲಾಗಿರುವ ರೈತರು ಮತ್ತು ಜನಸಾಮಾನ್ಯರ ನೆರವಿಗೆ ಧಾವಿಸಲು ಕೇಂದ್ರ ಸರ್ಕಾರ ತಕ್ಷಣವೇ ಎನ್‌ಡಿಆರ್‌ಎಫ್ (NDRF) ಮಾನದಂಡಗಳನ್ವಯ 3,705.30 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ....