Homeಮುಖಪುಟಗ್ಯಾನೇಶ್ ವಿರುದ್ಧ ನಿಲ್ಲದ ಪ್ರತಿಭಟನೆ: ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಸೇರಿದಂತೆ ಹಲವರ ಬಂಧನ

ಗ್ಯಾನೇಶ್ ವಿರುದ್ಧ ನಿಲ್ಲದ ಪ್ರತಿಭಟನೆ: ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಸೇರಿದಂತೆ ಹಲವರ ಬಂಧನ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನವೂ ಮುಂದುವರಿಯಿತು. ನವದೆಹಲಿ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 163 ಜಾರಿಯಲ್ಲಿದ್ದ ಕಾರಣ, ದೆಹಲಿ ಪೊಲೀಸರು ಹಿರಿಯ ವಕೀಲ ಪ್ರಶಾಂತ್ ಭೂಷಣ್, ರಾಜಕೀಯ ಕಾರ್ಯಕರ್ತ ಯೋಗೇಂದ್ರ ಯಾದವ್ ಮತ್ತು ಎಐಎಸ್‌ಎ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಸಿಇಸಿ ಅವರು ತಕ್ಷಣವೇ ಹುದ್ದೆಯಿಂದ ಕೆಳಗಿಳಿಯದಿದ್ದರೆ ಅಕ್ಟೋಬರ್ 10 ರಂದು ದೆಹಲಿಯಲ್ಲಿ ಬೃಹತ್ ಚಳವಳಿ ನಡೆಸಲಾಗುವುದು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಮತ್ತು ಸಂಚಾಲಕ ಅಭಿಜೀತ್ ದಿಪ್ಕೆ ನೀಡಿದ್ದ ಕರೆಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಶುಕ್ರವಾರದಂದು ವಶಕ್ಕೆ ಪಡೆಯಲಾಗಿದ್ದ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (ಎಐಎಸ್‌ಎ) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ನೀಡಿದ್ದ ಕರೆಯ ಮೇರೆಗೆ ಪ್ರತಿಭಟನಾಕಾರರು ಜಂತರ್ ಮಂತರ್‌ಗೆ ಮರಳಿದ್ದರು. ಶನಿವಾರ ಹಿರಿಯ ವಕೀಲರಾದ ಕಪಿಲ್ ಸಿಬಲ್, ಪ್ರಶಾಂತ್ ಭೂಷಣ್ ಮತ್ತು ರಾಜಕೀಯ ಕಾರ್ಯಕರ್ತ ಯೋಗೇಂದ್ರ ಯಾದವ್ ಅವರು ಬೋರಾ ಅವರೊಂದಿಗೆ ಪ್ರತಿಭಟನಾ ಸ್ಥಳದತ್ತ ಮೆರವಣಿಗೆ ನಡೆಸಿದರು.

ಪ್ರತಿಭಟನಾ ಸ್ಥಳದ ಬಳಿ ಜನರು ನೆರೆಯುತ್ತಿದ್ದಂತೆ ಪೊಲೀಸರು ಅವರನ್ನು ವಶಕ್ಕೆ ಪಡೆಯಲು ಪ್ರಾರಂಭಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಕಡೆಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜಂತರ್ ಮಂತರ್‌ಗೆ ಹೋಗುವ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಪ್ರಶಾಂತ್ ಭೂಷಣ್ ಅವರು ನೇಹಾ ಬೋರಾ ಅವರೊಂದಿಗೆ ಪ್ರತಿಭಟನಾ ಸ್ಥಳದತ್ತ ಮೆರವಣಿಗೆಯ ಮೂಲಕ ಹೆಜ್ಜೆ ಹಾಕಿದ್ದರು. ಈ ನಡುವೆ, ಸಿಇಸಿ ಗ್ಯಾನೇಶ್‌ ಕುಮಾರ್ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರ ನಿರ್ಧಾರವನ್ನು ಪ್ರಶ್ನಿಸಿ ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ) ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ ಎಂದು ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ. ಐವೈಸಿ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಈ ಸಂಬಂಧ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ನೇಹಾ ಬೋರಾ, ಪ್ರತಿಭಟನಾಕಾರರು ಮರುದಿನ ಮತ್ತೆ ಜಂತರ್ ಮಂತರ್‌ನಲ್ಲಿ ನೆರೆಯಲಿದ್ದು, ಶಕ್ತಿ ಮತ್ತು ಉತ್ಸಾಹದಿಂದ ಹಿಂತಿರುಗುವಂತೆ ಮನವಿ ಮಾಡಿದರು.

“ಆ ಒಬ್ಬ ವ್ಯಕ್ತಿಯನ್ನು ಉಳಿಸಲು ಅವರು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿದ್ದಾರೆ” ಎಂದು ಪ್ರತಿಭಟನಾ ಸ್ಥಳದ ಭದ್ರತಾ ವ್ಯವಸ್ಥೆಯನ್ನು ಉಲ್ಲೇಖಿಸಿದ ಅವರು, ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆ ಬೇಡಿಕೆಯನ್ನು ಪುನರುಚ್ಚರಿಸಿದರು.

ಶುಕ್ರವಾರದ ಚಳವಳಿಯು ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿರಲಿಲ್ಲ, ಈ ಪ್ರತಿಭಟನೆಯು ದೇಶಾದ್ಯಂತ ವ್ಯಾಪಿಸಲಿದೆ ಎಂದು ಬೋರಾ ಹೇಳಿದರು.

ಇದೇ ವೇಳೆ ರಾಜಕೀಯ ಕಾರ್ಯಕರ್ತ ಯೋಗೇಂದ್ರ ಯಾದವ್ ಮುಂದಿನ ಹಂತದ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಘೋಷಿಸಿದರು. ‘ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, “ಜಂತರ್ ಮಂತರ್ 2.0 ಮುಂದುವರಿಯುತ್ತದೆ… ನಾವು ಇಂದು ಮತ್ತೆ ಮಧ್ಯಾಹ್ನ 1 ಗಂಟೆಗೆ ಜಂತರ್ ಮಂತರ್‌ನಲ್ಲಿ ಭೇಟಿಯಾಗಲಿದ್ದೇವೆ. ಅಕ್ಟೋಬರ್ 3” ಎಂದು ಬರೆದುಕೊಂಡಿದ್ದರು.

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಯಾರ್) ನಡೆದಿವೆ ಎನ್ನಲಾದ ಅಕ್ರಮಗಳು ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಆಗ್ರಹದ ಸುತ್ತ ಈ ಪ್ರತಿಭಟನೆಗಳು ಕೇಂದ್ರೀಕೃತವಾಗಿವೆ.

ದೆಹಲಿಯಾದ್ಯಂತ ಸುಮಾರು 1,000 ಜನರ ಬಂಧನ

ಶುಕ್ರವಾರದಂದು ಪ್ರಸ್ತಾವಿತ ಪ್ರತಿಭಟನೆಗಾಗಿ ಜಂತರ್ ಮಂತರ್ ತಲುಪದಂತೆ ಪ್ರತಿಭಟನಾಕಾರರನ್ನು ಪೊಲೀಸರು ಹಾಗೂ ಭದ್ರತಾ ಪಡೆಗಳು ತಡೆದಿದ್ದರಿಂದ ದೆಹಲಿಯಾದ್ಯಂತ ಸುಮಾರು 1,000 ಜನರನ್ನು ವಶಕ್ಕೆ ಪಡೆಯಲಾಗಿತ್ತು.

ಆಮ್ ಆದ್ಮಿ ಪಾರ್ಟಿ (ಎಎಪಿ), ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್‌ಎ), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ), ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ) ಮತ್ತು ಇತರ ವಿದ್ಯಾರ್ಥಿ ಹಾಗೂ ಯುವ ಸಂಘಟನೆಗಳು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆಗೆ ಕರೆ ನೀಡಿದ್ದವು.

ದಿನದ ಅವಧಿಯಲ್ಲಿ ಜಂತರ್ ಮಂತರ್ ಸುತ್ತಮುತ್ತಲಿನ ಪ್ರದೇಶಗಳಿಂದ ಸುಮಾರು 750 ಜನರನ್ನು ಮತ್ತು ದೆಹಲಿಯ ಇತರ ಭಾಗಗಳಿಂದ 400 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಬೆಳಗಿನ ಜಾವ ಸುಮಾರು 200 ಜನರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ರಸ್ತೆಗಳಿಂದ ವಶಕ್ಕೆ ಪಡೆಯಲಾದವರನ್ನು ದೆಹಲಿ ಪೊಲೀಸರು ವ್ಯವಸ್ಥೆಗೊಳಿಸಿದ್ದ ಬಸ್‌ಗಳಲ್ಲಿ ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ದಾಳಿ: ಗಾಂಧೀಜಿ ಭಾವಚಿತ್ರ ಹಾಗೂ ವೇದಿಕೆ ಧ್ವಂಸ, ಬಿಜೆಪಿ ಯುವ ಮೋರ್ಚಾ ಕೃತ್ಯ ಎಂದು ಸಿಪಿಐ(ಎಂ) ಆರೋಪ

ಭಾರತೀಯ ಚುನಾವಣಾ ಆಯೋಗ ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪಶ್ಚಿಮ ಬಂಗಾಳದ ಬಿರಾಟಿಯಲ್ಲಿ...

2021 ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕಾಲಿನ ಗಾಯದ ‘ಸುಳ್ಳು ನಾಟಕ’ ಆಡಿದ್ದರು: ಸುವೇಂದು ಅಧಿಕಾರಿ ಆರೋಪ

"2021 ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಕಾಲಿಗೆ ಗಾಯವಾಗಿದೆ ಎಂದು 'ಸುಳ್ಳು ನಾಟಕ' ಆಡಿದ್ದರು. ಅವರ ಈ ಸುಳ್ಳು ಹಕ್ಕುಗಳ ಕುರಿತು ಸರ್ಕಾರದಿಂದ ತನಿಖೆ ನಡೆಸಲಾಗುವುದು" ಎಂದು ಪಶ್ಚಿಮ...

SIR ಪ್ರಕ್ರಿಯೆಯ ಅಧಿಕೃತ ದತ್ತಾಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ರಾಜ್ಯದಲ್ಲಿ ತೀವ್ರ ಚರ್ಚೆ, ರಾಜಕೀಯ ವಿವಾದ ಹಾಗೂ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕೃತ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ....

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ : ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಯೂತ್ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ, ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ) ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಐವೈಸಿ...

ಹೈದರಾಬಾದ್‌| ಪ್ರಶ್ನೆ ಕೇಳಿ, ನಿಮ್ಮ ಮತದಾನದ ಹಕ್ಕನ್ನು ಪಡೆದುಕೊಳ್ಳಿ: ನಟ ಪ್ರಕಾಶ್ ರಾಜ್ ಕರೆ

ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಬೇಕು, ಸರ್ಕಾರಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಮತದಾರರಿಗೆ...

ದೆಹಲಿ: ಸಿಇಸಿ ಗ್ಯಾನೇಶ್‌ ಕುಮಾರ್ ವಿರುದ್ಧದ ಹೋರಾಟಕ್ಕೆ ಕಪಿಲ್ ಸಿಬಲ್ – ಪ್ರಶಾಂತ್ ಭೂಷಣ್ ಸೇರ್ಪಡೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲ ಪ್ರಶಾಂತ್ ಭೂಷಣ್, ಎಐಎಸ್‌ಎ...

ಫಾರಂ-7 ಮೂಲಕ ಆಕ್ಷೇಪ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ವಿಜಯೇಂದ್ರ ಒತ್ತಾಯ

ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಎಫ್‌ಐಆರ್ (FIR) ದಾಖಲಿಸಿರುವುದನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಈ ಪ್ರಕರಣಗಳನ್ನು ಕೂಡಲೇ...

ಕೇರಳ ಯುಡಿಎಫ್ ಸರ್ಕಾರದಲ್ಲಿ ಭಿನ್ನಮತದ ಹೊಗೆ: ಸಿಎಂ ಸತೀಶನ್ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರ ಅಸಮಾಧಾನ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳು ಕಳೆಯುವುದರೊಳಗೇ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತ ತೀವ್ರಗೊಳ್ಳುತ್ತಿರುವ ಲಕ್ಷಣಗಳು ಗೋಚರಿಸಿವೆ. ಉನ್ನತ...

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ದೆಹಲಿ ಪೊಲೀಸರಿಂದ 3 ಪ್ರಕರಣ ದಾಖಲು; 1 ಸಾವಿರ ಜನ ವಶಕ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು...

ರಾಜ್ಯದ ಬರ ಪರಿಹಾರಕ್ಕೆ 3,705 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ: ಸಿಎಂ

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯಿಂದಾಗಿ ಕಂಗಾಲಾಗಿರುವ ರೈತರು ಮತ್ತು ಜನಸಾಮಾನ್ಯರ ನೆರವಿಗೆ ಧಾವಿಸಲು ಕೇಂದ್ರ ಸರ್ಕಾರ ತಕ್ಷಣವೇ ಎನ್‌ಡಿಆರ್‌ಎಫ್ (NDRF) ಮಾನದಂಡಗಳನ್ವಯ 3,705.30 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ....