Homeಮುಖಪುಟಜಂತರ್ ಮಂತರ್ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ: ರಾಹುಲ್ ಗಾಂಧಿ,...

ಜಂತರ್ ಮಂತರ್ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ: ರಾಹುಲ್ ಗಾಂಧಿ, ಸಿಜೆಪಿ ಆರೋಪ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿ, ಬಿಜೆಪಿಗೆ ಅನುಕೂಲವಾಗುವಂತೆ ಕೋಟ್ಯಂತರ ಮತಗಳನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ಪ್ರತಿಭಟನೆಯ ವರದಿಗಾರಿಕೆ ನಡೆಸುತ್ತಿದ್ದ ಮಹಿಳಾ ಪತ್ರಕರ್ತೆಯೊಬ್ಬರ ಮೇಲೆ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ದೆಹಲಿ ಪೊಲೀಸ್ ಇಲಾಖೆಯು ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲೇ ಬರುವುದರಿಂದ ಅಮಿತ್ ಶಾ ಅವರು ಈ ದೌರ್ಜನ್ಯಕ್ಕೆ ಉತ್ತರಿಸಲೇಬೇಕು ಎಂದು ಒತ್ತಾಯಿಸಿದ್ದಾರೆ. ಆರೋಪಿ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ನೂರಾರು ಪತ್ರಕರ್ತರು ಧರಣಿ ನಡೆಸುತ್ತಿರುವ ಬೆನ್ನಲ್ಲೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

“ಜಂತರ್ ಮಂತರ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಪತ್ರಕರ್ತೆಯೊಬ್ಬರು ಆರೋಪಿಸಿದ್ದಾರೆ. ಎಫ್‌ಐಆರ್ ದಾಖಲಿಸಬೇಕು ಎಂಬ ಒಂದೇ ಒಂದು ಬೇಡಿಕೆಯಿಟ್ಟು ನೂರಾರು ಪತ್ರಕರ್ತರು ಗಂಟೆಗಟ್ಟಲೆ ಧರಣಿ ಕುಳಿತಿದ್ದಾರೆ. ದೂರು ದಾಖಲಿಸಿಕೊಳ್ಳುವುದು ಪೊಲೀಸರ ಕನಿಷ್ಠ ಕರ್ತವ್ಯವಲ್ಲವೇ? ಅದನ್ನು ಮಾಡಲು ಅವರು ಹಿಂದೇಟು ಹಾಕುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಶನಿವಾರ ಒಂದೇ ದಿನ ಜಂತರ್ ಮಂತರ್‌ನಲ್ಲಿ ನೂರಾರು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ ಅವರು, “ಮಹಿಳಾ ಪ್ರತಿಭಟನಾಕಾರರ ಮೇಲೂ ದೌರ್ಜನ್ಯ ಎಸಗಿರುವ ಆರೋಪಗಳಿವೆ. ಕ್ಯಾಮೆರಾಗಳನ್ನು ಕಸಿದುಕೊಳ್ಳಲಾಗಿದೆ, ಪತ್ರಕರ್ತರನ್ನು ಎಳೆದಾಡಲಾಗಿದೆ. ಹೀಗೆ ಮಹಿಳೆಯರ ಮೇಲೆ ಪೊಲೀಸರು ಅಸಹ್ಯಕರವಾಗಿ ನಡೆದುಕೊಳ್ಳುತ್ತಿರುವುದು ಇದೇ ಮೊದಲೇನೂ ಅಲ್ಲ, ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಕ್ಷ್ಯಗಳನ್ನು ನಾವು ಈ ಹಿಂದೆಯೂ ನೋಡಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಯಾದ್ಯಂತ ಭಯದ ವಾತಾವರಣದಲ್ಲೂ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ ಅವರ ರಕ್ಷಣೆಗೆ ನಿಲ್ಲಬೇಕಾದ ಪೊಲೀಸರೇ ಅವರ ಮೇಲೆ ಕೈಮಾಡುತ್ತಿದ್ದಾರೆ. “ಒಬ್ಬ ಮಹಿಳೆಯ ದೂರನ್ನೂ ದಾಖಲಿಸಲು ಹೆದರುವ ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ದೆಹಲಿ ಪೊಲೀಸರು ಗೃಹ ಸಚಿವಾಲಯದ ಕೆಳಗೆ ಬರುತ್ತಾರೆ. ಅಮಿತ್ ಶಾ ಅವರೇ, ನೀವು ಎಲ್ಲಿದ್ದೀರಿ? ಇದಕ್ಕೆ ನೀವು ಜವಾಬ್ದಾರಿ ವಹಿಸಿ ಉತ್ತರಿಸಲೇಬೇಕು” ಎಂದು ಪ್ರಶ್ನಿಸಿದ್ದಾರೆ.

CJP ಮತ್ತು AISA ಗಂಭೀರ ಆರೋಪ:

ಕಾಕ್‌ರೋಚ್ ಜನತಾ ಪಾರ್ಟಿ (CJP) ವಕ್ತಾರ ಸೌರವ್ ದಾಸ್ ಅವರು, ಎಸಿಪಿ ವಿವೇಕ್ ಭಗತ್ ಅವರು ಮಹಿಳಾ ಪತ್ರಕರ್ತೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ದೆಹಲಿ ಪೊಲೀಸರು ಎಸಿಪಿ ವಿವೇಕ್ ಭಗತ್ ಅವರನ್ನು ಏಕೆ ರಕ್ಷಿಸುತ್ತಿದ್ದಾರೆ? ನಾವು ಸಂತ್ರಸ್ತ ಪತ್ರಕರ್ತೆಯ ಪರ ನಿಲ್ಲುತ್ತೇವೆ. ತಕ್ಷಣವೇ ಅಮಾನತುಗೊಳಿಸಿ ಎಫ್‌ಐಆರ್ ದಾಖಲಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನು ಎಡಪಂಥೀಯ ವಿದ್ಯಾರ್ಥಿ ಸಂಘಟನೆ ‘ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ (AISA) ಕೂಡ ಇದೇ ರೀತಿಯ ಆರೋಪ ಮಾಡಿದ್ದು, ಪುರುಷ ಪೊಲೀಸರು ಮಹಿಳಾ ಪ್ರತಿಭಟನಾಕಾರರು, ಪತ್ರಕರ್ತರು ಮತ್ತು ವಕೀಲರ ಮೇಲೆ ಹಲ್ಲೆ ನಡೆಸಿದ್ದಾರೆ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕಠೋರ ಮತ್ತು ಅಸಭ್ಯ ನಡವಳಿಕೆ ಒಪ್ಪಲಾಗದು : ಜಂತರ್ ಮಂತರ್‌ನಲ್ಲಿ ಪತ್ರಕರ್ತರ ಮೇಲಿನ ದೌರ್ಜನ್ಯಕ್ಕೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರ ಖಂಡನೆ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ದೆಹಲಿ ಪೊಲೀಸರು ಮಾಧ್ಯಮ ಪ್ರತಿನಿಧಿಗಳ ವಿರುದ್ಧ ನಡೆದುಕೊಂಡ ರೀತಿ ಮತ್ತು ಅವರ ಮೇಲಿನ ದೌರ್ಜನ್ಯವನ್ನು ಖಂಡಿಸಿ 'ಪ್ರೆಸ್ ಕ್ಲಬ್...

SIR ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಕೇರಳದಲ್ಲಿ ಗ್ಯಾನೇಶ್ ಕುಮಾರ್ ವಿರುದ್ಧ ಹಳೆಯ ಪ್ರಕರಣ ಮರುತನಿಖೆಗೆ ಆದೇಶ 

ತಿರುವನಂತಪುರಂ: ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಅಧಿಕಾರಾವಧಿಗೆ ಸಂಬಂಧಿಸಿದ...

2006 ಎಂಜಿನಿಯರ್ ಆತ್ಮಹತ್ಯೆ ಪ್ರಕರಣ : ಗ್ಯಾನೇಶ್ ಕುಮಾರ್ ವಿರುದ್ಧ ಮರುತನಿಖೆಗೆ ಕೇರಳಂ ಸರ್ಕಾರ ಆದೇಶ

ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಕ್ರಮಗಳ ಆರೋಪ ಎದುರಿಸುತ್ತಿರುವ ದೇಶದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರಿಗೆ 2006ರ ಹಳೆಯ ಭ್ರಷ್ಟಾಚಾರ ಪ್ರಕರಣವೊಂದು ಮತ್ತೆ ಕಂಠಕವಾಗಿ ಪರಿಣಮಿಸಿದೆ....

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ದಾಳಿ: ಗಾಂಧೀಜಿ ಭಾವಚಿತ್ರ ಹಾಗೂ ವೇದಿಕೆ ಧ್ವಂಸ, ಬಿಜೆಪಿ ಯುವ ಮೋರ್ಚಾ ಕೃತ್ಯ ಎಂದು ಸಿಪಿಐ(ಎಂ) ಆರೋಪ

ಭಾರತೀಯ ಚುನಾವಣಾ ಆಯೋಗ ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪಶ್ಚಿಮ ಬಂಗಾಳದ ಬಿರಾಟಿಯಲ್ಲಿ...

2021 ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕಾಲಿನ ಗಾಯದ ‘ಸುಳ್ಳು ನಾಟಕ’ ಆಡಿದ್ದರು: ಸುವೇಂದು ಅಧಿಕಾರಿ ಆರೋಪ

"2021 ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಕಾಲಿಗೆ ಗಾಯವಾಗಿದೆ ಎಂದು 'ಸುಳ್ಳು ನಾಟಕ' ಆಡಿದ್ದರು. ಅವರ ಈ ಸುಳ್ಳು ಹಕ್ಕುಗಳ ಕುರಿತು ಸರ್ಕಾರದಿಂದ ತನಿಖೆ ನಡೆಸಲಾಗುವುದು" ಎಂದು ಪಶ್ಚಿಮ...

SIR ಪ್ರಕ್ರಿಯೆಯ ಅಧಿಕೃತ ದತ್ತಾಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ರಾಜ್ಯದಲ್ಲಿ ತೀವ್ರ ಚರ್ಚೆ, ರಾಜಕೀಯ ವಿವಾದ ಹಾಗೂ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕೃತ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ....

ಗ್ಯಾನೇಶ್ ವಿರುದ್ಧ ನಿಲ್ಲದ ಪ್ರತಿಭಟನೆ: ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಸೇರಿದಂತೆ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನವೂ ಮುಂದುವರಿಯಿತು. ನವದೆಹಲಿ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ : ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಯೂತ್ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ, ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ) ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಐವೈಸಿ...

ಹೈದರಾಬಾದ್‌| ಪ್ರಶ್ನೆ ಕೇಳಿ, ನಿಮ್ಮ ಮತದಾನದ ಹಕ್ಕನ್ನು ಪಡೆದುಕೊಳ್ಳಿ: ನಟ ಪ್ರಕಾಶ್ ರಾಜ್ ಕರೆ

ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಬೇಕು, ಸರ್ಕಾರಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಮತದಾರರಿಗೆ...

ದೆಹಲಿ: ಸಿಇಸಿ ಗ್ಯಾನೇಶ್‌ ಕುಮಾರ್ ವಿರುದ್ಧದ ಹೋರಾಟಕ್ಕೆ ಕಪಿಲ್ ಸಿಬಲ್ – ಪ್ರಶಾಂತ್ ಭೂಷಣ್ ಸೇರ್ಪಡೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲ ಪ್ರಶಾಂತ್ ಭೂಷಣ್, ಎಐಎಸ್‌ಎ...