HomeಅಂಕಣಗಳುSIRದೆಹಲಿಯಲ್ಲಿ ಎಸ್‌ಐಆರ್ ಅಕ್ರಮಗಳ ವಿರುದ್ಧ 'ಇಂಡಿಯಾ' ಸಂಸದರ ಜಾಥಾ: ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ದೆಹಲಿಯಲ್ಲಿ ಎಸ್‌ಐಆರ್ ಅಕ್ರಮಗಳ ವಿರುದ್ಧ ‘ಇಂಡಿಯಾ’ ಸಂಸದರ ಜಾಥಾ: ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ

- Advertisement -
- Advertisement -

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಪ್ರಮುಖ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮಗಳು ನಡೆಯುತ್ತಿದ್ದು, ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಮತ್ತು ಚುನಾವಣಾ ಆಯೋಗ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ‘ಇಂಡಿಯಾ’ ಒಕ್ಕೂಟದ ಸಂಸದರು ದೆಹಲಿಯಲ್ಲಿ ಚುನಾವಣಾ ಆಯೋಗದ ಕಚೇರಿಯತ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಸಂಸತ್ ಭವನದ ಮಕರ ದ್ವಾರದಿಂದ ಬೆಳಿಗ್ಗೆ 11 ಗಂಟೆಗೆ ಆರಂಭವಾದ ಈ ಮೆರವಣಿಗೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಪ್ರತಿಪಕ್ಷಗಳ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.

ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ತೆರಳುತ್ತಿದ್ದ ಮೆರವಣಿಗೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದು, ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಸಂಸದರನ್ನು ವಶಕ್ಕೆ ಪಡೆದಿದ್ದಾರೆ.

ಮೆರವಣಿಗೆಯ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಆಕಾಶವಾಣಿ ಭವನ ಪ್ರವೇಶಿಸಲು ಯತ್ನಿಸಿದ್ದು, ಬ್ಯಾರಿಕೇಡ್ ಏರಿದ ರಾಹುಲ್ ಗಾಂಧಿ ತ್ರಿವರ್ಣ ಧ್ವಜವನ್ನು ಬೀಸಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು “ದೇಶದ್ರೋಹಿ” ಎಂದು ಕಟುವಾಗಿ ಜರೆದಿರುವ ಕಾಂಗ್ರೆಸ್, ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಆಗ್ರಹಿಸಿದೆ.

ಸೆಪ್ಟೆಂಬರ್ 30ರಂದು ನಡೆದ ‘ಇಂಡಿಯಾ’ ಒಕ್ಕೂಟದ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಗ್ಯಾನೇಶ್ ಕುಮಾರ್ ರಾಜೀನಾಮೆ, ಎಸ್‌ಐಆರ್ ಪ್ರಕ್ರಿಯೆ ಹಿಂಪಡೆಯುವುದು, ಮುಂದಿನ ಚುನಾವಣೆಗಳಲ್ಲಿ ಹಳೆಯ ಮತದಾರರ ಪಟ್ಟಿಗಳನ್ನೇ ಪರಿಗಣಿಸುವುದು ಹಾಗೂ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರಿಗೆ ಪರಿಣಾಮಕಾರಿ ಮೇಲ್ಮನವಿ ವ್ಯವಸ್ಥೆ ಕಲ್ಪಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಸಂಸದರು ಮುಂದಿಟ್ಟಿದ್ದಾರೆ. ಈ ವಿಚಾರ ಕೇವಲ ಮತದಾರರ ಪಟ್ಟಿಗೆ ಸೀಮಿತವಾಗಿರದೆ, ಚುನಾವಣಾ ವ್ಯವಸ್ಥೆಯ ಮೇಲಿನ ವಿಶ್ವಾಸ, ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ನಾಗರಿಕರ ಮೂಲಭೂತ ಹಕ್ಕುಗಳ ಕುರಿತ ದೊಡ್ಡ ರಾಜಕೀಯ ಸಂಘರ್ಷವಾಗಿ ರೂಪಾಂತರಗೊಂಡಿದೆ ಎಂದು ಪ್ರತಿಪಕ್ಷಗಳು ಪ್ರತಿಪಾದಿಸಿವೆ.

ಇದರ ನಡುವೆಯೇ, ಹೊಸ ಮತದಾರರನ್ನು ಸೇರ್ಪಡೆಗೊಳಿಸುವ ಫಾರ್ಮ್ 6ರಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದ ಹೆಚ್ಚುವರಿ ಘೋಷಣೆಗಳನ್ನು ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಫಾರ್ಮ್ 6ರಲ್ಲಿ ಮಾಡಲಾಗಿರುವ ಬದಲಾವಣೆಗಳಿಗೆ ನ್ಯಾಯಾಲಯವು ಯಾವುದೇ ಅನುಮೋದನೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಸಂಬಂಧಿತ ದಾಖಲೆಗಳು ಬಂದ ಬಳಿಕ ಬದಲಾವಣೆಗಳನ್ನು ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆಯಾದರೂ, ಈ ಬದಲಾವಣೆಗಳನ್ನು ಇನ್ನೂ ಅಂತಿಮವಾಗಿ ಅಕ್ರಮ ಎಂದು ಸುಪ್ರೀಂ ಕೋರ್ಟ್ ಘೋಷಿಸಿಲ್ಲ ಹಾಗೂ ಅಂತಿಮ ಕಾನೂನು ತೀರ್ಪು ಹೊರಬರುವುದು ಬಾಕಿಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಸರಗೋಡು: ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ನಾಯಕನ ಉಪಸ್ಥಿತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

'ವಂದೇ ಮಾತರಂ'ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್ ನಂಟಿನ ಸಂಘಟನೆಯೊಂದರ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರ ಉಪಸ್ಥಿತಿಯನ್ನು ವಿರೋಧಿಸಿ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಅ.6) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾರ್ಯಕ್ರಮದಲ್ಲಿ ನಂದಕುಮಾರ್ ಅವರ...

ಜಂತರ್ ಮಂತರ್ ಪ್ರತಿಭಟನೆ: ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗೆ ಬಡ್ತಿ: ದೂರುದಾರರನ್ನೇ ಎರಡು ಬಾರಿ ಬಂದಿಸಿದ್ದ ಪೊಲೀಸರು

ನವದೆಹಲಿ: ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಅಧಿಕಾರಿ ವಿವೇಕ್ ಭಗತ್ ಅವರನ್ನು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಅಡಿಷನಲ್ ಡಿಸಿಪಿ) ಹುದ್ದೆಗೆ ಬಡ್ತಿ ನೀಡಿರುವುದು ತೀವ್ರ...

ಪತ್ರಕರ್ತೆ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಸಿಪಿಗೆ ಹೆಚ್ಚುವರಿ ಡಿಸಿಪಿ ಹುದ್ದೆ; ವಿರೋಧದ ಬಳಿಕ ಆದೇಶಕ್ಕೆ ತಡೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆಯ ವೇಳೆ ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರಿಗೆ ನೀಡಲಾಗಿದ್ದ...

ಬಿಜೆಪಿ ಸದಸ್ಯರಾಗಿರುವವರು ಮಾತ್ರ ಮತ ಚಲಾಯಿಸಬಹುದು ಎಂದು ಚುನಾವಣಾ ಆಯೋಗ ನಂಬಿದೆ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀವ್ರ ವಾಗ್ದಾಳಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಆಯೋಗದ ವಿವಾದಾತ್ಮಕ ಕಾರ್ಯವೈಖರಿಯನ್ನು ಖಂಡಿಸಿ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ವೇಳೆ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್...

SIR ಅಕ್ರಮಗಳ ವಿರುದ್ಧ ಅಕ್ಟೋಬರ್‌ 8ರಂದು ‘ಜನತಾ ನ್ಯಾಯಾಲಯ’: ಮತ ಹಕ್ಕು ರಕ್ಷಣೆಗೆ ವಿನೂತನ ಹೋರಾಟ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಅಕ್ಟೋಬರ್‌‌ 8ರಂದು 'ಜನತಾ ನ್ಯಾಯಾಲಯ' ಎಂಬ...

‘ಫಾರಂ 6 ಬದಲಾವಣೆ ಅನುಮೋದಿಸಿಲ್ಲ’: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಪಕ್ಷಗಳ ಆರೋಪಕ್ಕೆ ಮತ್ತಷ್ಟು ಬಲ ತುಂಬಿದ ಸುಪ್ರೀಂ ಹೇಳಿಕೆ

ನವದೆಹಲಿ: ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ಬಳಸುವ ನಮೂನೆ 6ಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ಹೇಳಿಕೆ ಇದೀಗ ಚುನಾವಣಾ ಆಯೋಗ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದೆ. ಮತದಾರರ ಪಟ್ಟಿಯ...

ಬಂಗಾಳ ಟ್ರಿಬ್ಯೂನಲ್ ನ್ಯಾಯಾಧೀಶರಿಂದ ಚುನಾವಣಾ ಆಯೋಗದ ಪೋರ್ಟಲ್ ವೈಫಲ್ಯದ ಬಗ್ಗೆ ಗಂಭೀರ ಆರೋಪ: ‘ನೋಡೀಸ್ ಜಾರಿ, ವಿಚಾರಣೆ ಅಥವಾ ಮತದಾರರ ಹಕ್ಕು ಮರುಸ್ಥಾಪನೆ ಅಸಾಧ್ಯ!

ಪ್ರಮುಖ ರಾಷ್ಟ್ರೀಯ ದಿನಪತ್ರಿಕೆ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿರುವಂತೆ, ಪಶ್ಚಿಮ ಬಂಗಾಳದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅಳಿಸಲ್ಪಟ್ಟ ಲಕ್ಷಾಂತರ ಮತದಾರರ ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಸುಪ್ರೀಂ ಕೋರ್ಟ್...

‘ನಕಲಿ ಫಾರ್ಮ್ 7 ಸಲ್ಲಿಕೆ ವಿರುದ್ಧ ಕ್ರಮ ತೆಗೆದುಕೊಳ್ಳಿ..’; ಅಧಿಕಾರಿಗಳಿಗೆ ತೆಲಂಗಾಣ ಸಿಇಒ ಸೂಚನೆ

ತೆಲಂಗಾಣದಲ್ಲಿ ಫಾರ್ಮ್ 7 ರ ಮೂಲಕ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸುತ್ತಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ (ಡಿಇಒ) ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ)...

ಕರ್ನಾಟಕ ಎಸ್ಐಆರ್: ಮುಸ್ಲೀಮರನ್ನು ಗುರಿಯಾಗಿಸಿ ತೀರ್ಥಹಳ್ಳಿಯಲ್ಲಿ 81 ಮತದಾರರ ಹೆಸರು ಅಳಿಸಲು ಬಿಜೆಪಿ ಮುಖಂಡರ ಮನವಿ

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿರುವ ನಡುವೆಯೇ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸುರುಳಿ ಬಾಳೆಬೈಲು ಗ್ರಾಮದಲ್ಲಿ 81 ಮತದಾರರ ಹೆಸರುಗಳನ್ನು ಕರಡು ಮತದಾರರ ಪಟ್ಟಿಯಿಂದ ಅಳಿಸುವಂತೆ ಬಿಜೆಪಿ...

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಪ್ರಕರಣ: ಬಿಜೆಪಿ ನಾಯಕ ರವಿ ಪಾಟೀಲ್‌ಗೆ ನಿರೀಕ್ಷಣಾ ಜಾಮೀನು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮುಸ್ಲಿಂ ಮತದಾರರ ಹೆಸರುಗಳನ್ನು ಮೋಸದಿಂದ ಡಿಲೀಟ್ ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಡಾ. ರವಿ ಬಸಲಿಂಗಪ್ಪಗೌಡ ಪಾಟೀಲ್ ಅವರಿಗೆ ಕರ್ನಾಟಕದ ಬೆಳಗಾವಿಯ...