Homeಮುಖಪುಟಚುನಾವಣಾ ಆಯೋಗಕ್ಕೆ 'ಇಂಡಿಯಾ' ಮೈತ್ರಿಕೂಟ ಮೆರವಣಿಗೆ; ಬ್ಯಾರಿಕೇಡ್ ಹತ್ತಿದ ರಾಹುಲ್ ಗಾಂಧಿ

ಚುನಾವಣಾ ಆಯೋಗಕ್ಕೆ ‘ಇಂಡಿಯಾ’ ಮೈತ್ರಿಕೂಟ ಮೆರವಣಿಗೆ; ಬ್ಯಾರಿಕೇಡ್ ಹತ್ತಿದ ರಾಹುಲ್ ಗಾಂಧಿ

- Advertisement -
- Advertisement -

ಸಂಸತ್ ಭವನದಿಂದ ಚುನಾವಣಾ ಆಯೋಗದ ಕಡೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ‘ಇಂಡಿಯಾ’ ಮೈತ್ರಿಕೂಟದ ಸಂಸತ್ತಿನ ಸದಸ್ಯರನ್ನು ಮಾರ್ಗ ಮಧ್ಯದಲ್ಲೇ ತಡೆಯಲಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಪೊಲೀಸ್ ಬ್ಯಾರಿಕೇಡ್ ಮೇಲೇರಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲಾ ಸಂಸತ್ ಸದಸ್ಯರು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.

ಚುನಾವಣಾ ಆಯೋಗದ ಪ್ರಧಾನ ಕಚೇರಿಗೆ ಹೋಗುವ ನೀತಿ ಆಯೋಗ ಮತ್ತು ಆಕಾಶವಾಣಿ ಭವನದ ನಡುವಿನ ರಸ್ತೆಯಲ್ಲಿರುವ ನೀತಿ ಆಯೋಗದ ಕಚೇರಿಯ ಎದುರು ಸಂಸದರನ್ನು ತಡೆಯಲಾಯಿತು.

ಮುಂದಕ್ಕೆ ತೆರಳದಂತೆ ತಡೆದ ಬಳಿಕ ಸಂಸದರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ವಿರೋಧ ಪಕ್ಷದ ಸಂಸದರು ಗ್ಯಾನೇಶ್ ಕುಮಾರ್ ಅವರು ಆರ್‌ಎಸ್‌ಎಸ್ ಗಣವೇಷ ಧರಿಸಿರುವ ಕಟೌಟ್‌ಗಳನ್ನು ಹಿಡಿದುಕೊಂಡು, “ಬಿಜೆಪಿ ಹೈ ಸಿಇಸಿ ಹೈ, ವೋಟ್ ಚೋರ್, ಗಡ್ಡಿ ಛೋಡ್” ಮತ್ತು “ಪ್ರಜಾಪ್ರಭುತ್ವ ಮಾರಾಟಕ್ಕಿಲ್ಲ” ಎಂಬ ಘೋಷಣೆಗಳನ್ನು ಕೂಗಿದರು

ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ, ಡೆರೆಕ್ ಒ’ಬ್ರೇನ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಸಿಪಿಐ (ಎಂ) ನಾಯಕ ಜಾನ್ ಬ್ರಿಟ್ಟಾಸ್ ಸೇರಿದಂತೆ ಅನೇಕರು ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಭಾರೀ ಭದ್ರತಾ ವ್ಯವಸ್ಥೆ

ಮೆರವಣಿಗೆಗೂ ಮುನ್ನ ಸಂಸತ್ತು ಹಾಗೂ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಒಳಗೆ, ಸುತ್ತಮುತ್ತ ಭಾರೀ ಭದ್ರತೆ ಮತ್ತು ಬ್ಯಾರಿಕೇಡ್‌‌ಗಳನ್ನು ಹಾಕಲಾಗಿತ್ತು.

ಸಂಸದರು ಆಗಮಿಸುವುದಕ್ಕೂ ಬಹಳ ಮುಂಚಿತವಾಗಿ ಭದ್ರತಾ ಸಿಬ್ಬಂದಿಯನ್ನು ಆ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಜಮಾಯಿಸಿ ಚುನಾವಣಾ ಆಯೋಗದ ಕಚೇರಿಯಾದ ನಿರ್ವಾಚನ ಸದನದ ಕಡೆಗೆ ಹೊರಟರು.

ಮೆರವಣಿಗೆಗೂ ಮುನ್ನ ವಿರೋಧ ಪಕ್ಷದ ಸಂಸದರು ಭದ್ರತಾ ವ್ಯವಸ್ಥೆಯನ್ನು ಪ್ರಶ್ನಿಸಿದರು. ಮತದಾರರ ನೊಂದಣಿಯ ಶಾಸನಬದ್ಧ ಅರ್ಜಿಯಾದ ‘ಫಾರ್ಮ್ 6’ನಲ್ಲಿನ ಬದಲಾವಣೆಗಳ ಕುರಿತು ಸುಪ್ರೀಂ ಕೋರ್ಟ್‌ನ ವೀಕ್ಷಣೆಗಳನ್ನು ಉಲ್ಲೇಖಿಸಿ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟು ಹಿಡಿದರು. ಚುನಾವಣಾ ಆಯೋಗದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಗ್ಯಾನೇಶ್ ಕುಮಾರ್ ಕುಂದಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಆರೋಪಿಸಿದರು.

“ದೇಶಾದ್ಯಂತ ಜ್ಞಾನೇಶ್ ಕುಮಾರ್ ನೇತೃತ್ವ ವಹಿಸಿದ್ದ ಸಂಸ್ಥೆಯ ಮೇಲೆ ಇಡೀ ದೇಶಕ್ಕೆ ನಂಬಿಕೆಯಿತ್ತು, ಇಡೀ ದೇಶ ಹೆಮ್ಮೆಪಡುವಂತಹ ಸಂಸ್ಥೆಯಾಗಿತ್ತು. ಅದರ ನಿಷ್ಪಕ್ಷಪಾತದ ಬಗ್ಗೆ ಎಂದಿಗೂ ಪ್ರಶ್ನೆಗಳು ಎದ್ದಿರಲಿಲ್ಲ. ಆದರೆ ಓರ್ವ ವ್ಯಕ್ತಿ ಆ ನಂಬಿಕೆಯನ್ನು ಮುರಿದಿದ್ದಾರೆ” ಎಂದು ಅವರು ತಿಳಿಸಿದರು.

“ಇಡೀ ಒಕ್ಕೂಟವು ಒಟ್ಟಾಗಿ ಕೆಲಸ ಮಾಡುತ್ತಿದೆ. ನಾವು ಗ್ಯಾನೇಶ್‌ ಕುಮಾರ್ ಅವರನ್ನು ಪ್ರಶ್ನಿಸುತ್ತೇವೆ, ಆದರೆ ಬಿಜೆಪಿ ಮುಖ್ಯಮಂತ್ರಿಗಳು ಉತ್ತರ ನೀಡಲು ಮುಂದಾಗುತ್ತಾರೆ” ಎಂದು ಅವರು ಆರೋಪಿಸಿದರು.

ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಮೆರವಣಿಗೆಯ ಮುನ್ನ ಮಾಡಲಾದ ಭದ್ರತಾ ವ್ಯವಸ್ಥೆಯ ಪ್ರಮಾಣವನ್ನು ಪ್ರಶ್ನಿಸಿದರು, ಸಂಸದರು ಶಾಂತಿಯುತವಾಗಿ ಮುಂದೆ ಸಾಗಲು ಬಯಸಿದ್ದರು ಎಂದು ಹೇಳಿದರು.

“ನಾವು ಸಂಸದರು, ನಾವು ಸಂಸತ್ತಿನ ಸದಸ್ಯರು. ನಾವು ಈ ದೇಶದ ನಾಗರಿಕರೂ ಹೌದು. ನಮ್ಮನ್ನು ತಡೆಯಲು ಇಂತಹ ದೊಡ್ಡ ಪಡೆಯನ್ನು ನಿಯೋಜಿಸುವ ಅಗತ್ಯವಿರುವುದು ಯಾಕೆ? ನಾವು ನಡೆದುಕೊಂಡು ಹೋಗುತ್ತೇವೆ. ನಾವು ನಿಶಸ್ತ್ರರಾಗಿದ್ದೇವೆ” ಎಂದು ಅವರು ಹೇಳಿದರು.

ಮಹತ್ವದ ಸಚಿವರ ನಿವಾಸಗಳ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಮತ್ತು ಸಿಐಎಸ್‌ಎಫ್ (ಸಿಐಎಸ್‌ಎಫ್‌) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ರಾವುತ್ ಆರೋಪ ಮಾಡಿದರು.

ಫಾರ್ಮ್ 6 ಕುರಿತು ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದಾರೆ ಎಂದು ಗ್ಯಾನೇಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ಸಿಇಸಿಗೆ ಹುದ್ದೆಯಲ್ಲಿ ಮುಂದುವರಿಯಲು “ಯಾವುದೇ ನೈತಿಕ ಹಕ್ಕಿಲ್ಲ” ಎಂದರು.

ಫಾರ್ಮ್ 6 ರ ಯಾವುದೇ ಮಾರ್ಪಡಿಸಿದ ಆವೃತ್ತಿಯನ್ನು ತಾವು ಅನುಮೋದಿಸಿಲ್ಲ ಎಂದು ಸೋಮವಾರ ತಿಳಿಸಿರುವ ಸುಪ್ರೀಂ ಕೋರ್ಟ್, ಬದಲಾವಣೆಗಳನ್ನು ಮಾಡಲಾಗಿದೆಯೇ ಮತ್ತು ಅದನ್ನು ಯಾರು ಅಧಿಕೃತಗೊಳಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗದ ದಾಖಲೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾನೇಶ್ ಕುಮಾರ್‌ಗೆ ಸಂಕಷ್ಟ ತಂದಿಟ್ಟ 2006ರ ಲಂಚದ ಕೇಸ್: ಏನಿದು ಪ್ರಕರಣ?

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಯಲ್ಲಿ ಬೃಹತ್ ಅಕ್ರಮ ಎಸಗಲಾಗುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೇಸ್ ನಾಯಕರು ದೆಹಲಿಯಲ್ಲಿ ಬೀದಿಗಿಳಿದು ಪ್ರತಿಭಟಿಸಿ,...

ಫ್ರೀಡಂ ಪಾರ್ಕ್‌ಗೆ ಬರುತ್ತಿದೆ ಸಿಜೆಪಿ ದಂಡು; ಜನತಾ ನ್ಯಾಯಾಲಯದ ಮುಂದೆ ಎಸ್‌ಐಆರ್ ಅನ್ಯಾಯಗಳ ಅನವಾರಣ

ಇದೇ ತಿಂಗಳ 8 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯಲಿರುವ 'ಜನತಾ ನ್ಯಾಯಾಲಯ' ವಿನೂತನ ಹೋರಾಟಕ್ಕೆ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಯ ದಂಡು ಬರುತ್ತಿದೆ. ರಾಜ್ಯದಲ್ಲಿ ಎಸ್‌ಐಆರ್‌ನಿಂದ ಆಗಿರುವ ಅನ್ಯಾಯಗಳ ಈ...

“ನಮ್ಮ ದೇಶಕ್ಕೆ ಮಾಡಿರುವುದು ದೇಶದ್ರೋಹ, ಯಾರನ್ನೂ ಬಿಡುವುದಿಲ್ಲ”: ಮೋದಿ, ಶಾ, ಮೋಹನ್‌ ಭಾಗವತ್ ಹಾಗೂ ಗ್ಯಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ಗುಡುಗು!

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವೋಟ್ ಚೋರಿ' ವಿವಾದದ ವಿರುದ್ಧ ಇಂಡಿಯಾ ಒಕ್ಕೂಟ ನಡೆಸಿದ ಐತಿಹಾಸಿಕ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಯತ್ತ...

ಕಾಸರಗೋಡು: ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ನಾಯಕನ ಉಪಸ್ಥಿತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

'ವಂದೇ ಮಾತರಂ'ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್ ನಂಟಿನ ಸಂಘಟನೆಯೊಂದರ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರ ಉಪಸ್ಥಿತಿಯನ್ನು ವಿರೋಧಿಸಿ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಅ.6) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾರ್ಯಕ್ರಮದಲ್ಲಿ ನಂದಕುಮಾರ್ ಅವರ...

ಜಂತರ್ ಮಂತರ್ ಪ್ರತಿಭಟನೆ: ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗೆ ಬಡ್ತಿ: ದೂರುದಾರರನ್ನೇ ಎರಡು ಬಾರಿ ಬಂದಿಸಿದ್ದ ಪೊಲೀಸರು

ನವದೆಹಲಿ: ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಅಧಿಕಾರಿ ವಿವೇಕ್ ಭಗತ್ ಅವರನ್ನು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಅಡಿಷನಲ್ ಡಿಸಿಪಿ) ಹುದ್ದೆಗೆ ಬಡ್ತಿ ನೀಡಿರುವುದು ತೀವ್ರ...

ಪತ್ರಕರ್ತೆ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಸಿಪಿಗೆ ಹೆಚ್ಚುವರಿ ಡಿಸಿಪಿ ಹುದ್ದೆ; ವಿರೋಧದ ಬಳಿಕ ಆದೇಶಕ್ಕೆ ತಡೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆಯ ವೇಳೆ ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರಿಗೆ ನೀಡಲಾಗಿದ್ದ...

ಬಿಜೆಪಿ ಸದಸ್ಯರಾಗಿರುವವರು ಮಾತ್ರ ಮತ ಚಲಾಯಿಸಬಹುದು ಎಂದು ಚುನಾವಣಾ ಆಯೋಗ ನಂಬಿದೆ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀವ್ರ ವಾಗ್ದಾಳಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಆಯೋಗದ ವಿವಾದಾತ್ಮಕ ಕಾರ್ಯವೈಖರಿಯನ್ನು ಖಂಡಿಸಿ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ವೇಳೆ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್...

ದೆಹಲಿಯಲ್ಲಿ ಎಸ್‌ಐಆರ್ ಅಕ್ರಮಗಳ ವಿರುದ್ಧ ‘ಇಂಡಿಯಾ’ ಸಂಸದರ ಜಾಥಾ: ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಪ್ರಮುಖ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮಗಳು ನಡೆಯುತ್ತಿದ್ದು, ಅರ್ಹ ಮತದಾರರ...

SIR ಅಕ್ರಮಗಳ ವಿರುದ್ಧ ಅಕ್ಟೋಬರ್‌ 8ರಂದು ‘ಜನತಾ ನ್ಯಾಯಾಲಯ’: ಮತ ಹಕ್ಕು ರಕ್ಷಣೆಗೆ ವಿನೂತನ ಹೋರಾಟ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಅಕ್ಟೋಬರ್‌‌ 8ರಂದು 'ಜನತಾ ನ್ಯಾಯಾಲಯ' ಎಂಬ...

‘ಫಾರಂ 6 ಬದಲಾವಣೆ ಅನುಮೋದಿಸಿಲ್ಲ’: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಪಕ್ಷಗಳ ಆರೋಪಕ್ಕೆ ಮತ್ತಷ್ಟು ಬಲ ತುಂಬಿದ ಸುಪ್ರೀಂ ಹೇಳಿಕೆ

ನವದೆಹಲಿ: ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ಬಳಸುವ ನಮೂನೆ 6ಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ಹೇಳಿಕೆ ಇದೀಗ ಚುನಾವಣಾ ಆಯೋಗ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದೆ. ಮತದಾರರ ಪಟ್ಟಿಯ...