HomeಅಂಕಣಗಳುKarnataka against SIRಎಸ್ಐಆರ್ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ 'ಜನತಾ ನ್ಯಾಯಾಲಯ' ಸಮಾವೇಶಕ್ಕೆ ಚಾಲನೆ 

ಎಸ್ಐಆರ್ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ‘ಜನತಾ ನ್ಯಾಯಾಲಯ’ ಸಮಾವೇಶಕ್ಕೆ ಚಾಲನೆ 

- Advertisement -
- Advertisement -

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 8ರಂದು ಬೃಹತ್ ಪ್ರತಿಭಟನೆ ಹಾಗೂ ‘ಜನತಾ ನ್ಯಾಯಾಲಯ’ ಸಮಾವೇಶ ನಡೆಯಿತು. ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಮತ್ತು SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಎಸ್ಐಆರ್ ವಿರೋಧಿ ಒಕ್ಕೂಟ ಕರ್ನಾಟಕ ಹಾಗೂ ವಿವಿಧ ಜನಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಜರ್ಮನಿಯಲ್ಲಿ ನೆಲೆಸಿರುವ ಖ್ಯಾತ ಭಾರತೀಯ ಯೂಟ್ಯೂಬರ್, ವೀಡಿಯೊ ನಿರ್ಮಾಪಕ ಹಾಗೂ ರಾಜಕೀಯ ವಿಶ್ಲೇಷಕ ಧ್ರುವ್ ರಾಠೀ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿ ಭಾಗವಹಿಸಿದ್ದು ಗಮನ ಸೆಳೆಯಿತು. ದೆಹಲಿಯ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಸೌರವ್ ದಾಸ್, ಐಶೆ ಘೋಷ್, ಅಶುತೋಷ್ ರಂಕಾ, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಹೋರಾಟಗಾರರು ಹಾಗೂ ಸಂಘಟನೆಗಳ ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಸಮಾವೇಶದ ಆರಂಭದಲ್ಲಿ SIR ಪ್ರಕ್ರಿಯೆಯಿಂದ ಮತದಾನದ ಹಕ್ಕಿಗೆ ಎದುರಾಗಿರುವ ಸಮಸ್ಯೆಗಳನ್ನು ಎದುರಿಸುತ್ತಿರುವ ಅಲೆಮಾರಿ ಹಾಗೂ ತಬ್ಬಲಿ ಸಮುದಾಯಗಳ ಸಂತ್ರಸ್ತರ ನೋವುಗಳನ್ನು ದಾಖಲಿಸಿರುವ ಡಾಕ್ಯುಮೆಂಟರಿಯನ್ನು ಪ್ರದರ್ಶಿಸಲಾಯಿತು.

ಪ್ರಕಾಶ್ ರಾಜ್, ಧ್ರುವ್ ರಾಠೀ, ಅಭಿಜಿತ್ ದೀಪ್ಕೆ, ನೂರ್ ಶ್ರೀಧರ್ ಸೇರಿದಂತೆ ಹಲವು ಮುಖಂಡರು SIR ವಿರೋಧಿ ಘೋಷಣೆಗಳನ್ನು ಕೂಗುವ ಮೂಲಕ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರಕ್ಕೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಕರ್ನಾಟಕವು SIR ವಿರೋಧದ ಹೋರಾಟದಲ್ಲಿ ದೇಶಕ್ಕೆ ಒಂದು ಮಾದರಿಯನ್ನು ಪರಿಚಯಿಸಿದೆ ಎಂಬ ಘೋಷಣೆಯೂ ಸಮಾವೇಶದಲ್ಲಿ ಕೇಳಿಬಂತು.

ಕರ್ನಾಟಕದ ಎಲ್ಲಾ ಜನಪರ ಸಂಘಟನೆಗಳ ಮುಖಂಡರು, ಜಸ್ಟೀಸ್ ಗೋಪಾಲಗೌಡರು, ಹಿರಿಯ ಪತ್ರಕರ್ತೆ ವಿಜಯಮ್ಮ, ಇಂದೂಧರ ಹೊನ್ನಾಪುರ ಸೇರಿದಂತೆ ಹಲವಾರು ಮುಖಂಡರು ವೇದಿಕೆಯಲ್ಲಿದ್ದರು.

ಧ್ರುವ್ ರಾಠೀ, ಅಭಿಜಿತ್ ದೀಪ್ಕೆ ಹಾಗೂ ಸಿಜೆಪಿ ನಾಯಕರನ್ನು ನೋಡಲು ಸಾವಿರಾರು ಯುವಕರು ಸೇರಿದಂತೆ, ಚುನಾವಣಾ ಆಯೋಗದ ಅಕ್ರಮಗಳನ್ನು ವಿರೋಧಿಸಿ ಸಾವಿರಾರು ಸಂಖ್ಯೆಯಲ್ಲಿ ಜನರು ಫ್ರೀಡಂ ಪಾರ್ಕ್‌ನಲ್ಲಿ ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೋಟ್ ಚೋರಿ ಆಗುತ್ತಿದೆ ಎಂಬುದಕ್ಕೆ ಮೂರು ಸಾಕ್ಷಿಗಳಿವೆ; ಮೋದಿ-ಶಾ ಉತ್ತರಿಸಲಿ’: ಬೆಂಗಳೂರಿನಲ್ಲಿ ಧ್ರುವ್ ರಾಠೀ ಆಗ್ರಹ 

ಬೆಂಗಳೂರು: “ವೋಟ್ ಚೋರಿ ಆಗುತ್ತಿದೆ ಎನ್ನುವುದಕ್ಕೆ ನಾನು ಮೂರು ಸಾಕ್ಷಿಗಳನ್ನು ನೀಡುತ್ತೇನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಉತ್ತರಿಸಬೇಕು” ಎಂದು ಜರ್ಮನಿಯಲ್ಲಿ ವಾಸವಿರುವ ಖ್ಯಾತ ಭಾರತೀಯ ಯೂಟ್ಯೂಬರ್, ವೀಡಿಯೊ...

‘ಪ್ರಜೆಗಳನ್ನು ಕೊಲ್ಲಲು ಸಾಧ್ಯವಿಲ್ಲ, ಅದಕ್ಕಾಗಿಯೇ ವೋಟುಗಳನ್ನು ತೆಗೆದಿದ್ದಾರೆ’: ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ 

ಬೆಂಗಳೂರು: “ಆದಿವಾಸಿಗಳು, ಬಡವರು ಮತ್ತು ಮುಸ್ಲಿಮರ ವೋಟುಗಳನ್ನು ತೆಗೆದಿದ್ದಾರೆ. ಪ್ರಜೆಗಳನ್ನು ಕೊಲ್ಲುವುದಕ್ಕೆ ಸಾಧ್ಯವಿಲ್ಲ, ಅದಕ್ಕೇ ಅವರ ವೋಟುಗಳನ್ನು ತೆಗೆದಿದ್ದಾರೆ” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ...

‘ಮತದಾನದ ಹಕ್ಕು ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ಬೆಂಗಳೂರಿನಲ್ಲಿ SIR ವಿರುದ್ಧ ಅಭಿಜಿತ್ ದೀಪ್ಕೆ ವಾಗ್ದಾಳಿ

ಬೆಂಗಳೂರು: “ದೇಶ ಉಳಿಯುವುದು ವೋಟ್ ಉಳಿದರೆ ಮಾತ್ರ. ಮತ ಹೋದರೆ ಎಲ್ಲವನ್ನೂ ಮರೆತಂತೆ ಆಗುತ್ತದೆ. ನಮ್ಮ ಹೋರಾಟ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗಷ್ಟೇ ಅಲ್ಲ, SIR ಪ್ರಕ್ರಿಯೆಯನ್ನೇ ರದ್ದುಪಡಿಸುವವರೆಗೆ ಹೋರಾಟ ಮುಂದುವರಿಯಲಿದೆ” ಎಂದು...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ ಹೋರಾಟ ನಿಲ್ಲದು: ಸಿಇಸಿ ವಿರುದ್ಧ ದೀರ್ಘ ಆಂದೋಲನದ ಎಚ್ಚರಿಕೆ; ಅ.10ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿ ಸಂಘಟನೆಗಳು ಹಾಗೂ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಘೋಷಿಸಿವೆ. ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ...

ರಾಹುಲ್ ಗಾಂಧಿ ಚಿಕನ್ ರೋಲ್ ತಿಂದರೂ ಕಷ್ಟ ಈ ಬಲಪಂಥೀಯರಿಗೆ

ಹಿಂದೊಮ್ಮೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೀನು ತಿಂದು ಧರ್ಮಸ್ಥಳದ ದೇವಸ್ಥಾನ ಪ್ರವೇಶ ಮಾಡಿದ್ದರು ಎಂಬುದನ್ನು ವಿವಾದವಾಗಿ ಮಾಡಿದ್ದ ಇದೇ ಬಲಪಂಥೀಯರು, ಗೋದಿ ಮೀಡಿಯಾಗಳು, ಈಗ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ  ಚಿಕನ್ ರೋಲ್...

10 ತಿಂಗಳಲ್ಲಿ 125 ‘ಮ್ಯಾನುಯಲ್ ಸ್ಕ್ಯಾವೆಂಜರ್’ಗಳ ಸಾವು; ಕಳವಳ ಹುಟ್ಟಿಸಿದ ವರದಿ

ದಲಿತರು ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡುವ 'ದಲಿತ್ ಆದಿವಾಸಿ ಶಕ್ತಿ ಅಧಿಕಾರ್ ಮಂಚ್' (ಡಿಎಎಸ್‌ಎಎಂ) ಸಂಸ್ಥೆಯ ಪ್ರಕಾರ, ಈ ವರ್ಷದ ಜನವರಿಯಿಂದ ಅಕ್ಟೋಬರ್ ನಡುವೆ ಭಾರತದಾದ್ಯಂತ ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ (ಕೈಯಿಂದ ಮಲಹೊರುವ ಅಥವಾ...

ಗ್ಯಾನೇಶ್‌ ವಿರುದ್ಧ ಪ್ರತಿಭಟನೆಗೆ ಅವಕಾಶ ನಿರಾಕರಣೆ; ‘ನಮಗೆ ಅನುಮತಿ ನೀಡಲು ದೆಹಲಿ ಪೊಲೀಸ್ ಯಾರು’ ಎಂದ ಸಿಜೆಪಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಹಾಗೂ ವಕ್ತಾರ ಸೌರವ್ ದಾಸ್...

ಸುಳ್ಳು ಹೇಳಿ 1054 ಮುಸ್ಲಿಮರ ವೋಟ್ ಡಿಲೀಟ್‌ಗೆ ಯತ್ನಿಸಿದ ಶಾಸಕ ಯತ್ನಾಳ್ : ನಕಲಿ ದಾಖಲೆ ಸಲ್ಲಿಕೆ, ಅಧಿಕಾರಿಗಳೂ ಭಾಗಿಯಾಗಿರುವ ಆರೋಪ!

ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನಕಲಿ ದಾಖಲೆ ಸೃಷ್ಟಿಸಿ 1054 ಮಂದಿ ಜೀವಂತವಿರುವ ಮುಸ್ಲಿಂ ಮತದಾರರ ಹೆಸರುಗಳನ್ನು 'ಮರಣ' ಹೊಂದಿದ್ದಾರೆ ಎಂದು ಸುಳ್ಳು...

ಗುಜರಾತ್: ವಿವಾಹೇತರ ಸಂಬಂಧ ಆರೋಪ: ‘ಶುದ್ಧೀಕರಣ’ದ ಹೆಸರಿನಲ್ಲಿ ಮಹಿಳೆ ಮೇಲೆ ಹಲ್ಲೆ, ಸಾಮೂಹಿಕ ಅತ್ಯಾಚಾರ; ಇಬ್ಬರು ಮಹಿಳೆಯರು ಸೇರಿ 9 ಜನರ ಬಂಧನ

ಅಹಮದಾಬಾದ್: ಗುಜರಾತ್‌ನಲ್ಲಿ ಮಹಿಳೆಯೊಬ್ಬರ ಮೇಲೆ ‘ಶುದ್ಧೀಕರಣ’ದ ಹೆಸರಿನಲ್ಲಿ ನಡೆದಿರುವ ಭೀಕರ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಹೊರಿಸಿ ಮಹಿಳೆಯನ್ನು ಅವಮಾನಿಸಿ, ಕಟ್ಟಿಹಾಕಿ ಲೈಂಗಿಕ ದೌರ್ಜನ್ಯಕ್ಕೆ...

ಚುನಾವಣಾ ಆಯುಕ್ತರ ಆಯ್ಕೆ ವಿವಾದ: ಪರಿಶೀಲಿಸುವುದಾಗಿ ತಿಳಿಸಿದ ಸಿಜೆಐ ಸೂರ್ಯಕಾಂತ್

ಮುಖ್ಯ ಚುನಾವಣಾ ಆಯುಕ್ತ (CEC) ಹಾಗೂ ಚುನಾವಣಾ ಆಯುಕ್ತರ (EC) ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಂದಿರುವ 2023ರ ವಿವಾದಾತ್ಮಕ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣವನ್ನು ವಿಸ್ತೃತ...