Homeಅಂತರಾಷ್ಟ್ರೀಯಎಲಾನ್ ಮಸ್ಕ್ - ರಾಹುಲ್ ಗಾಂಧಿ ಟ್ವೀಟ್ ಸಂವಾದ: ಭಾರತದ ಕಾರ್ಪೊರೇಟ್ ಏಕಸ್ವಾಮ್ಯ ಹಾಗೂ ಸ್ಟಾರ್‌ಲಿಂಕ್...

ಎಲಾನ್ ಮಸ್ಕ್ – ರಾಹುಲ್ ಗಾಂಧಿ ಟ್ವೀಟ್ ಸಂವಾದ: ಭಾರತದ ಕಾರ್ಪೊರೇಟ್ ಏಕಸ್ವಾಮ್ಯ ಹಾಗೂ ಸ್ಟಾರ್‌ಲಿಂಕ್ ಲೈಸೆನ್ಸ್ ವಿಚಾರ ಜಾಗತಿಕ ಚರ್ಚೆಗೆ!

- Advertisement -
- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ವಿಶ್ವದ ಖ್ಯಾತ ಉದ್ಯಮಿ ಎಲಾನ್ ಮಸ್ಕ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ನಡೆದ ಸಂಭಾಷಣೆಯು ದೇಶದ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಹೊಸ ಚರ್ಚೆಗೆ ನಾಂದಿಹಾಡಿದೆ. ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆಗೆ ಲೈಸೆನ್ಸ್ ಸಿಗದೆ ವಿಳಂಬವಾಗುತ್ತಿರುವುದರ ಹಿಂದೆ ಮಾರುಕಟ್ಟೆ ಏಕಸ್ವಾಮ್ಯದ ಪ್ರಭಾವವಿದೆ ಎಂಬರ್ಥದಲ್ಲಿ ಮಸ್ಕ್ ಮಾಡಿರುವ ಟ್ವೀಟ್‌ಗಳು ಮತ್ತು ಅದಕ್ಕೆ ರಾಹುಲ್ ಗಾಂಧಿ ನೀಡಿರುವ ಪ್ರತಿಕ್ರಿಯೆಗಳು ವ್ಯಾಪಕ ಗಮನ ಸೆಳೆದಿವೆ.

ತಮ್ಮ ಒಡೆತನದ ‘ಸ್ಟಾರ್‌ಲಿಂಕ್’ ವಾಣಿಜ್ಯ ಸೇವೆ ಆರಂಭಿಸಲು ಭಾರತದಲ್ಲಿ ಅನುಮತಿ ವಿಳಂಬವಾಗುತ್ತಿರುವ ಬಗ್ಗೆ ತಮ್ಮ X ಖಾತೆಯ ಪೋಸ್ಟ್‌ಗಳ ಮೂಲಕ ತೀವ್ರ ಅಸಮಾಧಾನ ಹೊರಹಾಕಿರುವ ಎಲಾನ್ ಮಸ್ಕ್, ನೇರವಾಗಿ ಸರ್ಕಾರದ ನಿಯಮಗಳು ಹಾಗೂ ಕಾರ್ಪೊರೇಟ್ ಪ್ರಭಾವವನ್ನು ಪ್ರಶ್ನಿಸಿದ್ದಾರೆ. ಈ ಕುರಿತು ತಮ್ಮ ಖಾತೆಯಲ್ಲಿ ಬರೆದುಕೊಂಡಿರುವ ಅವರು, “ಸ್ಟಾರ್‌ಲಿಂಕ್ ಜಗತ್ತಿನ 165ಕ್ಕೂ ಹೆಚ್ಚು ದೇಶಗಳಲ್ಲಿ ಲೈಸೆನ್ಸ್ ಪಡೆದಿದೆ ಮತ್ತು ಕಳೆದ ಐದು ವರ್ಷಗಳಿಂದ ಭಾರತ ಸರ್ಕಾರದ ಪ್ರತಿಯೊಂದು ಕಾನೂನು ಹಾಗೂ ನಿಯಮಗಳನ್ನು ಪಾಲಿಸಲು ಶ್ರಮಿಸಿದೆ. ಹೀಗಿದ್ದರೂ ಇನ್ನೂ ಏಕೆ ಲೈಸೆನ್ಸ್ ಸಿಕ್ಕಿಲ್ಲ?” ಎಂದು ನೇರವಾಗಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಮತ್ತೊಂದು ಪೋಸ್ಟ್‌ನಲ್ಲಿ ನೇರವಾಗಿ ರಿಲಯನ್ಸ್ ಮುಖ್ಯಸ್ಥರನ್ನು ಉಲ್ಲೇಖಿಸಿ, “ಅಂಬಾನಿಯೇ ಭಾರತದ ಅಸಲಿ ಬಾಸ್?” (“Is Ambani the real boss of India?”) ಎಂದು ಬಹಿರಂಗವಾಗಿ ಬರೆದುಕೊಂಡಿದ್ದಾರೆ.

ಮಸ್ಕ್ ಅವರ ಈ ಬಹಿರಂಗ ಹೇಳಿಕೆಗೆ ಪ್ರತಿಕ್ರಿಯಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಭಾರತಕ್ಕೆ ಸ್ವಾಗತ ಎಲಾನ್. ನೀವು ಮತ್ತೊಬ್ಬ ವ್ಯಕ್ತಿಯನ್ನು ಭೇಟಿಯಾಗುವವರೆಗೆ ಕಾಯಿರಿ” (“Welcome to India, Elon. Wait till you discover the other guy.”) ಎಂದು ಮಾರ್ಮಿಕವಾಗಿ ವ್ಯಂಗ್ಯವಾಡಿದ್ದಾರೆ. ರಾಹುಲ್ ಅವರ ಈ ಟ್ವೀಟ್‌ಗೆ ಧನ್ಯವಾದ ತಿಳಿಸಿರುವ ಎಲಾನ್ ಮಸ್ಕ್, “ಇದು ನಿಜಕ್ಕೂ ಕಳವಳಕಾರಿ ಸಂಗತಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಏನಿದು ಸ್ಟಾರ್‌ಲಿಂಕ್ (Starlink)?

ಎಲಾನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ (SpaceX) ಸಂಸ್ಥೆಯ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಯೇ ‘ಸ್ಟಾರ್‌ಲಿಂಕ್’. ಭೂಮಿಯ ಕೆಳಕಕ್ಷೆಯಲ್ಲಿರುವ ನೂರಾರು ಉಪಗ್ರಹಗಳ ಮೂಲಕ ಅತ್ಯಂತ ವೇಗದ ಇಂಟರ್ನೆಟ್ ಸಂಪರ್ಕವನ್ನು ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ದೂರದ ಗ್ರಾಮೀಣ ಪ್ರದೇಶಗಳು ಮತ್ತು ಇಂಟರ್ನೆಟ್ ಸೌಕರ್ಯವಿಲ್ಲದ ಸ್ಥಳಗಳಿಗೆ ಬ್ರಾಂಡ್‌ಬ್ಯಾಂಡ್ ತಲುಪಿಸುವ ಈ ತಂತ್ರಜ್ಞಾನವು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಭಾರತದಲ್ಲೂ ಈ ಸೇವೆ ಆರಂಭಿಸಲು ಮಸ್ಕ್ ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದರೂ, ಭಾರತೀಯ ಟೆಲಿಕಾಂ ದಿಗ್ಗಜರ ಮಾರುಕಟ್ಟೆ ಏಕಸ್ವಾಮ್ಯ ಮತ್ತು ನಿಯಂತ್ರಕ ಸಂಸ್ಥೆಗಳ ವಿಳಂಬ ನೀತಿಯಿಂದಾಗಿ ಪರವಾನಗಿ ಪಡೆಯಲು ತಾಂತ್ರಿಕ ಹಾಗೂ ರಾಜಕೀಯ ತೊಡಕುಗಳು ಎದುರಾಗಿವೆ ಎನ್ನಲಾಗಿದೆ.

ಈ ಬೆಳವಣಿಗೆಯು ಭಾರತದಲ್ಲಿ ಮುಕ್ತ ಮಾರುಕಟ್ಟೆ ಸ್ಪರ್ಧೆ ಮತ್ತು ಕಾರ್ಪೊರೇಟ್ ವಲಯದ ಪ್ರಭಾವದ ಕುರಿತು ವ್ಯಾಪಕ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಸರ್ಕಾರದ ನೀತಿಗಳು ಮತ್ತು ಪರವಾನಗಿ ಪ್ರಕ್ರಿಯೆಗಳ ಮೇಲೆ ಬೆರಳೆಣಿಕೆಯ ಬಂಡವಾಳಶಾಹಿಗಳ ಪ್ರಭಾವವಿದೆ ಎಂಬ ವಿರೋಧ ಪಕ್ಷಗಳ ಹಾಗೂ ವಿಶ್ಲೇಷಕರ ಆರೋಪಗಳಿಗೆ ಈ ಜಾಗತಿಕ ಮಟ್ಟದ ಚರ್ಚೆಯು ಮತ್ತಷ್ಟು ಪುಷ್ಟಿ ನೀಡಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ವಿಶೇಷವಾಗಿ, ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ರಾಹುಲ್ ಗಾಂಧಿ ಅವರು ಈ ಹಿಂದೆ ಲೋಕಸಭೆ ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿರುವುದನ್ನು ಇಲ್ಲಿ ಸ್ಮರಿಸಬಹುದು. ದೇಶದ ಸಂಪನ್ಮೂಲಗಳು ಮತ್ತು ಪ್ರಮುಖ ಉದ್ಯಮ ವಲಯಗಳನ್ನು ಬೆರಳೆಣಿಕೆಯ ಕಾರ್ಪೊರೇಟ್ ದೈತ್ಯರಿಗೆ ಮಾತ್ರ ದೊರೆತುಕೊಳ್ಳುವಂತೆ ಮಾಡಲಾಗುತ್ತಿದೆ ಎಂದು ಅವರು ಆಗಾಗ್ಗೆ ಕಿಡಿಕಾರುತ್ತಾ ಬಂದಿದ್ದಾರೆ. ಪ್ರಮುಖವಾಗಿ ಅದಾನಿ ಮತ್ತು ಅಂಬಾನಿ ಮುಂತಾದ ಬೆರಳೆಣಿಕೆಯ ಉದ್ಯಮಿಗಳ ಪರವಾಗಿ ನೀತಿಗಳನ್ನು ರೂಪಿಸಲಾಗುತ್ತಿದೆ ಹಾಗೂ ಆರ್ಥಿಕತೆಯನ್ನು ಕೆಲವೇ ಕೆಲವು ವ್ಯಕ್ತಿಗಳ ಕೈಗೆ ಒಪ್ಪಿಸಲಾಗುತ್ತಿದೆ ಎಂಬ ತಮ್ಮ ಹಿಂದಿನ ನಿಲುವಿಗೆ, ಈಗ ಸ್ವತಃ ಜಾಗತಿಕ ಉದ್ಯಮಿಯೊಬ್ಬರ ಈ ಅನುಭವದಿಂದ ಮತ್ತಷ್ಟು ಬಲ ಬಂದಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ದೆಹಲಿಯಲ್ಲಿ ರೈಲು ಸಂಚಾರ ರದ್ದು, ಭಾರೀ ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಯಾವುದೇ ಗುಂಪು ಸೇರುವುದನ್ನು ಕಾನೂನುಬಾಹಿರವೆಂದು ಘೋಷಿಸಿದ್ದಾರೆ. ಅಕ್ಟೋಬರ್ 10 ರಂದು ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೇರಳ ಹೈಕೋರ್ಟ್ ಆದೇಶ

ಕೊಚ್ಚಿ: ಕೇರಳದ ಸಿಎಂಆರ್‌ಎಲ್ (ಕೊಚ್ಚಿನ್ ಮಿನರಲ್ಸ್ ಆ್ಯಂಡ್ ರೂಟೈಲ್ ಲಿಮಿಟೆಡ್) ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ವರದಿಯ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರರ...

ಉತ್ತರ ಪ್ರದೇಶ| ಎಫ್‌ಐಆರ್ ದಾಖಲಿಸಲು ದಲಿತ ಮಹಿಳೆಗೆ ಸಹಾಯ; ತಾಯಿ-ಮಗಳ ಮೇಲೆ ಹಲ್ಲೆ

ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯ ಜಗತ್‌ಪುರ ಪ್ರದೇಶದಲ್ಲಿ, ಮಹಿಳೆಯೊಬ್ಬರು ಹಾಗೂ ಅವರ 12 ವರ್ಷದ ಮಗಳ ಮೇಲೆ ಬುಧವಾರ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಗ್ರಾಮದ ಪ್ರಧಾನ್ ಹಾಗೂ ಆತನ ಇಬ್ಬರು ಪುತ್ರರ...

‘ವೋಟ್ ಚೋರಿ ಆಗುತ್ತಿದೆ ಎಂಬುದಕ್ಕೆ ಮೂರು ಸಾಕ್ಷಿಗಳಿವೆ; ಮೋದಿ-ಶಾ ಉತ್ತರಿಸಲಿ’: ಬೆಂಗಳೂರಿನಲ್ಲಿ ಧ್ರುವ್ ರಾಠೀ ಆಗ್ರಹ 

ಬೆಂಗಳೂರು: “ವೋಟ್ ಚೋರಿ ಆಗುತ್ತಿದೆ ಎನ್ನುವುದಕ್ಕೆ ನಾನು ಮೂರು ಸಾಕ್ಷಿಗಳನ್ನು ನೀಡುತ್ತೇನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಉತ್ತರಿಸಬೇಕು” ಎಂದು ಜರ್ಮನಿಯಲ್ಲಿ ವಾಸವಿರುವ ಖ್ಯಾತ ಭಾರತೀಯ ಯೂಟ್ಯೂಬರ್, ವೀಡಿಯೊ...

‘ಪ್ರಜೆಗಳನ್ನು ಕೊಲ್ಲಲು ಸಾಧ್ಯವಿಲ್ಲ, ಅದಕ್ಕಾಗಿಯೇ ವೋಟುಗಳನ್ನು ತೆಗೆದಿದ್ದಾರೆ’: ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ 

ಬೆಂಗಳೂರು: “ಆದಿವಾಸಿಗಳು, ಬಡವರು ಮತ್ತು ಮುಸ್ಲಿಮರ ವೋಟುಗಳನ್ನು ತೆಗೆದಿದ್ದಾರೆ. ಪ್ರಜೆಗಳನ್ನು ಕೊಲ್ಲುವುದಕ್ಕೆ ಸಾಧ್ಯವಿಲ್ಲ, ಅದಕ್ಕೇ ಅವರ ವೋಟುಗಳನ್ನು ತೆಗೆದಿದ್ದಾರೆ” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ...

‘ಮತದಾನದ ಹಕ್ಕು ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ಬೆಂಗಳೂರಿನಲ್ಲಿ SIR ವಿರುದ್ಧ ಅಭಿಜಿತ್ ದೀಪ್ಕೆ ವಾಗ್ದಾಳಿ

ಬೆಂಗಳೂರು: “ದೇಶ ಉಳಿಯುವುದು ವೋಟ್ ಉಳಿದರೆ ಮಾತ್ರ. ಮತ ಹೋದರೆ ಎಲ್ಲವನ್ನೂ ಮರೆತಂತೆ ಆಗುತ್ತದೆ. ನಮ್ಮ ಹೋರಾಟ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗಷ್ಟೇ ಅಲ್ಲ, SIR ಪ್ರಕ್ರಿಯೆಯನ್ನೇ ರದ್ದುಪಡಿಸುವವರೆಗೆ ಹೋರಾಟ ಮುಂದುವರಿಯಲಿದೆ” ಎಂದು...

ಎಸ್ಐಆರ್ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ‘ಜನತಾ ನ್ಯಾಯಾಲಯ’ ಸಮಾವೇಶಕ್ಕೆ ಚಾಲನೆ 

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 8ರಂದು ಬೃಹತ್ ಪ್ರತಿಭಟನೆ ಹಾಗೂ ‘ಜನತಾ ನ್ಯಾಯಾಲಯ’ ಸಮಾವೇಶ ನಡೆಯಿತು. ಚುನಾವಣಾ ಆಯೋಗದ ಮುಖ್ಯ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ ಹೋರಾಟ ನಿಲ್ಲದು: ಸಿಇಸಿ ವಿರುದ್ಧ ದೀರ್ಘ ಆಂದೋಲನದ ಎಚ್ಚರಿಕೆ; ಅ.10ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿ ಸಂಘಟನೆಗಳು ಹಾಗೂ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಘೋಷಿಸಿವೆ. ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ...

ರಾಹುಲ್ ಗಾಂಧಿ ಚಿಕನ್ ರೋಲ್ ತಿಂದರೂ ಕಷ್ಟ ಈ ಬಲಪಂಥೀಯರಿಗೆ

ಹಿಂದೊಮ್ಮೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೀನು ತಿಂದು ಧರ್ಮಸ್ಥಳದ ದೇವಸ್ಥಾನ ಪ್ರವೇಶ ಮಾಡಿದ್ದರು ಎಂಬುದನ್ನು ವಿವಾದವಾಗಿ ಮಾಡಿದ್ದ ಇದೇ ಬಲಪಂಥೀಯರು, ಗೋದಿ ಮೀಡಿಯಾಗಳು, ಈಗ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ  ಚಿಕನ್ ರೋಲ್...

10 ತಿಂಗಳಲ್ಲಿ 125 ‘ಮ್ಯಾನುಯಲ್ ಸ್ಕ್ಯಾವೆಂಜರ್’ಗಳ ಸಾವು; ಕಳವಳ ಹುಟ್ಟಿಸಿದ ವರದಿ

ದಲಿತರು ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡುವ 'ದಲಿತ್ ಆದಿವಾಸಿ ಶಕ್ತಿ ಅಧಿಕಾರ್ ಮಂಚ್' (ಡಿಎಎಸ್‌ಎಎಂ) ಸಂಸ್ಥೆಯ ಪ್ರಕಾರ, ಈ ವರ್ಷದ ಜನವರಿಯಿಂದ ಅಕ್ಟೋಬರ್ ನಡುವೆ ಭಾರತದಾದ್ಯಂತ ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ (ಕೈಯಿಂದ ಮಲಹೊರುವ ಅಥವಾ...