Homeಮುಖಪುಟಸಿಜೆಪಿ ಪ್ರತಿಭಟನೆ: ದೆಹಲಿಯಲ್ಲಿ ರೈಲು ಸಂಚಾರ ರದ್ದು, ಭಾರೀ ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ

ಸಿಜೆಪಿ ಪ್ರತಿಭಟನೆ: ದೆಹಲಿಯಲ್ಲಿ ರೈಲು ಸಂಚಾರ ರದ್ದು, ಭಾರೀ ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ

- Advertisement -
- Advertisement -

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಯಾವುದೇ ಗುಂಪು ಸೇರುವುದನ್ನು ಕಾನೂನುಬಾಹಿರವೆಂದು ಘೋಷಿಸಿದ್ದಾರೆ. ಅಕ್ಟೋಬರ್ 10 ರಂದು ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ರ ನಡುವೆ ಸಂಚರಿಸುವ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳು ನವ ದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ನಿಲ್ದಾಣಗಳನ್ನು ತಲುಪುವುದಿಲ್ಲ ಎಂದು ತಿಳಿಸಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಗುಂಪು ಸೇರುವುದನ್ನು ನಿರ್ಬಂಧಿಸುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163 ಜಾರಿಯಲ್ಲಿದೆ. ಜಂತರ್ ಮಂತರ್‌ನಲ್ಲಿ ಅಥವಾ ಬೇರೆ ಎಲ್ಲಿಯೂ ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಉಪ ಪೊಲೀಸ್ ಆಯುಕ್ತರಾದ (ಡಿಸಿಪಿ) ಸೃಷ್ಟಿ ಪಾಂಡೆ ಶುಕ್ರವಾರ ತಿಳಿಸಿದ್ದಾರೆ. “ಯಾವುದೇ ರೀತಿಯ ಜನ ಸೇರುವಿಕೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ” ಎಂದು ಅವರು ಹೇಳಿದ್ದು, ಪೊಲೀಸರು ಕಾನೂನು ಕ್ರಮಕೈಗೊಳ್ಳಲಿದ್ದಾರೆ ಎಂದು ಎಚ್ಚರಿಸಿ, ಸಾರ್ವಜನಿಕರು ದೂರವಿರುವಂತೆ ಮನವಿ ಮಾಡಿದ್ದಾರೆ. ಪ್ರತಿಭಟನೆಗೆ ಪೊಲೀಸರು ಅನುಮತಿ ಕೂಡ ನೀಡಿಲ್ಲ.

ಮತದಾರರ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅನಿಯಮಿತ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಸಂಸ್ಥಾಪಕ ಅಭಿಜಿತ್ ದೀಪ್ಕೆ ನೇತೃತ್ವದ ಸಿಜೆಪಿ ಒತ್ತಾಯಿಸುತ್ತಿದೆ. ಗ್ಯಾನೇಶ್‌ ಕುಮಾರ್ ಹುದ್ದೆಯಿಂದ ಕೆಳಗಿಳಿಯದಿದ್ದರೆ ದೇಶದಾದ್ಯಂತದ ಬೆಂಬಲಿಗರು ದೆಹಲಿಗೆ ಮೆರವಣಿಗೆ ಮಾಡಲಿದ್ದಾರೆ ಎಂದು ದೀಪ್ಕೆ ಹೇಳಿದ್ದಾರೆ. ಪೊಲೀಸರು ತಮ್ಮನ್ನು ತಡೆಯಲು ಯತ್ನಿಸಿದರೆ, “ಅವರು ನಮ್ಮನ್ನು ಎಲ್ಲಿ ತಡೆಯುತ್ತಾರೋ ಅದೇ ನಮ್ಮ ಜಂತರ್ ಮಂತರ್ ಆಗುತ್ತದೆ” ಎಂದು ಅವರು ತಿಳಿಸಿದ್ದಾರೆ. ಯೋಜಿತ ಆಂದೋಲನವು ಶಾಂತಿಯುತವಾಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾರ್ಯಕರ್ತರ ಮೇಲೆ ಒತ್ತಡ

ದೆಹಲಿ ಪ್ರತಿಭಟನೆಯಿಂದ ದೂರವಿರುವಂತೆ ಸಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ಸೂಚನೆಗಳು ಬರುತ್ತಿವೆ, ಒತ್ತಡ ಹೇರಲಾಗುತ್ತಿದೆ ಎಂದು ಕಳೆದ ಮಂಗಳವಾರದಂದು ದೀಪ್ಕೆ ಆರೋಪಿಸಿದ್ದಾರೆ. ಛತ್ರಪತಿ ಸಂಭಾಜಿನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಾಪುರ ಪೊಲೀಸರು ಕಾರ್ಯಕರ್ತರು ಭಾಗವಹಿಸದಂತೆ ನೋಟಿಸ್ ನೀಡಿದ್ದಾರೆ ಹಾಗೂ ಅವರ ಪ್ರಯಾಣಕ್ಕೆ ಹಣ ಯಾರು ಒದಗಿಸುತ್ತಿದ್ದಾರೆ ಎಂದು ವಿಚಾರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಈ ನಡೆಯನ್ನು ಅವರು “ಸರ್ವಾಧಿಕಾರ” ಎಂದು ಕರೆದಿದ್ದಾರೆ. ಆಂದೋಲನವು ಹಿಂಸಾತ್ಮಕವಾಗುತ್ತದೆ ಎಂದು ಪೊಲೀಸರು ಹೇಗೆ ಮುನ್ಸೂಚನೆ ನೀಡಬಹುದು ಎಂದು ಪ್ರಶ್ನಿಸಿದ್ದಾರೆ.

ಭದ್ರತಾ ವಲಯ

ಸುಮಾರು 11,000 ಹೆಚ್ಚುವರಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಸಿಬ್ಬಂದಿಯನ್ನು ದೆಹಲಿಯಲ್ಲಿ ನಿಯೋಜಿಸಲಾಗುತ್ತಿದ್ದು, ಇದರೊಂದಿಗೆ ಕೇಂದ್ರ ಪಡೆಯ ಒಟ್ಟು ಸಂಖ್ಯೆ ಸರಿಸುಮಾರು 26,000 ಕ್ಕೆ ಏರಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಈ ನಿಯೋಜನೆಗೆ ಅಕ್ಟೋಬರ್ 8 ರಿಂದ 12 ರವರೆಗೆ ಅನುಮೋದನೆ ನೀಡಲಾಗಿದೆ.

ಹೆಚ್ಚುವರಿ 110 ಸಿಎಪಿಎಫ್ ಕಂಪನಿಗಳಲ್ಲಿ 85 ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಕಂಪನಿಗಳು, 10 ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಕಂಪನಿಗಳು, ಏಳು ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಕಂಪನಿಗಳು, ಏಳು ಱಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಕಂಪನಿಗಳು ಮತ್ತು ಒಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಂಪನಿ ಸೇರಿವೆ. ಪ್ರತಿಭಟನೆಗೆ ಬರುವವರಲ್ಲಿ ಗಣನೀಯ ಸಂಖ್ಯೆಯು ಮಹಿಳೆಯರಾಗಿರುವುದರಿಂದ, ಕನಿಷ್ಠ ಐದು ಕಂಪನಿಗಳು ಕೇವಲ ಮಹಿಳಾ ಸಿಬ್ಬಂದಿಯನ್ನು ಒಳಗೊಂಡಿರಲಿವೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಿಂದ ಬರುವ ಮಾರ್ಗಗಳ ಮೇಲೆ ಪೊಲೀಸರು ತೀವ್ರ ನಿಗಾ ಇಡಲಿದ್ದು, ದೆಹಲಿ ಪ್ರವೇಶ ಜಂಕ್ಷನ್‌ಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲು ಯೋಜಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ಮುಖ ಗುರುತಿಸುವಿಕೆ ವ್ಯವಸ್ಥೆಗಳನ್ನು ಬಳಸಲಾಗುವುದು, ಹೊಸ ದೆಹಲಿ ಜಿಲ್ಲೆಯತ್ತ ಸಾಗುವ ಬಸ್‌ಗಳನ್ನು ಮೇಲ್ವಿಚಾರಣೆ ಮಾಡಲಾಗುವುದು, ರೈಲು ನಿಲ್ದಾಣಗಳು ಹಾಗೂ ಬಸ್ ನಿಲ್ದಾಣಗಳು ಕಣ್ಗಾವಲಿನಲ್ಲಿ ಇರಲಿವೆ. ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಪರಿಸ್ಥಿತಿಗೆ ತಕ್ಕಂತೆ ಪೊಲೀಸರು ಹೊಸ ದೆಹಲಿ ಪ್ರದೇಶದ ಮೆಟ್ರೋ ನಿಲ್ದಾಣಗಳು ಮತ್ತು ಮಾರುಕಟ್ಟೆಗಳಿಗೆ ಪ್ರವೇಶವನ್ನು ನಿಯಂತ್ರಿಸಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಆಗಮಿಸಿ ಸ್ಥಳದಿಂದ ತೆರಳಲು ನಿರಾಕರಿಸಿದಲ್ಲಿ ತಾತ್ಕಾಲಿಕ ಬಂಧನ ಕೇಂದ್ರಗಳ ವ್ಯವಸ್ಥೆ ಬಗ್ಗೆಯೂ ಚರ್ಚಿಸಲಾಗಿದೆ.

ಅಕ್ಟೋಬರ್ 2 ರಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ ಹೊರತಾಗಿಯೂ ಸಾವಿರಾರು ಜನರು ಸೇರಿದ್ದ ಸಿಜೆಪಿ ಪ್ರತಿಭಟನೆಯ ನಂತರ ದೆಹಲಿ ಹೋರಾಟಕ್ಕೆ ಕರೆ ನೀಡಲಾಗಿದೆ. ಕೆಲವು ವರದಿಗಳ ಪ್ರಕಾರ ಅಲ್ಲಿ 10,000 ಕ್ಕೂ ಹೆಚ್ಚು ಜನರು ಸೇರಿದ್ದರು. ಎಸ್‌ಐಆರ್ ಆರೋಪಗಳ ಕುರಿತು ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಮತ್ತು ನಾಗರಿಕ ಸಮಾಜ ಗುಂಪುಗಳಿಂದ ವ್ಯಾಪಕ ಬೇಡಿಕೆಗಳು ಕೇಳಿಬರುತ್ತಿರುವ ಬೆನ್ನಲ್ಲೇ ಈ ಪ್ರತಿಭಟನೆಯೂ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುವಕರಿಗೆ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಿ’: ರೈಲು ರದ್ದತಿ, ಪ್ರತಿಭಟನೆಗೆ ನಿರ್ಬಂಧದ ವಿರುದ್ಧ ಅಭಿಜೀತ್ ದೀಪ್ಕೆ ಆಕ್ರೋಶ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ಮುನ್ನವೇ...

ಎಸ್‌ಐಆರ್ ವಿವಾದ: ಸಂವಿಧಾನ್ ಸದನದಲ್ಲಿ ಮಧ್ಯಾಹ್ನ ‘ಇಂಡಿಯಾ’ ಮೈತ್ರಿಕೂಟದ ಸಭೆ; ರಾತ್ರಿ 8 ಗಂಟೆಗೆ ರಾಷ್ಟ್ರಪತಿಗಳ ಭೇಟಿ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ನಡೆದಿದೆ ಎನ್ನಲಾದ ಅನಿಯಮಿತತೆಗಳ ಕುರಿತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, 'ಇಂಡಿಯಾ' (INDIA) ಮೈತ್ರಿಕೂಟದ ನಾಯಕರು ಇಂದು ರಾತ್ರಿ...

ಸಿಎಂಆರ್‌ಎಲ್ ಲಂಚ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೇರಳ ಹೈಕೋರ್ಟ್ ಆದೇಶ

ಕೊಚ್ಚಿ: ಕೇರಳದ ಸಿಎಂಆರ್‌ಎಲ್ (ಕೊಚ್ಚಿನ್ ಮಿನರಲ್ಸ್ ಆ್ಯಂಡ್ ರೂಟೈಲ್ ಲಿಮಿಟೆಡ್) ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ವರದಿಯ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರರ...

ಎಲಾನ್ ಮಸ್ಕ್ – ರಾಹುಲ್ ಗಾಂಧಿ ಟ್ವೀಟ್ ಸಂವಾದ: ಭಾರತದ ಕಾರ್ಪೊರೇಟ್ ಏಕಸ್ವಾಮ್ಯ ಹಾಗೂ ಸ್ಟಾರ್‌ಲಿಂಕ್ ಲೈಸೆನ್ಸ್ ವಿಚಾರ ಜಾಗತಿಕ ಚರ್ಚೆಗೆ!

ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ವಿಶ್ವದ ಖ್ಯಾತ ಉದ್ಯಮಿ ಎಲಾನ್ ಮಸ್ಕ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ನಡೆದ ಸಂಭಾಷಣೆಯು ದೇಶದ ರಾಜಕೀಯ ಮತ್ತು ಆರ್ಥಿಕ...

ಉತ್ತರ ಪ್ರದೇಶ| ಎಫ್‌ಐಆರ್ ದಾಖಲಿಸಲು ದಲಿತ ಮಹಿಳೆಗೆ ಸಹಾಯ; ತಾಯಿ-ಮಗಳ ಮೇಲೆ ಹಲ್ಲೆ

ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯ ಜಗತ್‌ಪುರ ಪ್ರದೇಶದಲ್ಲಿ, ಮಹಿಳೆಯೊಬ್ಬರು ಹಾಗೂ ಅವರ 12 ವರ್ಷದ ಮಗಳ ಮೇಲೆ ಬುಧವಾರ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಗ್ರಾಮದ ಪ್ರಧಾನ್ ಹಾಗೂ ಆತನ ಇಬ್ಬರು ಪುತ್ರರ...

‘ವೋಟ್ ಚೋರಿ ಆಗುತ್ತಿದೆ ಎಂಬುದಕ್ಕೆ ಮೂರು ಸಾಕ್ಷಿಗಳಿವೆ; ಮೋದಿ-ಶಾ ಉತ್ತರಿಸಲಿ’: ಬೆಂಗಳೂರಿನಲ್ಲಿ ಧ್ರುವ್ ರಾಠೀ ಆಗ್ರಹ 

ಬೆಂಗಳೂರು: “ವೋಟ್ ಚೋರಿ ಆಗುತ್ತಿದೆ ಎನ್ನುವುದಕ್ಕೆ ನಾನು ಮೂರು ಸಾಕ್ಷಿಗಳನ್ನು ನೀಡುತ್ತೇನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಉತ್ತರಿಸಬೇಕು” ಎಂದು ಜರ್ಮನಿಯಲ್ಲಿ ವಾಸವಿರುವ ಖ್ಯಾತ ಭಾರತೀಯ ಯೂಟ್ಯೂಬರ್, ವೀಡಿಯೊ...

‘ಪ್ರಜೆಗಳನ್ನು ಕೊಲ್ಲಲು ಸಾಧ್ಯವಿಲ್ಲ, ಅದಕ್ಕಾಗಿಯೇ ವೋಟುಗಳನ್ನು ತೆಗೆದಿದ್ದಾರೆ’: ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ 

ಬೆಂಗಳೂರು: “ಆದಿವಾಸಿಗಳು, ಬಡವರು ಮತ್ತು ಮುಸ್ಲಿಮರ ವೋಟುಗಳನ್ನು ತೆಗೆದಿದ್ದಾರೆ. ಪ್ರಜೆಗಳನ್ನು ಕೊಲ್ಲುವುದಕ್ಕೆ ಸಾಧ್ಯವಿಲ್ಲ, ಅದಕ್ಕೇ ಅವರ ವೋಟುಗಳನ್ನು ತೆಗೆದಿದ್ದಾರೆ” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ...

‘ಮತದಾನದ ಹಕ್ಕು ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ಬೆಂಗಳೂರಿನಲ್ಲಿ SIR ವಿರುದ್ಧ ಅಭಿಜಿತ್ ದೀಪ್ಕೆ ವಾಗ್ದಾಳಿ

ಬೆಂಗಳೂರು: “ದೇಶ ಉಳಿಯುವುದು ವೋಟ್ ಉಳಿದರೆ ಮಾತ್ರ. ಮತ ಹೋದರೆ ಎಲ್ಲವನ್ನೂ ಮರೆತಂತೆ ಆಗುತ್ತದೆ. ನಮ್ಮ ಹೋರಾಟ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗಷ್ಟೇ ಅಲ್ಲ, SIR ಪ್ರಕ್ರಿಯೆಯನ್ನೇ ರದ್ದುಪಡಿಸುವವರೆಗೆ ಹೋರಾಟ ಮುಂದುವರಿಯಲಿದೆ” ಎಂದು...

ಎಸ್ಐಆರ್ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ‘ಜನತಾ ನ್ಯಾಯಾಲಯ’ ಸಮಾವೇಶಕ್ಕೆ ಚಾಲನೆ 

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 8ರಂದು ಬೃಹತ್ ಪ್ರತಿಭಟನೆ ಹಾಗೂ ‘ಜನತಾ ನ್ಯಾಯಾಲಯ’ ಸಮಾವೇಶ ನಡೆಯಿತು. ಚುನಾವಣಾ ಆಯೋಗದ ಮುಖ್ಯ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ ಹೋರಾಟ ನಿಲ್ಲದು: ಸಿಇಸಿ ವಿರುದ್ಧ ದೀರ್ಘ ಆಂದೋಲನದ ಎಚ್ಚರಿಕೆ; ಅ.10ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿ ಸಂಘಟನೆಗಳು ಹಾಗೂ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಘೋಷಿಸಿವೆ. ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ...