HomeಮುಖಪುಟDELHI PROTEST : ಧ್ರುವ್ ರಾಠಿ, ಬೃಂದಾ ಕಾರಟ್, ಕೆಕೆ ಶೈಲಜಾ ಸೇರಿದಂತೆ ನೂರಾರು ಮಂದಿಯನ್ನು...

DELHI PROTEST : ಧ್ರುವ್ ರಾಠಿ, ಬೃಂದಾ ಕಾರಟ್, ಕೆಕೆ ಶೈಲಜಾ ಸೇರಿದಂತೆ ನೂರಾರು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಜಂತರ್ ಮಂತರ್‌ ಪ್ರತಿಭಟನೆಗೂ ಮುನ್ನ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಮತ್ತು ಮಾಜಿ ಸಂಸದೆ ಬೃಂದಾ ಕಾರಟ್, ಕೆ.ಕೆ. ಶೈಲಜಾ ಸೇರಿದಂತೆ ಎಡಪಕ್ಷದ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು thewire.in ವರದಿ ಮಾಡಿದೆ.

‘ದಿ ವೈರ್’ನ ಜಾಹ್ನವಿ ಸೇನ್ ಅವರೊಂದಿಗೆ ಮಾತನಾಡಿರುವ ಬೃಂದಾ ಕಾರಟ್, “ಪ್ರಧಾನಿ ಮೋದಿ ಮತ್ತು ಅವರ ಸರ್ಕಾರ ಒಂದು ವಿಷಯವನ್ನು ಅರಿತುಕೊಳ್ಳಬೇಕು, ಭಾರತದ ಜನರು ಎದ್ದು ನಿಂತಿದ್ದಾರೆ. ಅವರನ್ನು ತಡೆಯಲು ಸಾಧ್ಯವಿಲ್ಲ. ದೆಹಲಿಯ ಹೃದಯಭಾಗವು ಅದರ ಸಮಸ್ತ ಜನರಿಗೆ ಸೇರಿದ್ದಾಗಿದೆ”ಎಂದು ಹೇಳಿದ್ದಾರೆ.

ಇಂದಿನ ಪ್ರತಿಭಟನೆಯ ಮುನ್ನಾದಿನದ ರಾತ್ರಿ, ಅಂದರೆ ಅಕ್ಟೋಬರ್ 9ರ ರಾತ್ರಿ ರಾಜಧಾನಿಯಲ್ಲಿ ಕನಿಷ್ಠ 1,000 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಮುಖ್ಯವಾಗಿ, ಇಂದು ಮುಂಜಾನೆ 12.30ರ ಸುಮಾರಿಗೆ ವಶಕ್ಕೆ ಪಡೆದ ಕನಿಷ್ಠ 250 ಮಂದಿ ದೆಹಲಿಯ ಆಗ್ನೇಯ ಜಿಲ್ಲೆಯವರಾಗಿದ್ದು, ಅದರಲ್ಲೂ ವಿಶೇಷವಾಗಿ ಶಾಹೀನ್ ಬಾಗ್ ಸುತ್ತಮುತ್ತಲ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ ಎಂದು ವರದಿ ವಿವರಿಸಿದೆ.

2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಬಹುತೇಕ ಮಹಿಳೆಯರ ನೇತೃತ್ವದ ಪ್ರತಿಭಟನೆಗಳ ಕೇಂದ್ರಬಿಂದುವಾಗಿ ಈ ಪ್ರದೇಶವಿತ್ತು.

ವಿವಿಧ ಸ್ಥಳಗಳಿಂದ ಬೇರೆ ಬೇರೆ ಗುಂಪುಗಳಲ್ಲಿ ಆಗಮಿಸಿದ ಸುಮಾರು 500 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

“ಶಾಂತಿಯುತ ವಾತಾವರಣಕ್ಕೆ ಯಾವುದೇ ಅಡ್ಡಿ ಉಂಟಾಗದಂತೆ ತಡೆಯಲು ಅಪರಾಧ ಹಿನ್ನೆಲೆಯುಳ್ಳ ಸುಮಾರು 50 ವ್ಯಕ್ತಿಗಳನ್ನೂ ಸಹ ಬಂಧಿಸಲಾಗಿದೆ” ಎಂದು ಪೊಲೀಸರು ಹೇಳಿರುವುದಾಗಿ ಎಎನ್‌ಐ ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ನವದೆಹಲಿಯನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯಕ್ಕೂ ಒಂದು ಬಂಧನ ಕೇಂದ್ರವನ್ನು ಸ್ಥಾಪಿಸಲಾಗಿದೆ. ದೆಹಲಿಯ ಎಲ್ಲಾ ಕ್ರೀಡಾಂಗಣಗಳಲ್ಲೂ ಬಂಧನ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತರ ರಾಜ್ಯಗಳಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದ್ದು, ಅವರು ಪ್ರತಿಭಟನೆಗಾಗಿ ನವದೆಹಲಿಯನ್ನು ತಲುಪದಂತೆ ತಡೆಯಲು ನೂರಾರು ಮೇಲ್, ಎಕ್ಸ್‌ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗಿದೆ.

ದಿ ಹಿಂದೂ ಪತ್ರಿಕೆಯ ವರದಿಯ ಪ್ರಕಾರ, ಇಂದು ಪ್ರತಿಭಟನಾಕಾರರು ರಾಷ್ಟ್ರ ರಾಜಧಾನಿಯತ್ತ ಸಾಗದಂತೆ ತಡೆಯಲು ದೆಹಲಿ ಪೊಲೀಸರೊಂದಿಗೆ ಕೈಜೋಡಿಸಿ ‘ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ’ ಅಕ್ಟೋಬರ್ 9ರಂದು ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಸೂಚಿಸಿದೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಲ್ಲೆ ಸುದ್ದಿ ತಳ್ಳಿ ಹಾಕಿದ ‘ಫ್ಯಾಕ್ಟ್‌ ಚೆಕ್ಕರ್’ ಝುಬೈರ್ : ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮದ ವಿರುದ್ಧ ಕ್ರಮದ ಎಚ್ಚರಿಕೆ

ಬೆಂಗಳೂರು ಮೆಟ್ರೋದಲ್ಲಿ ತನ್ನ ಹಲ್ಲೆ ನಡೆದಿದೆ ಎಂಬ ಸುದ್ದಿಯನ್ನು ಫ್ಯಾಕ್ಟ್‌ ಚೆಕ್ಕರ್ ಹಾಗೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ತಳ್ಳಿಹಾಕಿದ್ದಾರೆ. ಝುಬೈರ್ ಮೇಲೆ ಬೆಂಗಳೂರು ಮೆಟ್ರೋದಲ್ಲಿ ಸಹ ಪ್ರಯಾಣಿಕರು ಹಲ್ಲೆ...

ಬಿಜೆಪಿಗೆ ರಿಲಯನ್ಸ್ ಬೆಂಬಲಿತ ಸಂಸ್ಥೆಗಳ ದೇಣಿಗೆ ವರದಿ ಹಂಚಿಕೊಂಡ ಎಲೋನ್ ಮಸ್ಕ್; ‘ಪ್ರಧಾನಿ ಅಂಬಾನಿ’ ಎಂದು ವ್ಯಂಗ್ಯ, ಏಕಸ್ವಾಮ್ಯದ ವಿರುದ್ಧ ವಾಗ್ದಾಳಿ

ನವದೆಹಲಿ: ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆ ಆರಂಭಿಸಲು ಎದುರಾಗಿರುವ ವಿಳಂಬದ ಹಿನ್ನೆಲೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿರುವ ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಮುಖ್ಯಸ್ಥ ಎಲೋನ್...

SIR LIVE UPDATES: ಜಂತರ್‌ ಮಂಥರ್‌ ಪ್ರತಿಭಟನೆಯ ಕ್ಷಣ ಕ್ಷಣದ ಮಾಹಿತಿ

SIR ಅಕ್ರಮವನ್ನು ವಿರೋಧಿಸಿ ಸಿಜೆಪಿ ಸೇರಿದಂತೆ ವಿದ್ಯಾರ್ಥಿ ಯುವಜನರು ದೆಹಲಿಯ ಜಂತರ್‌ ಮಂಥರ್‌ ನಲ್ಲಿ ಇಂದು (ಅ.10) ಬೃಹತ್‌ ಪ್ರತಿಭಟನೆಗೆ ಕರೆ ನೀಡಿದೆ. ಈ ಪ್ರತಿಭಟನೆಗೆ ಕೇಂದ್ರ ಸರ್ಕಾರ ನಿರ್ಭಂಧ ವಿಧಿಸಿ, ರೈಲು,...

ಸಿಜೆಪಿ ಪ್ರತಿಭಟನೆ 2.0: ದೆಹಲಿಯಲ್ಲಿ 25 ಸಾವಿರ ಪೊಲೀಸರು, 300 ಕ್ಯಾಮೆರಾಗಳು, 12 ಬಂಧನ ಕೇಂದ್ರಗಳು; ಇಂಟರ್ನೆಟ್ ಸ್ಥಗಿತ, ರೈಲು-ಮೆಟ್ರೊ ಸಂಚಾರಕ್ಕೂ ನಿರ್ಬಂಧ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಅಕ್ಟೋಬರ್ 10ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ರಾಜಧಾನಿಯಾದ್ಯಂತ ಬೃಹತ್ ಭದ್ರತಾ...

DELHI PROTEST: ಸಿಜೆಪಿಯ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಪೊಲೀಸರು 

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು...

ಗ್ಯಾನೇಶ್‌ ಕುಮಾರ್ ವಜಾ – ಎಸ್‌ಐಆರ್ ಸಂಪೂರ್ಣ ರದ್ದತಿಗೆ ಆಗ್ರಹ; ಅ.10ರ ದೆಹಲಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ವಜಾಗೊಳಿಸಿ, ಎಸ್‌ಐಆರ್ ಸಂಪೂರ್ಣ ರದ್ದು ಮಾಡುವಂತೆ ಅ.10 ರಂದು ಸಿಜೆಪಿ ಕರೆ ನೀಡಿರುವ ದೆಹಲಿ ಹೋರಾಟಕ್ಕೆ 'ಎಸ್‌ಐಆರ್ ವಿರೋಧಿ ಒಕ್ಕೂಟ' ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು,...

ಎಸ್‌ಐಆರ್ ವಿವಾದ: ಅಕ್ಟೋಬರ್ 10ರಂದು ಮುಂಬೈನಲ್ಲಿ ತುಷಾರ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ; ದೇಶಾದ್ಯಂತ ಹೋರಾಟಕ್ಕೆ ಕರೆ

ಮುಂಬೈ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಬೇಕೆಂಬ ಆಗ್ರಹದ ನಡುವೆಯೇ, ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್...

ದೆಹಲಿ ಮೆಟ್ರೋ ನಿಲ್ದಾಣಗಳ ಬಂದ್‌ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್: ‘ನೊಣ ಕೊಲ್ಲಲು ಸುತ್ತಿಗೆ ಬಳಸಲು ಸಾಧ್ಯವಿಲ್ಲ’ ಎಂದ ನ್ಯಾ.ಸೂರ್ಯಕಾಂತ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವ ನಿರ್ಧಾರಕ್ಕೆ...

ಮಧ್ಯಪ್ರದೇಶ: ದೆಹಲಿ ಸಿಜೆಪಿ ಪ್ರತಿಭಟನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಬಲವಂತವಾಗಿ ರೈಲಿನಿಂದ ಕೆಳಗಿಳಿಸಿದ ಪೊಲೀಸರು

ಅಕ್ಟೋಬರ್ 10 ರಂದು ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯಲ್ಲಿ ಭಾಗವಹಿಸಲು ನವದೆಹಲಿಗೆ ಪ್ರಯಾಣಿಸುತ್ತಿದ್ದ ಸುಮಾರು 15 ವಿದ್ಯಾರ್ಥಿಗಳನ್ನು ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಇಟಾರ್ಸಿ ಜಂಕ್ಷನ್‌ನಲ್ಲಿ ರೈಲಿನಿಂದ ಬಲವಂತವಾಗಿ ಕೆಳಗಿಳಿಸಲಾಗಿದೆ ಎಂದು...

‘ಯುವಕರಿಗೆ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಿ’: ರೈಲು ರದ್ದತಿ, ಪ್ರತಿಭಟನೆಗೆ ನಿರ್ಬಂಧದ ವಿರುದ್ಧ ಅಭಿಜೀತ್ ದೀಪ್ಕೆ ಆಕ್ರೋಶ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ಮುನ್ನವೇ...