Homeಮುಖಪುಟಕೋರ್ಟ್ ಆದೇಶ ಉಲ್ಲಂಘಿಸಿ ದೆಹಲಿಯ ಮೆಟ್ರೋ ನಿಲ್ದಾಣಗಳು ಬಂದ್, ರೈಲು ರದ್ದು : ಸುಪ್ರೀಂ ಕೋರ್ಟ್‌ಗೆ...

ಕೋರ್ಟ್ ಆದೇಶ ಉಲ್ಲಂಘಿಸಿ ದೆಹಲಿಯ ಮೆಟ್ರೋ ನಿಲ್ದಾಣಗಳು ಬಂದ್, ರೈಲು ರದ್ದು : ಸುಪ್ರೀಂ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿವಿಧ ಜಾತ್ಯತೀತ ಪಕ್ಷ ಮತ್ತು ಸಂಘಟನೆಗಳು ಇಂದು (ಅ.10) ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿವೆ. ಪೊಲೀಸರು ದಿಗ್ಭಂಧನದ ನಡುವೆಯೂ ಈಗಾಗಲೇ ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹೋರಾಟದ ರಣಕಹಳೆ ಮೊಳಗಿದೆ.

ಇಂದಿನ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಆಡಳಿತ ರೈಲು, ಬಸ್‌, ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆಗಳನ್ನು ಬಂದ್ ಮಾಡಿತ್ತು. ಇದನ್ನು ವಿರೋಧಿಸಿದ್ದ ಸುಪ್ರೀಂ ಕೋರ್ಟ್, ಪ್ರತಿಭಟನೆಯನ್ನು ನಿಭಾಯಿಸುವ ನೆಪಹೇಳಿ ಸಾರ್ವಜನಿಕ ಸಾರಿಗೆ ಸೇವೆಗಳ ಮೇಲೆ ಸಂಪೂರ್ಣ ನಿಷೇಧ ಹೇರಬಾರದು ಎಂದು ನಿನ್ನೆ ಅ.9) ಆದೇಶ ನೀಡಿತ್ತು.

ಆದರೆ, ಅಧಿಕಾರಿಗಳು ಕೋರ್ಟ್‌ನ ಈ ಆದೇಶವನ್ನು ಉಲ್ಲಂಘಿಸಿ ದೆಹಲಿ ಮೆಟ್ರೋ ನಿಲ್ದಾಣಗಳನ್ನು ಮುಚ್ಚುವುದನ್ನು ಮತ್ತು ಸಾರ್ವಜನಿಕ ಸಾರಿಗೆ ಸೇವೆಗಳನ್ನು ನಿರ್ಬಂಧಿಸುವುದನ್ನು ಮುಂದುವರಿಸಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.

ಜುಲೈ ತಿಂಗಳಿನಲ್ಲಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಹಿಂಸಾಚಾರದ ಕುರಿತು ಸ್ವತಂತ್ರ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಈ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದಾರೆ.

ಕೋರ್ಟ್‌ನ ನಿರ್ದೇಶನಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಐಎಎಸ್, ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಐಪಿಎಸ್ ಮತ್ತು ದೆಹಲಿ ಮೆಟ್ರೋ ರೈಲು ನಿಗಮದ (ಡಿಎಂಆರ್‌ಸಿ) ಅಧ್ಯಕ್ಷ ಡಿ. ತಾರಾ ಐಎಎಸ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸುವಂತೆ ಈ ಅರ್ಜಿಯಲ್ಲಿ ಕೋರಲಾಗಿದೆ.

ದೆಹಲಿ ನಿವಾಸಿಗಳಿಗೆ ತೊಂದರೆಯಾಗುವುದನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಯು ನಿಯಂತ್ರಿತ ರೂಪದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದಾಗ್ಯೂ, ಅಧಿಕಾರಿಗಳು ಅನಿಯಂತ್ರಿತವಾಗಿ ಮೆಟ್ರೋ ನಿಲ್ದಾಣಗಳನ್ನು ಮುಚ್ಚುವುದನ್ನು ಮತ್ತು ಯಾವುದೇ ಸಮರ್ಥನೆ ಇಲ್ಲದೆ ರೈಲು ಸೇವೆಗಳನ್ನು ರದ್ದುಗೊಳಿಸುವುದನ್ನು ಮುಂದುವರಿಸಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಮುಂದುವರಿದ ಈ ನಿರ್ಬಂಧಗಳು ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಜೀವನವನ್ನು ತೀವ್ರವಾಗಿ ಅಸ್ಥವ್ಯಸ್ಥಗೊಳಿಸಿವೆ ಮತ್ತು ದೈನಂದಿನ ಪ್ರಯಾಣಿಕರಿಗೆ ಭಾರಿ ಸಂಕಷ್ಟವನ್ನು ಉಂಟುಮಾಡಿವೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ನಿನ್ನೆ ಆದೇಶ ನೀಡುವಾಗ ಸುಪ್ರೀಂ ಕೋರ್ಟ್, ದೆಹಲಿ ಪೊಲೀಸರು 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವಂತೆ ಡಿಎಂಆರ್‌ಸಿಗೆ ನೀಡಿದ್ದ ನಿರ್ದೇಶನಗಳು ಮತ್ತು ನವದೆಹಲಿ ಹಾಗೂ ಹಝ್ರತ್ ನಿಝಾಮುದ್ದೀನ್ ರೈಲು ನಿಲ್ದಾಣಗಳಿಗೆ ಬರುವ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸುವ ಕುರಿತು ಹೊರಡಿಸಿದ್ದ ಮತ್ತೊಂದು ಪ್ರಕಟಣೆಯನ್ನು ಗಮನಕ್ಕೆ ತೆಗೆದುಕೊಂಡಿತ್ತು.

ಅಗತ್ಯ ಸಾರ್ವಜನಿಕ ಸಾರಿಗೆಯ ಮೇಲೆ ಸಂಪೂರ್ಣ ನಿಷೇಧ ಹೇರುವಂತಿದ್ದ ಈ ಅಧಿಸೂಚನೆಗಳು ‘ಅತಿರೇಕದ ಕ್ರಮ’ದಂತೆ ತೋರುತ್ತಿವೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಮೆಟ್ರೋ ರೈಲುಗಳ ಸಂಚಾರಕ್ಕೆ ಯಾವುದೇ ಸಂಪೂರ್ಣ ತಡೆ ಇರಬಾರದು ಎಂದು ಸ್ಪಷ್ಟಪಡಿಸಿತು. ಅದೇ ಸಮಯದಲ್ಲಿ, ಅಧಿಕಾರಿಗಳು ಪ್ರಮಾಣಾನುಗುಣತೆಯ ತತ್ವಕ್ಕೆ (principle of proportionality) ಅನುಗುಣವಾಗಿ ಸೂಕ್ತ ರೀತಿಯಲ್ಲಿ ತಮ್ಮ ಕಾರ್ಯಾಚರಣೆಗಳನ್ನು ನಿಯಂತ್ರಿಸಲು ಅನುಮತಿ ನೀಡಿತ್ತು.

ತ್ರಿಪಾಠಿ ಅವರು ಈ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ, ತಾವು ಅಕ್ಟೋಬರ್ 9ರಂದು ರಾತ್ರಿ ಸುಮಾರು 9:30 ಕ್ಕೆ ಜಿಟಿಬಿ ನಗರ ಮತ್ತು ವಿಶ್ವವಿದ್ಯಾಲಯ ಮೆಟ್ರೋ ನಿಲ್ದಾಣಗಳಿಗೆ ಭೇಟಿ ನೀಡಿದ್ದಾಗ, ಪ್ರವೇಶ ದ್ವಾರಗಳನ್ನು ಮುಚ್ಚಲಾಗಿತ್ತು ಮತ್ತು ಮ್ಯಾನುವಲ್ ಆಗಿ ನಿಯಂತ್ರಿಸಲಾಗುತ್ತಿದ್ದ ದ್ವಾರಗಳ ಮೂಲಕ ಕೇವಲ ಹೊರಹೋಗಲು ಮಾತ್ರ ಅನುಮತಿಸಲಾಗುತ್ತಿತ್ತು ಎಂದು ಪ್ರತಿಪಾದಿಸಿದ್ದಾರೆ.

ಜಿಟಿಬಿ ನಗರ ಮೆಟ್ರೋ ನಿಲ್ದಾಣದ ಗೇಟ್ ನಂಬರ್ 2ಕ್ಕೆ ಬೀಗ ಹಾಕಲಾಗಿತ್ತು ಮತ್ತು ಗೇಟ್ ನಂಬರ್ 1 ಹಾಗೂ 3 ರನ್ನು ಸಹ ಮುಚ್ಚಲಾಗಿತ್ತು ಅಥವಾ ಕೇವಲ ಪ್ರಯಾಣಿಕರು ಹೊರಹೋಗಲು ಮಾತ್ರ ಅನುಮತಿಸುವಂತೆ ನಿಯಂತ್ರಿಸಲಾಗುತ್ತಿತ್ತು ಎಂದು ಅವರು ಆರೋಪಿಸಿದ್ದಾರೆ. ಜಿಟಿಬಿ ನಗರ ನಿಲ್ದಾಣದ ಈ ಪರಿಸ್ಥಿತಿಯ ವಿಡಿಯೋವನ್ನು ತಾವು ರೆಕಾರ್ಡ್ ಮಾಡಿಕೊಂಡಿದ್ದು, ಅದನ್ನು ರಿಯಲ್-ಟೈಮ್ ಲೊಕೇಶನ್ ವಿವರಗಳೊಂದಿಗೆ ಒದಗಿಸಬಲ್ಲೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಭದ್ರತಾ ಸಂಸ್ಥೆಗಳ ಮರುಪರಿಶೀಲನೆಗೆ ಒಳಪಟ್ಟು, ಸಂಬಂಧಪಟ್ಟ ಮೆಟ್ರೋ ನಿಲ್ದಾಣಗಳಲ್ಲಿ ಅಕ್ಟೋಬರ್ 9ರ ರಾತ್ರಿ 9 ಗಂಟೆಯಿಂದ ಅಕ್ಟೋಬರ್ 10 ರ ಸಂಜೆ 6 ಗಂಟೆಯವರೆಗೆ ಪ್ರವೇಶ ಮತ್ತು ನಿರ್ಗಮನವನ್ನು ಮುಚ್ಚಲಾಗಿರುತ್ತದೆ ಎಂದು ಡಿಎಂಆರ್‌ಸಿ ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಪ್ರಕಟಿಸಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಅರ್ಜಿದಾರರ ಪ್ರಕಾರ, ತದನಂತರದ ಪ್ರಕಟಣೆಯಲ್ಲಿ ಮುಚ್ಚಬೇಕಾದ ನಿಲ್ದಾಣಗಳ ಸಂಖ್ಯೆಯನ್ನು 57 ರಿಂದ 45ಕ್ಕೆ ಇಳಿಸಲಾಯಿತಾದರೂ, ನಿರ್ಬಂಧಗಳನ್ನು ಹಾಗೆಯೇ ಮುಂದುವರಿಸಲಾಗಿತ್ತು.

ಸುಪ್ರೀಂ ಕೋರ್ಟ್‌ನ ಆದೇಶವಿದ್ದಾಗ್ಯೂ ನಿಲ್ದಾಣದ ಗೇಟ್‌ಗಳನ್ನು ಮುಚ್ಚಿರುವುದನ್ನು ಮುಂದುವರಿಸಿರುವುದು, ಕೋರ್ಟ್‌ನ ನಿರ್ದೇಶನಗಳನ್ನು ಉದ್ದೇಶಪೂರ್ವಕವಾಗಿ ಮತ್ತು ಮೊಂಡುತನದಿಂದ ಉಲ್ಲಂಘಿಸಿದಂತಾಗುತ್ತದೆ ಎಂದು ತ್ರಿಪಾಠಿ ಆರೋಪಿಸಿದ್ದಾರೆ.

ಅಕ್ಟೋಬರ್ 9 ರ ರಾತ್ರಿ ಸುಮಾರು 8:30 ಕ್ಕೆ ತಾವು ಜಂತರ್ ಮಂತರ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿದ್ದಾಗ ಅಲ್ಲಿ ಕೇವಲ ಪೊಲೀಸ್ ಮತ್ತು ಅರೆಸೇನಾ ಪಡೆಯ ಸಿಬ್ಬಂದಿ ಮಾತ್ರ ಇರುವುದನ್ನು ಕಂಡುಕೊಂಡಿದ್ದಾಗಿ ತ್ರಿಪಾಠಿ ಪ್ರತಿಪಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಮೆಟ್ರೋ ನಿಲ್ದಾಣಗಳ ಪ್ರವೇಶದ ಮೇಲೆ ಇಂತಹ ಸಂಪೂರ್ಣ ನಿರ್ಬಂಧಗಳನ್ನು ಮುಂದುವರಿಸಿರುವುದರ ಹಿಂದಿನ ಔಚಿತ್ಯವನ್ನು ಅವರು ಪ್ರಶ್ನಿಸಿದ್ದಾರೆ.

ಒಂದು ಮಧ್ಯಂತರ ಕ್ರಮವಾಗಿ, ಮೆಟ್ರೋ ಮತ್ತು ರೈಲ್ವೆ ಕಾರಿಡಾರ್‌ಗಳ ಕಾರ್ಯಾಚರಣೆಯ ಮೇಲೆ ಹೇರಲಾಗಿರುವ ಇಂತಹ ಸಂಪೂರ್ಣ ನಿಷೇಧಾಜ್ಞೆಗಳನ್ನು ಹಿಂಪಡೆಯಲು ನಿರ್ದೇಶನ ನೀಡಬೇಕು ಮತ್ತು ಸಾರ್ವಜನಿಕರಿಗೆ ತಕ್ಷಣವೇ ಮುನ್ಸೂಚನೆ ನೀಡಿ ನಿಯಂತ್ರಿತ ವೇಳಾಪಟ್ಟಿಯಡಿಯಲ್ಲಿ ಸೇವೆಗಳು ಕಾರ್ಯನಿರ್ವಹಿಸುವಂತೆ ಖಚಿತಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಹೋರಾಟಕ್ಕೆ ಬೆಂಬಲ: ಫ್ರೀಡಂಪಾರ್ಕ್ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಅ.10: ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಶನಿವಾರ ಎಐಡಿಎಸ್‌ಒ, ಕೆವಿಎಸ್, ಎಐಎಸ್‌ಎಫ್, ಎಸ್‌ಎಫ್‌ಐ, ಎಐಎಸ್‌ಎ ಸೇರಿದಂತೆ ಇನ್ನಿತರೆ ಎಡ ವಿದ್ಯಾರ್ಥಿ ಸಂಘಟನೆಗಳ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆಗೆ ದೆಹಲಿ ಸ್ತಬ್ಧ: ಗುರುದ್ವಾರದಲ್ಲಿ ಆಶ್ರಯ ಪಡೆದ ಪ್ರತಿಭಟನಾಕಾರರು, ಜಿರಳೆ ಆಂಟೆನಾ ಹೆಲ್ಮೆಟ್ ಧರಿಸಿ ವಿನೂತನ ಪ್ರತಿರೋಧ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದ ‘ಜಿರಳೆ ಜನತಾ ಪಾರ್ಟಿ’ (ಸಿಜೆಪಿ) ಮತ್ತು ಅದರ ಬೆಂಬಲಿಗರನ್ನು ತಡೆಯಲು ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭದ್ರತಾ ವ್ಯವಸ್ಥೆ...

ಬೆಂಗಳೂರಿನಲ್ಲಿ ಎಸ್ಐಆರ್ ವಿರೋಧಿ ಪ್ರತಿಭಟನೆ: ವಿದ್ಯಾರ್ಥಿ ಸಂಘಟನೆಗಳ ನಾಯಕರ ಬಂಧನ: ಕಾಂಗ್ರೆಸ್ ಸರ್ಕಾರದ ದ್ವಂದ್ವ ನಿಲುವಿನ ವಿರುದ್ಧ ಆಕ್ರೋಶ

ಕರ್ನಾಟಕದಲ್ಲಿ ಎಸ್‌ಐಆರ್ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿರುವುದು ಕಾಂಗ್ರೆಸ್ ಸರ್ಕಾರದ ಪ್ರಜಾಸತ್ತಾತ್ಮಕ ಮುಖವಾಡವನ್ನು ಬಯಲುಮಾಡಿದೆ ಎಂದು ಎಐಎಸ್‌ಎ ಕರ್ನಾಟಕ ತೀವ್ರವಾಗಿ ಖಂಡಿಸಿದೆ. ಬಿಜೆಪಿಯ ದಮನಕಾರಿ...

ಸಿಜೆಪಿ ಪ್ರತಿಭಟನೆಗೆ ಬೆಂಬಲ: ಸಿಪಿಐ(ಎಂ) ನಾಯಕರು, ತುಷಾರ್ ಗಾಂಧಿ ಪೊಲೀಸರ ವಶಕ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೆ ದೇಶದ ವಿವಿಧ ಭಾಗಗಳಿಂದ ಬೆಂಬಲ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ದೆಹಲಿ ಮತ್ತು ಮುಂಬೈನಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ...

ಮೋದಿ, ಶಾ ದೇಶದ ಜನರ ವಿರುದ್ಧ ಯುದ್ಧ ಸಾರಲು ಬಯಸುತ್ತಿದ್ದಾರೆ: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ

ನವದೆಹಲಿ: ನಕ್ಸಲ್ ಪೀಡಿತ ಪ್ರದೇಶಗಳಿಂದ ಸಿಆರ್‌ಪಿಎಫ್ ಪಡೆಗಳನ್ನು ಕರೆಸಿ ದೆಹಲಿಯಲ್ಲಿ ನಿಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದ ಜನರ ವಿರುದ್ಧವೇ ಯುದ್ಧ ಸಾರಲು ಬಯಸುತ್ತಿದ್ದಾರೆ ಎಂದು...

ಹಲ್ಲೆ ಸುದ್ದಿ ತಳ್ಳಿ ಹಾಕಿದ ‘ಫ್ಯಾಕ್ಟ್‌ ಚೆಕ್ಕರ್’ ಝುಬೈರ್ : ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮದ ವಿರುದ್ಧ ಕ್ರಮದ ಎಚ್ಚರಿಕೆ

ಬೆಂಗಳೂರು ಮೆಟ್ರೋದಲ್ಲಿ ತನ್ನ ಹಲ್ಲೆ ನಡೆದಿದೆ ಎಂಬ ಸುದ್ದಿಯನ್ನು ಫ್ಯಾಕ್ಟ್‌ ಚೆಕ್ಕರ್ ಹಾಗೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ತಳ್ಳಿಹಾಕಿದ್ದಾರೆ. ಝುಬೈರ್ ಮೇಲೆ ಬೆಂಗಳೂರು ಮೆಟ್ರೋದಲ್ಲಿ ಸಹ ಪ್ರಯಾಣಿಕರು ಹಲ್ಲೆ...

ಬಿಜೆಪಿಗೆ ರಿಲಯನ್ಸ್ ಬೆಂಬಲಿತ ಸಂಸ್ಥೆಗಳ ದೇಣಿಗೆ ವರದಿ ಹಂಚಿಕೊಂಡ ಎಲೋನ್ ಮಸ್ಕ್; ‘ಪ್ರಧಾನಿ ಅಂಬಾನಿ’ ಎಂದು ವ್ಯಂಗ್ಯ, ಏಕಸ್ವಾಮ್ಯದ ವಿರುದ್ಧ ವಾಗ್ದಾಳಿ

ನವದೆಹಲಿ: ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆ ಆರಂಭಿಸಲು ಎದುರಾಗಿರುವ ವಿಳಂಬದ ಹಿನ್ನೆಲೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿರುವ ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಮುಖ್ಯಸ್ಥ ಎಲೋನ್...

SIR LIVE UPDATES: ಜಂತರ್‌ ಮಂಥರ್‌ ಪ್ರತಿಭಟನೆಯ ಕ್ಷಣ ಕ್ಷಣದ ಮಾಹಿತಿ

SIR ಅಕ್ರಮವನ್ನು ವಿರೋಧಿಸಿ ಸಿಜೆಪಿ ಸೇರಿದಂತೆ ವಿದ್ಯಾರ್ಥಿ ಯುವಜನರು ದೆಹಲಿಯ ಜಂತರ್‌ ಮಂಥರ್‌ ನಲ್ಲಿ ಇಂದು (ಅ.10) ಬೃಹತ್‌ ಪ್ರತಿಭಟನೆಗೆ ಕರೆ ನೀಡಿದೆ. ಈ ಪ್ರತಿಭಟನೆಗೆ ಕೇಂದ್ರ ಸರ್ಕಾರ ನಿರ್ಭಂಧ ವಿಧಿಸಿ, ರೈಲು,...

ಸಿಜೆಪಿ ಪ್ರತಿಭಟನೆ 2.0: ದೆಹಲಿಯಲ್ಲಿ 25 ಸಾವಿರ ಪೊಲೀಸರು, 300 ಕ್ಯಾಮೆರಾಗಳು, 12 ಬಂಧನ ಕೇಂದ್ರಗಳು; ಇಂಟರ್ನೆಟ್ ಸ್ಥಗಿತ, ರೈಲು-ಮೆಟ್ರೊ ಸಂಚಾರಕ್ಕೂ ನಿರ್ಬಂಧ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಅಕ್ಟೋಬರ್ 10ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ರಾಜಧಾನಿಯಾದ್ಯಂತ ಬೃಹತ್ ಭದ್ರತಾ...

DELHI PROTEST: ಸಿಜೆಪಿಯ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಪೊಲೀಸರು 

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು...