Homeಮುಖಪುಟಫಾರಂ-7: ಎಫ್‌ಐಆರ್ ಮುಂದುವರಿಸಿದರೆ ಪೊಲೀಸ್ ಠಾಣೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಫಾರಂ-7: ಎಫ್‌ಐಆರ್ ಮುಂದುವರಿಸಿದರೆ ಪೊಲೀಸ್ ಠಾಣೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

- Advertisement -
- Advertisement -

ಎಸ್ಐಆರ್ (SIR) ಫಾರಂ 7 ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ವ್ಯವಸ್ಥಿತವಾಗಿ ಗೊಂದಲಗಳನ್ನು ಸೃಷ್ಟಿಸಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಅನ್ಯಾಯವಾಗಿ ಎಫ್‌ಐಆರ್ ದಾಖಲಿಸುವುದನ್ನು ಮುಂದುವರಿಸಿದರೆ ಮುಂಬರುವ ದಿನಗಳಲ್ಲಿ ಪೊಲೀಸ್ ಠಾಣೆಗಳು ಹಾಗೂ ಎಸ್‌ಪಿ ಕಚೇರಿಗಳಿಗೂ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಜರುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದ ಸಹ ಉಸ್ತುವಾರಿಗಳಾಗಿ ಜವಾಬ್ದಾರಿ ವಹಿಸಿಕೊಂಡಿರುವ ಕಾಸಂ ವೆಂಕಟೇಶ್ವರಲು ಅವರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಫಾರಂ 7 ವಿವಾದದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಕ್ರಮಕ್ಕೆ ರಾಜ್ಯ ಹೈಕೋರ್ಟ್ ಈಗಾಗಲೇ ತೀವ್ರ ಛೀಮಾರಿ ಹಾಕಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಖಾಯಂ ನಿವಾಸಿ ದೃಢಪತ್ರ (PRC) ನೀಡುವ ಅಧಿಕಾರವನ್ನು ಕೇವಲ ತಹಶೀಲ್ದಾರ್ ಹಾಗೂ ಅದಕ್ಕಿಂತ ಮೇಲ್ಪಟ್ಟ ದರ್ಜೆಯ ಅಧಿಕಾರಿಗಳಿಗೆ ಮಾತ್ರ ನೀಡಬೇಕೇ ಹೊರತು, ಪಿಡಿಒಗಳು ಮತ್ತು ಮುನ್ಸಿಪಲ್ ಕಮಿಷನರ್‌ಗಳಿಗೂ ಆ ಅಧಿಕಾರ ನೀಡಿರುವುದು ಸಂಪೂರ್ಣ ಅವೈಜ್ಞಾನಿಕ ಮತ್ತು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರ ತಕ್ಷಣವೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಈ ಕುರಿತು ಅಧಿಕೃತ ಪತ್ರ ಬರೆಯುವುದರೊಂದಿಗೆ ಚುನಾವಣಾ ಆಯೋಗದ ಗಮನಕ್ಕೂ ತರಲಾಗುವುದು ಎಂದು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿರುವುದಾಗಿ ಅವರು ವಿವರಿಸಿದರು.

ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಯಾವುದೇ ನೆಪ ಒಡ್ಡಿ ಮುಂದೂಡದಂತೆ ಸರ್ಕಾರಕ್ಕೆ ತಾಕೀತು ಮಾಡಿರುವ ವಿಜಯೇಂದ್ರ, ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂಬರುವ ಉಪಚುನಾವಣೆಗಳಲ್ಲಿ ಒಟ್ಟಾಗಿ ಎದುರಿಸಲು ತೀರ್ಮಾನಿಸಲಾಗಿದೆ ಎಂದರು. ಅಲ್ಲದೆ, ಪ್ರತಿ ಜಿಲ್ಲೆಗೂ ಪ್ರಭಾರಿಗಳ ನೇಮಕ ಹಾಗೂ ತಕ್ಷಣವೇ ಚುನಾವಣಾ ನಿರ್ವಹಣಾ ಸಮಿತಿ ರಚಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ಆಡಳಿತರೂಢ ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಹಾಗೂ ಹಗ್ಗಜಗ್ಗಾಟ ತೀವ್ರಗೊಂಡಿದ್ದು, ಸ್ವತಃ ಅವರ ಶಾಸಕರು ಮತ್ತು ಸಚಿವರೇ ಸ್ಟಿಂಗ್ ಆಪರೇಷನ್‌ಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ ವಿಜಯೇಂದ್ರ, “ಉಪ್ಪು ತಿಂದವನು ನೀರು ಕುಡಿಯಲೇಬೇಕು, ಈ ಸ್ಟಿಂಗ್ ಪ್ರಕರಣಗಳ ಸತ್ಯಾಸತ್ಯತೆ ಹೊರಬರಲಿ” ಎಂದರು. ಕೆಪಿಎಂಡಿ ಅಥವಾ ಕೆಪಿಎಸ್‌ಸಿ (KPSC) ಅಕ್ರಮಗಳ ಕುರಿತ ತನಿಖೆಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಅವರದೇ ಅಧಿಕಾರದಲ್ಲಿರುವ ಸರ್ಕಾರವಿದ್ದಾಗ ತನಿಖೆ ಮಾಡಿಸಲು ಅಡ್ಡಿಯೇನು? ಎಸ್ಐಟಿ ತನಿಖೆಗೆ ತಡೆಯಾಜ್ಞೆ ತರಲು ಸುಪ್ರೀಂ ಕೋರ್ಟ್‌ಗೆ ಮೊದಲು ಹೋದವರು ಯಾರು? ಈ ಸರ್ಕಾರಕ್ಕೆ ಮತ್ತು ಸಚಿವರಿಗೆ ಅಂತಹ ಆತಂಕ ಯಾಕೆ?” ಎಂದು ಮರುಪ್ರಶ್ನೆ ಹಾಕಿದರು. ಜಿಪಂ ಹಾಗೂ ತಾಪಂ ಮೀಸಲಾತಿ ಪಟ್ಟಿಯಲ್ಲಿ ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಗೊಂದಲಗಳನ್ನು ಸೃಷ್ಟಿಸಲಾಗಿದ್ದು, ಈ ಸರ್ಕಾರದ ಇಚ್ಛಾಶಕ್ತಿಯ ಬಗ್ಗೆಯೂ ಅನುಮಾನವಿರುವುದಾಗಿ ಅವರು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2ನೇ ದಿನಕ್ಕೆ ಕಾಲಿಟ್ಟ ದೆಹಲಿ ಪ್ರತಿಭಟನೆ; 100 ಕ್ಕೂ ಹೆಚ್ಚು ಜನರನ್ನು ಬಂಧಿಸಿದ ದೆಹಲಿ ಪೊಲೀಸರು

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿದ್ದ ಪ್ರತಿಭಟನೆಯು ದೆಹಲಿಯಾದ್ಯಂತ ಭಾರಿ ಭದ್ರತೆಯ ನಡುವೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ (ಅ.11) ಜಂತರ್ ಮಂತರ್ ಕಡೆಗೆ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗುತ್ತಿದ್ದ 100...

ಪೊಲೀಸರಿಂದ ಗಂಭೀರ ಹಲ್ಲೆ ಆರೋಪ : CPIM ಸಂಸದ ಜಾನ್ ಬ್ರಿಟ್ಟಾಸ್ ಆಸ್ಪತ್ರೆಗೆ ದಾಖಲು

ಭಾನುವಾರ (ಅಕ್ಟೋಬರ್ 11, 2026) ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ಭಾರತೀಯ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಅವರನ್ನು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಸಿಬ್ಬಂದಿ ವಶಕ್ಕೆ ಪಡೆದು...

ಗ್ಯಾನೇಶ್ ಅವರನ್ನು ರಕ್ಷಿಸಲು ಮೋದಿ-ಶಾ ಎಲ್ಲವನ್ನೂ ಮಾಡುತ್ತಾರೆ: ಸಿಜೆಪಿ

"ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ; ತನ್ನದೇ ನಾಗರಿಕರ ವಿರುದ್ಧ ಯುದ್ಧ ಸಾರಿದೆ" ಎಂದು ಪೊಲೀಸರ ಬಂಧನದಿಂದ ಬಿಡುಗಡೆಯಾದ ತಕ್ಷಣ ಮಾಧ್ಯಮಗಳೊಂದಿಗೆ ನಡೆಸಿದ ತಮ್ಮ ಮೊದಲ ಸಂವಾದದಲ್ಲಿ...

ದೆಹಲಿ ಪ್ರತಿಭಟನೆ ವೇಳೆ ಇಂಟರ್ನೆಟ್ ಸ್ಥಗಿತ : ನ್ಯಾಯಾಂಗ ಪರಿಶೀಲನೆ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ, ಅಕ್ಟೋಬರ್ 9 ಮತ್ತು 10 ರಂದು ಮಧ್ಯ ದೆಹಲಿಯ ಜನಪಥ್-ಕರ್ತವ್ಯ ಪಥ್ ಜಂಕ್ಷನ್‌ನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು...

ಸಿಜೆಪಿ ಪ್ರತಿಭಟನೆ: ‘ಬ್ಯಾರಿಕೇಡ್‌ ತೆರವುಗೊಳಿಸಿ, ಇಂಟರ್‌ನೆಟ್ ತಡೆಯಬೇಡಿ, ಮೆಟ್ರೋ ಸೇವೆ ಸಹಜವಾಗಿರಲಿ..’; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಾಕಲಾಗಿರುವ ಎಲ್ಲಾ ಬ್ಯಾರಿಕೇಡ್‌ಗಳನ್ನು, ಅತ್ಯಂತ ಅಗತ್ಯವಿದ್ದ ಕಾರಣಕ್ಕೆ ಹೊರತುಪಡಿಸಿ ತಕ್ಷಣವೇ ತೆರವುಗೊಳಿಸಬೇಕು; ರಾಷ್ಟ್ರ ರಾಜಧಾನಿಯಲ್ಲಿ ಮೆಟ್ರೋ ಸೇವೆಗಳು ಸಹಜವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ಇಂಟರ್‌ನೆಟ್...

‘ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಿದ್ದರು’ ದೆಹಲಿ ಪೊಲೀಸರ ವಿರುದ್ಧ ಧೃವ್ ರಾಠೀ ಆರೋಪ

ಸಿಜೆಪಿ (CJP) ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸುವುದನ್ನು ತಡೆಯಲು ಶನಿವಾರ ಮುಂಜಾನೆ ಗುರುಗ್ರಾಮದ ನಿವಾಸದಿಂದಲೇ ಪೊಲೀಸರಿಂದ ಬಲವಂತವಾಗಿ ವಶಕ್ಕೆ ಪಡೆದುಕೊಳ್ಳಲ್ಪಟ್ಟಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠೀ ಅವರು ಭಾನುವಾರ...

ದೆಹಲಿ ಪ್ರತಿಭಟನೆ: ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಹಲ್ಲೆ ನಡೆಸಿದ 4 ಹಿಂದುತ್ವವಾದಿಗಳ ಬಂಧನ!

ದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಂತಿಯುತವಾಗಿ ಸಾಗುತ್ತಿದ್ದ ಯುವ ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಎಳೆದಾಡಿ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ 'ಹಿಂದೂ ರಕ್ಷಾ ದಳ'ದ ನಾಲ್ವರು...

ಅಭಿಜಿತ್ ದೀಪ್ಕೆ, ಅಶುತೋಷ್ ರಂಕಾ ಹಾಗೂ ಸೌರವ್ ದಾಸ್ ಬಿಡುಗಡೆ: ಮಧ್ಯಾಹ್ನ 2ಕ್ಕೆ CJP ಪತ್ರಿಕಾಗೋಷ್ಠಿ

ಚುನಾವಣಾ ಆಯೋಗದ ವಿವಾದಾತ್ಮಕ ಧೋರಣೆ ಹಾಗೂ ಮತದಾರರ ಪಟ್ಟಿ ಅಕ್ರಮಗಳನ್ನು ಖಂಡಿಸಿ ದೆಹಲಿಯಲ್ಲಿ ನಿಗದಿತ ಪ್ರತಿಭಟನೆಗೂ ಮುನ್ನ ಮುನ್ನೆಚ್ಚರಿಕೆ ಕ್ರಮವೆಂಬ ನೆಪದಲ್ಲಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆಯಲ್ಪಟ್ಟಿದ್ದ ಸಿಜೆಪಿ ಸಂಘಟನೆಯ ಪ್ರಮುಖ...

ದೆಹಲಿ ಹೋರಾಟಕ್ಕೆ ಬೆಂಬಲ: ಫ್ರೀಡಂಪಾರ್ಕ್ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಅ.10: ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಶನಿವಾರ ಎಐಡಿಎಸ್‌ಒ, ಕೆವಿಎಸ್, ಎಐಎಸ್‌ಎಫ್, ಎಸ್‌ಎಫ್‌ಐ, ಎಐಎಸ್‌ಎ ಸೇರಿದಂತೆ ಇನ್ನಿತರೆ ಎಡ ವಿದ್ಯಾರ್ಥಿ ಸಂಘಟನೆಗಳ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯ...

ಕೋರ್ಟ್ ಆದೇಶ ಉಲ್ಲಂಘಿಸಿ ದೆಹಲಿಯ ಮೆಟ್ರೋ ನಿಲ್ದಾಣಗಳು ಬಂದ್, ರೈಲು ರದ್ದು : ಸುಪ್ರೀಂ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿವಿಧ ಜಾತ್ಯತೀತ ಪಕ್ಷ ಮತ್ತು ಸಂಘಟನೆಗಳು ಇಂದು (ಅ.10) ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿವೆ. ಪೊಲೀಸರು...