Homeಮುಖಪುಟಪೊಲೀಸರಿಂದ ಗಂಭೀರ ಹಲ್ಲೆ ಆರೋಪ : CPIM ಸಂಸದ ಜಾನ್ ಬ್ರಿಟ್ಟಾಸ್ ಆಸ್ಪತ್ರೆಗೆ ದಾಖಲು

ಪೊಲೀಸರಿಂದ ಗಂಭೀರ ಹಲ್ಲೆ ಆರೋಪ : CPIM ಸಂಸದ ಜಾನ್ ಬ್ರಿಟ್ಟಾಸ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ಭಾನುವಾರ (ಅಕ್ಟೋಬರ್ 11, 2026) ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ಭಾರತೀಯ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಅವರನ್ನು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಸಿಬ್ಬಂದಿ ವಶಕ್ಕೆ ಪಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸ್ ವಾಹನದೊಳಗೆ ಸಿಬ್ಬಂದಿ ತನ್ನ ಮೇಲೆ ಹಲ್ಲೆ ನಡೆಸಿದ ನಂತರ, ರಸ್ತೆ ಬದಿಯಲ್ಲಿ ಬಿಟ್ಟು ಹೋದರು ಎಂದು ಬ್ರಿಟ್ಟಾಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಬ್ರಿಟ್ಟಾಸ್ ಅವರು, ತಾನು ಸಂಸತ್ ಸದಸ್ಯನೆಂದು ಪದೇ ಪದೇ ಹೇಳುತ್ತಿದ್ದರೂ, ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಅವರನ್ನು ಸಿಆರ್‌ಪಿಎಫ್ ಸಿಬ್ಬಂದಿ ಎಳೆದುಕೊಂಡು ಹೋಗುತ್ತಿರುವುದು ವಿಡಿಯೋಗಳಲ್ಲಿ ಕಂಡುಬಂದಿದೆ.

“ನಾನು ಸಂಸದ ಎಂದು ಅವರಿಗೆ ಹೇಳಿದರೂ ಸಹ, ಸಿಆರ್‌ಪಿಎಫ್ ಸಿಬ್ಬಂದಿ ನನ್ನ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದರು. ಅವರು ನನ್ನನ್ನು ಸೀಟಿಗೆ ಒತ್ತಿ ಹಿಡಿದು, ನನ್ನ ಕತ್ತು ಹಿಸುಕಲು (ಉಸಿರುಗಟ್ಟಿಸಲು) ಯತ್ನಿಸಿದರು. ಈ ದೇಶದಲ್ಲಿ ಒಬ್ಬ ಸಂಸದನ ಪರಿಸ್ಥಿತಿ ಹೀಗಿದೆ. ದೆಹಲಿ ಪೊಲೀಸ್ ಏನೇ ಮಾಡಿದರೂ, ನಮ್ಮ ಕೊನೆಯ ಉಸಿರಿರುವವರೆಗೂ ನಾವು ಈ ಹೋರಾಟದಲ್ಲಿ ಮುಂದುವರಿಯುತ್ತೇವೆ” ಬ್ರಿಟ್ಟಾಸ್ ಹೇಳಿದ್ದಾರೆ.

https://www.facebook.com/share/r/19GQ8LRytz/

ಬ್ರಿಟ್ಟಾಸ್ ಅವರ ಮೇಲೆ ಹಲ್ಲೆಯಾಗಿ ಅವರು ಅಸ್ವಸ್ಥಗೊಂಡಿರುವ ವಿಡಿಯೋ ಹಂಚಿಕೊಂಡ ಬೆನ್ನಲ್ಲೇ, ಬ್ರಿಟ್ಟಾಸ್ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಮತ್ತು ರಾಜ್ಯಸಭಾ ಸದಸ್ಯ ಎ.ಎ ರಹೀಮ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಸಿಪಿಐ(ಎಂ) ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಹಗರಣ ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಿಪಿಐ(ಎಂ) ಮತ್ತು ಭಾರತೀಯ ವಿದ್ಯಾರ್ಥಿ ಫೆಡರೇಶನ್ (SFI) ಕಾರ್ಯಕರ್ತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಸತತ ಎರಡನೇ ದಿನ ಇದಾಗಿದೆ.

ರಾಷ್ಟ್ರೀಯ ಅಧ್ಯಕ್ಷ ಆದರ್ಶ್ ಎಂ. ಸಾಜಿ ಸೇರಿದಂತೆ ಹಲವಾರು ಎಸ್‌ಎಫ್‌ಐ ಮುಖಂಡರು ಮತ್ತು ಕಾರ್ಯಕರ್ತರು ಪೊಲೀಸ್ ದೌರ್ಜನ್ಯವನ್ನು ಆರೋಪಿಸಿದ್ದಾರೆ. ಗಾಯಗೊಂಡಿರುವ ಆದರ್ಶ್ ಸಾಜಿ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸ್ ವ್ಯಾನ್‌ಗಳ ಒಳಗೆ ಕರೆದೊಯ್ಯುತ್ತಿರುವ ದೃಶ್ಯಗಳನ್ನು ಎಸ್‌ಎಫ್‌ಐನ ಅಧಿಕೃತ ಸಾಮಾಜಿಕ ಜಾಲತಾಣದ ಪುಟಗಳಲ್ಲಿ ಹಂಚಿಕೊಳ್ಳಲಾಗಿದೆ.

“ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಕೊಲೆ — ಮೊಬೈಲ್ ಜೈಲುಗಳ (ಪೊಲೀಸ್ ವ್ಯಾನ್) ಒಳಗೆ ಎಸ್‌ಎಫ್‌ಐ ಕಾರ್ಯಕರ್ತರನ್ನು ಕಾಲಿನಿಂದ ಒದ್ದು, ಮನಬಂದಂತೆ ಥಳಿಸಲಾಗಿದೆ. ಮಹಿಳಾ ಹೋರಾಟಗಾರರ ಮೇಲೆ ಪುರುಷ ಪೊಲೀಸ್ ಅಧಿಕಾರಿಗಳು ದೌರ್ಜನ್ಯ ಎಸಗಿದ್ದಾರೆ ಮತ್ತು ಕಿರುಕುಳ ನೀಡಿದ್ದಾರೆ. ಅವರನ್ನು ಹೊಡೆದು, ಒದ್ದು, ತುಳಿಯಲಾಗಿದೆ. ಇದು ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ. ಇದು ವ್ಯವಸ್ಥಿತ ಭಯೋತ್ಪಾದನೆಯ ಅತ್ಯುತ್ತಮ ರೂಪವಾಗಿದೆ” ಎಂದು ಎಸ್‌ಎಫ್‌ಐ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ಮತ್ತೊಂದು ವಿಡಿಯೋದಲ್ಲಿ, ವಶಕ್ಕೆ ಪಡೆದ ಎಸ್‌ಎಫ್‌ಐ ಕಾರ್ಯಕರ್ತರೊಬ್ಬರು ಪೊಲೀಸ್ ವಾಹನದ ಒಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2ನೇ ದಿನಕ್ಕೆ ಕಾಲಿಟ್ಟ ದೆಹಲಿ ಪ್ರತಿಭಟನೆ; 100 ಕ್ಕೂ ಹೆಚ್ಚು ಜನರನ್ನು ಬಂಧಿಸಿದ ದೆಹಲಿ ಪೊಲೀಸರು

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿದ್ದ ಪ್ರತಿಭಟನೆಯು ದೆಹಲಿಯಾದ್ಯಂತ ಭಾರಿ ಭದ್ರತೆಯ ನಡುವೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ (ಅ.11) ಜಂತರ್ ಮಂತರ್ ಕಡೆಗೆ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗುತ್ತಿದ್ದ 100...

ಫಾರಂ-7: ಎಫ್‌ಐಆರ್ ಮುಂದುವರಿಸಿದರೆ ಪೊಲೀಸ್ ಠಾಣೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಎಸ್ಐಆರ್ (SIR) ಫಾರಂ 7 ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ವ್ಯವಸ್ಥಿತವಾಗಿ ಗೊಂದಲಗಳನ್ನು ಸೃಷ್ಟಿಸಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಅನ್ಯಾಯವಾಗಿ ಎಫ್‌ಐಆರ್ ದಾಖಲಿಸುವುದನ್ನು ಮುಂದುವರಿಸಿದರೆ ಮುಂಬರುವ ದಿನಗಳಲ್ಲಿ ಪೊಲೀಸ್ ಠಾಣೆಗಳು ಹಾಗೂ ಎಸ್‌ಪಿ ಕಚೇರಿಗಳಿಗೂ...

ಗ್ಯಾನೇಶ್ ಅವರನ್ನು ರಕ್ಷಿಸಲು ಮೋದಿ-ಶಾ ಎಲ್ಲವನ್ನೂ ಮಾಡುತ್ತಾರೆ: ಸಿಜೆಪಿ

"ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ; ತನ್ನದೇ ನಾಗರಿಕರ ವಿರುದ್ಧ ಯುದ್ಧ ಸಾರಿದೆ" ಎಂದು ಪೊಲೀಸರ ಬಂಧನದಿಂದ ಬಿಡುಗಡೆಯಾದ ತಕ್ಷಣ ಮಾಧ್ಯಮಗಳೊಂದಿಗೆ ನಡೆಸಿದ ತಮ್ಮ ಮೊದಲ ಸಂವಾದದಲ್ಲಿ...

ದೆಹಲಿ ಪ್ರತಿಭಟನೆ ವೇಳೆ ಇಂಟರ್ನೆಟ್ ಸ್ಥಗಿತ : ನ್ಯಾಯಾಂಗ ಪರಿಶೀಲನೆ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ, ಅಕ್ಟೋಬರ್ 9 ಮತ್ತು 10 ರಂದು ಮಧ್ಯ ದೆಹಲಿಯ ಜನಪಥ್-ಕರ್ತವ್ಯ ಪಥ್ ಜಂಕ್ಷನ್‌ನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು...

ಸಿಜೆಪಿ ಪ್ರತಿಭಟನೆ: ‘ಬ್ಯಾರಿಕೇಡ್‌ ತೆರವುಗೊಳಿಸಿ, ಇಂಟರ್‌ನೆಟ್ ತಡೆಯಬೇಡಿ, ಮೆಟ್ರೋ ಸೇವೆ ಸಹಜವಾಗಿರಲಿ..’; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಾಕಲಾಗಿರುವ ಎಲ್ಲಾ ಬ್ಯಾರಿಕೇಡ್‌ಗಳನ್ನು, ಅತ್ಯಂತ ಅಗತ್ಯವಿದ್ದ ಕಾರಣಕ್ಕೆ ಹೊರತುಪಡಿಸಿ ತಕ್ಷಣವೇ ತೆರವುಗೊಳಿಸಬೇಕು; ರಾಷ್ಟ್ರ ರಾಜಧಾನಿಯಲ್ಲಿ ಮೆಟ್ರೋ ಸೇವೆಗಳು ಸಹಜವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ಇಂಟರ್‌ನೆಟ್...

‘ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಿದ್ದರು’ ದೆಹಲಿ ಪೊಲೀಸರ ವಿರುದ್ಧ ಧೃವ್ ರಾಠೀ ಆರೋಪ

ಸಿಜೆಪಿ (CJP) ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸುವುದನ್ನು ತಡೆಯಲು ಶನಿವಾರ ಮುಂಜಾನೆ ಗುರುಗ್ರಾಮದ ನಿವಾಸದಿಂದಲೇ ಪೊಲೀಸರಿಂದ ಬಲವಂತವಾಗಿ ವಶಕ್ಕೆ ಪಡೆದುಕೊಳ್ಳಲ್ಪಟ್ಟಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠೀ ಅವರು ಭಾನುವಾರ...

ದೆಹಲಿ ಪ್ರತಿಭಟನೆ: ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಹಲ್ಲೆ ನಡೆಸಿದ 4 ಹಿಂದುತ್ವವಾದಿಗಳ ಬಂಧನ!

ದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಂತಿಯುತವಾಗಿ ಸಾಗುತ್ತಿದ್ದ ಯುವ ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಎಳೆದಾಡಿ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ 'ಹಿಂದೂ ರಕ್ಷಾ ದಳ'ದ ನಾಲ್ವರು...

ಅಭಿಜಿತ್ ದೀಪ್ಕೆ, ಅಶುತೋಷ್ ರಂಕಾ ಹಾಗೂ ಸೌರವ್ ದಾಸ್ ಬಿಡುಗಡೆ: ಮಧ್ಯಾಹ್ನ 2ಕ್ಕೆ CJP ಪತ್ರಿಕಾಗೋಷ್ಠಿ

ಚುನಾವಣಾ ಆಯೋಗದ ವಿವಾದಾತ್ಮಕ ಧೋರಣೆ ಹಾಗೂ ಮತದಾರರ ಪಟ್ಟಿ ಅಕ್ರಮಗಳನ್ನು ಖಂಡಿಸಿ ದೆಹಲಿಯಲ್ಲಿ ನಿಗದಿತ ಪ್ರತಿಭಟನೆಗೂ ಮುನ್ನ ಮುನ್ನೆಚ್ಚರಿಕೆ ಕ್ರಮವೆಂಬ ನೆಪದಲ್ಲಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆಯಲ್ಪಟ್ಟಿದ್ದ ಸಿಜೆಪಿ ಸಂಘಟನೆಯ ಪ್ರಮುಖ...

ದೆಹಲಿ ಹೋರಾಟಕ್ಕೆ ಬೆಂಬಲ: ಫ್ರೀಡಂಪಾರ್ಕ್ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಅ.10: ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಶನಿವಾರ ಎಐಡಿಎಸ್‌ಒ, ಕೆವಿಎಸ್, ಎಐಎಸ್‌ಎಫ್, ಎಸ್‌ಎಫ್‌ಐ, ಎಐಎಸ್‌ಎ ಸೇರಿದಂತೆ ಇನ್ನಿತರೆ ಎಡ ವಿದ್ಯಾರ್ಥಿ ಸಂಘಟನೆಗಳ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯ...

ಕೋರ್ಟ್ ಆದೇಶ ಉಲ್ಲಂಘಿಸಿ ದೆಹಲಿಯ ಮೆಟ್ರೋ ನಿಲ್ದಾಣಗಳು ಬಂದ್, ರೈಲು ರದ್ದು : ಸುಪ್ರೀಂ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿವಿಧ ಜಾತ್ಯತೀತ ಪಕ್ಷ ಮತ್ತು ಸಂಘಟನೆಗಳು ಇಂದು (ಅ.10) ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿವೆ. ಪೊಲೀಸರು...